ಅಂತಾರಾಷ್ಟ್ರೀಯ ಮಾದಕವಸ್ತು ವಿರೋಧಿ ದಿನಾಚರಣೆಯ ಅಂಗವಾಗಿರಾಜ್ಯದಾದ್ಯಂತ ಸ್ವಾಸ್ಥ್ಯ ಸಂಕಲ್ಪ ಕೈಗೊಂಡ 1.31 ಲಕ್ಷ ವಿದ್ಯಾರ್ಥಿಗಳು
ಬೆಳ್ತಂಗಡಿ; ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವತಿಯಿಂದ ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆಯ ಪ್ರಯುಕ್ತ ರಾಜ್ಯದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ದುಶ್ಚಟಗಳ ವಿರುದ್ಧ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಆನ್‌ಲೈನ್ ಮೂಲಕ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮವನ್ನು ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಉದ್ಘಾಟಿಸಿದರು. ರಾಜ್ಯದ 1,281 ಶಾಲಾ-ಕಾಲೇಜುಗಳ 1,31,039 ವಿದ್ಯಾರ್ಥಿಗಳು ಏಕಕಾಲದಲ್ಲಿ ಆನ್‌ಲೈನ್ ಮೂಲಕ ಮಾಹಿತಿಯನ್ನು ಪಡೆದರು.‘ಯುವಜನತೆ ನಮ್ಮ ದೇಶದ ಆಸ್ತಿ....
ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ
ಬೆಳ್ತಂಗಡಿ; ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ರೋಟರಿ ಕ್ಲಬ್, ಯಲಹಂಕ, ಬೆಂಗಳೂರು ಇವರ ವತಿಯಿಂದ ಹತ್ತು ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣಾ ಕಾರ್ಯಕ್ರಮ ಜರಗಿತು. ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್, ಯಲಹಂಕ, ಬೆಂಗಳೂರು ಇದರ ಅಧ್ಯಕ್ಷರು ಮತ್ತು ಬೆಳಾಲು ಶಾಲೆಯ ಹಿರಿಯ ವಿದ್ಯಾರ್ಥಿಯಾದ ರೋಟೇರಿಯನ್ ಅಶೋಕ್ ಹೆಬ್ಬಾರ್ ಮಾತನಾಡಿ ಜೀವನದಲ್ಲಿ ಹಣ ಗಳಿಕೆಯೇ ಮುಖ್ಯವಲ್ಲ ಸಮಾಜಕ್ಕೆ ಸಹಾಯವಾಗುವ ಕನಸುಗಳನ್ನು ಕಟ್ಟಿಕೊಳ್ಳಬೇಕು ಇಂತಹ ಸೌಲಭ್ಯಗಳನ್ನು ಪಡೆದವರು ಸಮಾಜಕ್ಕೆ ಮರಳಿ ನೀಡುವ ಮನಸ್ಸು ಮತ್ತು ಅವಕಾಶಗಳು ಲಭ್ಯವಾಗಲಿ ಎಂದು ಬೈಸಿಕಲ್ ವಿತರಿಸಿ ಶುಭ ಹಾರೈಸಿದರು. ಮುಖ್ಯೋಪಾಧ್ಯಾಯರಾದ ಜಯರಾಮ ಮಯ್ಯ ಮಾತನಾಡಿ...
ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್. ಎನ್ ನರಗುಂದ ನೇಮಕ
ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಮ್ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ಮೈಸೂರು ಅಭಿವೃದ್ಧಿ ಪ್ರಾಧಿಕಾರದ ವಿಶೇಷ ತಹಶೀಲ್ದಾರ್ ಎಸ್. ಎನ್ ನರಗುಂದ ನೇಮಕವಾಗಿದ್ದರೆ. ಕಳೆದ ಎರಡುವರೆ ವರ್ಷಗಳ ಕಾಲ ಬೆಳ್ತಂಗಡಿಯಲ್ಲಿ ತಹಶೀಲ್ದಾರ್ ಆಗಿದ್ದ ಪೃಥ್ವಿ ಸಾನಿಕಂ ಇತ್ತೀಚೆಗೆ ದ.ಕ ಜಿಲ್ಲೆಯ ಮೂಲ್ಕಿ ತಹಶೀಲ್ದಾರ್ ಆಗಿ ವರ್ಗಾವಣೆಯಾಗಿದ್ದರು. ತೆರವಾದ ಸ್ಥಾನಕ್ಕೆ ಇದೀಗ ಮೈಸೂರು ಅಭಿವೃದ್ಧಿ ಪ್ರಾಧಿಕಾರದ ವಿಶೇಷ ತಹಶೀಲ್ದಾರ್ ಎಸ್.ಎನ್ ನರಗುಂದ ಅವರನ್ನು ನೇಮಕಗೊಳಿಸಿ ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ನರಸಿಂಹ ಮೂರ್ತಿ ಜಿ.ಕೆ ಆದೇಶಿಸಿದ್ದಾರೆ.
ಬೆಳ್ತಂಗಡಿ : ಶ್ರೀರಾಮ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ವಂಚನೆ ಪ್ರಕರಣಬಡ್ಡಿ ಸಹಿತ ಠೇವಣಿ ಹಿಂದಿರುಗಿಸಲು ಗ್ರಾಹಕರ ನ್ಯಾಯಾಲಯ ಆದೇಶ
ಬೆಳ್ತಂಗಡಿ: ನಗರದ ರಾಮನಗರದಲ್ಲಿ ಕಳೆದ 25 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಶ್ರೀರಾಮ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯಲ್ಲಿ ಗ್ರಾಹಕರು ಠೇವಣಿ ಇಟ್ಟಿದ್ದ ಅಂದಾಜು ರೂ.30.45 ಕೋಟಿಗೂ ಅಧಿಕ ಹಣ ದುರುಪಯೋಗ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಗ್ರಾಹಕರ ನ್ಯಾಯಾಲಯಕ್ಕೆ ನೀಡಿ ದೂರಿನ ವಿಚಾರಣೆ ನಡೆದಿದ್ದು, ದೂರುದಾರರಾದ ದಯಾನಂದ ನಾಯಕ್ ಸೇರಿದಂತೆ 28 ಮಂದಿ ಗ್ರಾಹಕರಿಗೆ ಆಡಳಿತ ಮಂಡಳಿ 45 ದಿವಸದ ಒಳಗೆ ಶೇ.6 ಬಡ್ಡಿ ಸೇರಿಸಿ, ಅವರ ಠೇವಣಿಗಳನ್ನು ಹಿಂತಿರುಗಿಸುವಂತೆ ನ್ಯಾಯಾಲಯದ ಆದೇಶ ನೀಡಿದೆ. ಅದಲ್ಲದೆ ಎಲ್ಲಾ 28 ಮಂದಿ ದೂರುದಾರರಿಗೆ ಉಂಟಾದ ಸೇವೆಯ ಕೊರತೆ,...
ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು
ಬೆಳ್ತಂಗಡಿ : ಸುಮಾರು 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಶ್ರೀನಿವಾಸ ನನ್ನು ಆಂಧ್ರಪ್ರದೇಶದ ಚಿತ್ತೂರು ಎಂಬಲ್ಲಿ ಧರ್ಮಸ್ಥಳ ಪೊಲೀಸರು ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಬೆಳ್ತಂಗಡಿ ನ್ಯಾಯಲಯ CC No. 597/2017 CR NO. 169/2016. ಕಲಂ, 379, 201 ಐಪಿಸಿ (ಕಾರಿನಿಂದ ಎ.ಟಿ.ಎಂ ಕಾರ್ಡ್ ಕಳ್ಳತನ ಮಾಡಿ ಹಣ ಡ್ರಾಂ ಮಾಡಿದ) ಪ್ರಕರಣದಲ್ಲಿ ಸುಮಾರು 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಆಂಧ್ರಪ್ರದೇಶ ಚಿತ್ತೂರು ಜಿಲ್ಲೆ ಕವಲಗುಂಟ, ಪೆನಮೂರು ನಿವಾಸಿ ಶ್ರೀನಿವಾಸ (35) ಎಂಬಾತನನ್ನು ಬೆಳ್ತಂಗಡಿ...
ಭಾರೀ ಮಳೆ ಹಿನ್ನಕೆ ಜು.2 ಗುರುವಾರ ದ.ಕ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ
ಮಂಗಳೂರು, ಜು.1: ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಕಾರಣ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜುಗಳಿಗೆ ಜು.2ರ ಗುರುವಾರ ರಜೆ ಘೋಷಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದ್ದಾರೆ.
ಗುರುವಾಯನಕೆರೆ; ಅನುಮಾನಾಸ್ಪದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ
ಬೆಳ್ತಂಗಡಿ : ಗುರುವಾಯನಕೆರೆ ಖಾಸಗಿ ವಿದ್ಯುತ್ ಸಬ್ ಸ್ಟೇಷನ್ ಜಾಗದಲ್ಲಿ ಅವಿವಾಹಿತ ಯುವಕನೊರ್ವ ಅನುಮಾನಸ್ಪದ ರೀತಿಯಲ್ಲಿ ಆತನ ಮೃತದೇಹ ಪತ್ತೆಯಾದ ಘಟನೆ ನಡೆದಿದೆ. ತಾಲೂಕಿನ ಕುವೆಟ್ಟು ಗ್ರಾಮದ ಶಕ್ತಿನಗರ ಸಮೀಪವಿರುವ ಯನೋಪೊಯೋ ವಿದ್ಯುತ್ ಸಬ್ ಸ್ಟೇಷನ್ ಜಾಗದ ಮುಂಭಾಗ ತಡೆಗೋಡೆ ಇರುವ ಇಳಿಜಾರು ಪ್ರದೇಶದಲ್ಲಿ ಜು.1 ರಂದು ತಣ್ಣೀರುಪಂತ ಗ್ರಾಮದ ಕಲ್ಲೇರಿ ಜನತಾ ಕಾಲೋನಿ ನಿವಾಸಿ ಶರೀಫ್ ಕೆ ಅವರ ಪ್ರಥಮ ಪುತ್ರ ಮುಸ್ತಾಕ್ (27)ಎಂಬಾತ ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಮೃತ ದುರ್ದೈವಿ ಚಾಲಕ ವೃತ್ತಿ ನಡೆಸುತ್ತಿದ್ದು ಜೂ. 30 ರಂದು ಕಲ್ಲೇರಿಯಿಂದ ಮದ್ದಡ್ಕಕ್ಕೆ ಮುಸ್ತಾಕ್ ನ್ನು...
ಬೆಳ್ತಂಗಡಿ : ಕಾಲೇಜ್ ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ
ಬೆಳ್ತಂಗಡಿ : ಕಡಿರುದ್ಯಾವರ ಗ್ರಾಮದ ಮಠ ಸಮೀಪದ ಕುಂಭರೋಡಿ ನಿವಾಸಿ ಕಾಲೇಜು ವಿದ್ಯಾರ್ಥಿನಿ ನಿಖಿತಾ (19) ಎಂಬಾಕೆ ಜು.1 ರಂದು ಮನೆಯ ಸಮಿಪವಿರುವ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬೆಳ್ತಂಗಡಿಯ ಸರಕಾರಿ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ತರಗತಿ ಓದುತ್ತಿದ್ದಳು. ಆತ್ಮಹತ್ಯೆಯ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೆ ತಿಳಿದು ಬರಬೇಕಾಗಿದೆ.
ಮಂಗಳೂರು; ಭಾರೀ ಮಳೆಗೆ ಕುಸಿದ ಮನೆ ಮೂವರು ಮೃತ್ಯು
ಮಂಗಳೂರು, ಜು. 1: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ನಾಗುರಿ ಪ್ರದೇಶದಲ್ಲಿ ಮನೆ ಮೇಲೆ ತಡೆಗೋಡೆ ಕುಸಿದು ಬಿದ್ದು ಹೆಂಚಿನ ಛಾವಣಿಯ ಮನೆ ಕುಸಿದ ಪರಿಣಾಮ ಮಹಿಳೆಯೊಬ್ಬರು ಹಾಗೂ ಇಬ್ಬರು ಬಾಲಕಿಯರು ಮೃತಪಟ್ಟಿದ್ದಾರೆ. ಮನೆ ಕುಸಿದ ಸಂದರ್ಭದಲ್ಲಿ ಒಟ್ಟು ಆರು ಮಂದಿ ಅವಶೇಷಗಳಡಿ ಸಿಲುಕಿಕೊಂಡಿದ್ದರು. ಘಟನೆಯ ಬಳಿಕ ಕೈಗೊಂಡ ರಕ್ಷಣಾ ಕಾರ್ಯಾಚರಣೆಯಲ್ಲಿ ಒಬ್ಬ ಪುರುಷ ಹಾಗು ಇಬ್ಬರನ್ನು ಸುರಕ್ಷಿತವಾಗಿ ಹೊರತೆಗೆದು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೇ ವೇಳೆ, ಅವಶೇಷಗಳಡಿ ಸಿಲುಕಿದ್ದ ಮಹಿಳೆಯೊಬ್ಬರು ಮತ್ತು ಇಬ್ಬರು ಬಾಲಕಿಯರನ್ನು ಹೊರತೆಗೆದಾಗ ಅವರು ಮೃತಪಟ್ಟಿರುವುದು ದೃಢಪಟ್ಟಿದೆ. ಘಟನೆಯ...
ಧರ್ಮಸ್ಥಳ ಕನ್ಯಾಡಿಯಲ್ಲಿ ಪಾದಾಚಾರಿಗೆ ಬಸ್ ಡಿಕ್ಕಿ ಗಂಭೀರ ಗಾಯ
ಬೆಳ್ತಂಗಡಿ,: ಧರ್ಮಸ್ಥಳ ಗ್ರಾಮದ ಕನ್ಯಾಡಿ ಮಸೀದಿ ಬಳಿ ಜೂ. 30 ರ ರಾತ್ರಿ ವೇಳೆ ಪಾದಾಚಾರಿ ಯೊಬ್ಬರಿಗೆ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿಹೊಡೆದು ಪಾದಾಚಾರಿ ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ.ಉಜಿರೆಯಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ ಗ್ರಾಮಾಂತರ ಸಾರಿಗೆ, KA 19 F 3219 ಸಂಖ್ಯೆಯ ಸರ್ಕಾರಿ ಬಸ್ ಸರ್ಕಾರಿ ಬಸ್ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದಿದೆ.ಪಾದಾಚಾರಿ ರಸ್ತೆಗೆ ಬಿದ್ದಿದ್ದು, ತಲೆಗೆ ಗಂಭೀರ ಗಾಯಗಳಾಗಿವೆ. ಗಾಯಾಳುವನ್ನು ತಕ್ಷಣ ಸ್ಥಳೀಯರ ಸಹಕಾರದೊಂದಿಗೆ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆ ವೇಳೆ ಭಾರೀ ಮಳೆ ಸುರಿಯುತ್ತಿತ್ತು. ಘಟನಾ...















