ಬೆಳ್ತಂಗಡಿ: ಖಾಸಗಿ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

0

ಕೊಕ್ಕಡ, ಜೂ. 16 : ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬರು ಕೊಕ್ಕಡ ಗ್ರಾಮದ ಹಳ್ಳಿಂಗೇರಿಯಲ್ಲಿ ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ. ಪ್ರಸ್ತುತ ಕೊಕ್ಕಡ ಹಳ್ಳಿಂಗೇರಿಯ ನಿವಾಸಿಯಾಗಿರುವ ಮೂಲತಹ ಧಾರವಾಡ ಜಿಲ್ಲೆಯ ಹಿರೇಗುಂಜಲ್-ಚಿಕ್ಕಗುಂಜಲ್ ಮೂಲದ ರಮೇಶ್ ಅವರ ಪುತ್ರಿ ಶ್ವೇತಾ(18) ಎಂದು ಗುರುತಿಸಲಾಗಿದೆ. ಕಳೆದ ಸುಮಾರು ಐದು ವರ್ಷಗಳಿಂದ ಶ್ವೇತಾ ಅವರ ತಂದೆ-ತಾಯಿ ಕೊಕ್ಕಡ ಸಮೀಪದ ಹಳ್ಳಿಂಗೇರಿಯಲ್ಲಿ ನೆಲೆಸಿದ್ದು, ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಮಾಹಿತಿಯ ಪ್ರಕಾರ, ಶ್ವೇತಾ ಎಂದಿನಂತೆ ಬೆಳಗ್ಗೆ...

ಬೆಳ್ತಂಗಡಿ; ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಕೀರ್ತಿ ಹೆಚ್ ಬಿ. ನಿಧನ

0

ಬೆಳ್ತಂಗಡಿ : ಮಾಜಿ ಶಾಸಕ ಕೆ ವಸಂತ ಬಂಗೇರ ಅವರ ಆಪ್ತ ಕಾರ್ಯದರ್ಶಿ ಯಾಗಿದ್ದ ಬೆಳ್ತಂಗಡಿ ತಾಲೂಕಿನ ಬಾರ್ಯ ಮತ್ತು ತೆಕ್ಕಾರು ಗ್ರಾಮ ಪಂಚಾಯತ್ ಪ್ರಭಾರ ಅಭಿವೃದ್ಧಿ ಅಧಿಕಾರಿ, ಜಯಕೀರ್ತಿ ಹೆಚ್ ಬಿ. ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರಯಲ್ಲಿ ಜೂ. 15 ರಂದು ಮೃತಪಟ್ಟಿದ್ದಾರೆ. ಕೆಲ ದಿನಗಳ ಹಿಂದೆ ಅನಾರೋಗ್ಯವೆಂದು ಮಂಗಳೂರಿನಆಸ್ಪತ್ರೆಗೆ ದಾಖಲಾಗಿದ್ದರು. ಮೃತರು ಪತ್ನಿ ಹಾಗೂ ಮಕ್ಕಳನ್ನು ಅಗಲಿದ್ದಾರೆ.ತಾಲೂಕಿನ ವಿವಿಧ ಗ್ರಾಮಪಂಚಾಯತುಗಳಲ್ಲಿ ಕಾರ್ಯನಿರ್ವಹಿಸಿದ್ದ ಇವರು ಮಾಜಿ ಶಾಸಕ ಕೆ ವಸಂತ ಬಂಗೇರ ಅವರ ಆಪ್ತಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು.

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣ ತನಗೆ ಜೀವ ಬೆದರಿಕೆ ಇದೆ ಚಿನ್ನಯ್ಯನಿಂದ ಎಸ್ಐಟಿ ಗೆ ದೂರು

0

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದಲ್ಲಿ ಸಾಕ್ಷಿ ದೂರುದಾರನಾಗಿ ಬಂದು ಆರೋಪಿಯಾಗಿರುವ ಚಿನ್ನಯ್ಯ ತನಗೆ ಜೀವಬೆದರಿಕೆ ಇರುವ ಬಗ್ಗೆ ಎಸ್. ಐ.ಟಿ ಗೆ ದೂರು ನೀಡಿದ್ದಾನೆ.ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಜೂ‌.15 ರಂದು ಚಿನ್ನಯ್ಯ ಪತ್ನಿ ಜೊತೆಯಲ್ಲಿ ಬಂದು ನನಗೆ ಮತ್ತು ನನ್ನ ಕುಟುಂಬಕ್ಕೆ ಗಿರೀಶ್ ಮಟ್ಟಣ್ಣನವರ್ ಹಾಗೂ ಇತರಿಂದ ಜೀವ ಬೆದರಿಕೆ ಇರುವ ಬಗ್ಗೆ ದೂರು ನೀಡಿದ್ದಾನೆ. ಹೈಕೋರ್ಟ್ ಗೆ ರಿಟ್ ಪಿಟಿಷನ್ ಹಾಕಿರುವ ಬಗ್ಗೆ ಆಳಿಯ ಪುರುಷೋತ್ತಮ ಹಾಗೂ ಕೆಲವರಿಗೆ ಗಿರೀಶ್ ಮಟ್ಟಣ್ಣವರ್ , ಯುನೈಟೆಡ್ ಮೀಡಿಯಾ ಅಭಿಷೇಕ್ ಕರೆ ಮಾಡಿ ಮಾಹಿತಿಗಳನ್ನು ಕೇಳುತ್ತಿದ್ದು...

ಏಷ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ಬೆಳ್ಳಿ ಪದಕ ವಿಜೇತ ಆಯುಷ್ ಶೆಟ್ಟಿ ಧರ್ಮಸ್ಥಳಕ್ಕೆ ಭೇಟಿ

0

ಬೆಳ್ತಂಗಡಿ: ಭಾರತದ ಭರವಸೆಯ ಬ್ಯಾಡ್ಮಿಂಟನ್ ತಾರೆ, ಥಾಮಸ್ ಕಪ್ ವಿಜೇತ ಹಾಗೂ 2026ರ ಏಷ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನ ಬೆಳ್ಳಿ ಪದಕ ವಿಜೇತ ಆಯುಷ್ ಶೆಟ್ಟಿ ಅವರು ಸಕುಟುಂಬಿಕರಾಗಿ ಭಾನುವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಶೀರ್ವಾದ ಪಡೆದರು.ಬಳಿಕ ಅವರು ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.ದೇಶದ ಕ್ರೀಡಾ ಕ್ಷೇತ್ರದಲ್ಲಿ ಕರ್ನಾಟಕದ ಕೀರ್ತಿಯನ್ನು ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿಸುತ್ತಿರುವ ಆಯುಷ್ ಶೆಟ್ಟಿ ಅವರ ಸಾಧನೆಯನ್ನು ಶ್ಲಾಘಿಸಿದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ಮುಂದಿನ...

ಸಿಪಿಎಂ ಪಕ್ಷದ ತಾಲೂಕು ಮಟ್ಟದ ಸೈದ್ದಾಂತಿಕ ಶಿಬಿರ ಸಮಾರೋಪ

0

ಬೆಳ್ತಂಗಡಿ; ದೇಶದ ದುಡಿಯುವ ಜನರ ಏಳಿಗೆಗಾಗಿ, ದೇಶದ ಅಭಿವೃದ್ದಿಗಾಗಿ ಶೋಷಣಾ ಮುಕ್ತ ಸಮಾಜದ ನಿರ್ಮಾಣದ ಗುರಿ ಹೊತ್ತು ದುಡಿಯುತ್ತಿರುವ ಸಿಪಿಐಎಂ ಪಕ್ಷದ ಸದಸ್ಯರಿಗೆ ಸೈದ್ದಾಂತಿಕ ತರಬೇತಿ ನೀಡಿದ ಶಿಬಿರವು ತಾಲೂಕಿನ ದುಡಿಯುವ ಜನರಿಗೆ ನ್ಯಾಯ ಒದಗಿಸಲು ಸಹಕಾರಿಯಾಗಲಿ ಎಂದು ಸಿಪಿಐಎಂ ದ.ಕ. ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಹೇಳಿದರು.ಅವರು ಬೆಳ್ತಂಗಡಿ ತಾಲೂಕು ಕಳೆಂಜ ಗ್ರಾಮದ ಪಾಂಗಳ ಲಕ್ಷ್ಮಣ ಗೌಡ ಅವರ ಮನೆಯಲ್ಲಿ ನಡೆದ ಪಕ್ಷದ 3 ದಿನದ ಸೈದ್ದಾಂತಿಕ ಶಿಬಿರದ ಸಮಾರೋಪ ಸಭೆಯನ್ನುದ್ದೇಶಿಸಿ ಮಾತಾಡಿದರು. ಅರಣ್ಯವಾಸಿಗಳ ಭೂಮಿಯ ಪ್ರಶ್ನೆ, ಅರಣ್ಯ ಹಕ್ಕು ಕಾಯ್ದೆ...

ಜೂ 14 ರಿಂದ ಗಡಾಯಿಕಲ್ಲಿಗೆ ಪ್ರವಾಸಿಗರಿಗೆ ಪ್ರವೇಶ ನಿಷೇಧ

0

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಇತಿಹಾಸಪ್ರಸಿದ್ದ ಗಡಾಯಿಕಲ್ಲು ಚಾರಣಕ್ಕೆ ಜೂ. 14 ರಿಂದ ಜಾರಿಗೆ ಬರುವಂತೆ ಅರಣ್ಯ ಇಲಾಖೆಯ ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದಿಂದ ಪ್ರವಾಸಿಗರಿಗೆ ನಿಷೇಧ ಹೇರಿದೆ. ಮಳೆಯಿಂದ ಕಲ್ಲುಗಳು ಜಾರುವ ಕಾರಣ ಪ್ರವೇಶ ನಿಷೇಧ ಹೇರಲಾಗಿದೆ ಎಂದು. ಅರಣ್ಯ ಇಲಾಖೆ ಪ್ರಕಟಣೆ ತಿಳಿಸಿದೆ. ಬೇಸಿಗೆ ಕಾಲದಲ್ಲಿ ಬೆಂಕಿ ಪ್ರಕರಣ, ಕಾಡ್ಗಿಚ್ಚು ಇತ್ಯಾದಿ ಅನಾಹುತಗಳು ನಡೆಯದಂತೆ ಹಾಗೂ ಹುಲಿಗಣತಿ ಹಿನ್ನೆಲೆಯಲ್ಲಿ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಹೇರಲಾಗಿತ್ತು. ಜೂ.1 ರಿಂದ ಪ್ರವಾಸಿಗರ ವೀಕ್ಷಣೆಗೆ ತೆರೆದುಕೊಂಡು ಮೊದಲ ವಾರಾಂತ್ಯದ ಆದಿತ್ಯವಾರ ಜೂ.7 ರಂದು 1000ಕ್ಕು ಹೆಚ್ಚು ಮಂದಿ...

ಬೆಳ್ತಂಗಡಿ : ಎಸ್ಐಟಿ ಕಚೇರಿಗೆ ಬಂದ  ಮಟ್ಟಣ್ಣವರ್ ಜಯಂತ್ ಟಿ ತಂಡದಿಂದ ಎಸ್.ಐ.ಟಿ ಗೆ ದೂರು

0

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದ ಚಿನ್ನಯ್ಯ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿರುವ ಬೆನ್ನಲ್ಲೇ ಗಿರೀಶ್ ಮಟ್ಟಣ್ಣವರ್ ,ಜಯಂತ್ ಟಿ ತಂಡ ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಆಗಮಿಸಿ ದೂರು ಅರ್ಜಿ ನೀಡಿದ್ದಾರೆ‌. ಬೆಳ್ತಂಗಡಿಯಲ್ಲಿರುವ ಎಸ್ಐಟಿ ಕಚೇರಿಗೆ ಜೂನ್.13 ರಂದು ಭೇಟಿ ನೀಡಿ  ಪ್ರಕರಣದ ಆರೋಪಿ ಚಿನ್ನಯ್ಯನಿಗೆ ಪೊಲೀಸ್ ಭದ್ರತೆ ನೀಡಬೇಕು , ಚಿನ್ನಯ್ಯನನ್ನು ಬ್ರೈನ್ ಮ್ಯಾಪಿಂಗ್ ಮಾಡಬೇಕು, ಹೈಕೋರ್ಟ್ ಗೆ ನೀಡಿದ ಹೇಳಿಕೆಯನ್ನು ಮಾಧ್ಯಮಗಳಿಗೆ ,ಸಾಮಾಜಿಕ ಜಾಲತಾಣಗಳಿಗೆ ಕೊಡಬಾರದು ಎಂಬ ಜಾಮೀನು ಷರತ್ತು ಉಲ್ಲಂಘನೆಯಾಗಿರುತ್ತದೆ.ಹೀಗಾಗಿ SIT ತಂಡದ ನ್ಯಾಯವಾದಿಗಳು ಚಿನ್ನಯ್ಯನ ಅವರ ಜಾಮೀನು ರದ್ದತಿ...

ಮಂಗಳೂರು: 42.7 ಕೆಜಿ ಆನೆದಂತ ವಶ, ಪುದುವೆಟ್ಟಿನ ವ್ಯಕ್ತಿ ಸೇರಿದಂತೆ ಮೂವರ ಬಂಧನ

0

ಮಂಗಳೂರು: ಅಕ್ರಮವಾಗಿ ಆನೆದಂತ ಮಾರಾಟ ಮಾಡಲು ಯತ್ನಿಸುತ್ತಿದ್ದ ಬೃಹತ್ ಜಾಲವನ್ನು ಭೇದಿಸುವಲ್ಲಿ ಸಿಐಡಿ ಅರಣ್ಯ ಘಟಕ ಯಶಸ್ವಿಯಾಗಿದ್ದು ಮೂವರನ್ನು ಬಂಧಿಸಿದ್ದಾರೆ‌ ಆರೋಪಿಗಳಿಂದ ಬಂಧಿಸಿದ್ದು, 42.7 ಕೆಜಿ ತೂಕದ ಎರಡು ಆನೆದಂತ ಹಾಗೂ ಸಾಗಾಟಕ್ಕೆ ಬಳಸಿದ್ದ ಎರಡು ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ.ಬಂಧಿತ ಆರೋಪಿಗಳು ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಮನನ ನಿವಾಸಿ ಶಶಾಂಕ್ ಪುದುವೆಟ್ಟು, ಅಬ್ದುಲ್ ಖಾದರ್ ಮಂಜೇಶ್ವರ, ಹಾಗೂ ಪ್ರಭಾಚಂದ್ರ ಅತ್ತಾವರ, ಮಂಗಳೂರು ಎಂಬವರಾಗಿದ್ದಾರೆ. ಆರೋಪಿಗಳಿಂದ ವಶಪಡಿಸಿಕೊಳ್ಳಲಾದ ಎರಡು ಆನೆದಂತಗಳ ಒಟ್ಟು ತೂಕ 42.7 ಕೆಜಿ ಎಂದು ಅಂದಾಜಿಸಲಾಗಿದೆ. ಇದರೊಂದಿಗೆ ಅಕ್ರಮ ಸಾಗಾಟಕ್ಕೆ ಬಳಸಲಾಗಿದ್ದ ಎರಡು...

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ವಿಮೆನ್ ಇಂಡಿಯಾ ಮೂವ್ಮೆಂಟ್ ಆಗ್ರಹ

0

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಆಸ್ಪತ್ರೆಯ ಸಿಬ್ಬಂದಿ ಚಂದ್ರಶೇಖ‌ರ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದು ಅತ್ಯಂತ ಗಂಭೀರ ಮತ್ತು ಖಂಡನೀಯ ಸಂಗತಿಯಾಗಿದೆ ಎಂದು ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ಕ್ಷೇತ್ರ ಸಮಿತಿ ಅಧ್ಯಕ್ಷೆ ಶಮಾ ಉಜಿರೆ ತಿಳಿಸಿದ್ದಾರೆ. ಸಾರ್ವಜನಿಕ ಸೇವಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವ ಮಹಿಳೆಯರ ಸುರಕ್ಷತೆ ಮತ್ತು ಘನತೆಯನ್ನು ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಇಂತಹ ಸ್ಥಳಗಳಲ್ಲಿ ಮಹಿಳೆಯರಿಗೆ ಕಿರುಕುಳ, ಬೆದರಿಕೆ ಅಥವಾ ಮಾನಸಿಕ ಹಿಂಸೆ ಉಂಟಾಗುವಂತಹ ಘಟನೆಗಳು ನಡೆಯುತ್ತಿರುವುದು...

ಧರ್ಮಸ್ಥಳದಲ್ಲಿ ವ್ಯಸನಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಸಮಾರಂಭ

0

ಧರ್ಮಸ್ಥಳ: ಚತುರ್ವಿಧ ದಾನಪರಂಪರೆಯೊಂದಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ವೀ. ಹೆಗ್ಗಡೆಯವರು ಮಾನವ ಕಲ್ಯಾಣಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಮಾಡುತ್ತಿರುವ ಬಹುಮುಖಿ ಸೇವಾಕಾರ್ಯಗಳು ಆದರ್ಶ ಹಾಗೂ ಅನುಕರಣೀಯವಾಗಿವೆ ಎಂದು ಕೊಡಗು ವಿರಾಜಪೇಟೆಯ ಪೂಜ್ಯ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.ಅವರು ಶುಕ್ರವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ವ್ಯಸನಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಸಮಾರಂಭವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು.ಧರ್ಮಸ್ಥಳದ ವತಿಯಿಂದ ಬದುಕಿಗೆ ಬೇಕಾದ ಎಲ್ಲಾ ಅವಶ್ಯಕತೆಗಳನ್ನು ಮತ್ತು ಸೌಲಭ್ಯಗಳನ್ನು ಒದಗಿಸಿ ಫಲಾನುಭವಿಗಳ ಸ್ವಾವಲಂಬಿ ಜೀವನಕ್ಕೆ ಪ್ರೋತ್ಸಾಹ ನೀಡುತ್ತಿರುವುದು...