ಪುತ್ತೂರಿನ ಜಿಮ್ ಟ್ರೈನರ್ ಮಡಂತ್ಯಾರು ಮೂಲದ ಸಚಿನ್‌ರೈ ಕುಸಿದು ಬಿದ್ದು ಸಾವು
ಪುತ್ತೂರು: ಜಿಮ್ ಟ್ರೈನರ್ ಆಗಿ ಗುರುತಿಸಿಕೊಂಡಿದ್ದ ಸಚಿನ್ ರೈ ಇಂದು ಮುಂಜಾನೆ ಆಕಸ್ಮಿಕವಾಗಿ ಕುಸಿದು ಬಿದ್ದು ನಿಧನರಾಗಿದ್ದಾರೆ. ಮಡಂತ್ಯಾರು ನಿವಾಸಿಯಾಗಿದ್ದ ಇವರು ಪ್ರಸ್ತುತ ಪುತ್ತೂರಿನ ಕಲ್ಲಿಮಾರ್‌ನಲ್ಲಿ ವಾಸವಿದ್ದರು. ಇಂದು ಮುಂಜಾನೆ ಸಚಿನ್ ರೈ ಅವರು ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಆಸ್ಪತ್ರೆಗೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ದೃಢೀಕರಿಸಿದ್ದಾರೆ ಎಂದು ತಿಳಿದುಬಂದಿದೆ.
ಬೆಳ್ತಂಗಡಿ: ಕೊಲೆ ಯತ್ನ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದ ಆರೋಪಿ ಬಂಧನ
ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 2018ರಲ್ಲಿ ದಾಖಲಾಗಿದ್ದ (ಕ್ರೈಂ ನಂ. 164/2018) ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಂಗಳೂರು 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ಎಸ್.ಸಿ. ನಂ. 68/2022 ಪ್ರಕರಣದ ವಿಚಾರಣೆಗೆ ಸುಮಾರು ನಾಲ್ಕು ತಿಂಗಳಿನಿಂದ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಕೆಂಪಕೋಡಿ ನಿವಾಸಿ ಕುಂಯಾ ಅವರ ಪುತ್ರ ಆನಂದ (40) ಎಂದು ಗುರುತಿಸಲಾಗಿದೆ. ಈ ಪ್ರಕರಣವು ಐಪಿಸಿ ಕಲಂ 341, 324, 504, 506, 307 ಹಾಗೂ 34ರ...
ಉಜಿರೆ; ಖಾಸಗಿ ಶಾಲಾ ಬಸ್ ನಿಂದ ಸರಣಿ ಅಪಘಾತ ಹಲವು ವಾಹನಗಳು ಜಖಂ
ಬೆಳ್ತಂಗಡಿ : ಚಾರ್ಮಾಡಿ ಕಡೆಯಿಂದ ಉಜಿರೆ ಕಡೆಗೆ ಬರುತ್ತಿದ್ದ ಶಾಲಾ ಬಸ್ ಚಾಲಕನ ನಿಯಂತ್ರಣ ತಪ್ಪಿ 3 ಕಾರುಗಳಿಗೆ ಮತ್ತು ಒಂದು ಬೈಕ್ ಗೆ ಡಿಕ್ಕಿ ಹೊಡೆದ ಘಟನೆ ಉಜಿರೆಯಲ್ಲಿ ಜು. 04 ರಂದು ನಡೆದಿದೆಖಾಸಗಿ ವಿದ್ಯಾ ಸಂಸ್ಥೆಯ ಶಾಲಾ ಬಸ್, ನಿಯಂತ್ರಣ ತಪ್ಪಿ ಮಾರುತಿ ರಿಟ್ಸ್, ಮಾರುತಿ ಬಲೆನೋ, ಮಾರುತಿ ಬ್ರೆಝಾ ಮತ್ತು ಒಂದು ಬೈಕ್ ಡಿಕ್ಕಿಹೊಡೆದಿದೆ. ಕಾರುಗಳು ಹಾಗೂ ಬೈಕ್ ಜಖಂಗೊಂಡಿದೆ. ಯಾರಿಗೂ ಹೆಚ್ಚಿನ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ. ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಚಾರ್ಮಾಡಿ ಘಾಟಿ ಐದನೇ ತಿರುವಿನಲ್ಲಿ ಕಾರಿನ ಮೇಲೆ ಬಿದ್ದ ಮರ ಕಾರಿಗೆ ಹಾನಿ
ಬೆಳ್ತಂಗಡಿ: ಚಾರ್ಮಾಡಿ ಘಾಟಿ ರಸ್ತೆಯ ಐದನೇ ತಿರುವಿನಲ್ಲಿ ಮಳೆ-ಗಾಳಿಯ ಆರ್ಭಟಕ್ಕೆ ಭಾರಿ ಗಾತ್ರದ ಮರವೊಂದು ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದು ಕಾರಿಗೆ ಹಾನಿ ಉಂಟಾದ ಘಟನೆ ಶನಿವಾರ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆಮರ ರಸ್ತೆ ಮಧ್ಯಭಾಗಕ್ಕೆ ಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡು, ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಯಿತು. ಇದರಿಂದ ಎರಡೂ ಬದಿಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು.ಮಾಹಿತಿ ತಿಳಿದ ತಕ್ಷಣ ಸಂಬಂಧಪಟ್ಟ ಇಲಾಖೆಯ ಸಿಬ್ಬಂದಿ ಹಾಗೂ ಸ್ಥಳೀಯರು ಸ್ಥಳಕ್ಕೆ ಆಗಮಿಸಿ ಮರ...
31 ವರ್ಷಗಳ ಯಶಸ್ವಿ ಪಯಣ: ಗ್ರಾಹಕರ ವಿಶ್ವಾಸದ ಪ್ರತೀಕವಾಗಿ ಬೆಳೆದ ಸೋಜಾ ಎಲೆಕ್ಟ್ರಾನಿಕ್ಸ್ ನಲ್ಲಿ ಮಾನ್ಸೂನ್ ಆಫರ್ ಪ್ರಾರಂಭ; ಶೇ.10-50ರವರೆಗೆ ವಿಶೇಷ ರಿಯಾಯಿತಿ
ಬೆಳ್ತಂಗಡಿ: ತಾಲೂಕಿನ ಅತ್ಯಂತ ಹಿರಿಯ ಹಾಗೂ ಜನಪ್ರಿಯ ಗೃಹಪಯೋಗಿ ಮಳಿಗೆಗಳಲ್ಲಿ ಒಂದಾದ ಸೋಜಾ ಎಲೆಕ್ಟ್ರಾನಿಕ್ಸ್, 1995ರ ಡಿಸೆಂಬರ್ 8ರಂದು ಬೆಳ್ತಂಗಡಿ ನಗರದ ಹೃದಯ ಭಾಗದಲ್ಲಿ ಮಾಜಿ ಶಾಸಕ ದಿವಂಗತ ವಸಂತ ಬಂಗೇರ, ಬೆಳ್ತಂಗಡಿ ಕ್ರೈಸ್ತ ಧರ್ಮಕ್ಷೇತ್ರದ ಧರ್ಮಗುರುಗಳು ಹಾಗೂ ನೂರಾರು ಗ್ರಾಹಕರ ಸಮ್ಮುಖದಲ್ಲಿ ಉದ್ಘಾಟನೆಗೊಂಡು ಇದೀಗ ಯಶಸ್ವಿಯಾಗಿ 31 ವರ್ಷಗಳ ಪಯಣವನ್ನು ಪೂರ್ಣಗೊಳಿಸಿದೆ. ಜನರ ಪ್ರೀತಿ, ವಿಶ್ವಾಸ ಮತ್ತು ಆಶೀರ್ವಾದದಿಂದ ಬೆಳೆಯುತ್ತಾ ಬಂದ ಈ ಸಂಸ್ಥೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವಿವಿಧ ಕೃಷಿ ಮೇಳಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ತನ್ನ ಸಾಮಾಜಿಕ ಬದ್ಧತೆಯನ್ನೂ...
ಮಂಗಳೂರು ಚಿನ್ನದ ವ್ಯಾಪಾರಿಯ ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ
ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ಬೈಕಂಪಾಡಿ ಸಮೀಪ ಇತ್ತೀಚೆಗೆ ನಸುಕಿನ ಜಾವ ಕಾರೊಂದನ್ನು ಅಡ್ಡಗಟ್ಟಿ, ಮಾರಕಾಸ್ತ್ರಗಳನ್ನು ತೋರಿಸಿ ದರೋಡೆ ಹಾಗೂ ಅಪಹರಣ ನಡೆಸಿದ್ದ ಭೀಕರ ಪ್ರಕರಣಕ್ಕೆ ಸಂಬಂಧಿಸಿದಂತೆ ಪಣಂಬೂರು ಪೋಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಕೇರಳದ ಕಣ್ಣೂರು ನಿವಾಸಿ ನಿಮಿಲ್ ಆರ್.ಕೆ (37), ಕೊಡಗು ಜಿಲ್ಲೆಯ ಮಡಿಕೇರಿ ನಿವಾಸಿಗಳಾದ ಇರ್ಷಾದ್ (40) ಮತ್ತು ಮುಸ್ತಾಫ (49) ಎಂದು ಗುರುತಿಸಲಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ ಈ ದರೋಡೆ ಜಾಲದಲ್ಲಿ ಒಟ್ಟು 16 ಆರೋಪಿಗಳು ಭಾಗಿಯಾಗಿದ್ದು, ಸದ್ಯ ಬಂಧಿತರಾಗಿರುವ ಮೂವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ 10...
ಆಡಳಿತ ಚುರುಕುಗೊಳಿಸಲು ಮುಂದಾದ ಸರಕಾರ ತಾಲೂಕು ಹೋಬಳಿ ಮಟ್ಟದಲ್ಲಿ ಜನಸ್ಪಂದನ ಸಭೆ ನಡೆಸಲು ಸರಕಾರ ಸೂಚನೆ
ಬೆಳ್ತಂಗಡಿ; ಜಿಲ್ಲಾ ಮಟ್ಟದಲ್ಲಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ ಪ್ರತಿ ವಾರ ಜಿಲ್ಲಾ/ತಾಲೂಕು/ ಜಿಲ್ಲಾಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ಹೋಬಳಿ ಮಟ್ಟದ ಜನಸ್ಪಂದನ ಕಾರ್ಯಕ್ರಮಗಳನ್ನು ನಡೆಸಿ ಜನರ ಸಮಸ್ಯೆಗಳಿಗೆ ಸ್ಪಂದಿಸಲು ರಾಜ್ಯ ಸರ್ಕಾರ ಅಧಿಕೃತ ಆದೇಶ ನೀಡಿದೆ. ಪ್ರತಿ ವಾರ ಹೋಬಳಿ ಮಟ್ಟದ ಜನಸ್ಪಂದನ ಕಾರ್ಯಕ್ರಮಗಳನ್ನು ನಡೆಸಬೇಕು , ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ , ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಆದೇಶಿಸಿರುವ ರಾಜ್ಯ ಸರ್ಕಾರ , ಜನಸ್ಪಂದನ ಕಾರ್ಯಕ್ರಮದ ಬಗ್ಗೆ ಪ್ಯಾಪಕ...
ದ.ಕ ಜಿಲ್ಲೆಯಲ್ಲಿ ಜು.3 ಶುಕ್ರವಾರ ಶಾಲೆಗಳಿಗೆ ರಜೆ ಘೋಷಣೆ
ಮಂಗಳೂರು: ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಶುಕ್ರವಾರ (ಜು.3) ದ.ಕ ಜಿಲ್ಲೆಯ ಶಾಲಾ - ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಆದೇಶಿಸಿದ್ದಾರೆ. ದ.ಕ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜಿಗೆ (ಪಿಯು) ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಭಾರಿ ಮಳೆಯ ಮುನ್ಸೂಚನೆ (ಆರೆಂಜ್ ಅಲರ್ಟ್) ಹಿನ್ನೆಲೆಯಲ್ಲಿ ದಿನಾಂಕ: 03.07.2026 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳು, ಪದವಿ ಪೂರ್ವ ಹಾಗೂ ಪದವಿ ಪೂರ್ವ ವಸತಿ ಕಾಲೇಜುಗಳಿಗೆ (12ನೇ...
ಮಾಜಿ ಮುಖ್ಯ ಮಂತ್ರಿ ಎಂ ವೀರಪ್ಪಮೊಯ್ಲಿ ಧರ್ಮಸ್ಥಳಕ್ಕೆಭೇಟಿ
ಬೆಳ್ತಂಗಡಿ : ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಹಾಗೂ ಮಾಜಿ ಸಚಿವ ಅಭಯಚಂದ್ರ ಜೈನ್ ಅವರು ಗುರುವಾರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದು, ಮಾತುಕತೆ ನಡೆಸಿದರು. ಜಿಲ್ಲೆಯ ಕಾಂಗ್ರೆಸ್ ಮುಖಂಡರು ಜೊತೆಗಿದ್ದರು.
ಬೆಳ್ತಂಗಡಿ : ಅಕ್ರಮವಾಗಿ ಸರಕಾರಿ ಜಾಗದಲ್ಲಿ ಮರ ಕಡಿಯುವಾಗ ಅರಣ್ಯ ಇಲಾಖೆ ದಾಳಿ ಪ್ರಕರಣ ದಾಖಲು
ಬೆಳ್ತಂಗಡಿ : ಸರಕಾರಿ ಜಾಗದಲ್ಲಿ ಅಕ್ರಮವಾಗಿ ಮರವನ್ನು ಕಡಿಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ವಲಯ ಅರಣ್ಯ ಇಲಾಖೆ ದಾಳಿ ಮಾಡಿ ಪ್ರಕರಣ ದಾಖಲಿಸಿಕೊಂಡಿದೆ. ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ನೆರಿಯಕಾಡು ಎಂಬಲ್ಲಿ ಸರಕಾರಿ ಜಾಗದಲ್ಲಿ ನೆರಿಯ ಗ್ರಾಮದ ಅಂಬ್ಲೆ ನಿವಾಸಿ ರಾಜಪ್ಪ ಗೌಡ(57) ಎಂಬವರು ಅಕ್ರಮವಾಗಿ ಯಾವುದೇ ಅನುಮತಿ ಇಲ್ಲದೆ ಹೆಬ್ಬಲಸು ಮರವನ್ನು ಕಡಿಯುತ್ತಿರುವ ಬಗ್ಗೆ ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯ ಆರ್.ಎಫ್.ಒ ತ್ಯಾಗರಾಜ್ ಗೆ ಬಂದ ಖಚಿತ ಮಾಹಿತಿ ಮೇರೆಗೆ ಜೂ.29 ರಂದು ದಾಳಿ ಮಾಡಿದ್ದಾರೆ.ಸರಕಾರಿ ಜಾಗಕ್ಕೆ ದಾಳಿ...















