ಮುಲ್ಕಿ ದೈವಸ್ಥಾನ ಕಳವು ಪ್ರಕರಣ; ನಾಲ್ವರು ಅಂತರ್ ಜಿಲ್ಲಾ ಆರೋಪಿಗಳ ಬಂಧನ 17.20 ಲಕ್ಷ ಮೌಲ್ಯದ ಸೊತ್ತುಗಳು ವಶಕ್ಕೆ
ಮಂಗಳೂರು: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿಲ್ಪಾಡಿ ಗ್ರಾಮದ ಆದಿ ಕಿಲ್ಲಾಡಿ ಕೊರ್ದಬ್ಬು ದೈವಸ್ಥಾನದ ಗರ್ಭಗುಡಿಯ ಮುಖ್ಯ ದ್ವಾರಕ್ಕೆ ಹಾಕಲಾಗಿದ್ದ ಬೀಗವನ್ನು ಒಡೆದು, ಗರ್ಭಗುಡಿಯಲ್ಲಿದ್ದ ಬೆಲೆಬಾಳುವ ಕೊರ್ದಬ್ಬು ದೈವದ ಮೂರ್ತಿಗಳು ಹಾಗೂ ದೈವದ ಚಿನ್ನಾಭರಣಗಳನ್ನು ಕಳವು ಮಾಡಲಾಗಿತ್ತು. ಈ ಬಗ್ಗೆ ಮುಲ್ಕಿ ಠಾಣೆಯಲ್ಲಿ ಅ.ಕ್ರ 65/2026 ರಂತೆ ಪ್ರಕರಣ ದಾಖಲಾಗಿತ್ತು. ಪ್ರಕರಣದ ಪತ್ತೆಗಾಗಿ ವಿಶೇಷ ಪೊಲೀಸರ ತಂಡವನ್ನು ರಚಿಸಿ, ಆರೋಪಿಗಳ ಬೆನ್ನಬಿದ್ದ ಪೊಲೀಸರು ದಿನಾಂಕ 06-09-2026 ರಂದು ಆರೋಪಿ ಜಾಹೀದ್ ಸಿನಾನ್ ಮತ್ತು ಯಾಸೀನ್ ಎಂಬಾತನ್ನು ಮುಲ್ಕಿ ಕಾರ್ನಾಡು ಎಂಬಲ್ಲಿ ಹಾಗೂ ದಿನಾಂಕ 07-09-2026...
ಪೋಕ್ಸೋ ಪ್ರಕರಣ: ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ
ಉಪ್ಪಿನಂಗಡಿ; ಉಪ್ಪಿನಂಗಡಿ ಪೊಲೀಸ್ ಠಾಣೆಯ 2005ರ ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೌಕ್ರಾಡಿ ನಿವಾಸಿ ರಮೇಶ ಎಂಬ ವಾರಂಟ್ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಸೆ.10ರಂದು ನೆಲ್ಯಾಡಿಯಲ್ಲಿ ಬಂಧಿಸಿದ್ದಾರೆ. ಉಪ್ಪಿನಂಗಡಿ ಠಾಣಾ ಸಿಬ್ಬಂದಿ ಹೆಚ್‌ಸಿ-508 ದಯಾನಂದ ಹಾಗೂ ಪಿಸಿ-453 ರವಿರಾಜ್ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
ಕಸ್ತೂರಿರಂಗನ್ ವರದಿ ವಿರೋಧಿಸಿ ಮಲವಂತಿಗೆಯಲ್ಲಿ ಪ್ರತಿಭಟನೆ
ಬೆಳ್ತಂಗಡಿ: ಕಸ್ತೂರಿರಂಗನ್ ವರದಿ ಹಾಗೂ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಪರಿಸರ ಸೂಕ್ಷ್ಮ ವಲಯದ ಹೆಸರಿನಲ್ಲಿ ಜಾರಿಯಾಗಬಹುದಾದ ನಿರ್ಬಂಧಗಳನ್ನು ವಿರೋಧಿಸಿ ಮಲವಂತಿಗೆ ಗ್ರಾಮದಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಮಲೆನಾಡು ಹಾಗೂ ಪಶ್ಚಿಮ ಘಟ್ಟ ಪ್ರದೇಶದ ಜನರ ಬದುಕು, ಕೃಷಿ ಮತ್ತು ಅಭಿವೃದ್ಧಿ ಚಟುವಟಿಕೆಗಳಿಗೆ ತೊಂದರೆಯಾಗುವ ಯಾವುದೇ ನಿರ್ಧಾರವನ್ನು ಸರ್ಕಾರ ಕೈಗೊಳ್ಳಬಾರದು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಹಲವು ವರ್ಷಗಳಿಂದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ವಾಸಿಸುತ್ತಿರುವ ಜನರು ಕೃಷಿ, ತೋಟಗಾರಿಕೆ ಸೇರಿದಂತೆ ನಾನಾ ಚಟುವಟಿಕೆಗಳ ಮೂಲಕ ಜೀವನ ನಡೆಸುತ್ತಿದ್ದಾರೆ. ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಸ್ಥಳೀಯ ಜನರ ಹಕ್ಕುಗಳಿಗೆ...
ಎಸ್‌ಡಿಎಂ ಆರೋಹಮ್ 2026 ಉದ್ಘಾಟನೆ; ಕೌಶಲಾಧಾರಿತ ಶಿಕ್ಷಣ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿ: ಶ್ರದ್ಧಾ ಅಮಿತ್
ಉಜಿರೆ, ಸೆ. 10: ವಿದ್ಯಾರ್ಥಿ ಜೀವನದಲ್ಲಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳ ಅನುಭವವೂ ಸಮಾನವಾದ ಅಗತ್ಯವಾಗಿದೆ. ಹಾಗಾಗಿ ಕೌಶಲಾಧಾರಿತ ಶಿಕ್ಷಣ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗುವುದರ ಮೂಲಕ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ. ಈ ಹಿನ್ನೆಲೆಯಲ್ಲಿ ಎಸ್‌ಡಿಎಂ ಆರೋಹಮ್-2026 ವಿದ್ಯಾರ್ಥಿಗಳಲ್ಲಿರುವ ಸೃಜನಶೀಲತೆ ಹಾಗೂ ಹೊಸತನದ ಚಿಂತನೆಯನ್ನು ಹೊರತರುವ ಪರಿಣಾಮಕಾರಿ ವೇದಿಕೆಯಾಗಿದೆ ಎಂದು ಬೆಂಗಳೂರಿನ ಕ್ಷೇಮವನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರದ್ಧಾ ಅಮಿತ್ ಹೇಳಿದರು. ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ‘ಎಸ್‌ಡಿಎಂ ಆರೋಹಮ್ 2026’ ಎರಡು ದಿನಗಳ ರಾಷ್ಟ್ರೀಯ ಶೈಕ್ಷಣಿಕ...
ಗುಜರಾತ್ ಬಿಲ್ಲವ ಸಂಘದಿಂದ 172ನೇ ಶ್ರೀ ನಾರಾಯಣ ಗುರು ಜಯಂತಿ ಆಚರಣೆ
ವಡೋದರ: ಗುಜರಾತ್‌ನ ವಡೋದರದಲ್ಲಿ ಗುಜರಾತ್ ಬಿಲ್ಲವ ಸಂಘದ ವತಿಯಿಂದ 172ನೇ ಶ್ರೀ ನಾರಾಯಣ ಗುರು ಜಯಂತಿಯನ್ನು ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಗೆಜ್ಜೆಗಿರಿ ಕ್ಷೇತ್ರದ ಗೌರವಾಧ್ಯಕ್ಷ ಹಾಗೂ ನಿವೃತ್ತ ಎಸ್‌ಪಿ ಶ್ರೀ ಪೀತಾಂಬರ ಹೆರಾಜೆ ಅವರು ಶ್ರೀ ನಾರಾಯಣ ಗುರುಗಳ ಕುರಿತ ಕೃತಿಯನ್ನು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಶ್ರೀ ನಾರಾಯಣ ಗುರುಗಳ ಜಯಂತಿಯನ್ನು ದೇಶ-ವಿದೇಶಗಳಲ್ಲಿ ಭಕ್ತಿಭಾವದಿಂದ ಹಾಗೂ ವಿಜೃಂಭಣೆಯಿಂದ ಆಚರಿಸಲಾಗುತ್ತಿರುವುದು ಸಂತಸದ ಸಂಗತಿ ಎಂದರು. ಗೆಜ್ಜೆಗಿರಿ ಕ್ಷೇತ್ರದ ಅಧ್ಯಕ್ಷ ಶ್ರೀ ರವಿ ಪೂಜಾರಿ ಚಿಲಿಂಬಿ ಮಾತನಾಡಿ, ಮನುಷ್ಯರನ್ನು ಅಜ್ಞಾನವೆಂಬ ಕತ್ತಲೆಯಿಂದ ಜ್ಞಾನ...
ಬೆಳ್ತಂಗಡಿ; ಪುದುವೆಟ್ಟಿನಲ್ಲಿ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ
ಬೆಳ್ತಂಗಡಿ : ಪುದುವೆಟ್ಟು ಗ್ರಾಮದ ಮಿಯಾರು ನಿವಾಸಿ ಯುವತಿಯೊಬ್ಬಳು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ 9 ರಂದು ಸಂಜೆಯ ವೇಳೆ ನಡೆದಿದೆ. ಮೃತ ಯುವತಿ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಮಿಯಾರು ಕಲ್ಲಂಡ ಮನೆ ನಿವಾಸಿ ಅಣ್ಣಿ ಗೌಡ ಮತ್ತು ಮಾಲತಿ ದಂಪತಿಗಳ ಮಗಳು ಲಿಶ್ಮಿತ ಗೌಡ(20) ಎಂಬಾಕೆಯಾಗಿದ್ದಾಳೆ. ಈಕೆ ನಡ ಸರಕಾರಿ ಕಾಲೇಜ್ ನಲ್ಲಿ ಕ್ಲರ್ಕ್ ಆಗಿ ಕೆಲಸಮಾಡುತ್ತಿದ್ದಳು. ಅನಾರೋಗ್ಯ ಕಾರಣದಿಂದ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ.ಮೃತದೇಹವನ್ನು ಸ್ಥಳೀಯರ ಸಹಕಾರದೊಂದಿಗೆ ಬಾವಿಯಿಂದ ಮೇಲೆತ್ತಿ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು.ಘಟನೆಯ ಬಗ್ಗೆ ಮಾಹಿತಿ...
ನಿವೃತ್ತಿ ಸೌಲಭ್ಯಗಳನ್ನು ನೀಡಲು ಅನಗತ್ಯ ವಿಳಂಬ ಸುಲ್ಕೇರಿ ಮೊಗ್ರು ಕೃಷಿ ಪತ್ತಿನ ಸಹಕಾರ ಸಂಘದ ಮುಂದೆ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಮ್ಮಾಜಿ ಕೋಟ್ಯಾನ್ ಧರಣಿ
ಬೆಳ್ತಂಗಡಿ; ಸುಲ್ಕೇರಿ ಮೊಗ್ರು ಕೃಷಿ ಪತ್ತಿನ ಸಹಕಾರ ಸಂಘದ ನಿವೃತ್ತ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅಮ್ಮಾಜಿ ಕೋಟ್ಯಾನ್ ತನಗೆ ಬರಬೇಕಾಗಿರುವ ನಿವೃತ್ತ ಸೌಲಭ್ಯಗಳ ಪಾವತಿಗೆ ಸಂಸ್ಥೆಯ ಆಡಳಿತ ಮಂಡಳಿ ಉದ್ದೇಶ ಪೂರ್ವಕವಾಗಿ ವಿಳಂಬ ಮಾಡುತ್ತಿದೆ ಎಂದು ಆರೋಪಿಸಿ ಸಂಸ್ಥೆಯ ಮುಖ್ಯ ಕಚೇರಿಯ ಮುಂದೆ ಪ್ರತಿಭಟನಾ ಧರಣಿ ನಡೆಸುತ್ತಿದ್ದಾರೆ.ಸೆ.10 ಗುರುವಾರ ಬೆಳಗ್ಗೆ ಇವರು ಕಚೇರಿ ಮುಂದೆ ಧರಣಿ ಆರಂಭಿಸಿದ್ದಾರೆ.ಆಡಳಿತ ಮಂಡಳಿಯಿಂದ ಅನ್ಯಾಯಕ್ಕೆ ಒಳಗಾದ ಇನ್ನೋರ್ವ ಸಿಬ್ಬಂದಿ ಪ್ರಭಾಕರ ಅವರೂ ಧರಣಿ ಕುಳಿತಿದ್ದಾರೆ. ಐದು ವರ್ಷಗಳ ಕಾಲ ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಇವರು ನಿವೃತ್ತರಾಗಿದ್ದು...
ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ಪೂಜಾರಿ ನೇಮಕ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ (ಡಿಸಿಸಿ) ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅವರನ್ನು ನೇಮಕ ಮಾಡಲಾಗಿದೆ. ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷರ ಅನುಮೋದನೆಯ ಮೇರೆಗೆ ಕರ್ನಾಟಕದ ವಿವಿಧ ಜಿಲ್ಲೆಗಳ ಕಾಂಗ್ರೆಸ್ ಸಮಿತಿ ಅಧ್ಯಕ್ಷರ ನೇಮಕಾತಿಯನ್ನು ಪ್ರಕಟಿಸಲಾಗಿದೆ. ಸೆ. 9, 2026ರಿಂದಲೇ ಈ ನೇಮಕಾತಿಗಳು ಜಾರಿಗೆ ಬಂದಿವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಕರ್ನಾಟಕದ ವಿವಿಧ ಜಿಲ್ಲೆಗಳ ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆಯ ಭಾಗವಾಗಿ, ಎಐಸಿಸಿ ವೀಕ್ಷಕರು ಆಯಾ ಜಿಲ್ಲೆಗಳಲ್ಲಿ ಪಕ್ಷದ ಪದಾಧಿಕಾರಿಗಳು ಹಾಗೂ ಪ್ರಮುಖ...
ಬೆಳ್ತಂಗಡಿ : ಲಾಯಿಲ ತಹಶೀಲ್ದಾರ್ ಆದೇಶದ ಬೆನ್ನಲ್ಲೇ ಅನಧಿಕೃತ ಕಟ್ಟಡ ತೆರವು ಮಾಡಿದ ಅಕ್ರಮ ಕಟ್ಟಡ ಮಾಲೀಕರು
ಬೆಳ್ತಂಗಡಿ: ಲಾಯಿಲ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಪಡ್ಲಾಡಿಯ ನೇತಾಜಿ ಬಡಾವಣೆ ಪಕ್ಕದ ಸರ್ಕಾರಿ 116/1 ರಲ್ಲಿ ಗ್ರಂಥಾಲಯಕ್ಕೆ ಮೀಸಲಿಟ್ಟ ಜಾಗದಲ್ಲಿ ನಿರ್ಮಿಸಲಾಗಿದ್ದ ಅನಧಿಕೃತ ಮನೆ ಕಟ್ಟಡವನ್ನು ಬೆಳ್ತಂಗಡಿ ತಹಶೀಲ್ದಾರ್ ಅವರ ಆದೇಶದ ಮೇರೆಗೆ ಇದೀಗ ಸಂಪೂರ್ಣವಾಗಿ ತೆರವುಗೊಳಿಸಲಾಗಿದೆ. ಸರ್ಕಾರಿ ಜಾಗದಲ್ಲಿ ಅನಧಿಕೃತವಾಗಿ ಕಟ್ಟಡ ನಿರ್ಮಿಸಿರುವ ಸೂರಪ್ಪ ಮತ್ತು ರಾಜು ಮೇಸ್ತ್ರಿ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ತಹಶೀಲ್ದಾರ್ ಸ್ಥಳ ಪರಿಶೀಲನೆ ನಡೆಸಿ ಕಟ್ಟಡ ತೆರವುಗೊಳಿಸುವಂತೆ ಆದೇಶಿಸಿದ್ದರು. ಅದರಂತೆ ಸೆ.4ರಂದು ಅಧಿಕಾರಿಗಳು ಕಟ್ಟಡ ತೆರವುಗೊಳಿಸಲು ಸ್ಥಳಕ್ಕೆ ಆಗಮಿಸಿದ್ದರು. ಈ ವೇಳೆ ತಾಲೂಕು ಪಂಚಾಯಿತಿ ಮಾಜಿ ಸದಸ್ಯ...
ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ವತಿಯಿಂದ ನಾಯಕರ ಸಭೆ
ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ನಾಯಕರ ಸಭೆ ಕಾರ್ಯಕ್ರಮವು ಬೆಳ್ತಂಗಡಿಯ ಜಮೀಯತುಲ್ ಫಲಾಹ್ ಸಭಾಂಗಣ ಹಾಗೂ ಪುಂಜಾಲಕಟ್ಟೆಯ ಪಕ್ಷದ ಕಚೇರಿಯಲ್ಲಿ ನಡೆಯಿತು. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು ಅವರು ಸಂದೇಶ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ನವಾಝ್ ಕಟ್ಟೆ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಶಾಕಿರ್ ಅಳಕೆಮಜಲ್ ಅವರು ಸಮಾರೋಪ...















