ಧರ್ಮಸ್ಥಳ; ನೇತ್ರಾವತಿ ಸೇತುವೆಯ ಸಮೀಪ ಅಪರಿಚಿತ ವ್ಯಕ್ತಿಯ ಅಸ್ಥಿಪಂಜರ ಪತ್ತೆ
ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ನೇತ್ರಾವತಿ ಬ್ರಿಡ್ಜ್ ಬಳಿಯ ಅರಣ್ಯ ಪ್ರದೇಶದಲ್ಲಿ ಜೂ.9 ರಂದು ಬೆಳಗ್ಗೆ ಅಪರಿಚಿತ ಗಂಡಸಿನ ಅಸ್ಥಿಪಂಜರ ಹಾಗೂ ಬಟ್ಟೆಗಳು ಸಾರ್ವಜನಿಕರಿಗೆ ಪತ್ತೆಯಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಧರ್ಮಸ್ಥಳ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಬಳಿಕ ಮಂಗಳೂರು ಆಸ್ಪತ್ರೆಯ ವೈದ್ಯರು ಆಗಮಿಸಿ ಸ್ಥಳದಲ್ಲಿಯೇ ಶವಪರೀಕ್ಷೆ ಮಾಡಿ ಬಳಿಕ ಧರ್ಮಸ್ಥಳ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ರುದ್ರ ಭೂಮಿಯಲ್ಲಿ ದಫನ ನಡೆಸಲಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ; ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು
ಬೆಳ್ತಂಗಡಿ; ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯ ಆಳವಾದ ಚರಂಡಿಗೆ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಶಿಬೆಟ್ಟು ಸಮೀಪ ಸಂಭವಿಸಿದೆ. ಮೂವರು ಪ್ರಯಾಣಿಕರನ್ನು ಸಂಚರಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಆಳವಾದ ಚರಂಡಿಗೆ ಉರುಳಿ ಬಿದ್ದಿದ್ದಿದೆ. ಗಾಯಾಳುಗಳನ್ನು ಕಾರಿನಲ್ಲಿದ್ದವರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದು ಇವರನ್ನು ಸ್ಥಳೀಯರ ಸಹಕಾರದೊಂದಿಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಳ್ತಂಗಡಿ; ಅಂತರ್ ರಾಜ್ಯ ಕಳ್ಳರಿಬ್ಬರ ಬಂಧನ 23.67 ಲಕ್ಷದ ಸೊತ್ತುಗಳು ವಶಕ್ಕೆ
ಬೆಳ್ತಂಗಡಿ; ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಬಳ್ಳಮಂಜದಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ಹಾಗೂ ನಗದು ಕಳ್ಳತನ ಪ್ರಕರಣಕಕ್ಕೆ ಸಂಬಂಧಪಟ್ಟಂತೆ ಇಬ್ಬರು ಅಂತರಾಜ್ಯ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ಕೊಳ್ಳಾಡು ನಿವಾಸಿ ಹಮೀದ್, ಬಂಟ್ವಾಳ ಕೊಳ್ಳಾಡು ನಿವಾಸಿ (ಹಾಲಿ ವಾಸ: ಕಾಸರಗೋಡು) ಜಾಬೀರ್ @ಜಾಬೀ (38) ಬಂಧಿತ ಆರೋಪಿಗಳಾಗಿದ್ದು ಇವರಿಂದ ಸುಮಾರು 23.67 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ದಿನಾಂಕ: 05.04.2026 ರಂದು ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಬಳ್ಳಮಂಜದ ಮನೆಯಲ್ಲಿ 6 ಲಕ್ಷ ಹಣ ಮತ್ತು ಚಿನ್ನಾಭರಣ ಸೇರಿ 19 ಲಕ್ಷದ ಕಳ್ಳತನ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ...
ಬೆಳ್ತಂಗಡಿ; ಅನಿತಾ ಕಾಸರಗೋಡು ವಿರುದ್ದ ಗುರುನಾರಾಯಣ ಸೇವಾ ಸಂಘದಿಂದ ಪೊಲೀಸರಿಗೆ ದೂರು
ಬೆಳ್ತಂಗಡಿ : ಬಿಲ್ಲವ ಸಮಾಜಕ್ಕೆ ಅಶ್ಲೀಲ ಪದಗಳಿಂದ ಅವಹೇಳನಗೈದು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಅನಿತಾ ಕಾಸರಗೋಡು ವಿರುದ್ಧ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಸೋಮವಾರ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಯಿತು. ಅನಿತಾ ಕಾಸರಗೋಡು ಎಂಬ ಖಾತೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ "ಪೂಜಾರಿಗಳು ಮತ್ತು ಶೆಟ್ಟಿಗಳು ಎಂಬ ಜಾತಿಯ ಹೆಸರಿನ ಪದಗಳನ್ನು ಬಳಸಿ" ಅಶ್ಲೀಲವಾಗಿ ನಿಂದಿಸಿದ್ದಾರೆಂದು ಆರೋಪಿಸಲಾಗಿದೆ. ಅನಿತಾ ಕಾಸರಗೋಡು ವಿರುದ್ಧ ಕಾನೂನಾತ್ಮಕವಾದ ಕ್ರಮವನ್ನು ಕೈಗೊಳ್ಳಬೇಕು, ಇಲ್ಲದೇ ಇದ್ದಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಹೋರಾಟವನ್ನು...
ಮಚ್ಚಿನ ಪಿಕಪ್ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ಇಬ್ಬರ ಸಾವು
ಬೆಳ್ತಂಗಡಿ; ಬಳ್ಳಮಂಜ – ಪಣಕಜೆ ರಸ್ತೆಯ ಪಾಲ್ಯರ ಎಂಬಲ್ಲಿ ಪಿಕಪ್ ವಾಹನ ಹಾಗೂ ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆಕ್ಟಿವಾದದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮೃತಪಟ್ಟ ಘಟನೆ ಸೋಮವಾರ ಸಂಜೆಯ ವೇಳೆ ಸಂಭವಿಸಿದೆ. ಅಪಘಾತದಲ್ಲಿ ಆಕ್ಟಿವಾ ಸವಾರ ಡಾಕಯ್ಯ ಗೌಡ ಹಾಗೂ ಹಿಂಬದಿ ಸವಾರ ಚಂದಪ್ಪ ಮೂಲ್ಯ ಅವರು ಗಂಭೀರವಾಗಿ ಗಾಯಗೊಂಡು ಮೃತಪಟ್ಟ ವ್ಯಕ್ತಿಗಳಾಗಿದ್ದಾರೆ. ಮಡಂತ್ಯಾರಿನ 'ಎಸ್.ಎಂ ಶಾಮಿಯಾನ' ಸಂಸ್ಥೆಗೆ ಸೇರಿದ ಪಿಕಪ್ ವಾಹನವು ಬಳ್ಳಮಂಜ ಕಡೆಯಿಂದ ಪಣಕಜೆ ಕಡೆಗೆ ತೆರಳುತ್ತಿತ್ತು. ಈ ವೇಳೆ ಪಣಕಜೆಯಿಂದ ಬಳ್ಳಮಂಜ ಕಡೆಗೆ ಬರುತ್ತಿದ್ದ ಆಕ್ಟಿವಾ ಸ್ಕೂಟರ್‌ಗೆ...
ಬೆಳ್ತಂಗಡಿ; ಜೂ.14 ನೂತನ ನ್ಯಾಯಾಲಯ ಸಂಕೀರ್ಣ ಕಟ್ಟಡಕ್ಕೆ ಶಿಲಾನ್ಯಾಸ; ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಲೋಬೋ ಮಾಹಿತಿ
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಅತೀ ದೊಡ್ಡ, 81 ಗ್ರಾಮಗಳನ್ನು ಒಳಗೊಂಡ ಬೆಳ್ತಂಗಡಿ ತಾಲೂಕಿನ ಜನತೆ ಮತ್ತು ವಕೀಲರ ಸಂಘದ ಬಹುದಿನಗಳ ಬೇಡಿಕೆಯಾಗಿದ್ದ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಕರ್ನಾಟಕ ಸರಕಾರಕ್ಕೆ, ಸುಮಾರು 23.00 ಕೋಟಿ ರೂಪಾಯಿಗಳ ಬೇಡಿಕೆಯನ್ನು ಈಗಾಗಲೇ ಸಲ್ಲಿಸಿದ್ದು, ಮೊದಲ ಹಂತದಲ್ಲಿ 9.00 ಕೋಟಿ ಬಿಡುಗಡೆಗೊಳಿಸಿದ್ದು ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ ಕಾರ್ಯಕ್ರಮವು ಜೂ.14 ರಂದು ಪೂರ್ವಾಹ್ನ 11 ಗಂಟೆಗೆ ನಡೆಯಲಿದೆ ಎಂದು ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್. ಲೋಬೋ ಹೇಳಿದರು. ಅವರು ಜೂ.8ರಂದು ಬೆಳ್ತಂಗಡಿ ವಕೀಲರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ...
ಬೆಳ್ತಂಗಡಿ; ಆರಂಬೋಡಿಯಲ್ಲಿ 12 ಲೋಡ್ ಅಕ್ರಮ ಮರಳು ದಾಸ್ತಾನು ಪತ್ತೆ ವೇಣೂರು ಪೊಲೀಸರ ಕಾರ್ಯಾಚರಣೆ
ಬೆಳ್ತಂಗಡಿ : ವೇಣೂರು ಠಾಣಾ ವ್ಯಾಪ್ತಿಯ ಆರಂಬೋಡಿ ನಿಡ್ಯಾಲಬೆಟ್ಟು ಎಂಬಲ್ಲಿ ಅಕ್ರಮವಾಗಿ ಶೇಖರಿಸಿಡಲಾಗಿದ್ದ ಸುಮಾರು 12 ಟಿಪ್ಪರ್ ನಷ್ಟು ಮರಳನ್ನು ವೇಣೂರು ಪೊಲೀಸರು ಪತ್ತೆಹಚ್ಚಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸ್ಥಳೀಯ ನಿವಾಸಿ ಸುಂದರ ಪೂಜಾರಿ ಎಂಬವರಿಗೆ ಸೇರಿದ ಜಾಗದಲ್ಲಿ ಅಕ್ರಮವಾಗಿ ಮರಳು ಸಂಗ್ರಹಿಸಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಅಕ್ಷಯ್ ನೇತೃತ್ವದ ತಂಡ ಜೂನ್.5 ರಂದು ದಾಳಿ ನಡೆಸಿದ್ದು ಅವರನ್ನು ವಿಚಾರಿಸಿದಾಗ ಮರಳನ್ನು ಸ್ಥಳೀಯರಾದ ದಿನೇಶ್ ಕುಲಾಲ್ ಎಂಬವರು ತಮ್ಮ ಟಿಪ್ಪರ್ KA-19-AA-3213 ರಲ್ಲಿ ಅಂಗರಕರಿಯದ ಫಲ್ಗುಣಿ ನದಿಯಿಂದ...
ಬೆಳ್ತಂಗಡಿ; ಶಾಸಕ ಹರೀಶ್ ಪೂಂಜ ಅವರಿಂದ ಬದ್ಯಾರ್ ಆಸ್ಪತ್ರೆ ರಸ್ತೆ ಸೇರಿದಂತೆ 1.15 ಕೋಟಿ ವೆಚ್ಚದ ವಿವಿಧ ರಸ್ತೆಗಳ ಉದ್ಘಾಟನೆ
ಬೆಳ್ತಂಗಡಿ: ಪಡಂಗಡಿ ಗ್ರಾಮ ವ್ಯಾಪ್ತಿಯ ಬದ್ಯಾರ್ ಎಲ್. ಎಮ್. ಪಿಂಟೋ ಆಸ್ಪತ್ರೆ ರಸ್ತೆ, ಕಳೆಂಜಿರೋಡಿ ರಸ್ತೆ ಹಾಗೂ ನೈಕುಳಿ ಮಲ್ಲಿಪಾಡಿ ರಸ್ತೆಗಳ ಕಾಂಕ್ರೀಟೀಕರಣ ಕಾಮಗಾರಿ ಪೂರ್ಣಗೊಂಡಿದ್ದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಜೂ. 7 ರಂದು ರಸ್ತೆಗಳ ಉದ್ಘಾಟನೆ ನೆರವೇರಿಸಿದರು. ಒಟ್ಟು 1 ಕೋಟಿ 15 ಲಕ್ಷ ರೂ. ಅನುದಾನದಲ್ಲಿ ಈ ಪ್ರಮುಖ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ರಸ್ತೆ ಉದ್ಘಾಟನೆಯ ಸಂದರ್ಭದಲ್ಲಿ ಬದ್ಯಾರ್ ಸಂತ ರಫಾಯೆಲ್ ದೇವಾಲಯ ಹಾಗೂ ಎಲ್. ಎಮ್. ಪಿಂಟೋ ಆಸ್ಪತ್ರೆ ವತಿಯಿಂದ ಶಾಸಕರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.ಶಾಸಕ ಹರೀಶ್ ಪೂಂಜಾಕಾಮಗಾರಿ ಉದ್ಘಾಟಿಸಿ...
ಬೆಳಾಲು ಪ್ರೌಢ ಶಾಲೆಯಲ್ಲಿ ಮಾಸ್ತಿ ಸಂಸ್ಮರಣ ಕಾರ್ಯಕ್ರಮ
ಬೆಳಾಲು ಶ್ರೀ ಧ.ಮಂ.ಅ. ಪ್ರೌಢಶಾಲೆಯಲ್ಲಿ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಜನ್ಮದಿನದ ಪ್ರಯುಕ್ತ ಜೂನ್ ೬ ರಂದು ಮಾಸ್ತಿ ಸಂಸ್ಮರಣ ಕಾರ್ಯಕ್ರಮ ಜರಗಿತು. ಮಾಸ್ತಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಲಾಯಿತು.ವಿದ್ಯಾರ್ಥಿನಿ ಆಯಿಷತ್ ಹೈಪ ಮಾಸ್ತಿಯವರ ಪರಿಚಯವನ್ನು ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮುಖ್ಯೋಪಾಧ್ಯಾಯರಾದ ಜಯರಾಮ ಮಯ್ಯ ಮಾತನಾಡಿ, ಪುಸ್ತಕಗಳನ್ನು ಓದುವ ಹವ್ಯಾಸ ಬೆಳಸಿಕೊಳ್ಳುವದರೊಂದಿಗೆ ಅದರಲ್ಲಿರುವ ಮೌಲ್ಯವನ್ನು ಅಳವಡಿಸಿಕೊಳ್ಳಿ ಎಂದು ತಿಳಿಸಿದರು. ಶಿಕ್ಷಕ ಸುಮನ್ ಯು.ಎಸ್ ಮಾಸ್ತಿಯವರ ಕೃತಿಗಳನ್ನು ಪರಿಚಯಿಸಿದರು. ಮಾಸ್ತಿಯವರ ಜ್ಞಾನಪೀಠ ಪುರಸ್ಕೃತ ಚಿಕವೀರ ರಾಜೇಂದ್ರ ಕೃತಿಯನ್ನು ಪ್ರದರ್ಶಿಸಲಾಯಿತು. ಮಾಸ್ತಿ ವೆಂಕಟೇಶ್ ಅಯ್ಯಂಗಾರರ ವಿಡಿಯೋ ತುಣುಕನ್ನು ಪ್ರದರ್ಶಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ...
ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ಎಕ್ಸೆಲ್ ಶಕ್ತಿ ನೀಡಿದೆ: ಸುಮಂತ್ ಕುಮಾರ್ ಜೈನ್
ಬೆಳ್ತಂಗಡಿ; ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳು ಪ್ರಾರಂಭದ ದಿನಗಳಿಂದಲೂ ಪ್ರತಿ ಪರೀಕ್ಷೆಯಲ್ಲಿ ಅದ್ವಿತೀಯ ಸಾಧನೆ ಮಾಡುತ್ತಾ ಬರುತ್ತಿದ್ದು ಶೈಕ್ಷಣಿಕ ಸಾಧನೆಗೆ ಹಿಡಿದ ಕೈಕನ್ನಡಿಯಾಗಿದೆ.ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಯಾನ ಪೊನ್ನಮ್ಮ 600 ಕ್ಕೆ 600ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ರಾಷ್ಟ್ರ ಮಟ್ಟದ ಜೆಇಇ ಪರೀಕ್ಷೆಯಲ್ಲಿ ಬುದ್ಧಿವಂತರ ಜಿಲ್ಲೆಯಾದ ನಮ್ಮ ಜಿಲ್ಲೆಗೆ ಪ್ರಥಮ ಸ್ಥಾನ, ಸಿಎಸ್ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ್ರಾಂಕ್, 12 ವಿದ್ಯಾರ್ಥಿಗಳ ಎನ್ ಡಿ ಎ ಆಯ್ಕೆ ಹೀಗೆ ಹಲವು ಸಾಧನೆಗಳ ನಡುವೆ ಈ ಬಾರಿಯು ಸಿಇಟಿ ಪರೀಕ್ಷೆಯಲ್ಲಿ...















