ಸುಮಂತ್ ಕೊಲೆ ಪ್ರಕರಣ; ಸಮಗ್ರ ತನಿಖರ ನಡೆಸುವಂತೆ ಶಾಸಕ ಹರೀಶ್ ಪೂಂಜ ಮನವಿ

0

ಬೆಳ್ತಂಗಡಿ;  ತಾಲೂಕಿನ ಓಡಿಲ್ನಾಳ ಗ್ರಾಮದ ಸುಮಂತ್ ಎಂಬ ಬಾಲಕ ಸುಮಾರು 5 ತಿಂಗಳ ಹಿಂದೆ ಅನುಮಾನಾಸ್ಪದ ರೀತಿಯಲ್ಲಿ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕೆಂದು ಶಾಸಕ ಹರೀಶ್ ಪೂಂಜ ಅವರು ಸುಮಂತ್ ಕುಟುಂಬದ ಸದಸ್ಯರೊಂದಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ಶಾಸಕರು ಈ ಹಿಂದೆ  ವಿಧಾನಮಂಡಲ ಅಧಿವೇಶನದಲ್ಲಿಯೇ ವಿಷಯವನ್ನು ಪ್ರಸ್ತಾಪಿಸಿದ್ದರು ಅಲ್ಲದೇ, ಈ ಪ್ರಕರಣದ ಬಗ್ಗೆ ಮಾನ್ಯ ಗೃಹಮಂತ್ರಿಗಳನ್ನು ಖುದ್ದಾಗಿ ಭೇಟಿ ಮಾಡಿ ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಮನವಿ ಸಲ್ಲಿಸಿದ್ದರು ...

ರಾಜ್ಯದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್; ಮುಖ್ಯಮಂತ್ರಿ ಘೋಷಣೆ

0

ಬೆಂಗಳೂರು : ರಾಜ್ಯದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ವಿತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಿಸಿದ್ದಾರೆ. ಡಿ.ಕೆ.ಶಿವಕುಮಾ‌ರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ ಮೊದಲ ಸಚಿವ ಸಂಪುಟ ನಡೆಸಿದ್ದು, ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ ಘೋಷಣೆ ಮಾಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ನೇಮಕ

0

ಬೆಳ್ತಂಗಡಿ; ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ಮುಖಂಡ ಬಿ.ಕೆ ಹರಿಪ್ರಸಾದ್ ಅವರನ್ನು ಪಕ್ಷದ ಹೈಕಮಾಂಡ್ ನೇಮಕ ಮಾಡಿದೆ.ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಿದ್ದಾರೆ. ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ಹಿನ್ನಲೆಯಲ್ಲಿ ತೆರವಾದ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಬಿ.ಕೆ ಹರಿಪ್ರಸಾದ್ ಅವರು ತುಂಬಲಿದ್ದಾರೆ.

ಕಣಿಯೂರು ಗ್ರಾ.ಪಂ  ಸದಸ್ಯ ಪ್ರವೀಣ್ ಗೌಡ ಮೇಲೆ ಹಲ್ಲೆ ಪ್ರಕರಣ; ಪ್ರಜ್ವಲ್ ಕೆವಿ ಗೌಡ ಮತ್ತು ರಾಧಾಕೃಷ್ಣ ಗೌಡ ರಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ

0

ಬೆಳ್ತಂಗಡಿ : ಕಣಿಯೂರಿನಲ್ಲಿ ಅಂಗಡಿ ವ್ಯಾಪಾರ ನಡೆಸುತ್ತಿದ್ದ ಕಣಿಯೂರು ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಪ್ರವೀಣ್ ಗೌಡ ಅವರ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಇಬ್ಬರು ಆದೋಪಿಗಳಿಗೆ ಬೆಳ್ತಂಗಡಿ ನ್ಯಾಯಾಲಯವು ಆರುತಿಂಗಳ ಕಾರಗ್ರಹವಾಸ ಹಾಗೂ ದಂಡ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.28-07-2024 ರಂದು ಆರೋಪಿಗಳಾದ ಕಿರಣ್ ಶಿಶಿಲ, ಪ್ರಜ್ವಲ್ ಕೆವಿ ಗೌಡ ಮತ್ತು ರಾಧಾಕೃಷ್ಣ ಗೌಡ ಬರಮೇಲು ರವರು ಪ್ರವೀಣ್ ರವರ ಅಂಗಡಿ ಗೆ ಪ್ರವೇಶಿಸಿ " ನೀನು ಮಹೇಶಣ್ಣ ನ ಬಗ್ಗೆ ಬಾರಿ ಮಾತನಾಡುತ್ತೀಯ " ನೀನು ಪಂಚಾಯತ್ ಮೆಂಬರ್ ಎಂದು ಹಾರಾಡಬೇಡ...

ಬೆಳ್ತಂಗಡಿ; ಹೆದ್ದಾರಿ ಕಾಮಗಾರಿ ವಾಹನಕ್ಕೆ ಬೈಕ್ ಡಿಕ್ಕಿ: ಸವಾರನಿಗೆ ಗಾಯ

0

ಬೆಳ್ತಂಗಡಿ; ಹೆದ್ದಾರಿ ಕಾಮಗಾರಿಯಫೇವರ್ ಮೆಷೀನ್ ವಾಹನಕ್ಕೆ ಹಿಂಬದಿಯಿಂದ ಬುಲೆಟ್ ಬೈಕ್ ಡಿಕ್ಕಿ ಹೊಡೆದಘಟನೆ ರಾಷ್ಟ್ರೀಯ ಹೆದ್ದಾರಿಯ ಕಲ್ಮಂಜದ ಗುರಿಪಳ್ಳ ಕ್ರಾಸ್ ಸಮೀಪ ಸೋಮವಾರ ರಾತ್ರಿ ನಡೆದಿದೆ.ಘಟನೆಯಲ್ಲಿ ಬೈಕ್ ಸವಾರ ಕಡಿರುದ್ಯಾವರ ಗ್ರಾಮದ ಪರಬೆಟ್ಟು ನಿವಾಸಿ ಎಲೆಕ್ಟ್ರಿಷಿಯನ್ ವೃತ್ತಿಯ ಹರೀಶ್ (28) ಗಂಭೀರ ಗಾಯ ಗೊಂಡಿದ್ದು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೆದ್ದಾರಿ ಕಾಮಗಾರಿಯವಾಹನಕ್ಕೆ ಹಿಂಬದಿಯ ದೀಪಗಳು ಇಲ್ಲದ ಕಾರಣ ವಾಹನ ಸಂಚರಿಸುತ್ತಿದ್ದುದು ಗಮನಕ್ಕೆ ಬಾರದೆ ಅಪಘಾತ ನಡೆದಿದೆಎಂದು ಸ್ಥಳೀಯರು ಹೇಳಿದ್ದಾರೆ.ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ವಾಹನಗಳು ಅಲ್ಲಲ್ಲಿ ರಸ್ತೆ ಬದಿ ರಾತ್ರಿ ಹೊತ್ತು...

ಶಿಶಿಲ ಸೇತುವೆ ಕಾಮಗಾರಿಗೆ 499.36 ಲಕ್ಷ ಅನುದಾನ ಮಂಜೂರು. ರಕ್ಷಿತ್ ಶಿವರಾಂ

0

ಬೆಳ್ತಂಗಡಿ;  ಶಿಶಿಲ ಸೇತುವೆ ಕಾಮಗಾರಿಗೆ ರಾಜ್ಯ ಸರಕಾರದ  ಲೋಕೋಪಯೋಗಿ ಇಲಾಖೆಯಿಂದ 499.36 ಲಕ್ಷ ಅನುದಾನ ಮಂಜೂರಾಗಿದ್ದು ಈ ಬಗ್ಗೆ ಸರಕಾರ ಆದೇಶ ಹೊರಡಿಸಲಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತಿಳಿಸಿದ್ದಾರೆ. ತಾಲೂಕಿನ ಶಿಶಿಲ ಗ್ರಾಮದ ಶಿಶಿಲೇಶ್ವರ ದೇವಸ್ಥಾನದ ಬಳಿ ಕಪಿಲ ನದಿಗೆ ಸೇತುವೆ ನಿರ್ಮಾಣ ಕಾಮಗಾರಿಗೆ ಸನ್ಮಾನ್ಯ ಮುಖ್ಯಮಂತ್ರಿಯವರ ಟಿಪ್ಪಣಿ ಮೇರೆಗೆ 275.00ಲಕ್ಷಗಳ ಅನುದಾನ(ಲೆ.ಶೀ.5054-03-101-0-02-132 ಪ್ರಮುಖ ಜಿಲ್ಲಾ ಮುಖ್ಯ ರಸ್ತೆ ಸುಧಾರಣೆ) ಬಿಡುಗಡೆಗೆ ಆದೇಶವಾಗಿದ್ದು . ಅದರೆ ಸದ್ರಿ ಸೇತುವೆ ನಿರ್ಮಾಣ ಕಾಮಗಾರಿಗೆ ಲೋಕೋಪಯೋಗಿ ಇಲಾಖೆಯ ಅಂದಾಜು ಮೊತ್ತದಂತೆ ಈ ಕಾಮಗಾರಿಗೆ...

ಗುರುವಾಯನಕೆರಯಲ್ಲಿ ವ್ಯಕ್ತಿಯ ಕೊಲೆ ಮೂವರು ಆರೋಪಿಗಳು ಪೊಲೀಸ್ ವಶಕ್ಕೆ

0

ಬೆಳ್ತಂಗಡಿ: ಗುರುವಾಯನಕೆರೆ ಯಲ್ಲಿ ಅಸಹಜ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾದ ಪ್ರಕರಣ ಒಂದು ಕೊಲೆ ಪ್ರಕರಣ ಎಂಬುದು ಪೊಲೀಸ್ ತನಿಖೆಯಲ್ಲಿ ಬಹಿರಂಗಗೊಂಡಿದ್ದು ಯತೀಶ್ ನನ್ನು ಕೊಲೆ ಮಾಡಿದ ಮೂವರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಕೊಲೆ ಪ್ರಕರಣದ ಆರೋಪಿಗಳು ಯಶೋಧರ (35), ಕಡಬ ಚಾರ್ವಾಕ ನಿವಾಸಿ ಮೋಹನ್ (30) ಹಾಗೂ ಬೆಳ್ತಂಗಡಿ ಪಡಂಗಡಿ ನಿವಾಸಿ ಇಬ್ರಾಹಿಂ (54) ಎಂಬವರಾಗಿದ್ದಾರೆ ದಿನಾಂಕ: 01-06-2026 ರಂದು ಬೆಳಿಗ್ಗೆ, ಬಂಟ್ವಾಳ ತಾಲೂಕಿನ ಪೆರ್ನೆ ನಿವಾಸಿ ಯತೀಶ್ ಎಂಬಾತನ ಮೃತದೇಹ ಬೆಳ್ತಂಗಡಿ ಗುರುವಾಯನಕೆರೆ, ಅಲಾದಿಕೊಟ್ಟಿಗೆ ಎಂಬಲ್ಲಿ ಪತ್ರೆಯಾಗಿತ್ತು.ಘಟನೆಯ ಬಗ್ಗೆ ತನಿಖೆ...

ಬಂಟ್ವಾಳ: ಚಿಕ್ಕಪ್ಪನನ್ನೇ ಕೊಂದ ಪ್ರಕರಣ ಆರೋಪಿ ರಾಹುಲ್ ಪೊಲೀಸ್ ವಶಕ್ಕೆ

0

ಬಂಟ್ವಾಳ: ಪಿಲಾತಬೆಟ್ಟು ಎಂಬಲ್ಲಿ ತನ್ನ ಚಿಕ್ಕಪ್ಪನನ್ನೇ ಬಿಯರ್ ಬಾಟ್ಲಿಯಿಂದ ಹೊಡೆದು ಕೊಂದ ಪ್ರಕರಣದ ಆರೋಪಿಯನ್ನು ಪುಂಜಾಲಕಟ್ಟೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಿಲಾತಬೆಟ್ಟು ನಿವಾಸಿ ಕೇಶವ ಎಂಬವರ ಪುತ್ರ ರಾಹುಲ್( 19) ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.ಈ ಬಗ್ಗೆ ಪಿಲಾತಬೆಟ್ಟು ನಿವಾಸಿ ಶೇಖರ ಎಂಬವರು ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣದ ವಿವರ: ದಿನಾಂಕ: 31.05.2026 ರಂದು ಪಿಲಾತಬೆಟ್ಟು ನಿವಾಸಿ ಶೇಖರ ಅವರ ಮನೆಯಲ್ಲಿ ಧಾರ್ಮಿಕ ಕಾರ್ಯಕ್ರಮವಿತ್ತು. ಕಾರ್ಯಕ್ರಮಕ್ಕೆ ಕುಟುಂಬದ ಸದಸ್ಯರುಗಳು ಬಂದಿದ್ದರು. ಈ ವೇಳೆ ಶೇಖರ ಅವರ ಸಹೋದರ ಮಧುಸೂದನ್ ಎಂಬವರು ಶೇಖರ ಅವರ...

ಬೆಳ್ತಂಗಡಿ : ಹೈಸ್ಕೂಲ್ ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

0

ಬೆಳ್ತಂಗಡಿ : ಅಪ್ರಾಪ್ತ ವಯಸ್ಸಿನ ಬಾಲಕಿರ್ಯೋವಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯ ಶಿವಾಜಿನಗರದಲ್ಲಿ ಜೂ.1 ರಂದು ಬೆಳಗ್ಗೆ ನಡೆದಿದೆ.ಉಜಿರೆಯ ಖಾಸಗಿ ಶಾಲೆಯ 9 ನೇ ತರಗತಿಯ ವಿದ್ಯಾರ್ಥಿನಿ ಶಾಲೆಗೆ ಹೊರಡುವ ವೇಳೆ ಈ ಘಟನೆ ನಡೆದಿರುವುದಾಗಿ ತಿಳಿದು ಬಂದಿದ್ದು ಆತ್ಮಹತ್ಯೆಗೆ ಕಾರಣವೇನು ಎಂಬುದು ತಿಳಿದುಬಂದಿಲ್ಲ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ :ಗುರುವಾಯನಕೆರೆಯಲ್ಲಿ ಯುವಕನ ಅನುಮಾನಸ್ಪದ ಸಾವು

0

ಬೆಳ್ತಂಗಡಿ : ಅನುಮಾನಸ್ಪದವಾಗಿ ಕಟ್ಟಡದ ಆವರಣದಲ್ಲಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿಯ ಗುರುವಾಯನಕೆರೆಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆ- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಆಲಾದಿಕೊಟ್ಟಿಗೆ ಬಳಿಯಿರುವ ಶ್ರೀ ದೇವಿ ಕಾಂಪ್ಲೆಕ್ಸ್ ಆವರಣದಲ್ಲಿ ಜೂ‌ನ್ 1 ರಂದು ಬೆಳಗ್ಗೆ 7 ಗಂಟೆಗೆ ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ ತೋಟದ ಮನೆ ನಿವಾಸಿ ಯತೀಶ್ ಗೌಡ (32) ಎಂಬಾತನ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾನೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಅನುಮಾನ ಕಾಣುತ್ತಿದ್ದು, ಯಾವ ಕಾರಣಕ್ಕೆ ಸಾವನ್ನಪ್ಪಿದ್ದಾನೆ ಎಂದು ತನಿಖೆ ನಡೆಸುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಷ್ಠಧಿಕಾರಿ...