ಬೆಳ್ತಂಗಡಿ ಜನತೆಯ ಪ್ರತಿ ಮನೆಯ ಮನ ಮುಟ್ಟಿದ ಶಾಸಕ ಹರೀಶ್ ಪೂಂಜಾ ರವರಿಗೆ ಇಂದಬೆಟ್ಟು ಕಾರ್ಯಕರ್ತರಿಂದ ಗೌರವ ಅರ್ಪಣೆ.
ಕರಾವಳಿ ಹಾಗೂ ಮಧ್ಯ ಕರ್ನಾಟಕ ವಿಭಾಗದಲ್ಲಿ ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪಡೆದ ಬೆಳ್ತಂಗಡಿಯ ಜನಪ್ರಿಯ BEST MLA ಶ್ರೀ ಹರೀಶ್ ಪೂಂಜಾ ರವರಿಗೆ ಜುಲೈ 07 ರಂದು ಸ್ವಗೃಹ ಮಿಥಿಲಾ ದಲ್ಲಿ ಗೌರವಾರ್ಪಣೆ ನಡೆಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಇಂದಬೆಟ್ಟು ಶಕ್ತಿ ಕೇಂದ್ರದ ಅಧ್ಯಕ್ಷರಾದ ಶ್ರೀಕಾಂತ್ ಎಸ್ ಇಂದಬೆಟ್ಟು ಇವರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಸಲ್ಲಿಸಿದರು. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸರ್ವಾಂಗೀಣ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿರುವುದು ಶಾಸಕ ಹರೀಶ್ ಪೂಂಜಾ ರವರ ಅವಿರತ ಶ್ರಮದ ಫಲ, ಬೆಳ್ತಂಗಡಿ ಕ್ಷೇತ್ರದ ಪ್ರತಿ ಗ್ರಾಮದ ಜನತೆಯ...
ಬೆಳ್ತಂಗಡಿ ಗೃಹರಕ್ಷಕ ದಳದ ಪ್ರಭಾರ ಘಟಕಾಧಿಕಾರಿಯಾಗಿ ಡೆನ್ನಿಸ್ ಡಿಸೋಜ ನೇಮಕ
ಬೆಳ್ತಂಗಡಿ: ಬೆಳ್ತಂಗಡಿ ಗೃಹರಕ್ಷಕ ದಳದ ನೂತನ ಪ್ರಭಾರ ಘಟಕಾಧಿಕಾರಿಯಾಗಿ ಡೆನ್ನಿಸ್ ಡಿ ಸೋಜ ಅವರನ್ನು ನೇಮಕ ಮಾಡಲಾಗಿದೆ.ಘಟಕದಲ್ಲಿ ಜೇಷ್ಠತೆ ಆಧಾರದ ಮೇರೆಗೆ ಹಿರಿಯರಾಗಿರುವ ಡೇನಿಸ್ ಡಿ'ಸೋಜರವರನ್ನು ಗೃಹರಕ್ಷಕದಳ ಘಟಕಕ್ಕೆ ನೂತನ ಪ್ರಭಾರ ಘಟಕಾಧಿಕಾರಿಯಾಗಿ ನೇಮಿಸಲಾಗಿದೆ.
ವೇಣೂರು: ರಸ್ತೆ ಬದಿ ಕಸ ಎಸೆದ ಅಂಗಡಿ ಮಾಲಿಕನಿಗೆ ರೂ. 5000ದಂಡ
ವೇಣೂರು: ರಸ್ತೆ ಬದಿ ತ್ಯಾಜ್ಯಗಳನ್ನು ಎಸೆದ ವೇಣೂರು ಗ್ರಾ.ಪಂ. ವ್ಯಾಪ್ತಿಯ ಕರಿಮಣೇಲು ಗ್ರಾಮದ ಅಂಗಡಿ ಮಾಲಿಕರೊಬ್ಬರಿಗೆ ವೇಣೂರು ಗ್ರಾ.ಪಂ. ರೂ. 5೦೦೦ ದಂಡ ವಿಧಿಸಿದೆ.ಕಸಗಳನ್ನು ಎಲ್ಲೆಂದರಲ್ಲಿ ಎಸೆಯದೆ ಸೂಕ್ತ ರೀತಿಯಲ್ಲಿ ವಿಲೇ ಮಾಡುವಂತೆ ಗ್ರಾ.ಪಂ. ತಿಳಿಸಿತ್ತು. ತಪ್ಪಿದ್ದಲ್ಲಿ ದಂಡ ವಿಧಿಸುವ ಎಚ್ಚರಿಕೆ ನೀಡಿತ್ತು.ಇದೀಗ ಕರಿಮಣೇಲು ಗ್ರಾಮದ ಅಂಗಡಿ ಮಾಲಕರೊಬ್ಬರು ಕಸ ಎಸೆದಿರುವ ಬಗ್ಗೆ ಸಿಸಿಟಿವಿ ಆದರಿಸಿ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಪಂಚಾಯತ್ ದಂಡ ವಿಧಿಸಿ ಎಚ್ಚರಿಕೆ ನೀಡಿದೆ.ತ್ಯಾಜ್ಯ/ಕಸವನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ರಸ್ತೆ ಬದಿ ಅಥವಾ ಸಾರ್ವಜನಿಕ ಸ್ಥಳದಲ್ಲಿ ಬಿಸಾಡಿದ್ದಲ್ಲಿ ದಂಡ...
ಎಸ್‌ಐಆರ್ ಕರ್ತವ್ಯಕ್ಕೆ ತೆರಳಿದ್ದ ಪರಿಶಿಷ್ಟ ಜಾತಿಯ ಬಿಎಲ್‌ಒಗೆ ಜಾತಿ ನಿಂದನೆ: ಸಂವಿಧಾನಕ್ಕೆ ಸವಾಲೊಡ್ಡಿದ ಕೃತ್ಯ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಡಿಪಿಐ ಆಗ್ರಹ
ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಶಿರ್ಲಾಲು ಗ್ರಾಮದಲ್ಲಿ ಎಸ್‌ಐಆರ್ ಕರ್ತವ್ಯ ನಿರ್ವಹಣೆಗೆ ತೆರಳಿದ್ದ ಪರಿಶಿಷ್ಟ ಜಾತಿಯ ಬಿಎಲ್‌ಒ ಅವರಿಗೆ ಜಾತಿ ನಿಂದನೆ ಮಾಡಿ ಅವಮಾನಿಸಿರುವ ಘಟನೆ ನಾಗರಿಕ ಸಮಾಜ ತಲೆತಗ್ಗಿಸುವಂತಹದ್ದಾಗಿದ್ದು, ಇದು ಕೇವಲ ಒಬ್ಬ ಸರ್ಕಾರಿ ಸಿಬ್ಬಂದಿಯ ಮೇಲಿನ ಅವಮಾನವಲ್ಲ, ಭಾರತದ ಸಂವಿಧಾನ ಹಾಗೂ ಸಾಮಾಜಿಕ ನ್ಯಾಯದ ಮೌಲ್ಯಗಳಿಗೆ ಎಸಗಿರುವ ಬಹಿರಂಗ ಸವಾಲಾಗಿದೆ ಎಂದು ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸ್ವಾತಂತ್ರ್ಯ ಲಭಿಸಿ ಏಳು ದಶಕಗಳಿಗೂ ಹೆಚ್ಚು ಕಾಲ ಕಳೆದರೂ...
ಕಳ್ಳತನ ಪ್ರಕರಣ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು
ಬೆಳ್ತಂಗಡಿ: ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಮೂರು ವರ್ಷಗಳಿಂದ ಮಾನ್ಯ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಬೆಳ್ತಂಗಡಿ ನಿವಾಸಿ ವಾರಂಟ್ ಆರೋಪಿಯನ್ನು ವಿಟ್ಲ ಪೊಲೀಸರು ಮಂಗಳೂರಿನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳ್ತಂಗಡಿ ನಿವಾಸಿ ರಾಜೇಶ್ (41) ಬಂಧಿತ ಆರೋಪಿಯಾಗಿದ್ದಾನೆ. ಈತನ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ 2018ರಲ್ಲಿ ಕಳ್ಳತನ ಪ್ರಕರಣ (ಅ.ಕ್ರ ನಂ: 204/2018, ಕಲಂ 379 ಐಪಿಸಿ) ದಾಖಲಾಗಿತ್ತು. ಈ ಪ್ರಕರಣದ ತನಿಖೆ ನಡೆದು ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತಾದರೂ, ಆರೋಪಿ ರಾಜೇಶ್ ಕಳೆದ ಮೂರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದನು....
ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ನೂತನ ಮುಖ್ಯಸ್ಥರಾಗಿ ಸುನಿಲ್ ಹೆಗ್ಡೆ ನೇಮಕ
ಉಜಿರೆ ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ನೂತನ ಮುಖ್ಯಸ್ಥರಾಗಿ ಸುನಿಲ್ ಹೆಗ್ಡೆ ನೇಮಕಗೊಂಡಿದ್ದಾರೆ. ಈ ಹಿಂದೆ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸಿ, ಇತ್ತೀಚೆಗಷ್ಟೇ ನಿವೃತ್ತರಾದ ಡಾ. ಭಾಸ್ಕರ ಹೆಗಡೆಯವರಿಂದ ತೆರವಾದ ಸ್ಥಾನಕ್ಕೆ ಸುನಿಲ್ ಹೆಗ್ಡೆ ನಿಯುಕ್ತಿಗೊಂಡಿದ್ದಾರೆ. ಇವರು ಕಳೆದ 15 ವರ್ಷಗಳಿಂದ ಇದೇ ವಿಭಾಗದಲ್ಲಿ ಸಹ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಉಜಿರೆ ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಹಿರಿಯ ವಿದ್ಯಾರ್ಥಿಯೂ ಆಗಿರುವ ಸುನಿಲ್ ಹೆಗ್ಡೆ ಕಸ್ತೂರಿ ವಾಹಿನಿಯಲ್ಲಿ ಕಾಪಿ ಎಡಿಟರ್ ಆಗಿ ವೃತ್ತಿ ಜೀವನ ಆರಂಭಿಸಿದ್ದರು. ನಂತರ 15 ಭಾಷೆಗಳಲ್ಲಿ ಪ್ರಕಟವಾಗುತ್ತಿದ್ದ "ಸಂಡೇ ಇಂಡಿಯನ್"...
ಬೆಳ್ತಂಗಡಿ; ಎಸ್.ಐ.ಆರ್ ಗೆ ತೆರಳಿದ್ದ ದಲಿತ ಸಮುದಾಯದ ಬಿಎಲ್ ಒ ಗೆ ಜಾತಿನಿಂದನೆ; ಪ್ರಕರಣ ದಾಖಲು
ಬೆಳ್ತಂಗಡಿ: ಶಿರ್ಲಾಲಿನಲ್ಲಿ ಎಸ್.ಐ ಆರ್ ಕೆಲಸಕ್ಕೆಂದು ತೆರಳಿದ್ದ ದಲಿತ ಸಮುದಾಯಕ್ಕೆ ಸೇರಿದ ಬಿ.ಎಲ್.ಒ ಗೆ ಸ್ಥಳೀಯ ನಿವಾಸಿ ಯಶೋಧ ಆಚಾರಿ ಎಂಬವರು ಮನೆಯೊಳಗೆ ಪ್ರವೇಶಿಸಲು ಅನುಮತಿ ನೀಡದೆ ನೀನು ಹೊರಗೆ ನಿಲ್ಲು ನಿನ್ನ ಜಾತಿಯವರು ಅಲ್ಲಿಯೇ ನಿಲ್ಲುವುದು ಬರಬಾರದು ಎಂದು ಜಾತಿ ನಿಂದನೆ ಮಾಡಿರುವುದಾಗಿ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸ್ಥಳೀಯ ಅಂಗನವಾಡಿ ಕಾರ್ಯಕರ್ತೆ ಬಿಎಲ್.ಒ ಆಗಿ ಕೆಲಸ ಮಾಡುತ್ತಿದ್ದು ಶಿರ್ಲಾಲು ಗ್ರಾಮದ ಪಲ್ಲದೋಡಿ ಕಾಳಿಕಾಂಬ ನಿವಾಸಿ ಯಶೋಧ ಆಚಾರಿ ಎಂಬವರ ಮನೆಗೆ ಎ.ಎಲ್.ಒ ಮಾಧವ ಎಂಬರೊಂದಿಗೆ ಜು.6 ರಂದು ಬೆಳಗ್ಗೆ 11:30...
ಜು 8 ದ.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಜಿಲ್ಲಾಧಿಕಾರಿ ಘೋಷಣೆ
ಮಂಗಳೂರು, ಜು.7: ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಕಾರಣ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜು.8ರ ಬುಧವಾರ ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಧರ್ಮಸ್ಥಳ: ಅಜಿಕುರಿ ರಸ್ತೆ ದುರಸ್ತಿಗೆ ಒತ್ತಾಯಿಸಿ ರಸ್ತೆತಡೆ ನಡೆಸಿ ಪ್ರತಿಭಟನೆ
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದಿಂದ ಅಜಿಕುರಿ ಹೋಗುವ ರಸ್ತೆ ಸಂಪೂರ್ಣವಾಗಿ ಹದಗೆಟ್ಟು ಹೋಗಿದ್ದು ವಾಹನಗಳ ಹಾಗೂ ಜನರ ಸಂಚಾರ ಅಸಾಧ್ಯವಾಗಿದೆ. ರಸ್ತೆಯಲ್ಲಿ ದೊಡ್ಡ ಹೊಂಡಗಳೇ ಬಿದ್ದಿದ್ದು ಕನಿಷ್ಟ ದುರಸ್ತಿಗೂ ಮುಂದಾಗದ ಹಿನ್ನಲೆಯಲ್ಲಿ ಸ್ಥಳೀಯ ನಿವಾಸಿಗಳು ರಿಕ್ಷಾ ಚಾಲಕರು ಒಟ್ಟಾಗಿ ಮಂಗಳವಾರ ರಸ್ತೆ ತಡೆ ನಡೆಸಿ ಪ್ರತಿಭಟನೆ ಆರಂಭಿಸಿದ್ದಾರೆ.ನೇತ್ರಾವತಿ ಸ್ನಾನಘಟ್ಟದಿಂದ ಅಜಿಕುರಿ ಮಾರ್ಗವಾಗಿ ದಿಡುಪೆ- ಪೈಚಾರು ರಾಜ್ಯಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆಕಳೆದ 5 ವರ್ಷಗಳಿಂದ ಸಂಪೂರ್ಣ ಹದಗೆಟ್ಟ ರೀತಿಯಲ್ಲಿದ್ದು ವರ್ಷದ ಹಿಂದೆಯೂ ಸ್ಥಳೀಯರು ಪ್ರತಿಭಟನೆ ನಡೆಸಿದ್ದರು. […]
ಸುಳ್ಯ ತೂಗು ಸೇತುವೆಗಳ ಸರದಾರ ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್ ನಿಧನ
ಸುಳ್ಯ: ದೇಶಾದ್ಯಂತ ತೂಗು ಸೇತುವೆಗಳ ಸರದಾರ' ಹಾಗೂ 'ಭಾರತದ ಸೇತುವೆ ಮನುಷ್ಯ' (Bridge Man of India) ಎಂದೇ ಪ್ರಖ್ಯಾತರಾಗಿದ್ದ, ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ (76) ಅವರು ಮಂಗಳವಾರ ಮುಂಜಾನೆ ವಿಧಿವಶರಾಗಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಉತ್ತರಾಖಂಡದ ಪವಿತ್ರ ದೇಗುಲಗಳ ಪ್ರವಾಸ ಕೈಗೊಂಡಿದ್ದ ಅವರು, ತೀವ್ರ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದರು. ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮೃತರು ಮೂವರು ಮಕ್ಕಳನ್ನು ಅಗಲಿದ್ದಾರೆ. ಗಿರೀಶ್ ಭಾರದ್ವಾಜ್ ಅವರು ದೇಶದ ವಿವಿಧೆಡೆ, ವಿಶೇಷವಾಗಿ ಗ್ರಾಮೀಣ ಭಾಗಗಳಲ್ಲಿ...















