ಉಜಿರೆ; ಖಾಸಗಿ ಶಾಲಾ ಬಸ್ ನಿಂದ ಸರಣಿ ಅಪಘಾತ ಹಲವು ವಾಹನಗಳು ಜಖಂ

0

ಬೆಳ್ತಂಗಡಿ : ಚಾರ್ಮಾಡಿ ಕಡೆಯಿಂದ ಉಜಿರೆ ಕಡೆಗೆ ಬರುತ್ತಿದ್ದ ಶಾಲಾ ಬಸ್ ಚಾಲಕನ ನಿಯಂತ್ರಣ ತಪ್ಪಿ 3 ಕಾರುಗಳಿಗೆ ಮತ್ತು ಒಂದು ಬೈಕ್ ಗೆ ಡಿಕ್ಕಿ ಹೊಡೆದ ಘಟನೆ ಉಜಿರೆಯಲ್ಲಿ ಜು. 04 ರಂದು ನಡೆದಿದೆಖಾಸಗಿ ವಿದ್ಯಾ ಸಂಸ್ಥೆಯ ಶಾಲಾ ಬಸ್, ನಿಯಂತ್ರಣ ತಪ್ಪಿ ಮಾರುತಿ ರಿಟ್ಸ್, ಮಾರುತಿ ಬಲೆನೋ, ಮಾರುತಿ ಬ್ರೆಝಾ ಮತ್ತು ಒಂದು ಬೈಕ್ ಡಿಕ್ಕಿಹೊಡೆದಿದೆ. ಕಾರುಗಳು ಹಾಗೂ ಬೈಕ್ ಜಖಂಗೊಂಡಿದೆ. ಯಾರಿಗೂ ಹೆಚ್ಚಿನ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ. ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಚಾರ್ಮಾಡಿ ಘಾಟಿ ಐದನೇ ತಿರುವಿನಲ್ಲಿ ಕಾರಿನ ಮೇಲೆ ಬಿದ್ದ ಮರ ಕಾರಿಗೆ ಹಾನಿ

0

ಬೆಳ್ತಂಗಡಿ: ಚಾರ್ಮಾಡಿ ಘಾಟಿ ರಸ್ತೆಯ ಐದನೇ ತಿರುವಿನಲ್ಲಿ ಮಳೆ-ಗಾಳಿಯ ಆರ್ಭಟಕ್ಕೆ ಭಾರಿ ಗಾತ್ರದ ಮರವೊಂದು ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದು ಕಾರಿಗೆ ಹಾನಿ ಉಂಟಾದ ಘಟನೆ ಶನಿವಾರ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆಮರ ರಸ್ತೆ ಮಧ್ಯಭಾಗಕ್ಕೆ ಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡು, ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಯಿತು. ಇದರಿಂದ ಎರಡೂ ಬದಿಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು.ಮಾಹಿತಿ ತಿಳಿದ ತಕ್ಷಣ ಸಂಬಂಧಪಟ್ಟ ಇಲಾಖೆಯ ಸಿಬ್ಬಂದಿ ಹಾಗೂ ಸ್ಥಳೀಯರು ಸ್ಥಳಕ್ಕೆ ಆಗಮಿಸಿ ಮರ...

31 ವರ್ಷಗಳ ಯಶಸ್ವಿ ಪಯಣ: ಗ್ರಾಹಕರ ವಿಶ್ವಾಸದ ಪ್ರತೀಕವಾಗಿ ಬೆಳೆದ ಸೋಜಾ ಎಲೆಕ್ಟ್ರಾನಿಕ್ಸ್ ನಲ್ಲಿ ಮಾನ್ಸೂನ್ ಆಫ‌ರ್ ಪ್ರಾರಂಭ; ಶೇ.10-50ರವರೆಗೆ ವಿಶೇಷ ರಿಯಾಯಿತಿ

0

ಬೆಳ್ತಂಗಡಿ: ತಾಲೂಕಿನ ಅತ್ಯಂತ ಹಿರಿಯ ಹಾಗೂ ಜನಪ್ರಿಯ ಗೃಹಪಯೋಗಿ ಮಳಿಗೆಗಳಲ್ಲಿ ಒಂದಾದ ಸೋಜಾ ಎಲೆಕ್ಟ್ರಾನಿಕ್ಸ್, 1995ರ ಡಿಸೆಂಬ‌ರ್ 8ರಂದು ಬೆಳ್ತಂಗಡಿ ನಗರದ ಹೃದಯ ಭಾಗದಲ್ಲಿ ಮಾಜಿ ಶಾಸಕ ದಿವಂಗತ ವಸಂತ ಬಂಗೇರ, ಬೆಳ್ತಂಗಡಿ ಕ್ರೈಸ್ತ ಧರ್ಮಕ್ಷೇತ್ರದ ಧರ್ಮಗುರುಗಳು ಹಾಗೂ ನೂರಾರು ಗ್ರಾಹಕರ ಸಮ್ಮುಖದಲ್ಲಿ ಉದ್ಘಾಟನೆಗೊಂಡು ಇದೀಗ ಯಶಸ್ವಿಯಾಗಿ 31 ವರ್ಷಗಳ ಪಯಣವನ್ನು ಪೂರ್ಣಗೊಳಿಸಿದೆ. ಜನರ ಪ್ರೀತಿ, ವಿಶ್ವಾಸ ಮತ್ತು ಆಶೀರ್ವಾದದಿಂದ ಬೆಳೆಯುತ್ತಾ ಬಂದ ಈ ಸಂಸ್ಥೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವಿವಿಧ ಕೃಷಿ ಮೇಳಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ತನ್ನ ಸಾಮಾಜಿಕ ಬದ್ಧತೆಯನ್ನೂ...

ಮಂಗಳೂರು ಚಿನ್ನದ ವ್ಯಾಪಾರಿಯ ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ

0

ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ಬೈಕಂಪಾಡಿ ಸಮೀಪ ಇತ್ತೀಚೆಗೆ ನಸುಕಿನ ಜಾವ ಕಾರೊಂದನ್ನು ಅಡ್ಡಗಟ್ಟಿ, ಮಾರಕಾಸ್ತ್ರಗಳನ್ನು ತೋರಿಸಿ ದರೋಡೆ ಹಾಗೂ ಅಪಹರಣ ನಡೆಸಿದ್ದ ಭೀಕರ ಪ್ರಕರಣಕ್ಕೆ ಸಂಬಂಧಿಸಿದಂತೆ ಪಣಂಬೂರು ಪೋಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಕೇರಳದ ಕಣ್ಣೂರು ನಿವಾಸಿ ನಿಮಿಲ್ ಆರ್.ಕೆ (37), ಕೊಡಗು ಜಿಲ್ಲೆಯ ಮಡಿಕೇರಿ ನಿವಾಸಿಗಳಾದ ಇರ್ಷಾದ್ (40) ಮತ್ತು ಮುಸ್ತಾಫ (49) ಎಂದು ಗುರುತಿಸಲಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ ಈ ದರೋಡೆ ಜಾಲದಲ್ಲಿ ಒಟ್ಟು 16 ಆರೋಪಿಗಳು ಭಾಗಿಯಾಗಿದ್ದು, ಸದ್ಯ ಬಂಧಿತರಾಗಿರುವ ಮೂವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ 10...

ಆಡಳಿತ ಚುರುಕುಗೊಳಿಸಲು ಮುಂದಾದ ಸರಕಾರ ತಾಲೂಕು ಹೋಬಳಿ ಮಟ್ಟದಲ್ಲಿ ಜನಸ್ಪಂದನ ಸಭೆ ನಡೆಸಲು ಸರಕಾರ ಸೂಚನೆ

0

ಬೆಳ್ತಂಗಡಿ; ಜಿಲ್ಲಾ ಮಟ್ಟದಲ್ಲಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ ಪ್ರತಿ ವಾರ ಜಿಲ್ಲಾ/ತಾಲೂಕು/ ಜಿಲ್ಲಾಮಟ್ಟದ ಅಧಿಕಾರಿಗಳ‌ ನೇತೃತ್ವದಲ್ಲಿ ಹೋಬಳಿ ಮಟ್ಟದ ಜನಸ್ಪಂದನ ಕಾರ್ಯಕ್ರಮಗಳನ್ನು ನಡೆಸಿ ಜನರ ಸಮಸ್ಯೆಗಳಿಗೆ ಸ್ಪಂದಿಸಲು ರಾಜ್ಯ ಸರ್ಕಾರ ಅಧಿಕೃತ ಆದೇಶ ನೀಡಿದೆ. ಪ್ರತಿ ವಾರ ಹೋಬಳಿ ಮಟ್ಟದ ಜನಸ್ಪಂದನ ಕಾರ್ಯಕ್ರಮಗಳನ್ನು ನಡೆಸಬೇಕು , ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ , ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಆದೇಶಿಸಿರುವ ರಾಜ್ಯ ಸರ್ಕಾರ , ಜನಸ್ಪಂದನ ಕಾರ್ಯಕ್ರಮದ ಬಗ್ಗೆ ಪ್ಯಾಪಕ...

ದ.ಕ ಜಿಲ್ಲೆಯಲ್ಲಿ ಜು.3 ಶುಕ್ರವಾರ ಶಾಲೆಗಳಿಗೆ ರಜೆ ಘೋಷಣೆ

0

ಮಂಗಳೂರು: ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಶುಕ್ರವಾರ (ಜು.3) ದ.ಕ ಜಿಲ್ಲೆಯ ಶಾಲಾ - ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಆದೇಶಿಸಿದ್ದಾರೆ. ದ.ಕ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜಿಗೆ (ಪಿಯು) ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಭಾರಿ ಮಳೆಯ ಮುನ್ಸೂಚನೆ (ಆರೆಂಜ್ ಅಲರ್ಟ್) ಹಿನ್ನೆಲೆಯಲ್ಲಿ ದಿನಾಂಕ: 03.07.2026 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳು, ಪದವಿ ಪೂರ್ವ ಹಾಗೂ ಪದವಿ ಪೂರ್ವ ವಸತಿ ಕಾಲೇಜುಗಳಿಗೆ (12ನೇ...

ಮಾಜಿ ಮುಖ್ಯ ಮಂತ್ರಿ ಎಂ ವೀರಪ್ಪಮೊಯ್ಲಿ ಧರ್ಮಸ್ಥಳಕ್ಕೆ‌ಭೇಟಿ

0

ಬೆಳ್ತಂಗಡಿ : ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಹಾಗೂ ಮಾಜಿ ಸಚಿವ ಅಭಯಚಂದ್ರ ಜೈನ್ ಅವರು ಗುರುವಾರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದು, ಮಾತುಕತೆ ನಡೆಸಿದರು. ಜಿಲ್ಲೆಯ ಕಾಂಗ್ರೆಸ್ ಮುಖಂಡರು ಜೊತೆಗಿದ್ದರು.

ಬೆಳ್ತಂಗಡಿ : ಅಕ್ರಮವಾಗಿ ಸರಕಾರಿ ಜಾಗದಲ್ಲಿ ಮರ ಕಡಿಯುವಾಗ ಅರಣ್ಯ ಇಲಾಖೆ ದಾಳಿ ಪ್ರಕರಣ ದಾಖಲು

0

ಬೆಳ್ತಂಗಡಿ : ಸರಕಾರಿ ಜಾಗದಲ್ಲಿ ಅಕ್ರಮವಾಗಿ ಮರವನ್ನು ಕಡಿಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ವಲಯ ಅರಣ್ಯ ಇಲಾಖೆ ದಾಳಿ ಮಾಡಿ ಪ್ರಕರಣ ದಾಖಲಿಸಿಕೊಂಡಿದೆ. ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ನೆರಿಯಕಾಡು ಎಂಬಲ್ಲಿ ಸರಕಾರಿ ಜಾಗದಲ್ಲಿ ನೆರಿಯ ಗ್ರಾಮದ ಅಂಬ್ಲೆ ನಿವಾಸಿ ರಾಜಪ್ಪ ಗೌಡ(57) ಎಂಬವರು ಅಕ್ರಮವಾಗಿ ಯಾವುದೇ ಅನುಮತಿ ಇಲ್ಲದೆ ಹೆಬ್ಬಲಸು ಮರವನ್ನು ಕಡಿಯುತ್ತಿರುವ ಬಗ್ಗೆ ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯ ಆರ್.ಎಫ್.ಒ ತ್ಯಾಗರಾಜ್ ಗೆ ಬಂದ ಖಚಿತ ಮಾಹಿತಿ ಮೇರೆಗೆ ಜೂ.29 ರಂದು ದಾಳಿ ಮಾಡಿದ್ದಾರೆ.ಸರಕಾರಿ ಜಾಗಕ್ಕೆ ದಾಳಿ...

ಅಂತಾರಾಷ್ಟ್ರೀಯ ಮಾದಕವಸ್ತು ವಿರೋಧಿ ದಿನಾಚರಣೆಯ ಅಂಗವಾಗಿರಾಜ್ಯದಾದ್ಯಂತ ಸ್ವಾಸ್ಥ್ಯ ಸಂಕಲ್ಪ ಕೈಗೊಂಡ 1.31 ಲಕ್ಷ ವಿದ್ಯಾರ್ಥಿಗಳು

0

ಬೆಳ್ತಂಗಡಿ; ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವತಿಯಿಂದ ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆಯ ಪ್ರಯುಕ್ತ ರಾಜ್ಯದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ದುಶ್ಚಟಗಳ ವಿರುದ್ಧ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಆನ್‌ಲೈನ್ ಮೂಲಕ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮವನ್ನು ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಉದ್ಘಾಟಿಸಿದರು. ರಾಜ್ಯದ 1,281 ಶಾಲಾ-ಕಾಲೇಜುಗಳ 1,31,039 ವಿದ್ಯಾರ್ಥಿಗಳು ಏಕಕಾಲದಲ್ಲಿ ಆನ್‌ಲೈನ್ ಮೂಲಕ ಮಾಹಿತಿಯನ್ನು ಪಡೆದರು.‘ಯುವಜನತೆ ನಮ್ಮ ದೇಶದ ಆಸ್ತಿ....

ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

0

ಬೆಳ್ತಂಗಡಿ; ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ  ರೋಟರಿ ಕ್ಲಬ್, ಯಲಹಂಕ, ಬೆಂಗಳೂರು ಇವರ ವತಿಯಿಂದ ಹತ್ತು ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣಾ ಕಾರ್ಯಕ್ರಮ ಜರಗಿತು. ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್, ಯಲಹಂಕ, ಬೆಂಗಳೂರು ಇದರ ಅಧ್ಯಕ್ಷರು ಮತ್ತು ಬೆಳಾಲು ಶಾಲೆಯ ಹಿರಿಯ ವಿದ್ಯಾರ್ಥಿಯಾದ ರೋಟೇರಿಯನ್ ಅಶೋಕ್ ಹೆಬ್ಬಾರ್ ಮಾತನಾಡಿ ಜೀವನದಲ್ಲಿ ಹಣ ಗಳಿಕೆಯೇ ಮುಖ್ಯವಲ್ಲ ಸಮಾಜಕ್ಕೆ ಸಹಾಯವಾಗುವ ಕನಸುಗಳನ್ನು ಕಟ್ಟಿಕೊಳ್ಳಬೇಕು ಇಂತಹ ಸೌಲಭ್ಯಗಳನ್ನು ಪಡೆದವರು ಸಮಾಜಕ್ಕೆ ಮರಳಿ ನೀಡುವ ಮನಸ್ಸು ಮತ್ತು ಅವಕಾಶಗಳು ಲಭ್ಯವಾಗಲಿ ಎಂದು ಬೈಸಿಕಲ್ ವಿತರಿಸಿ ಶುಭ ಹಾರೈಸಿದರು. ಮುಖ್ಯೋಪಾಧ್ಯಾಯರಾದ ಜಯರಾಮ ಮಯ್ಯ ಮಾತನಾಡಿ...