ಬೆಳ್ತಂಗಡಿ : ಜೀವ ಬೆದರಿಕೆ ಹಾಕಬಹುದು ಎಂದು ಮಹೇಶ್ ಶೆಟ್ಟಿ ಹಾಗೂ ಇತರರ ವಿರುದ್ದ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ ಚಿನ್ನಯ್ಯ
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದಲ್ಲಿ ಜೈಲು ಸೇರಿ ಹೊರಬಂದ ಬುರುಡೆ ಚಿನ್ನಯ್ಯ ಇದೀಗ ಮಹೇಶ್ ಶೆಟ್ಟಿ ಹಾಗೂ ಇತರ ನಾಲ್ವರು ತಮಗೆ ಜೀವಬೆದರಿಕೆ ಹಾಕಬಹುದು ಆದ್ದರಿಂದ ತನಗೆ ರಕ್ಷಣೆ ನೀಡಬೇಕು ಎಂದು ಧರ್ಮಸ್ಥಳ ಪೊಲೀಸ್ ಠಾಣೆಗೆ ಹಾಜರಾಗಿ ದೂರು ಅರ್ಜಿ ಸಲ್ಲಿಸಿದ್ದಾನೆ.ಧರ್ಮಸ್ಥಳ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿ ಡಿ.18 ರಂದು ಶಿವಮೊಗ್ಗ ಜೈಲಿನಿಂದ ಬಂದ ಚಿನ್ನಯ್ಯ ತನ್ನ ಪತ್ನಿ ಮಲ್ಲಿಕಾ ಮತ್ತು ಸಹೋದರಿ ರತ್ನ ಜೊತೆ ಡಿ.18 ರಂದು ರಾತ್ರಿ 8 ಗಂಟೆಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಹಾಜರಾಗಿ ಮಹೇಶ್ ಶೆಟ್ಟಿ ತಿಮರೋಡಿ,...
ಡಿ 21 ಮದ್ದಡ್ಕದಲ್ಲಿ ಬೃಹತ್ ಸಮಸ್ತ ಆದರ್ಶ ಪ್ರಚಾರ ಸಮ್ಮೇಳನ
ಬೆಳ್ತಂಗಡಿ;ಪರಿಶುಧ್ಧ ಇಸ್ಲಾಮಿನ ಆದರ್ಶವನ್ನು ಯಥಾಸ್ಥಿತಿಯಲ್ಲಿಯೇ ಉಳಿಸಿಕೊಳ್ಳುವ ಸಲುವಾಗಿ ಕೇರಳದ ಉಲಮಾ ನೇತಾರರು ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಎಂಬ ಸಂಘಟನೆಯನ್ನು 1926ರಲ್ಲಿ ಆರಂಭಿಸಿದರು. ಈ ಸಂಘಟನೆಯು ಇದೀಗ ನೂರನೇ ವರ್ಷಕ್ಕೆ ದಾಪುಗಾಲಿಡುತ್ತಿದೆ. ಇದರ ಭಾಗವಾಗಿ ಕಾಸರಗೋಡಿನ ಕುಣಿಯ ಎಂಬಲ್ಲಿ 2026 ಫೆಬ್ರವರಿ 2,3,4,5,6,7,8 ದಿನಾಂಕಗಳಲ್ಲಿ 100 ನೇ ವಾರ್ಷಿಕ ಮಹಾಸಮ್ಮೇಳನವು ನಡೆಯಲಿಕ್ಕಿದೆ. ಅದರ ಪ್ರಚಾರಾರ್ಥ ಬೆಳ್ತಂಗಡಿ ತಾಲೂಕು ಜಂಇಯ್ಯತುಲ್ ಉಲಮಾ ಮತ್ತು ಎಸ್.ಕೆ.ಎಸ್.ಎಸ್.ಎಫ್ ಮದ್ದಡ್ಕ ಶಾಖೆಯ ಸಹಯೋಗದಲ್ಲಿ ಮದ್ದಡ್ಕದಲ್ಲಿ 2025 ಡಿಸೆಂಬರ್ 21 ರಂದು ಭಾನುವಾರ ಸಂಜೆ 4 ಗಂಟೆಗೆ ಬೃಹತ್ ಸಮಸ್ತ...
ಸುಲ್ಕೇರಿ ಮೊಗ್ರು ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ವಿದ್ಯುತ್ ಭಾಗ್ಯ. ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ ಸಲ್ಲಿಕೆ
ಬೆಳ್ತಂಗಡಿ; ದಕ್ಷಿಣ ಕನ್ನಡ ಜಿಲ್ಲೆ, ಬೆಳ್ತಂಗಡಿ ತಾಲೂಕಿನ ದಟ್ಟ ಅಡವಿಯ ನಡುವೆ ಇರುವ ಸುಲ್ಕೇರಿ ಮೊಗ್ರು ಗ್ರಾಮದ ಪಂಜಾಲ, ಮಾಳಿಗೆ ಬೈಲಿನ 15 ಆದಿವಾಸಿ ಕುಟುಂಬ ಸೇರಿ ಒಟ್ಟು 28 ಕುಟುಂಬಗಳಿಗೆ ವಿದ್ಯುತ್ ಭಾಗ್ಯ ಲಭಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದಿವಾಸಿಗಳು ನೆಲೆಸಿರುವ ಅರಣ್ಯ ಪ್ರದೇಶದ ವಸತಿ ಪ್ರದೇಶಗಳಿಗೆ ವಿದ್ಯುತ್, ನೀರು, ರಸ್ತೆ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಸೂಚಿಸಿದ ಹಿನ್ನೆಲೆಯಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತ ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿ, ವಿದ್ಯುತ್ ಮಾರ್ಗ ಅಳವಡಿಕೆಗೆ ಅರಣ್ಯ ಭೂಮಿ...
ಶಿಕ್ಷಕರು ಮತ್ತು ಸರ್ಕಾರಿ ಶಾಲೆಗಳ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಗಮನ ಸೆಳೆದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ
ಬೆಳ್ತಂಗಡಿ; ವಿಧಾನಸಭೆಯ ಅಧಿವೇಶನದಲ್ಲಿ ಇಂದು ರಾಜ್ಯದಲ್ಲಿ ಶಿಕ್ಷಕರು ಮತ್ತು ಸರ್ಕಾರಿ ಶಾಲೆಗಳು ಅನುಭವಿಸುತ್ತಿರುವ ಅನೇಕ ಸಮಸ್ಯೆಗಳ ಕುರಿತು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮಾನ್ಯ ಶಿಕ್ಷಣ ಸಚಿವರ ಹಾಗೂ ಸರ್ಕಾರದ ಗಮನ ಸೆಳೆದರುಅತಿಥಿ ಶಿಕ್ಷಕರ ನೇಮಕಾತಿ ಹಾಗೂ ವೇತನದ ತಾರತಮ್ಯವನ್ನು ಸರಿಪಡಿಸಿ ವೇತನವನ್ನು ಪರಿಷ್ಕರಿಸಿ ಅತಿಥಿ ಉಪನ್ಯಾಸಕರಿಗೂ ಒಂದು ಉತ್ತಮ ವೇತನವನ್ನು ನಿಗದಿಪಡಿಸುವಂತೆ ಮಾನ್ಯ ಶಿಕ್ಷಣ ಸಚಿವರ ಮೂಲಕ ಸರ್ಕಾರವನ್ನು ಒತ್ತಾಯಿಸಲಾಯಿತು.ಶಿಕ್ಷಕರನ್ನು ಪಠ್ಯೇತರ ಚಟುವಟಿಕೆಗಳಾದ ಬಿ ಎಲ್ ಓ ಅಥವಾ ಇನ್ನಿತರ ಚಟುವಟಿಕೆಗಳಲ್ಲಿ ಕಡಿಮೆ ತೊಡಗಿಸಿಕೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಲಾಯಿತು.ಮಕ್ಕಳಲ್ಲಿರುವ ಮೊಬೈಲ್ ಬಳಕೆ ಹವ್ಯಾಸವನ್ನು...
ಯೋಜನೆಗಳ ಹೆಸರು ಬದಲಾವಣೆಯೇ ಮೋದಿ ಸರ್ಕಾರದ ಸಾಧನೆ.ರಕ್ಷಿತ್ ಶಿವರಾಂ.
ಬೆಳ್ತಂಗಡಿ : ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ( ಎಂಜಿ ನೆರೇಗಾ) ಹಿಂದಿನ ಯುಪಿಎ ಸರ್ಕಾರದ ಮಹತ್ವಾಕಾಂಕ್ಷೆಯ ಕಾರ್ಯಕ್ರಮ. ಈ ಯೋಜನೆ ಗ್ರಾಮೀಣ ಭಾಗದಲ್ಲಿ ಕಡ್ಡಾಯವಾಗಿ 125 ದಿನಗಳ ಕೆಲಸವನ್ನು ಖಾತರಿಪಡಿಸುವ ಕಾರ್ಯಕ್ರಮ ಮಾತ್ರವಲ್ಲ ಬದಲಾಗಿ ಉದ್ಯೋಗ ಖಾತ್ರಿ ಮತ್ತು ಸಾಮಾಜಿಕ ನ್ಯಾಯದ ಸಂಕೇತವಾವೂ ಆಗಿದೆ. ಇದರ ಹೆಸರನ್ನು ಬದಲಾಯಿಸಿ ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಜೀವನೋಪಾಯ ಮಿಷನ್ (ಗ್ರಾಮೀಣ) (ವಿಬಿ-ಜಿ ರಾಮ್ ಜಿ ) ಇಂದು ಬದಲಾಯಿಸುವ ಕೇಂದ್ರ ಸರ್ಕಾರದ ಕ್ರಮ ಪ್ರಯತ್ನ ರಾಜಕೀಯ ಪ್ರೇರಿತವಾಗಿದೆ. ಕೇವಲ ಹೆಸರು...
ಶಿವಮೊಗ್ಗ ಜೈಲಿನಿಂದ ಚಿನ್ನಯ್ಯನ ಬಿಡುಗಡೆ
ಶಿವಮೊಗ್ಗ : ಧರ್ಮಸ್ಥಳ ಪ್ರಕರಣದಲ್ಲಿ ಸಾಕ್ಷಿ ದೂರುದಾರನಾಗಿ ಬಂದು ಷಡ್ಯಂತ್ರನಡೆಸಿದ್ದಾನೆ ಎಂದು ಆರೋಪಿಯಾಗಿ ಜೈಲು ಪಾಲಾದ ಚಿನ್ನಯ್ಯ ಕೊನೆಗೂ ಶಿವಮೊಗ್ಗ ಜೈಲಿನಿಂದ ಡಿ.18 ರಂದು ಬೆಳಗ್ಗೆ ಬಿಡುಗಡೆಯಾಗಿದ್ದಾನೆ. ಜೈಲಿನಿಂದ ಮಾಧ್ಯಮಗಳ ಮುಂದೆ ಬರದೆ ಪತ್ನಿ ಮಲ್ಲಿಕಾ ಮತ್ತು ಸಹೋದರಿ ರತ್ನ ಜೊತೆಯಲ್ಲಿ ತೆರಳಿದ್ದಾನೆ.ಜಾಮೀನು ಸಿಕ್ಕಿದರೂ ನ್ಯಾಯಾಲಯ ಸೂಚಿಸಿದ್ದ ಶೂರಿಟಿ ನೀಡದ ಕಾರಣ ಚಿನ್ನಯ್ಯನಿಗೆ ಜೈಲಿನಿಂದ ಹೊರಬರಲು ಸಾಧ್ಯವಾಗಿರಲಿಲ್ಲ ಇದೀಗ ಬೆಳ್ತಂಗಡಿ ನ್ಯಾಯಾಲಯದಲ್ಲಿ ಡಿ17ರಂದು ಎಲ್ಲ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಗಿತ್ತು. ಇಂದು ಶಿವಮೊಗ್ಗ ಜೈಲಿನಿಂದ ಚಿನ್ನಯ್ಯ ಬಿಡುಗಡೆಯಾಗಿದ್ದಾನೆ. ಮಾದ್ಯಮಗಳೊಂದಿಗೆ ಮಾತನಾಡಬಾರದು ಎಂಬುದು ಸೇರಿದಂತೆ ಹಲವು ನಿಬಂಧನೆಗಳನ್ನು...
ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿಯನ್ನು ಮತ್ತೆ ಗಡಿಪಾರು ಮಾಡಿ ಆದೇಶ
ಬೆಳ್ತಂಗಡಿ : ಸೌಜನ್ಯ ಪರ ಹೋರಾಟದ ನೇತೃತ್ವ ವಹಿಸಿರುವ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ಗಡಿಪಾರು ಮಾಡಿ ಎರಡನೇ ಭಾರಿಗೆ ಪುತ್ತೂರು ಎ.ಸಿ ಆದೇಶ ಹೊರಡಿಸಿದ್ದಾರೆ. ಪುತ್ತೂರು ಎ.ಸಿ. ಸ್ಟೇಲಾ ವರ್ಗಿಸ್ ಡಿ.17 ರಂದು ಈ ಆದೇಶ ಹೊರಡಿಸಿದ್ದಾರೆ. ಮಹೇಶ್ ಶೆಟ್ಟಿಯನ್ನು ಈ ಹಿಂದೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದರು ಇದನ್ನು ಮರು ಪರಿಶೀಲಿಸಲು ಹೈಕೋರ್ಟ್ ಸೂಚಿಸಿತ್ತು ಇದೀಗ ಹೈಕೋರ್ಟ್ ಆದೇಶದಂತೆ ಮರು ಪರಿಶೀಲನೆ ಮಾಡಿ ಒಂದು ವರ್ಷಗಳ ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ. ಗಡಿಪಾರು ಆದೇಶ ಪ್ರತಿ...
ಕಾಶಿಬೆಟ್ಟು ಹೆದ್ದಾರಿಯಲ್ಲಿ ರಿಕ್ಷಾ ಪಲ್ಟಿ ಇಬ್ಬರಿಗೆ ಗಾಯ
ಬೆಳ್ತಂಗಡಿ : ಉಜಿರೆ ಕಡೆ ಹೋಗುತ್ತಿದ್ದ ಆಪೆ ಆಟೋ ರಿಕ್ಷಾ ಕಾಶಿಬೆಟ್ಟು ಇಂಡಸ್ಟ್ರಿಯಲ್ ಪ್ರದೇಶದ ಮುಂದೆ ರಸ್ತೆಯಲ್ಲಿ ನಿಯಂತ್ರಣ ತಪ್ಪಿಆಪೆ ಆಟೋ ರಿಕ್ಷಾ ಪಲ್ಟಿ ಹೋಡೆದಿದೆ. ಆಟೋದಲ್ಲಿ ಇಬ್ಬರು ಮಹಿಳೆಯರಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಳ್ತಂಗಡಿ; ಲಾಯಿಲ ಸೆತುವೆ ಬಳಿಅಪರಿಚಿತ ಮೃತದೇಹ ಪತ್ತೆ
ಬೆಳ್ತಂಗಡಿ: ಲಾಯಿಲ ಸೇತುವೆ ಬಳಿ ಅನಾರೋಗ್ಯ ಅಥವಾ ಬೇರೆ ಕಾರಣದಿಂದ ಮೃತಪಟ್ಟ ಅಪರಿಚಿತ ಶವ ಪತ್ತೆಯಾದ ಘಟನೆ ಡಿ.17 ರಂದು ನಡೆದಿದೆ. ಸ್ಥಳೀಯರು ಅಪರಿಚಿತ ಮೃತದೇಹ ನೋಡಿ ಕೂಡಲೇ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದು ಅದರಂತೆ ಸ್ಥಳಕ್ಕೆ ಬೆಳ್ತಂಗಡಿ ಸಬ್ ಇನ್ಸ್‌ಪೆಕ್ಟರ್ ಅನಂದ್.ಎಮ್ ಮತ್ತು ಸಿಬ್ಬಂದಿ ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ತನಿಖೆ ನಡೆಸಲು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹದ ಮಹಜರು ನಡೆಸಿದ ಬಳಿಕ ಶವಪರೀಕ್ಷೆಗಾಗಿ ಸಾಯಿರಾಮ್ ಅಂಬುಲೆನ್ಸ್ ಮೂಲಕ ಶವವನ್ನು ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ.ಈ ವೇಳೆ ಅಂಬುಲೆನ್ಸ್ ಚಾಲಕ ಪವನ್ ಬಂಗೇರ, ಕರುಣಾಕರ ರೆಂಕೆದಗುತ್ತು...
ನೂತನ ಬಿಷಪ್ ಜೇಮ್ಸ್ ಪಟ್ಟೇರಿಲ್ ಅವರಿಂದ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ
ಬೆಳ್ತಂಗಡಿ; ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾದ ಅ.ವಂ ಜೇಮ್ಸ್ ಪಟ್ಟೇರಿಲ್ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.ಈ ಸಂದರ್ಭದಲ್ಲಿ ಕ್ಷೇತ್ರದ ಪರವಾಗಿ ಬಿಷಪ್ ಅವರನ್ನು ಡಾ.ಡಿ ವೀರೇಂದ್ರ ಹೆಗ್ಗಡೆಯವರು ಅಭಿನಂದಿಸಿದರು. ಬಿಷಪ್ ಅವರೊಂದಿಗೆ ಧರ್ಮಪ್ರಾಂತ್ಯದ ಚಾನ್ಸಲರ್ ವಂ ಲಾರೆನ್ಸ್, ಪಾ ಅಬ್ರಹಾಂ ಪಟ್ಟೇರಿಲ್, ಫಾ ಜೋಸೆಫ್ ವಾಳೂಕಾರನ್, ರುಡ್ ಸೆಟ್ ಉಪನ್ಯಾಸಕಅಬ್ರಹಾಂ ಜೇಮ್ಸ್,ಧರ್ಮಸ್ಥಳ ಚರ್ಚ್ ಪಾಲನಾ ಮಂಡಳಿ ಸದಸ್ಯರಾದ ಟಿ.ವಿ ದೇವಸ್ಯ, ಜೋಮಿ, ಹಾಗು ಇತರರು ಇದ್ದರು














