ಬೆಳ್ತಂಗಡಿ : ಕುತ್ಲೂರು ಮನೆ ಕಳ್ಳತನ ಪ್ರಕರಣ; ಕುಖ್ಯಾತ ಕಳ್ಳ ಅಬೂಬಕ್ಕರ್ ಬಂಧನ
ಬೆಳ್ತಂಗಡಿ;ಕುತ್ಲೂರಿನಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ ಪ್ರಕರಣದ ಆರೋಪಿ ಕುಖ್ಯಾತ ಕಳ್ಳನನ್ನು ವೇಣೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ನಾರವಿ ಗ್ರಾಮದ ಕುತ್ಲೂರಿನ ಮಂಜು ಶ್ರೀ ನಗರದ ಶಿಕ್ಷಕ ಅವಿನಾಶ್ ಮನೆಯಲ್ಲಿ ಅ.2 ರಿಂದ ಅ.6 ರ ನಡುವೆ ಮನೆಯಲ್ಲಿ ಯಾರು ಇಲ್ಲದ ವೇಳೆ 9.5 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಲಾಗಿತ್ತು.ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಈ ಬಗ್ಗೆ ತನಿಖೆ ನಡೆಸಿದ ತಂಡ ಕುಖ್ಯಾತ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬಗ್ಗೆ ವೇಣೂರು ಪೊಲೀಸ್...
ಬೆಳ್ತಂಗಡಿ : ಎಸ್.ಐ.ಟಿ ತನಿಖೆಯ ತಡೆಯಾಜ್ಞೆ ತೆರವು ಮಾಡಿದ ಹೈಕೋರ್ಟ್ ಮುಂದುವರಿಯಲಿರುವ ತನಿಖೆ
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣ ಸಂಬಂಧ ವಿಚಾರಣೆಗೆ ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ ಮತ್ತು ತಮ್ಮ ವಿರುದ್ದ ದಾಖಲಾಗಿರುವ ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೇಟ್ಟಿಲ್ಲೇರಿದ್ದ ತಿಮರೋಡಿ ಮಹೇಶ್ ಶೆಟ್ಟಿ ,ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ, ಸೌಜನ್ಯ ಮಾವ ವಿಠಲ್ ಗೌಡ ಸಲ್ಲಿಸಿದ್ದ ಅರ್ಜಿಗೆ ಅ.30 ರಂದು ವಿಚಾರಣೆ ವೇಳೆ ಹೈಕೋರ್ಟ್ ನಲ್ಲಿ ನ.12 ರವೆಗೆ ಎಸ್.ಐ.ಟಿ ತನಿಖೆಗೆ ತಡೆಯಾಜ್ಞೆ ನೀಡಿತ್ತು. ಇದೀಗ ನ್ಯಾಯಾಲಯ ಈ ತಡೆಯಾಜ್ಞೆ ತೆರವುಗೊಳಿಸಿದ್ದು ತನಿಖೆ ಮುಂದುವರಿಸಲು ಅವಕಾಶ ನೀಡಿದೆ ಈ ಪ್ರಕರಣ ಸಂಬಂಧ ನ. 12 ರಂದು ಹೈಕೋರ್ಟ್ ಎಸ್.ಐ.ಟಿ...
ಧರ್ಮಸ್ಥಳ ಸಮೂಹಿಕ ವಿವಾಹದ ಬಗ್ಗೆ ಗಿರೀಶ್ ಮಟ್ಟಣ್ಣನವರ್ ಆಕ್ಷೇಪಾರ್ಹ ಹೇಳಿಕೆ; ಮೂರು ವಾರಗಳಲ್ಲಿ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗಕ್ಕೆ ಹೈಕೋರ್ಟ್ ಸೂಚನೆ
ಬೆಳ್ತಂಗಡಿ; ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುವ ಸಾಮೂಹಿಕ ವಿವಾಹಗಳ ಕುರಿತು ಹಾಗೂ ಅಲ್ಲಿ ಮದುವೆಯಾಗುವ ಹೆಣ್ಣು ಮಕ್ಕಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದಲ್ಲಿ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಸಲ್ಲಿಸಲಾಗಿರುವ ದೂರಿನ ಸಂಬಂಧ ಮೂರು ವಾರಗಳಲ್ಲಿ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗಕ್ಕೆ ಕರ್ನಾಟಕ ಹೈಕೋರ್ಟ್ ನಿರ್ದೇಶಿಸಿದೆ. ಬೆಂಗಳೂರಿನ ರಾಜಾಜಿನಗರ ನಿವಾಸಿ ಸಾಮಾಜಿಕ ಕಾರ್ಯಕರ್ತೆ ಕಾವೇರಿ ಕೇದಾರನಾಥ ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಅರ್ಜಿದಾರರ ಪರ ಹಿರಿಯ ವಕೀಲ ಎಸ್ ರಾಜಶೇಖರ್ ವಾದಿಸಿದರು. ಗಿರೀಶ್ ಮಟ್ಟಣ್ಣನವರ್...
ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ-ಲಿಂಗ ಸಮಾನತಾ ಪ್ರೇರಣಾ ತಂಡದ ಸದಸ್ಯರಿಗೆ ಸಾಮರ್ಥ್ಯ ವರ್ಧನಾ ತರಬೇತಿ
ಬೆಳ್ತಂಗಡಿ: ಮಿಸೇರಿಯೋರ್ ಪ್ರಾಯೋಜಕತ್ವದಲ್ಲಿ ಕ್ರಾಸ್ ಸಂಸ್ಥೆ ನೇತೃತ್ವದಲ್ಲಿ ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸಹಕಾರದಿಂದ ನಡೆಸುತ್ತಿರುವ ಮಹಿಳಾ ಸಬಲೀಕರಣ ಯೋಜನೆಯಡಿಯಲ್ಲಿರುವ ಲಿಂಗ ಸಮಾನತಾ ಪ್ರೇರಕ ತಂಡದ ಸದಸ್ಯರಿಗೆ ಸಾಮರ್ಥ್ಯ ವರ್ಧನಾ ತರಬೇತಿಯನ್ನು ಜ್ಞಾನ ನಿಲಯ ಬೆಳ್ತಂಗಡಿ ಇಲ್ಲಿ ದಿನಾಂಕ 10.11.2025 ರಂದು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾನಿನಿ ರಾಜ್ಯ ಒಕ್ಕೂಟದ ಅಧ್ಯಕ್ಷರಾದ ಮಂಜುಳಾ ಜೋನ್ ವಹಿಸಿದ್ದರು. ಉದ್ಘಾಟನೆಯನ್ನು ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂ.ಫಾ. ಬಿನೋಯಿ ಎ.ಜೆ ನೆರವೇರಿಸಿದರು. ಕ್ರಾಸ್ ಸಂಸ್ಥೆಯ ಮಹಿಳಾ ಸಬಲೀಕರಣ ಯೋಜನೆಯ ಸಂಯೋಜಕರಾದ ರಾಜಶೇಖರ್ ರವರು ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಉಡುಪಿ...
ಬೆಳ್ತಂಗಡಿ : ಜಿಲ್ಲಾ ಮಟ್ಟದಲ್ಲಿ ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸುವ ಕ್ರೀಡಾ ಪ್ರತಿಭೆಗಳಿಗೆ ಶಾಸಕರಾದ ಹರೀಶ್ ಪೂಂಜಾ ಅವರಿಂದ ಕ್ರೀಡಾ ಸಮವಸ್ತ್ರ ಕೊಡುಗೆ
ಬೆಳ್ತಂಗಡಿ :(ನ. 10) ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆಯುವ ಬೆಳ್ತಂಗಡಿ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದಲ್ಲಿ ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸುವ ಕ್ರೀಡಾ ಪ್ರತಿಭೆಗಳಿಗೆ ಶಾಸಕರಾದ ಹರೀಶ್ ಪೂಂಜಾರವರು ಕ್ರೀಡಾ ಸಮವಸ್ತ್ರವನ್ನು ಒದಗಿಸಿದ್ದಾರೆ. ಗ್ರಾಮೀಣ ಕ್ರೀಡಾ ಪ್ರತಿಭೆಗಳಿಗೆ ಬೆಂಬಲ ನೀಡುವ ಸಲುವಾಗಿ ಕಳೆದ ಏಳು ವರ್ಷಗಳಿಂದ ಕ್ರೀಡಾ ಸಮವಸ್ತ್ರಗಳನ್ನು ಒದಗಿಸುತ್ತಿದ್ದಾರೆ. ಅದೇ ರೀತಿ ಈ ವರ್ಷವೂ ಕೂಡಾ ಸುಮಾರು ರೂ. 70,000 ಮೌಲ್ಯದ ಕ್ರೀಡಾ ಸಮವಸ್ತ್ರವನ್ನು ಒದಗಿಸಿದ್ದಾರೆ. ಹರೀಶ್...
2026 ಜನವರಿ 16 ರಿಂದ 25 ತನಕ ಕಾಜೂರು ಮಖಾಂ ಉರೂಸ್; ಗೌರವಾಧ್ಯಕ್ಷ ಸಯ್ಯಿದ್ ಕೆ.ಎಸ್ ಆಟ್ಟಕೋಯ ತಂಙಳ್ ಕುಂಬೋಳ್ ರಿಂದ ದಿನಾಂಕ ಘೋಷಣೆ, ಪೋಸ್ಟರ್ ಬಿಡುಗಡೆ
ಬೆಳ್ತಂಗಡಿ; ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಸಿದ್ಧಿ ಪಡೆದಿರುವ ಇತಿಹಾಸ ಪ್ರಸಿದ್ಧ ಆಧ್ಯಾತ್ಮಿಕ ಕೇಂದ್ರವಾದ ಕಾಜೂರು ಮಖಾಂ ಶರೀಫ್ ಉರೂಸ್ ಕಾರ್ಯಕ್ರಮವು 2026 ಜನವರಿ 16 ರಿಂದ 25 ರ ವರೆಗೆ ನಡೆಯಲಿದೆ.ಖಾಝಿ ಶೈಖುನಾ ಸುಲ್ತಾನುಲ್ ಉಲಮಾ, ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ ಉಸ್ತಾದ್ ಅವರ ನೇತೃತ್ವದಲ್ಲಿ, ಸಯ್ಯಿದ್ ಕಾಜೂರು ತಂಙಳ್ ಮಾರ್ಗದರ್ಶನದೊಂದಿಗೆ ನಡೆಯುವ ಈ ಆಧ್ಯಾತ್ಮಿಕ ಅನುಭೂತಿಯ ಕಾರ್ಯಕ್ರಮಗಳ ಅಧಿಕೃತ ಘೋಷಣೆಯನ್ನು ರಹ್ಮಾನಿಯಾ ಜುಮ್ಮಾ ಮಸ್ಜಿದ್ ಮತ್ತು ದರ್ಗಾ ಶರೀಫ್ ಕಾಜೂರು ಗೌರವಾಧ್ಯಕ್ಷರೂ, ಸಮಸ್ತ ಕೇರಳ ಕೇಂದ್ರ ಮುಶಾವರ ಉಪಾಧ್ಯಕ್ಷರೂ ಆದ...
ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ರಾಜ್ಯ ತಂಡದ ತರಬೇತಿ ಶಿಬಿರಕ್ಕೆ ಸುಲ್ಕೇರಿಯ ಶಶಿಕಾಂತ್ ಆಯ್ಕೆ
ಬೆಳ್ತಂಗಡಿ; ರಾಜ್ಯ ಮಟ್ಟದ 16 ವರ್ಷ ವಯೋಮಾನದ ಸಬ್ ಜ್ಯೂನಿಯರ್ ಕಬಡ್ಡಿ ಪಂದ್ಯಾವಳಿಯಲ್ಲಿ ವಿಶೇಷ ಸಾಧನೆ ಮಾಡಿರುವ ಶಶಿಕಾಂತ್ ಸುಲ್ಕೇರಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದ ಕರ್ನಾಟಕ ತಂಡದ ಆಯ್ಕೆ ಕ್ಯಾಂಪ್ ಗೆ ಆಯ್ಕೆಯಾಗಿದ್ದಾರೆ. ಈಗಾಗಲೇ ತಾಲೂಕು , ಜಿಲ್ಲೆ ಸೇರಿದಂತೆ ಮೈಸೂರು ವಿಭಾಗ , ರಾಜ್ಯ ಮಟ್ಟದ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಕಬಡ್ಡಿ ಪಂದ್ಯಾಟದಲ್ಲಿ ಉತ್ತಮ ಸಾಧನೆ ಮಾಡಿದ ಈತ ಈಗ ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟದ ಕರ್ನಾಟಕ ತಂಡದ ಆಯ್ಕೆಗಾಗಿ ನಡೆಸುವ ಕ್ಯಾಂಪ್ ಗೆ ಆಯ್ಕೆಯಾಗಿದ್ದಾರೆ. ಈತ ಶ್ರೀರಾಮ ಪ್ರೌಢಶಾಲೆ ಸುಲ್ಕೇರಿ...
ಬೆಳ್ತಂಗಡಿ; ಕಾಯರ್ತಡ್ಕ- ಮುದ್ದಿಗೆ ಸಂಪರ್ಕ ರಸ್ತೆಯಲ್ಲಿ ಎರಡು ಕಾಡಾನೆಗಳು ಜನರಲ್ಲಿ ಆತಂಕ
ಬೆಳ್ತಂಗಡಿ: ತಾಲೂಕಿನ ಹತ್ಯಡ್ಕ ಗ್ರಾಮದ ತುಂಬೆದಡ್ಕ ಮಾರಿಗುಡಿ ಸಮೀಪ, ಮುದ್ದಿಗೆ ಕಾಯರ್ತಡ್ಕ ಸಂಪರ್ಕ ರಸ್ತೆಯಲ್ಲಿ ಸೋಮವಾರ ರಾತ್ರಿ ವೇಳೆ ಎರಡು ಕಾಡಾನೆಗಳು ಓಡಾಟ ನಡೆಸುತ್ತಿರುವುದು ಕಂಡು ಬಂದಿದೆ. ಇದರ ಫೊಟೋಗಳು ಸಾಮಾಜಿಕ ಜಾಕತಾಣಗಳಲ್ಲಿ ಹರಿದಾಡುತ್ತಿದೆ ಈ ರಸ್ತೆಗಳ ಮೂಲಕ ದ್ವಿಚಕ್ರ ಸವಾರರರು ಸೇರಿದಂತೆ ಹಲವಾರು ಪ್ರಯಾಣಿಸುವ ಸಮಯ ಇದಾಗಿದ್ದು ಆನೆಗಳು ರಸ್ತೆಗೆ ಇಳಿದಿರುವುದು ಸ್ಥಳೀಯರಲ್ಲಿ ಆತಂಕ ಮೂಡಲು ಕಾರಣವಾಗಿದೆ.
ದೆಹಲಿ ಕೆಂಪು ಕೋಟೆ ಬಳಿ ಭೀಕರ ಸ್ಪೋಟ ಹಲವರ ಸಾವು ಹಲವರಿಗೆ ಗಾಯ
ದೆಹಲಿಯ ಕೆಂಪು ಕೋಟೆ ಬಳಿ ಭಾರಿ ಕಾರು ಸ್ಫೋಟ ಸಂಭವಿಸಿದ್ದು, ಆ ಪ್ರದೇಶದಲ್ಲಿ ವ್ಯಾಪಕ ಭೀತಿ ಉಂಟಾಗಿದೆ. ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1 ರಲ್ಲಿ ಸ್ಫೋಟ ಸಂಭವಿಸಿದೆ. ಎರಡು ಕಾರುಗಳು ಬೆಂಕಿಗೆ ಆಹುತಿಯಾಗಿ ಇತರ ಮೂರು ವಾಹನಗಳು ಸುಟ್ಟು ಭಸ್ಮವಾಗಿವೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿದೆ. ಸ್ಫೋಟದ ನಂತರ, ಕಾರಿಗೆ ಬೆಂಕಿ ಹೊತ್ತಿಕೊಂಡು, ಇತರ ಮೂರು ವಾಹನಗಳು ಸುಟ್ಟು ಭಸ್ಮವಾದವು. ದೆಹಲಿ ಪೊಲೀಸರು ಆ ಪ್ರದೇಶವನ್ನು ಸುತ್ತುವರೆದಿದ್ದಾರೆ. ಸ್ಫೋಟದಲ್ಲಿ ಐದಕ್ಕೂ ಅಧಿಕ ಮಂದಿ ಸಾವನ್ನಪ್ಪಿರುವುದಾಗಿ ಮಾಹಿತಿಗಳು ಹೊರಬರುತ್ತಿವೆ ಹಲವರು...
ಕನ್ಯಾಡಿ ಸೇವಾಭಾರತಿಯಿಂದ ದೀಪಾವಳಿ ಸ್ನೇಹ ಮಿಲನ – 2025
ಬೆಳ್ತಂಗಡಿ; ಸೇವಾಭಾರತಿ ಸಂಸ್ಥೆಯು ಕನ್ಯಾಡಿಯ ಸುಪ್ರಜ ಸಭಾಂಗಣ ಮತ್ತು ಉಜಿರೆಯ ಶ್ರೀ ಶಾರದಾ ಮಂಟಪದಲ್ಲಿ ನವೆಂಬರ್ 9 ರಂದು ಆಯೋಜಿಸಿದಂತಹ ದೀಪಾವಳಿ ಸ್ನೇಹ ಮಿಲನ ಕಾರ್ಯಕ್ರಮದಲ್ಲಿ ಸಮಾಜದ ಎಲ್ಲಾ ಗಣ್ಯರನ್ನು ಒಗ್ಗೂಡಿಸಿ ಇವರೆಗೆ ನಡೆದು ಬಂದಂತಹ ದಾರಿಗಳು ಮತ್ತು ಸಂಸ್ಥೆಯ ಸೇವಾಕಾರ್ಯಗಳ ವಿಸ್ತಾರಗಳ ಬಗ್ಗೆ ವರದಿಯನ್ನು ನೀಡಲಾಯಿತು. ಹಾಗೂ ಮುಂದಿನ ದಿನಗಳಲ್ಲಿ ಇದರ ವಿಸ್ತಾರದ ಬಗ್ಗೆ ಸಲಹೆ ಮತ್ತು ಮಾರ್ಗದರ್ಶನವನ್ನು ಪಡೆಯಲಾಯಿತು. ಡಾ. ಎಲ್ ಎಚ್ ಮಂಜುನಾಥ್, ಶ್ರೀ ಪುರಂದರ್ ರಾವ್, ಶ್ರೀಮತಿ ಮನೋರಮ ಭಟ್, ಶ್ರೀ ಭುಜಬಲಿ ಧರ್ಮಸ್ಥಳ ಸಹಿತ ಗಣ್ಯರು ಭಾಗವಹಿಸಿದ್ದರು....















