ಪಟ್ಟೂರು ಕಾನೂನು ಬಾಹಿರ ಮನೆ ಜಪ್ತಿ : ತಪ್ಪಿತಸ್ತ ಅಧಿಕಾರಿ ಮೇಲೆ ಕ್ರಮಕ್ಕೆ ಮುಸ್ಲಿಂ ಒಕ್ಕೂಟ ಬೆಳ್ತಂಗಡಿ ಆಗ್ರಹ; ನೂತನ ಡಿವೈಎಸ್‌ಪಿ ಜೊತೆ ಮುಸ್ಲಿಂ ಮುಖಂಡರ ಮಾತುಕತೆ
ಬೆಳ್ತಂಗಡಿ: ತಾಲೂಕಿನ ಪಟ್ರಮೆ ಗ್ರಾಮದ ಪಟ್ಟೂರು ನಿವಾಸಿ, ಗೋ ವಧೆ ಕೇಸಿಗೆ ಸಂಬಂಧಪಡದ ಸಾರಮ್ಮ ಎಂಬವರ ಮನೆಯನ್ನು ತರಾತುರಿಯಲ್ಲಿ ಜಪ್ತಿ ಮಾಡಿ ಮಕ್ಕಳೂ ಸಹಿತ ಮನೆಯವರನ್ನು ಹೊರಹಾಕಿದ ಘಟನೆಯಲ್ಲಿ ತಪ್ಪಿತಸ್ಥ ಅಧಿಕಾರಿಯ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಮುಸ್ಲಿಂ ಮುಖಂಡರು ಬೆಳ್ತಂಗಡಿ ಡಿವೈಎಸ್‌ಪಿ ಅವರನ್ನು ಭೇಟಿ ಮಾಡಿ ಒತ್ತಾಯಿಸಿದರು. ನ.10 ರಂದು ಬೆಳ್ತಂಗಡಿ ಕಚೇರಿಯಲ್ಲಿ ತಾಲೂಕು ಮುಸ್ಲಿಂ ಒಕ್ಕೂಟದ ನೇತೃತ್ವದಲ್ಲಿ ಡಿವೈಎಸ್‌ಪಿ ಸಿ.ಕೆ ರೋಹಿಣಿ ಜೊತೆ ನಡೆದ ಮಾತುಕತೆಯಲ್ಲಿಕೆಲವು ವಿಚಾರಗಳನ್ನು ಅವರ ಗಮನಕ್ಕೆ ತಂದು ಮುಕ್ತವಾಗಿ ಚರ್ಚಿಸಲಾಯಿತು. ಗೋವಧೆ ಕಾನೂನು ಉಲ್ಲಂಘನೆ ಹೆಸರಲ್ಲಿ ಒಂದು ಸಮುದಾಯವನ್ನು...
ರಬ್ಬರ್ ಕೃಷಿಕರ ಸಮಸ್ಯೆ ಬಗ್ಗೆ ರಾಜ್ಯಸಭಾ ಸದಸ್ಯರಾದ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಮನವಿ
ಬೆಳ್ತಂಗಡಿ; ರಾಜ್ಯಸಭಾ ಸದಸ್ಯರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಕರ್ನಾಟಕ ರಾಜ್ಯ ರಬ್ಬರ್ ಬೆಳೆಗಾರರ ಹಿತ ರಕ್ಷಣಾ ವೇದಿಕೆ ಯಿಂದ ಭೇಟಿ ಮಾಡಿ ರಬ್ಬರ್ ಕೃಷಿಕರ ಸಮಸ್ಯೆ ಗಂಭೀರ ವಿಷಯವಾಗಿದ್ದು ಈ ಬಗ್ಗೆ ಸರಕಾರದ ಗಮನ ಸೆಳೆಯಲು ಮನವಿ ಸಲ್ಲಿಸಲಾಯಿತು.ಮನವಿಯಲ್ಲಿ ಹಿಂದಿನ ಸರಕಾರಗಳು ರಬ್ಬರು ಕೃಷಿಗೆ ನೀಡಿದ ಪ್ರೋತ್ಸಾಹದಿಂದ ನಮ್ಮ ರಾಜ್ಯದಲ್ಲಿಯೂ ಕೃಷಿಕ ಬೆಳೆಗಾರರು ದಕ್ಷಿಣಕನ್ನಡ, ಉಡುಪಿ, ಶಿವಮೊಗ್ಗ ಚಿಕ್ಕಮಗಳೂರು ಉತ್ತರಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ವಾಣಿಜ್ಯ ಬೆಳೆಯಾಗಿ ರಬ್ಬರು ಕೃಷಿಯಲ್ಲಿ ತೊಡಗಿಕೊಂಡಿರುತ್ತಾರೆ. ಇದೀಗ...
ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿಯಾಗಿ ರೋಹಿನಿ ಸಿ.ಕೆ ಅಧಿಕಾರ ಸ್ವೀಕಾರ
ಬೆಳ್ತಂಗಡಿ : ಹೊಸದಾಗಿ ಆರಂಭವಾಗಿರುವ ಬೆಳ್ತಂಗಡಿ ಉಪವಿಭಾಗಕ್ಕೆ ಡಿವೈಎಸ್ಪಿಯಾಗಿ ಬೆಂಗಳೂರು ವೈಟ್ ಫೀಲ್ಡ್ ಸೆನ್ ಡಿವೈಎಸ್ಪಿಯಾಗಿದ್ದ ರೋಹಿನಿ ಸಿ.ಕೆ. ಅವರನ್ನು ಸರಕಾರ ನೇಮಕ ಮಾಡಿ ನ.4 ರಂದು ಸರಕಾರ ಆದೇಶ ಹೊರಡಿಸಿದ್ದು. ನ.10 ರಂದು ಬೆಳ್ತಂಗಡಿ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಅವರು ಅಧಿಕಾರ ಸ್ವೀಕರಿಸಿಕೊಂಡರು. ಡಿವೈಎಸ್ಪಿ ರೋಹಿನಿ ಸಿ.ಕೆ. 2022 ರ ಬ್ಯಾಚ್‌ನಲ್ಲಿ ನೇರ ನೇಮಕವಾದ ಡಿವೈಎಸ್ಪಿಯಾಗಿದ್ದಾರೆ. ಇವರು ಮೂಲತಃ ಬೆಂಗಳೂರಿನ ಮಲ್ಲೇಶ್ವರಂನವರು. ಜಿಲ್ಲೆಯ ಅತ್ಯಂತ ದೊಡ್ಡ ತಾಲೂಕುವಾಗಿರುವ ಬೆಳ್ತಂಗಡಿಗೆ ಮೊದಲ ಬಾರಿಗೆ ಉಪವಿಭಾಗ ತೆರೆಯಲಾಗಿದ್ದು ಮೊದಲ ಡಿವೈಎಸ್ಪಿ ಯಾಗಿ ನೇಮಕಗೊಂಡಿದ್ದಾರೆ. ಈ ಸಂದರ್ಭದಲ್ಲಿ ಬೆಳ್ತಂಗಡಿ...
ಮಾಲಾಡಿ ಮನೆ ಕಳ್ಳತನಕ್ಕೆ ಯತ್ನಿಸಿದ ಕುಖ್ಯಾತ ಕಳ್ಳನ ಬಂಧನ
ಬೆಳ್ತಂಗಡಿ; ಮಾಲಾಡಿ ಯಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ ಕಳ್ಳತನ ಮಾಡುವ ಪ್ರಯತ್ನ ನಡೆಸಿದ ಕುಖ್ಯಾತ ಆರೋಪಿಯನ್ನು ಸ್ಥಳೀಯರು ಹಿಡಿದು ಪೂಂಜಾಲಕಟ್ಟೆ ಪೊಲೀಸರಿಗೆ ಒಪ್ಪಿಸಿದ್ದು ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಸಲಾಗಿದೆ.ಬಂಧಿತ ಆದೋಪಿ ಕೇರಳ ಹಾಗೂ ಕರ್ನಾಟಕ ದ ವಿವಿಧ ಠಾಣೆಗಳಲ್ಲಿ 13 ಪ್ರಕರಣಗಳಲ್ಲಿ ಆರೋಪಿಯಾಗಿರುವ ತಲಪಾಡಿ ನಿವಾಸಿ ಕಿರಣ್ ಎಂಬಾತನಾಗಿದ್ದಾನೆ.ಇಲ್ಲಿನ ನಿವಾಸಿ ಪ್ರೇಮಾ ಶೆಟ್ಟಿ ಎಂಬವರು ಕಳೆದ ಕೆಲ ಸಮಯದಿಂದ ವಿದೇಶದಲ್ಲಿ ಇದ್ದು ಮನೆಯಲ್ಲಿ ಯಾರೂ ಇರದ ಕಾರಣ ಮನೆಗೆ ಬೀಗ ಹಾಕಲಾಗಿತ್ತು. ಮನೆಗೆ ಸಿಸಿ ಕ್ಯಾಮರಾ ಅಳವಡಿಸಲಾಗಿತ್ತು. ನ9ರಂದು...
ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ ವೈಭವ ನ. ನ15ರಿಂದ 19. ನ18 ಸರ್ವಧರ್ಮ ಸಮ್ಮೇಳನ, ನ. 19: ಸಾಹಿತ್ಯ ಸಮ್ಮೇಳನ
ಬೆಳ್ತಂಗಡಿ: ನಾಡಿನ ಪವಿತ್ರಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮಗಳು ನ. 15 ರಿಂದ 19ರ ವರೆಗೆ ನಡೆಯಲಿವೆ.ನ. 18 ರಂದು ಮಂಗಳವಾರ ಸಂಜೆ ಗಂಟೆ ಐದರಿಂದ ಸರ್ವಧರ್ಮ ಸಮ್ಮೇಳನದ ಅಧಿವೇಶನ ನಡೆಯಲಿದೆ.ಕರ್ನಾಟಕ ಸರ್ಕಾರದ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳು ಹಾಗೂ ಮೂಲ ಸೌಕರ್ಯಾಭಿವೃದ್ಧಿ ಇಲಾಖೆ ಸಚಿವ ಡಾ. ಬಿ.ಎಂ. ಪಾಟೀಲ್ ಸರ್ವಧರ್ಮ ಸಮ್ಮೇಳನದ 93 ನೇ ಅಧೀವೇಶನ ಉದ್ಘಾಟಿಸುವರು.ಹರಿಹರಪುರದ ಪೂಜ್ಯ ಸ್ವಯಂಪ್ರಕಾಶ್ ಸಚ್ಚಿದಾನಂದ ಸರಸ್ವತೀ ಸ್ವಾಮೀಜಿ ಅಧ್ಯಕ್ಷತೆ ವಹಿಸುವರು.ಪ್ರಜಾವಾಣಿ ಪತ್ರಿಕೆಯ ಮುಖ್ಯ ಉಪಸಂಪಾದಕ ಎ. ಸೂರ್ಯಪ್ರಕಾಶ್ ಪಂಡಿತ್ ಮತ್ತು ಖ್ಯಾತ ಅಂಕಣಕಾರ...
ಜಿಲ್ಲಾ ಪತ್ರಕರ್ತರ ಸಂಘದ ಚುನಾವಣೆ; ಬೆಳ್ತಂಗಡಿ ತಾಲೂಕಿನ ಮೂವರಿಗೆ ಗೆಲುವು
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಯಲ್ಲಿ ಬೆಳ್ತಂಗಡಿ ತಾಲೂಕಿನ ಮೂವರು ವಿಜೇತರಾಗಿದ್ದಾರೆ.ಸಂಘದ ಪ್ರಧಾನ ಕಾರ್ಯದರ್ಶಿಯಾಗಿಮಿತ್ತಬಾಗಿಲು ಗ್ರಾಮದ ಕಿಲ್ಲೂರು ನಿವಾಸಿ ಟಿ.ವಿ 9 ಕನ್ನಡ ಸುದ್ದಿವಾಹಿನಿಯ ರಾಜೇಶ್ ಪೂಜಾರಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಬೆಳ್ತಂಗಡಿಯ ಹಿರಿಯ ಪತ್ರಕರ್ತರ ಭುವನೇಶ್ ಗೇರುಕಟ್ಟೆ ಅವರು ಚುನಾವಣೆಯಲ್ಲಿ ಗೆಲುವನ್ನು ಪಡೆದಿದ್ದಾರೆ. ಅದೇರೀತಿ ರಿಪಬ್ಲಿಕ್ ಕನ್ನಡ ಚಾನೆಲ್ ನ ದಿವಾಕರ ಪದ್ಮುಂಜ ಅವರು ಕಾರ್ಯಕಾರಿ ಸಮಿತಿ ಸದಸ್ಯರಾಗಿ ಚುನಾಯಿತರಾಗಿದ್ದಾರೆ.
ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ
ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವಾರ್ತಾಭಾರತಿಯ ಮಂಗಳೂರು ಬ್ಯೂರೋ ಚೀಫ್ ಪುಷ್ಪರಾಜ್ ಬಿ.ಎನ್. ಆಯ್ಕೆಯಾಗಿದ್ದಾರೆ. ದ.ಕ.ಜಿಲ್ಲಾ ವಾರ್ತಾ ಇಲಾಖೆಯ ಸಭಾಂಗಣದಲ್ಲಿ ರವಿವಾರ ನಡೆದ ಚುನಾವಣೆಯಲ್ಲಿ 2025-28ನ ಸಾಲಿನ್ ಅಧ್ಯಕ್ಷರಾಗಿ ಆಯ್ಕೆಯಾದರು. ಪುಷ್ಪರಾಜ್ 187 ಮತಗಳನ್ನು ಗಳಿಸಿದರೆ ಅವರ ಪ್ರತಿಸ್ಪರ್ಧಿ ಶ್ರವಣ್ ಕುಮಾರ್ ನಾಳ 144 ಮತಗಳನ್ನು ಪಡೆದರು.ರಾಜ್ಯ ಕಾರ್ಯಕಾರಣಿ ಸಮಿತಿಯ ಸದಸ್ಯರಾಗಿ ಪತ್ರಕರ್ತರ ಸಂಘದ ನಿಕಟಪೂರ್ವ ಅಧ್ಯಕ್ಷ ಶ್ರೀನಿವಾಸ ನಾಯಕ್ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಬೆಳ್ತಂಗಡಿ ಮೂಲದವರಾದ ಟಿ.ವಿ 9 ನ ರಾಜೇಶ್ ಪೂಜಾರಿ ಮತ್ತು ಕೋಶಾಧಿಕಾರಿಯಾಗಿ ವಿಜಯ ಕೋಟ್ಯಾನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ....
ಧರ್ಮಸ್ಥಳ ಪ್ರಕರಣ; 74 ಪ್ರತ್ಯೇಕ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಸೌಜನ್ಯಾ ತಾಯಿಯಿಂದ ಹೈಕೋರ್ಟ್‌ಗೆ ಅರ್ಜಿ
ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಗ್ರಾಮದಲ್ಲಿ 1990ರಿಂದ 2021ರ ನಡುವೆ ಸಂಭವಿಸಿದೆ ಎನ್ನಲಾದ ಅಸಹಜ ಸಾವು ಪ್ರಕರಣಗಳಲ್ಲಿ ಅನಾಧ ಶವಗಳು ಪತ್ತೆಯಾಗಿದ್ದು ವಾರಿಸುದಾರರು ಪತ್ತೆಯಾಗದೆ ಹೂತುಹಾಕಲಾಗಿರುವ ಎಲ್ಲ 74 ಅನಾಥ ಶವಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತನಿಖೆ ನಡೆಸಲು ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ನಿರ್ದೇಶ ನೀಡುವಂತೆ ಕೋರಿ ಸೌಜನ್ಯ ತಾಯಿ ಕುಸುಮಾವತಿ ಅವರು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದಾರೆ.ಅರ್ಜಿಯಲ್ಲಿ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿಯನ್ನು ಪ್ರತಿವಾದಿಯನ್ನಾಗಿಸಲಾಗಿದ್ದು ಅರ್ಜಿಯು ಇನ್ನಷ್ಟೇ ಹೈಕೋರ್ಟ್ ವಿಭಾಗೀಯ ನ್ಯಾಯಪೀಠದ ಮುಂದೆ...
ಪಟ್ಟೂರು – ಗೋ ಕಾಯ್ದೆ ಹೆಸರಲ್ಲಿ ಮಹಿಳೆಯ ಮನೆ ಜಪ್ತಿ; ಮುಸ್ಲಿಂ ಒಕ್ಕೂಟ ಖಂಡನೆ ಸಂತ್ರಸ್ತರ ಮನೆಗೆ ಭೇಟಿ ನೀಡಿ ಧೈರ್ಯ ತುಂಬಿದ ಮುಖಂಡರುಗಳು
ಬೆಳ್ತಂಗಡಿ; ಪಟ್ರಮೆ ಗ್ರಾಮದ ಪಟ್ಟೂರು ಎಂಬಲ್ಲಿ ಗೋ ಕಾಯ್ದೆಯ ಹೆಸರಿನಲ್ಲಿ ಅಮಾಯಕ ಮಹಿಳೆಯರ ಮನೆ ಜಪ್ತಿ ಮಾಡಿದ ಪೊಲೀಸರ ಕ್ರಮವನ್ನು ಖಂಡಿಸಿ ತಾಲೂಕಿನ ಮುಸ್ಲಿಂ ಒಕ್ಕೂಟದ ನೇತೃತ್ವದಲ್ಲಿ ತುರ್ತು ಸಭೆ ನಡೆಸಿ ಘಟನೆಯನ್ನು ತೀವ್ರವಾಗಿ ಖಂಡಿಸಲಾಯಿತು. ಬಳಿಕ ಸಂತ್ರಸ್ತರ ಮನೆಗೆ ಭೇಟಿನೀಡಿ ಮುಖಂಡರು ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿದರು. ಜಮೀಯತುಲ್ ಫಲಾಹ್ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆಯನ್ನು ತಾಲೂಕು ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಬಿ.ಎ ನಝೀರ್ ಬೆಳ್ತಂಗಡಿ ವಹಿಸಿದ್ದರು. ಕಾನೂನು ಸುವ್ಯವಸ್ಥೆಯ ಹೆಸರಿನಲ್ಲಿ ತಾಲೂಕಿನಲ್ಲಿ ಮುಸಲ್ಮಾನರನ್ನು ಗುರಿಯಾಗಿಸಲಾಗುತ್ತಿದೆ. ಗೋ ಹತ್ಯೆಯ ಹೆಸರಿನಲ್ಲಿ ಧಾರ್ಮಿಕ ಶ್ರದ್ಧಾ ಕೇಂದ್ರವಾದ...
ಕೊಕ್ಕಡ ನಿಲ್ಲಿಸಿದ್ದ ಬೈಕ್ ಕಳವು; ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು
ಬೆಳ್ತಂಗಡಿ: ಕೊಕ್ಕಡದಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬೈಕ್ ಅನ್ನು ಕಳ್ಳರು ಅಪಹರಿಸಿದ ಘಟನೆ ನಡೆದಿದ್ದು ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಆಲಂಕಾರು ನಿವಾಸಿ ಶಿವಪ್ರಸಾದ್ ಎಂಬವರು ನ 6 ರಂದು ಬೆಳಗ್ಗೆ ತನ್ನ ಬೈಕ್ ಕೆ ಎ 19 EH 7942 ಅನ್ನು ಕೊಕ್ಕಡ ಪೇಟೆಯಲ್ಲಿ ಅಂಗಡಿಯೊಂದರ ಆವರಣದಲ್ಲಿ ನಿಲ್ಲಿಸಿ ಉಜಿರೆಗೆ ತೆರಳಿದ್ದರು. ಸಂಜೆ ಹಿಂತಿರುಗಿ ಬಂದು ನೋಡಿದಾಗ ಬೈಕ್ ನಿಲ್ಲಿಸಿದ್ದ ಸ್ಥಳದಲ್ಲಿ ಇರಲಿಲ್ಲ. ಎಲ್ಲಾ ಕಡೆ ಹುಡುಕಾಡಿದರೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಬಳಿಕ ಬೈಕ್ ಕಳ್ಳತನವಾಗಿರುವ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ...















