ಖ್ಯಾತ ಮಲಯಾಳಂ ಚಲನಚಿತ್ರ ನಟ ಸಲೀಂ ಕುಮಾರ್ ನಿಧನ
ಕೊಚ್ಚಿ; ಖ್ಯಾತ ಮಲಯಾಳಂ ಚಲನಚಿತ್ರ ನಟ ಸಲೀಂ ಕುಮಾರ್ ಶನಿವಾರ ತಡ ರಾತ್ರಿ ನಿಧನರಾದರು. ಅವರು ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನ್ಯುಮೋನಿಯಾ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದ ಸಲೀಂ ಕುಮಾರ್ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಅವರು ಯಕೃತ್ತಿಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ. ಹಾಸ್ಯ ಭಾವನಾತ್ಮಕ ಹಾಗೂ ಗಂಭೀರ ಪಾತ್ರಗಳಲ್ಲಿ ನೂರಾರು ಚಲನಚಿತ್ರಗಳಲ್ಲಿ ಅಭಿನಯಿಸಿ ಮಲಯಾಳಂ ಚಿತ್ರರಂಗದಲ್ಲಿ ವಿಶಿಷ್ಟ ಸ್ಥಾನ ಗಳಿಸಿದ್ದ ಸಲೀಂ ಕುಮಾರ್ ಅವರು ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದರು.
ಯು.ಜಿ. ಸಿಇಟಿ ಪರೀಕ್ಷೆ: ರಾಜ್ಯಕ್ಕೆ 7ನೇ ಸ್ಥಾನ ಪಡೆದವಿದ್ವತ್ ಪಿಯು ಕಾಲೇಜಿನ ಚಿನ್ಮಯ್ ಜಿ.ಕೆ. ಇತರ ವಿದ್ಯಾರ್ಥಿ ಗಳಿಂದಲೂ ಉತ್ತಮ ಸಾಧನೆ
ಬೆಳ್ತಂಗಡಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಯುಜಿ ಸಿಇಟಿ ಪರೀಕ್ಷೆಯಲ್ಲಿ ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜಿನ ಚಿನ್ಮಯ್ ಜಿ.ಕೆ. ಅಭೂತಪೂರ್ವ ಸಾಧನೆ ತೋರಿದ್ದಾರೆ. ಚಿನ್ಮಯ್ ಜಿ.ಕೆ. ಒಟ್ಟು (98.61111111) ನೊಂದಿಗೆ ರಾಜ್ಯಕ್ಕೆ 7ನೇ ರ್ಯಾಂಕ್ ಪಡೆದು ರಾಜ್ಯದಲ್ಲೇ ಗಮನ ಸೆಳೆಯುವಂತೆ ಮಾಡಿದ್ದಾರೆ. ಈ ಬಾರಿ ಮೂರು ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಯುಜಿ ಸಿಇಟಿ ಪರೀಕ್ಷೆ ಬರೆದಿದ್ದು, ಅದರಲ್ಲಿ ವಿದ್ವತ್ ಕಾಲೇಜಿನ ಚಿನ್ಮಯ್ ಜಿ.ಕೆ. ಇಂಜಿನಿಯರಿಂಗ್ ವಿಭಾಗದಲ್ಲಿ ರಾಜ್ಯದ ಟಾಪ್ ಹತ್ತರ ಒಳಗೆ 7ನೇ ರ್ಯಾಂಕ್ ಪಡೆದ ಬೆಳ್ತಂಗಡಿ ತಾಲೂಕಿನ ಏಕೈಕ ವಿದ್ಯಾರ್ಥಿ ಎಂಬುದು ಗಮನಾರ್ಹ...
ಶಿವಮೊಗ್ಗದಲ್ಲು ಕ್ರೇನ್ ಅಡಿಗೆ ಸಿಲುಕಿ ಬೆಳ್ತಂಗಡಿ ಯ ವ್ಯಕ್ತಿ ಮೃತ್ಯು
ಬೆಳ್ತಂಗಡಿ: ಶಿವಮೊಗ್ಗ ನಗರದ ಹೊಸಮನೆ ದೊಡ್ಡಮ್ಮ ದೇವಸ್ಥಾನದ ಸಮೀಪ ಕ್ರೇನ್‌ಗೆ ಸಿಲುಕಿ ಕೂಲಿ ಕಾರ್ಮಿಕರೊಬ್ಬರು ಮೃತಪಟ್ಟ ದುರ್ಘಟನೆ ಜೂ.6ರಂದು ಸಂಜೆ ನಡೆದಿದೆ.ಮೃತರನ್ನು ಬೆಳ್ತಂಗಡಿ ತಾಲ್ಲೂಕಿನ ಪಿಲಿಗೂಡು ನಿವಾಸಿ ನಾಗೇಶ್ (48) ಎಂದು ಗುರುತಿಸಲಾಗಿದೆ.ನಾಗೇಶ್ ಅವರು ದೇವಸ್ಥಾನದ ಗೋಪುರದ ಕಾಮಗಾರಿಯಲ್ಲಿ ಕೆಲಸ ನಿರ್ವಹಿಸಲು ಶುಕ್ರವಾರ ಶಿವಮೊಗ್ಗಕ್ಕೆ ಬಂದಿದ್ದರು. ಕೆಲಸ ಮಾಡುವ ವೇಳೆ ಎಡವಿ ಬಿದ್ದ ಇವರು ಕ್ರೇನ್‌ಗೆ ಸಿಕ್ಕಿ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕ್ರೇನ್ ಚಾಲಕನ ಅಜಾಗರೂಕತೆಯಿಂದ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.ಘಟನೆಯ ಬಗ್ಗೆ ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ...
ಬೆಳ್ತಂಗಡಿ : ನ್ಯಾಯಾಲಯಕ್ಕೆ ಹಾಜರಾಗದ ವಾರಂಟ್ ಆರೋಪಿಯ ಬಂಧನ
ಬೆಳ್ತಂಗಡಿ : ನ್ಯಾಯಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಯಶವಂತ.ಎಸ್.ಕೆ(50) ಎಂಬಾತನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಈತ ಕಳೆದ ಎರಡು ವರ್ಷಗಳಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ವಾರಂಟ್ ಆರೋಪಿಯಾಗಿದ್ದ. ಬೆಳ್ತಂಗಡಿ ಪೊಲೀಸ್ ಉಪವಿಭಾಗದ ಡಿವೈಎಸ್ಪಿ ರೋಹಿಣಿ.ಸಿ.ಕೆ, ವೃತ್ತ ನಿರೀಕ್ಷಕ ರವಿ.ಬಿ.ಎಸ್ , ಸಬ್ ಇನ್ಸ್‌ಪೆಕ್ಟರ್ ಆನಂದ್.ಎಮ್ ಮತ್ತು ಸಿಕಂದರ್ ಪಾಷಾ ರವರ ಮಾರ್ಗದರ್ಶನದಲ್ಲಿ ಸಿಬ್ಬಂದಿ ಮಾಲತೇಶ್ ಹಾಗು ಚೌಡಪ್ಪ ತಂಡ ಸುಳ್ಯ ತಾಲೂಕಿನ ಮರ್ಕಂಜ ಎಂಬಲ್ಲಿ ಜೂ.4 ರಂದು ಸಂಜೆ ಬಂಧಿಸಿ ಬೆಳ್ತಂಗಡಿ ನ್ಯಾಯಲಯಕ್ಕೆ ಜೂ.5 ರಂದು ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಂಗ...
ಬಂಟ್ವಾಳ ಎಂಡಿಎಂಎ ಸಾಗಾಟ ಪ್ರಕರಣ ಮೂವರ ಬಂಧನ; 7.6 ಮೌಲ್ಯದ ಮಾದಕವಸ್ತು ವಶಕ್ಕೆ
ಬಂಟ್ವಾಳ; ಎಂ.ಡಿ.ಎಂ.ಎ ಸಾಗಾಟ ಪ್ರಕರಣ ಕ್ಕೆ ಸಂಬಂಧಿಸಿತೆ ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ 7,64,000 ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಟ್ವಾಳ ಪುದು ನಿವಾಸಿ ಎ,ಜುಬೈರ್ (39), ಬಂಟ್ವಾಳ ಸಜಿಪ ಮುನ್ನೂರು ನಿವಾಸಿ ಮೊಹಮ್ಮದ್ ಸವಾದ್ (36) ಹಾಗೂ ಬಂಟ್ವಾಳ ಬಿ ಮೂಡ ನಿವಾಸಿ ಬಿ.ಎಮ್.ರಶೀದ್ ಯಾನೆ ಮಾರಿಮುತ್ತು ಬಂಧಿತರು. ದಿನಾಂಕ 04.06.2026ರಂದು ಸಂಜೆ, ಬಂಟ್ವಾಳ ನಗರ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಸಂದೀಪ್ ಕುಮಾರ್ ಶೆಟ್ಟಿರವರು ಠಾಣಾ ಸಿಬ್ಬಂದಿಯೊಂದಿಗೆ ಮೆಲ್ಕಾರ್ ಪ್ರೈಒವರ್ ಬಳಿ ಕಾರೊಂದನ್ನು ತಪಾಸಣೆಗಾಗಿ...
ಬೆಳ್ತಂಗಡಿ; ಮದ್ದಡ್ಕ ಕಾರು ಬೈಕ್ ನಡುವೆ ಅಪಘಾತ ಪ್ರಯಾಣಿಕರಿಗೆ ಗಾಯ
ಬೆಳ್ತಂಗಡಿ; ಮದ್ದಡ್ಕ ಇಲ್ಲಿಯ ವರಕದೆ ಬಳಿ ಕಾರು ಹಾಗೂ ಸ್ಕೂಟ ಮುಖಾಮುಖಿ ಡಿಕ್ಕಿಯಾಗಿ ಹೊಂಡಕ್ಕೆ ಬಿದ್ದ ಘಟನೆ ಜೂ. 5ರಂದು ನಡೆದಿದೆ. ಬೆಳ್ತಂಗಡಿಯಿಂದ ಮಡಂತ್ಯಾರು ಕಡೆಗೆ ಬರುತ್ತಿದ್ದ ಸ್ಕೂಟರ್ ಹಾಗೂ ಬೆಳ್ತಂಗಡಿ ಕಡೆಗೆ ಹೋಗುತ್ತಿದ್ದ ಕಾರು ಪರಸ್ಪರ ಡಿಕ್ಕಿ ಹೊಡೆದಿದ್ದು ಡಿಕ್ಕಿ ಹೊಡೆದ ರಭಸಕ್ಕೆ ಕಾರು ಹಾಗೂ ಸ್ಕೂಟಿ ಚರಂಡಿಗೆ ಬಿದ್ದಿದ್ದೆ ಸವಾರರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಳ್ತಂಗಡಿ : ಗುರುವಾಯನಕೆರೆಯ ಖಾಸಗಿ ಕಾಲೇಜ್ ವಿದ್ಯಾರ್ಥಿನಿ ಆತ್ಮಹತ್ಯೆ
ಬೆಳ್ತಂಗಡಿ : ಗುರುವಾಯನಕೆರೆಯ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಕಾಲೇಜಿನ ಹಾಸ್ಟೆಲ್ ನಲ್ಲಿ ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.ಗುರುವಾಯನಕೆರೆಯ ಖಾಸಗಿ ಕಾಲೇಜಿನ 17 ವರ್ಷದ ಅಪ್ರಾಪ್ತ ವಯಸ್ಸಿನ ಎರಡನೇ ವರ್ಷದ ಪಿಯುಸಿ ವಿದ್ಯಾರ್ಥಿನಿ ಜೂನ್ 4 ರಂದು ಮಧ್ಯಾಹ್ನ ಊಟಕ್ಕೆಂದು ಹಾಸ್ಟೆಲ್ ಗೆ ಹೋಗಿ ಬಾಗಿಲು ಹಾಕಿಕೊಂಡು ಶಾಲಿನಿಂದ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿರುವುದಾಗಿ ತಿಳಿದು ಬಂದಿದೆ. ಹಾಸ್ಟೆಲ್ ವಾರ್ಡನ್ ಗೆ ಬಾಗಿಲು ಹಾಕಿರುವುದು ಅನುಮಾನ ಬಂದು ತಕ್ಷಣ ಬಾಗಿಲು ಮುರಿದು ಒಳಗೆ ಪ್ರಚೇಶಿಸಿದಾಗ ನೇಣುಹಾಕಿಕೊಂಡಿರುವುದು ಕಂಡು ಬಂದಿದ್ದು ಕೂಡಲೇ ಆಕೆಯನ್ನು ಆಸ್ಪತ್ರೆಗೆ ಕೊಂಡಿಯ್ದರೂ ಆವೇಳೆಗೆ...
ಅಕ್ರಮ ದನಸಾಗಾಟ ಧರ್ಮಸ್ಥಳ ಪೊಲೀಸರ ಕಾರ್ಯಾಚರಣೆ ದನ ರಕ್ಷಣೆ ನಾಲ್ವರ ವಿರುದ್ದ ಪ್ರಕರಣದಾಖಲು
ಬೆಳ್ತಂಗಡಿ; ಸ್ಥಳೀಯರೊಬ್ಬರಿಂದ ದನವನವನ್ನು ಖರೀದಿಸಿ ಮಾಂಸಕ್ಕಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಖಚಿತ ಮಾಹಿತಿಯ ಮೇಲೆ ದಾಳಿ ನಡೆಸಿದ ಧರ್ಮಸ್ಥಳ ಪೊಲೀಸರು ಪತ್ತೆಹಚ್ಚಿದ್ದು ಒಬ್ಬ ಆರೋಪಿಯನ್ನು ವಶಕ್ಕೆ ಪಡೆದು ಪಿಕಪ್ ವಾಹನ ಹಾಗೂ ದನವನ್ನು ವಶಕ್ಕೆ ಪಡೆದಿದ್ದಾರೆ. ನಾಲ್ವರ ವಿರುದ್ದ ಪ್ರಕರಣ ದಾಖಲಿಸಿಕೊಂಳ್ಳಲಾಗಿದೆ.ಕಕ್ಕಿಂಜೆ ನಿವಾಸಿ ಅನಿಲ್ ಎಂಬಾತನನ್ನು ಪೊಲೀಸರು ಬಂಧಿಸಿದ್ದು ಪ್ರಕರಣದಲ್ಲಿ ದನಸಾಗಾಟ ಮಾಡುತ್ತಿದ್ದ ತೋಮಸ್ ತೋಟತ್ತಾಡಿ ಹಾಗೂ ಕಬೀರ ಎಂಬವರ ವಿರುದ್ದ ಹಾಗೂ ವಧೆ ಮಾಡಲು ದನ ಮಾರಾಟ ಮಾಡಿದ ಕಾನರ್ಪ ರಾಘವೇಂದ್ರ ಭಟ್ ಎಂಬಾತನ ವಿರುದ್ದ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಘಟನೆಯ...
ಗಡಾಯಿಕಲ್ಲಿನ ಮೇಲೆ ಸಿಲುಕಿಕೊಂಡ ಪ್ರವಾಸಿಗನ ರಕ್ಷಣೆ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಚಾರಣತಾಣವಾದ ಗಡಾಯಿಕಲ್ಲಿಗೆ ಹೋದ ಪ್ರವಾಸಿಗನ ಮೊಣಕಾಲಿನಲ್ಲಿ ನೋವು ಉಂಟಾಗಿ ಕೆಳಗಿಳಿಯಲು ಸಾಧ್ಯವಾಗದೆ ಸ್ಥಳೀಯರು, ಅಗ್ನಿಶಾಮಕ ದಳ, ಅರಣ್ಯ ಇಲಾಖೆ, ಶ್ರೀ ಕ್ಷೇತ್ರ ಧರ್ಮಸ್ಥಳ ಶೌರ್ಯ ವಿಪತ್ತು ತಂಡದ ಸದಸ್ಯರು ಸೇರಿ ಆತನನ್ನು ಹೊತ್ತು ತಂದು ಕೆಳಗಿಳಿಸಿ ರಕ್ಷಿಸಿದ ಘಟನೆ ಜೂನ್ 4 ರಂದು ಗುರುವಾರ ಸಂಜೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ತಣ್ಣಿರುಪಂಥ ಗ್ರಾಮದ ಜನಾತಕಲೋನಿ ಪರಿಸರದ ಇಬ್ಬರು ಮಹಿಳೆಯರು ಸಹಿತ ಇಬ್ಬರು ಪುರುಷರು ಟಿಕೆಟ್ ಪಡೆದು ಬೆಳಿಗ್ಗೆ ಗಡಾಯಿಕಲ್ಲಿಗೆ ಹೋಗಿದ್ದರು.ಗಡಾಯಿಕಲ್ಲಿನ ಮೆಟ್ಟಿಲು ಹತ್ತಿ ಮೇಲೇರಿದ ಬಳಿಕ ಮಹಮ್ಮದ್ ಶರೀಫ್ (30)...
ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಪ್ರಕರಣ; ಮೇಲ್ಮನವಿ ಅರ್ಜಿ ವಜಾ ಮಾಡಿದ ಹೈಕೋರ್ಟ್
ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ವಿಷಯದಲ್ಲಿ ಕಾನೂನು ಹೋರಾಟದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕೆ ಭಾರೀ ಹಿನ್ನಡೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿಗೆ ಗಡಿಪಾರು ಮಾಡಿರುವ ಆದೇಶವನ್ನು ಪ್ರಶ್ನೆ ಮಾಡಿ ಅವರು ಸಲ್ಲಿಸಿದ್ದ ಕೊನೆಯ ಮೇಲ್ಮನವಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ವಿಭಾಗೀಯ ಪೀಠವು ವಜಾ ಮಾಡಿ ಆದೇಶ ಹೊರಡಿಸಿದೆ.ಪುತ್ತೂರು ವಿಭಾಗಾಧಿಕಾರಿ (ಎಸಿ) ಅವರು ಮೂರನೇ ಬಾರಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದರು. ಈ ಗಡಿಪಾರು ಆದೇಶವನ್ನು ಪ್ರಶ್ನೆ ಮಾಡಿ ತಿಮರೋಡಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ನ್ಯಾಯಾಲಯ ನಿಯಮಾವಳಿಗಳ...















