ರಸ್ತೆ ದಾಟುತ್ತಿದ್ದ ಕಾಡಾನೆಗೆ ಕಾರು ಡಿಕ್ಕಿ ಕಾರಿನ ಮೇಲೆ ಬಿದ್ದ ಆನೆ ಪ್ರಯಾಣಿಕರು ಅಪಾಯದಿಂದ ಪಾರು

0

ಚಿಕ್ಕಮಗಳೂರು: ಎನ್.ಆರ್.ಪುರ-ಬಾಳೆಹೊನ್ನೂರು ರಾಜ್ಯ ಹೆದ್ದಾರಿಯ 9ನೇ ಮೈಲಿಕಲ್ಲು ಬಳಿ ಶನಿವಾರ ರಾತ್ರಿ ರಸ್ತೆ ದಾಟುತ್ತಿದ್ದ ಕಾಡಾನೆಗೆ ಕಾರು ಢಿಕ್ಕಿ ಹೊಡೆದ ಘಟನೆ ನಡೆದಿದೆ. ಬುರುಗಮನೆ ಗ್ರಾಮದ ಸಮೀಪದ 9ನೇ ಮೈಲಿ ಅರಣ್ಯ ಪ್ರದೇಶ (ಚಿಕ್ಕ ಅಗ್ರಹಾರ ಅರಣ್ಯ ವ್ಯಾಪ್ತಿ)ದಲ್ಲಿ ಎರಡು ಕಾಡಾನೆಗಳು ರಸ್ತೆ ದಾಟುತ್ತಿದ್ದ ವೇಳೆ ಘಟನೆ ನಡೆದಿದೆ. ಢಿಕ್ಕಿಯ ರಭಸಕ್ಕೆ ಕಾಡಾನೆ ನೇರವಾಗಿ ಕಾರಿನ ಮೇಲೆಯೇ ಬಿದಿದ್ದು, ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದೆ. ವಾಹನದ ಮೇಲೆ ಬಿದ್ದ ಕಾಡಾನೆ ಯಾವುದೇ ದಾಳಿ ಮಾಡದೆ ಎದ್ದು ಅರಣ್ಯದೊಳಕ್ಕೆ ಹಿಂತಿರುಗಿದೆ. ಕಾರಿನಲ್ಲಿದ್ದವರು ಅಪಾಯದಿಂದ‌ಪಾರಾಗಿದ್ದಾರೆ ಘಟನೆಯ ಕುರಿತು...

ಉಜಿರೆಯಲ್ಲಿ ನರ್ಸಿಂಗ್ ಕಾಲೇಜು ಕೃಷಿ ಕಾಲೇಜು ಸ್ಥಾಪನೆ ಡಿ.ವೀರೇಂದ್ರ ಹೆಗ್ಗಡೆಯವರಿಂದ ಘೋಷಣೆ

0

ಉಜಿರೆ: ಧರ್ಮಸ್ಥಳದ ವತಿಯಿಂದ ಉಜಿರೆಯಲ್ಲಿ ಈ ವರ್ಷ ನರ್ಸಿಂಗ್ ಕಾಲೇಜು ಪ್ರಾರಂಭಿಸಲಾಗುವುದು. ನೂರು ಎಕರೆ ಪ್ರದೇಶದಲ್ಲಿ ಕೃಷಿ ಕಾಲೇಜು ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಪ್ರಕಟಿಸಿದರು. ಕೃಷಿ ಕಾಲೇಜಿಗಾಗಿ ನೂರು ಎಕರೆ ಪ್ರದೇಶ ದೊರಕಿದಲ್ಲಿ ತಕ್ಷಣ ಕಾಲೇಜು ಸ್ಫಾಪನೆಯ ಪ್ರಕ್ರಿಯೆ ಪ್ರಾರಂಭಿಸಲಾಗುವುದು ಎಂದು ಹೆಗ್ಗಡೆಯವರು ಹೇಳಿದರು.ಲಕ್ಷದೀಪೋತ್ಸವ ಪ್ರಾರಂಭದ ದಿನವಾದ ಶನಿವಾರ ಉಜಿರೆಯಿಂದ ಧರ್ಮಸ್ಥಳಕ್ಕೆ ಬಂದ ಸಾವಿರಾರು ಪಾದಯಾತ್ರಿಗಳನ್ನು ಅಮೃತವರ್ಷಿಣಿ ಸಭಾ ಭವನದಲ್ಲಿ ಉದ್ದೇಶಿಸಿ ಅವರು ಮಾತನಾಡಿದರು.ತನ್ನ ಬಗ್ಗೆ ಹಾಗೂ ಧರ್ಮಸ್ಥಳ ಕ್ಷೇತ್ರದ ಬಗ್ಗೆ ಭಕ್ತರು, ಅಭಿಮಾನಿಗಳು ಹಾಗೂ...

ಎಸ್ಐಟಿ ಅಧಿಕಾರಿಗಳ ವಿರುದ್ಧ ಬೆಳ್ತಂಗಡಿ ಠಾಣೆಗೆ ಜಯಂತ್ ಟಿ ದೂರು

0

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತಿಟ್ಟ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳ ವಿರುದ್ಧವೇ ಬೆಳ್ತಂಗಡಿ ಠಾಣೆಗೆ ಜಯಂತ್ ಟಿ ಅವರು ದೂರು ನೀಡಿದ್ದಾರೆ.ಸೌಜನ್ಯ ಪರ ಹೋರಾಟಗಾರ ಟಿ ಜಯಂತ್ ಅವರು ಎಸ್ಐಟಿ ಅಧಿಕಾರಿಗಳ ವಿರುದ್ಧ ಇದೀಗ ದೂರು ದಾಖಲಿಸಿದ್ದಾರೆ ಎಸ್‌ಐಟಿ ಅಧಿಕಾರಿಗಳಾದ ಜಿತೇಂದ್ರ ದಯಾಮ, ಎಸ್.ಪಿ. ಸೈಮನ್, ಡಿವೈಎಸ್ಪಿ ಆರ್ ಜಿ. ಮಂಜುನಾಥ, ಇನ್ಸೆಕ್ಟ‌ರ್ ಮಂಜುನಾಥ ಗೌಡ, ಸಬ್ ಇನ್‌ಸ್ಪೆಕ್ಟ‌ರ್ ಗುಣಪಾಲ್ವಿರುದ್ಧ ದೂರು ನೀಡಿದ್ಧಾರೆ. ವಿಚಾರಣೆ ಸಂದರ್ಭದಲ್ಲಿ ದೈಹಿಕ ಹಲ್ಲೆ, ಪ್ರಾಣ ಬೆದರಿಕೆ, ಅಪರಾಧಿಕ ಪಿತೂರಿ, ಸುಳ್ಳು ಸಾಕ್ಷಿ ಹೇಳುವಂತೆ ಒತ್ತಾಯ...

ಬಿ.ಸಿ ರೋಡ್ ಭೀಕರ ಅಪಘಾತ ಮೂವರು ಮೃತ್ಯು

0

ಬೆಳ್ತಂಗಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ, ಬಿ.ಸಿ ರೋಡ್ ನಾರಾಯಣ ಗುರು ವೃತ್ತಕ್ಕೆ ಇನ್ನೋವಾ ಕಾರು ಡಿಕ್ಕಿಹೊಡೆದು ಮೂವರು ಮೃತಪಟ್ಟು ಹಲವರು ಗಾಯಗೊಂಡ ಘಟನೆ ನ15ರಂದು ಬೆಳಗ್ಗಿನ ಜಾವ ನಡೆದಿದೆ. ಬೆಂಗಳೂರು ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿದ್ದ KA 02 AE 6146 ನೊಂದಣಿ ಸಂಖ್ಯೆಯ ಇನ್ನೋವಾ ಕಾರು, ಚಾಲಕನ ನಿಯಂತ್ರಣ ತಪ್ಪಿ ಬಂಟ್ವಾಳ ಬಿ.ಸಿ. ರೋಡ್ ಬಳಿ, ನಾರಾಯಣ ಗುರು ವೃತ್ತಕ್ಕೆ ಡಿಕ್ಕಿಯಾಗಿರುತ್ತದೆ. ಅಪಘಾತದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ 09 ಜನರ ಪೈಕಿ, ಬೆಂಗಳೂರು ನಿವಾಸಿಗಳಾದ ರವಿ (64), ನಂಜಮ್ಮ (75), ರಮ್ಯಾ.(23)...

ನಿಟ್ಟಡೆ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

0

ಬೆಳ್ತಂಗಡಿ; ನಿಟ್ಟಡೆಯಲ್ಲಿ ಪೆಟ್ರೋಲ್ ಮುಗಿದ ಕಾರಣ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬೈಕ್ ಅನ್ನು ಕಳ್ಳರು ಅಪಹರಿಸಿದ ಘಟನೆ ನಡೆದಿದ್ದು ವೇಣೂರು ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆಕುಕ್ಕೇಡಿ ಗ್ರಾಮದ ನಿವಾಸಿ ಸಂಪತ್ ಕುಮಾರ್ ಎಂಬವರ ಬೈಕ್ ಕಳ್ಳತನವಾಗಿದೆ.ಇವರು ನ10 ರಂದು ರಾತ್ರಿ ಮನೆಗೆ ಹೋಗುತ್ತಿದ್ದ ವೇಳೆ ಬೈಕ್ ನಲ್ಲಿ ಪೆಟ್ರೋಲ್ ಮುಗಿದ ಕಾರಣ ಬೈಕ್ ಅನ್ನು ನಿಟ್ಟಡೆ ಗ್ರಾಮದ ಪಾಣೂರು ಎಂಬಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿ ಮನೆಗೆ ಹೋಗಿದ್ದು ನ 11ರಂದು ಬೆಳಗ್ಗೆ ಬಂದು ನೋಡಿದಾಗ ನಿಲ್ಲಿಸಿದ್ದ ಬೈಕ್ ಅಲ್ಲಿರಲಿಲ್ಲ ಹುಡುಕಾಟ ನಡೆಸಿದರೂ ಯಾವುದೇ ಮಾಹಿತಿ...

ವಿಶ್ವ ಹಿಂದೂ ಪರಿಷತ್ ಮುಖಂಡ ನವೀನ್ ನೆರಿಯ ವಿರುದ್ದ ದಾಖಲಾಗಿದ್ದ ದ್ವೇಷ ಭಾಷಣ ಪ್ರಕರಣ‌ ವಜಾ ಗೊಳಿಸಿದೆ ಹೈಕೋರ್ಟ್

0

ಬೆಳ್ತಂಗಡಿ: ಹಿಂದೂ ಮುಖಂಡರ ಮನೆಗಳಿಗೆ ತಡರಾತ್ರಿ ಪೋಲಿಸರು ತೆರಳಿ ಫೋಟೋ ತೆಗೆಯುತ್ತಿದ್ದ ಘಟನೆಗೆ ಸಂಬಂಧಿಸಿ, ಜೂ.4ರಂದು ಕಡಬ ಠಾಣೆಯ ಮುಂದೆ ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವಿ.ಹಿಂ.ಪ. ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿ ದ್ವೇಷಭಾಷಣ ಮಾಡಿದ್ದಕ್ಕೆ ಕಡಬ ಠಾಣೆಯಲ್ಲಿ ದಾಖಲಾಗಿದ್ದ ಎಫ್.ಐ.ಆರ್.ನ್ನು ಹೈಕೋರ್ಟ್ ನ.12ರಂದು ವಜಾಗೊಳಿಸಿದೆ. ತಡರಾತ್ರಿ ಸಂಘಟನೆಗಳ ಪ್ರಮುಖರ ಮನೆಗಳಿಗೆ ಪೊಲೀಸರು ತೆರಳಿ ಅವರ ಜತೆ ಫೋಟೋ ತೆಗೆದಿದ್ದರು. ಈ ಘಟನೆಯನ್ನು ಖಂಡಿಸಿ ಕಡಬ ಠಾಣೆಯ ಎದುರು ಜೂ.4ರಂದು ಸಂಜೆ ಪ್ರತಿಭಟನೆ ನಡೆಸಲಾಗಿದ್ದು, ನವೀನ್ ನೆರಿಯ ಅವರು ಭಾಷಣ ಮಾಡಿದ್ದರು....

ಉಳ್ಳಾಲ ಬೀದಿನಾಯಿ ದಾಳಿಗೆ ವ್ಯಕ್ತಿ ಬಲಿ

0

ಮಂಗಳೂರು: ಬೀದಿ ನಾಯಿಯೊಂದರ ಭೀಕರ ದಾಳಿಗೆ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಕುಂಪಲದಲ್ಲಿ ಶುಕ್ರವಾರ (ನ.14) ಮುಂಜಾನೆ ನಡೆದಿದೆ. ಮೃತ ವ್ಯಕ್ತಿಯನ್ನು ಕುಂಪಲ ನಿವಾಸಿ ದಯಾನಂದ (60 ವ) ಎಂದು ಗುರುತಿಸಲಾಗಿದೆ. ನಾಯಿಯ ಭೀಕರ ದಾಳಿಗೆ ಒಳಗಾದ ಮೃತದೇಹ ಕಂಡ ಜನರು ಆತಂಕಕ್ಕೆ ಒಳಗಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66ರ ಕುಂಪಲ ಬೈಪಾಸ್‌ ಬಳಿ ರಸ್ತೆ ಬದಿಯ ಅಂಗಡಿಯ ಎದುರಲ್ಲಿ ಕಳೆದ ರಾತ್ರಿ ದಯಾನಂದ ಮಲಗಿದ್ದರು. ಮದ್ಯಪಾನ ಸೇವಿಸಿ ಮಲಗಿದ್ದ ಇವರ ಮೇಲೆ ಮುಂಜಾನೆ ವೇಳೆ ನಾಯಿ ದಾಳಿ ಮಾಡಿದೆ ಎನ್ನಲಾಗಿದೆ. ಅಂಗಡಿಯ...

ಬಾರ್ಯ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಶೇಸಪ್ಪ ಸಾಲಿಯಾನ್, ಉಪಾಧ್ಯಕ್ಷರಾಗಿ ಮೋಹನ್ ಗೌಡ ಆಯ್ಕೆ

0

ಮುರುಗೋಳಿ: ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳು 12 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರು. ಇದೀಗ ಮುಂದಿನ ಎರಡುವರೆ ವರ್ಷಗಳ ಕಾಲ ಆಡಳಿತ ಮಂಡಳಿ ಅಧ್ಯಕ್ಷರಾಗಿ ಶೇಸಪ್ಪ ಸಾಲಿಯಾನ್, ಉಪಾಧ್ಯಕ್ಷರಾಗಿ ಮೋಹನ್ ಗೌಡ ಅಜಿರ ಅವಿರೋಧವಾಗಿ ನ.14 ರಂದು ಆಯ್ಕೆಯಾದರು. ನಿರ್ದೇಶಕರಾಗಿ ಪ್ರಸನ್ನ ಗೌಡ ಎನ್, ಪ್ರವೀಣ ರೈ ಪಿ., ಪ್ರಶಾಂತ್ ಪೈ, ಚಂದ್ರಶೇಖರ್ ಕುಂಡಡ್ಕ, ಹರ್ಷಿತ್ ಪೂಜಾರಿ ಕಲಾಯ, ರಾಜೇಶ್ ರೈ ಹೆನ್ನಡ್ಕ, ಸವಿತಾ...

ಎಸ್.ಐ.ಟಿ ಅಧಿಕಾರಿಗಳಿಂದ ಹಲ್ಲೆ ಬೆದರಿಕೆ ರಾಜ್ಯಪಾಲರಿಗೆ ದೂರು ನೀಡಿದ ಜಯಂತ್.ಟಿ

0

ಬೆಳ್ತಂಗಡಿ: ಎಸ್.ಐ.ಟಿ‌ ಅಧಿಕಾರಿಗಳು ತನ್ನನ್ನು ವಿಚಾರಣೆಗೆಂದು ಕರೆದು ತನ್ನ ಮೇಲೆ ಹಲ್ಲೆ ನಡೆಸಿದ್ದಲ್ಲದೆ ಬೆದರಿಕೆ ಹಾಕಿರುವುದಾಗಿ ಸೌಜನ್ಯ ಪರ ಹೋರಾಟಗಾರ ಜಯಂತ್.ಟಿ ರಾಜ್ಯಪಾಲರಿಗೆ ಹಾಗೂ ಪೊಲೀಸ್ ಮಹಾ ನಿರ್ದೇಶಕರಿಗೆ ದೂರು ನೀಡಿದ್ದಾರೆ. ದೂರಿನಲ್ಲಿ ಏನಿದೆ; ಜಯಂತ್ ಅವರು ನೀಡಿರುವ ದೂರಿನಲ್ಲಿ ಎಸ್.ಐ.ಟಿ ಅಧಿಕಾರಿಗಳಾದ ಜಿತೇಂದ್ರ ದಯಾಮ, ಸೈಮನ್, ಮಂಜುನಾಥ್ ಆರ್.ಜೆ, ಮಂಜುನಾಥ ಗೌಡ, ಹಾಗೂ ಗುಣಪಾಲ ಅವರು ಸೇರಿ ತನಗೆ ಬೆದರಿಕೆ ಹಾಕಿದ್ದರು, ಬಳಿಕ ದೂರು ದಾರ ಚಿನ್ನಯ್ಯನನ್ನು ಕರೆಸಿ ಆತನ ಮೂಲಕ ತನಗೆ ತೀವ್ರವಾಗಿ ಹಲ್ಲೆ ಮಾಡಿಸಿದರು. ಅದೇರೀತಿ ಚಿನ್ನಯ್ಯನ ಮೇಲೆ ಹಲ್ಲೆ ನಡೆಸಿ...

ರೆಖ್ಯ ಬೆಂಕಿ ಆಕಸ್ಮಿಕ ಸಂಪೂರ್ಣ ಸುಟ್ಟು ಹೋದ ಮನೆ

0

ಕೊಕ್ಕಡ: ರೆಖ್ಯ ಸಮೀಪ ಕೊಲಾರು ನಿವಾಸಿ ಬಾಲಕೃಷ್ಣ ಎಂಬವರ ಮನೆ ನ.13 ರಂದು ಬೆಳಗ್ಗೆ ಭೀಕರ‌ ಅಗ್ನಿ ದುರಂತ ಸಂಭವಿಸಿ ಸಂಪೂರ್ಣ ಸುಟ್ಟು ಕರಕಾಲಗಿದ್ದು ಭಾರೀ ನಷ್ಟ ಸಂಭವಿಸಿದೆ. ಬೆಂಕಿ ಅನಾಹುತ ಸಂಭವಿಸಿದ ಸಮಯ ಮನೆ ಮಂದಿ ಕೆಲಸಕ್ಕೆ ಹೋಗಿರುವ ಕಾರಣ ಅದೃಷ್ಟವಶಾತ್‌ ಯಾವುದೇ ಪ್ರಾಣ ಹಾನಿಯಿಂದ ಪಾರಾಗಿದ್ದಾರೆ. .ಬೆಂಕಿಯ ಕೆನ್ನಾಲಿಗೆಗೆ ಮನೆಯಲ್ಲಿದ್ದ ಸುಮಾರು 45000 ಹಣ, ಹಾಗೂ ಚಿನ್ನದ ಒಡವೆ , ಮಕ್ಕಳ ಪುಸ್ತಕ, ಬಟ್ಟೆ ಇನ್ನಿತರ ಮನೆಯೊಳಗಿನ ಎಲ್ಲ ಸಾಮಾಗ್ರಿಗಳು ಸುಟ್ಟು ಕರಕಲಾಗಿದೆ. ಬೆಂಕಿ ಹೇಗೆ ಹಿಡಿದುಕೊಂಡಿದೆ ಎಂಬುದು ಸ್ಪಷ್ಟವಾಗಿ ತಿಳಿದು...