ಮಚ್ಚಿನ ಪ್ರಾಥಮಿಕ ಶಾಲೆ ಕೆಪಿಎಸ್‌ ಶಾಲೆಯಾಗಿ, ( ಕರ್ನಾಟಕ ಪಬ್ಲಿಕ್ ಸ್ಕೂಲ್) ಮೇಲ್ದರ್ಜೆಗೆ : ಶಾಲಾ ಅಭಿವೃದ್ಧಿ ಸಮಿತಿಯಿಂದ ರಕ್ಷಿತ್ ಶಿವರಾಂ ರಿಗೆ ಅಭಿನಂದನೆ ಸಲ್ಲಿಕೆ

0

ಬೆಳ್ತಂಗಡಿ. ತಾಲೂಕಿನ ಸರ್ಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆ ಮಚ್ಚಿನ, , ಶಾಲೆಯನ್ನು ಕೆಪಿಎಸ್ ( ಕರ್ನಾಟಕ ಪಬ್ಲಿಕ್ ಸ್ಕೂಲ್ )ಶಾಲೆಯಾಗಿ ಸರ್ಕಾರ ಮೇಲ್ದರ್ಜೆಗೇರಿಸಿ ಆದೇಶಿಸಿದ್ದು.ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪನವರಿಗೆ ಶಾಲಾ ಅಭಿವೃದ್ಧಿ ಸಮಿತಿಯವರ ಮನವಿಯ ಮೇರೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಮನವಿಯನ್ನು ಸಲ್ಲಿಸಿದ್ದು ಈ ಮನವಿಗೆ . ಸಚಿವರು ಪೂರಕವಾಗಿ ಸ್ಪಂದಿಸಿ ಶಾಲೆಯನ್ನು ಕೆಪಿಎಸ್‌ ಶಾಲೆಯಾಗಿ, ( ಕರ್ನಾಟಕ ಪಬ್ಲಿಕ್ ಸ್ಕೂಲ್) ಮೇಲ್ದರ್ಜೆಗೆರಿಸಿ ಆದೇಶವನ್ನು ಮಾಡಿದ್ದು. ಶಾಲಾ ಅಭಿವೃದ್ಧಿಯ...

ನ 5 ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾದ ಅ.ವಂ ಜೇಮ್ಸ್ ಪಟ್ಟೇರಿಲ್ ಅವರ ಧರ್ಮಾಧ್ಯಕ್ಷ ದೀಕ್ಷೆ

0

ಬೆಳ್ತಂಗಡಿ; 'ಬೆಳ್ತಂಗಡಿ ಧರ್ಮಪ್ರಾಂತ್ಯಕ್ಕೆ ನೂತನ ಧರ್ಮಾಧ್ಯಕ್ಷರಾಗಿ ಆಯ್ಕೆಯಾಗಿರುವ ಪರಮಪೂಜ್ಯ ಮಾರ್ ಜೇಮ್ಸ್ ಪಟೇರಿಲ್ ರವರ ಧರ್ಮಾಧ್ಯಕ್ಷ ದೀಕ್ಷೆ ಹಾಗೂ ಅಧಿಕಾರ ಸ್ವೀಕಾರ ಸಮಾರಂಭ ನ 5 ರಂದು ಬೆಳ್ತಂಗಡಿ ಸೈಟ್ ಲಾರೆನ್ಸ್ ಪ್ರಧಾನ ದೇವಾಲಯಲ್ಲಿ ನಡೆಯಲಿದೆ ಎಂದು ಬೆಳ್ತಂಗಡಿ ಧರ್ಮಪ್ರಾಂತ್ಯದ ವಿಕಾರ್ ಜನರಲ್ ಅ.ವಂ ಜೋಸೆಫ್ ವಲಿಯಪರಂಬಿಲ್ ತಿಳಿಸಿದ್ದಾರೆ.ಬೆಳ್ತಂಗಡಿ ಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಈ ಮಾಹಿತಿ ನೀಡಿದರು.ಈ ಸಮಾರಂಭದಲ್ಲಿ ಸೀರೋ ಮಲಬಾರ್ ಧರ್ಮಸಭೆಯ ಮಹಾ ಧರ್ಮಾಧ್ಯಕ್ಷರಾದ ಅತೀವಂದನೀಯ ರಾಫೇಲ್ ತಟ್ಟಿಲ್, ತಲಶೇರಿ ಆರ್ಚ್ ಬಿಷಪ್ ಅತೀವಂದನೀಯ ಡಾ ಜೋಸೆಫ್ ಪಾಂಪ್ಲಾನಿ, ಬೆಂಗಳೂರಿನ...

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

0

ಬೆಳ್ತಂಗಡಿ : ಕಳೆದ 50 ದಿನಗಳಿಂದ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯಗಳಲ್ಲಿ ಹೋರಾಟ ನಡೆಸುತ್ತಿದ್ದ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಗಡಿಪಾರು ಆದೇಶ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ರಾಜ್ಯ ಉಚ್ಚ ನ್ಯಾಯಾಲಯದಿಂದ ತಡೆಯಾಜ್ಞೆ ಲಭಿಸಿದ್ದು ಈ ಹಿನ್ನಲೆಯಲ್ಲಿ ಕೆಲವು ಹಳೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಸೋಮವಾರ ಹಾಜರಾಗಿದ್ದಾರೆ. ಹಳೆಯ ಪ್ರಕರಣಗಳಿಗೆ ಸಂಭಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದ ಕಾರಣ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ  ವಾರಂಟ್ ಜಾರಿಯಾಗಿತ್ತು ಎನ್ನಲಾಗಿದೆ. ಬೆಳ್ತಂಗಡಿ ನ್ಯಾಯಾಲಯಕ್ಕೆ ನ.3 ರಂದು ಬೆಳಗ್ಗೆ 11 ಗಂಟೆಗೆ ಹಾಜರಾಗಿದ್ದಾರೆ.

ಬೆಳ್ತಂಗಡಿ : ಕಾರಿನಲ್ಲಿ ಅಕ್ರಮ ದನ ಸಾಗಾಟ ಪತ್ತೆ ಹಚ್ಚಿದ ಧರ್ಮಸ್ಥಳ ಪೊಲೀಸರು

0

ಬೆಳ್ತಂಗಡಿ : ಅಕ್ರಮವಾಗಿ ಕಾರಿನಲ್ಲಿ ಮೂರು ದನಗಳನ್ನು ಸಾಗಾಟ ಮಾಡುತ್ತಿದ್ದನ್ನು ಧರ್ಮಸ್ಥಳ ಪೊಲೀಸರು ಪತ್ತೆ ಹಚ್ಚಿದ್ದಾರೆ. ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಪಟ್ಟೂರು ಎಂಬಲ್ಲಿ ಧರ್ಮಸ್ಥಳ ಸಬ್ ಇನ್ಸ್‌ಪೆಕ್ಟರ್ ಸಮರ್ಥ ಆರ್ ಗಾಣಿಗೇರ ನೇತೃತ್ವದಲ್ಲಿ ಖಚಿತ ಮಾಹಿತಿ ಮೇರೆಗೆ KA-19-MC-5862 ಸ್ವೀಪ್ಟ್ ಕಾರಿನಲ್ಲಿ ನ.2 ರಂದು 7:30 ಕ್ಕೆ ತಡೆದು ನಿಲ್ಲಿಸಿ ಪರಿಶೀಲನೆ ಮಾಡಿದಾಗ ಅಕ್ರಮವಾಗಿ ಮೂರು ದನಗಳನ್ನು ಸಾಗಾಟ ಮಾಡುತ್ತಿದ್ದನ್ನು ಪತ್ತೆ ಹಚ್ಚಿದ್ದಾರೆ. ಸ್ವೀಪ್ಟ್ ಕಾರಿನಲ್ಲಿದ್ದ ಉಳ್ಳಾಲ ತಾಲೂಕಿನ ಸಜಿಪ ಪಡು ಗ್ರಾಮದ ಕೋಟೆಕನಿ ನಿವಾಸಿ ಮಹಮ್ಮದ್ ಸಿನಾನ್ (25) ಮತ್ತು ಉಳ್ಳಾಲ ತಾಲೂಕಿನ...

ಜಮೀಯ್ಯತುಲ್ ಪಲಾಹ್ ಬೆಳ್ತಂಗಡಿ ವತಿಯಿಂದ ಪ್ರತಿಭಾ ಪುರಸ್ಕಾರ, 3 ಲಕ್ಷ‌ ರೂ. ವಿದ್ಯಾರ್ಥಿವೇತನ ವಿತರಣೆ

0

ಬೆಳ್ತಂಗಡಿ; ವಿದ್ಯಾರ್ಥಿಯು ಕಲಿಕಾ ವೇಳೆಯಲ್ಲಿ ಪುಸ್ತಕ ಮತ್ತು ಬೋರ್ಡ್‌ನೆಡೆಗೆ ತೀಕ್ಷ್ಣವಾದ ಕಣ್ಣು, ಗ್ಯಾಹ್ಯವಾದ ಕಿವಿ ಮತ್ತು ಕೇಂದ್ರೀಕರಿಸುವ ಮಿದುಳಿನ ಮೂಲಕ ಪೂರ್ಣವಾಗಿ ಅರ್ಪಿಸಿಕೊಂಡು ಅಧ್ಯಯನ ಮಾಡಿದರೆ ಯಶಸ್ಸು ಖಂಡಿತಾ. ಆದ್ದರಿಂದ ಯಾವತ್ತೂ ಕೂಡ ಮೊಬೈಲ್ ಮೂಲಕ ರೀಲ್ಸ್‌ಗಳ ದಾಸರಾಗದೆ ಚೆನ್ನಾಗಿ ಓದಿ ರಿಯಲ್ ಹೀರೋಗಳಾಗಿ ಎಂದು ಖ್ಯಾತ ಸಂಪನ್ಮೂಲ ವ್ಯಕ್ತಿ, ಪುತ್ತೂರು ಕೊಂಬೆಟ್ಟು ಪ.ಪೂ ಕಾಲೇಜು ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ ಹೇಳಿದರು. ಜಮೀಯ್ಯತುಲ್ ಫಲಾಹ್ ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ಹಮ್ಮಿಕೊಂಡಿದ್ದ ವಿದ್ಯಾರ್ಥಿ ವೇತನ ವಿತರಣೆ, ಪ್ರತಿಭಾ ಪುರಸ್ಕಾರ ಹಾಗೂ ಮಾಹಿತಿ ಸಂಪನ್ಮೂಲ...

ಅಪಘಾತದಲ್ಲಿ ಮೃತಪಟ್ಟ ನಾವೂರು ಗ್ರಾಮದ ಚಂದ್ರಹಾಸ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

0

ಬೆಳ್ತಂಗಡಿ: ಇತ್ತೀಚೆಗೆ ಅಪಘಾತದಲ್ಲಿ ಮೃತರಾದ ನಾವೂರು ಗ್ರಾಮದ ಚಂದ್ರಹಾಸ ಅವರ ಮನೆಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ‌ ಭೇಟಿ ನೀಡಿ ಕುಟುಂಬಸ್ಥ ರೊಂದಿಗೆ ಮಾತುಕತೆ ನಡೆಸಿ ಅವರಿಗೆ ಧೈರ್ಯ ತುಂಬಿದರು. ಸ್ಥಳೀಯ ಮುಖಂಡರುಗಳು ಉಪಸ್ಥಿತರಿದ್ದರು. ಇತ್ತೀಚೆಗೆ ಧರ್ಮಸ್ಥಳ ಕನ್ಯಾಡಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಹಿ ಗಾಯಗೊಂಡ ಚಂದ್ರಹಾಸ ಅವರು ಮೃತಪಟ್ಟಿದ್ದರು.

ಧರ್ಮಸ್ಥಳ;  ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸವರ್ಗ

0

ಧರ್ಮಸ್ಥಳ : ಧರ್ಮಸ್ಥಳ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ ನವೆಂಬರ್ 01 ರಂದು ನೆರವೇರಿತು. ಧರ್ಮಸ್ಥಳ ಬಿಜೆಪಿ ಹಿರಿಯ ಕಾರ್ಯಕರ್ತರಾಗಿರುವ ರಾಜೇಂದ್ರ ಅಜ್ರಿಯವರು ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿದರು.ಬೆಳ್ತಂಗಡಿ ಬಿಜೆಪಿ ಮಂಡಲಾಧ್ಯಕ್ಷರಾದ ಶ್ರೀನಿವಾಸ್ ರಾವ್  ಮಾತನಾಡಿ ಮಾಹಿತಿ ನೀಡಿದರು.ನಮ್ಮ ವೈಚಾರಿಕತೆ ಮತ್ತು ಪಂಚ ಪರಿವರ್ತನೆ ವಿಷಯವನ್ನು ನಂದಕುಮಾರ್,ಬೂತ್ ಸಂಘಟನೆ ಮತ್ತು ಸ್ಥಳೀಯ ಆಡಳಿತದೊಂದಿಗೆ ನಮ್ಮ ಪಾತ್ರ ಈ ವಿಷಯವನ್ನು ಸೀತಾರಾಮ್ ಬೆಳಾಲು, ವಿಕಸಿತ ಭಾರತದ ಅಮೃತ ಕಾಲದಲ್ಲಿ ನಮ್ಮ ಸಕ್ರಿಯತೆ ವಿಷಯವನ್ನು ವೃಷಾಂಕ್ ಖಾಡಿಲ್ಕರ್ ಅರಸಿನಮಕ್ಕಿ ಬೈಠಕ್ ನೀಡಿದರು.ಸಮಾರೋಪ ಸಮಾರಂಭದಲ್ಲಿ...

ಸರಕಾರವೇ ರೈತರ ಭಕ್ಷಣೆ ಮಾಡುವುದು ಅತಿರೇಕದ ವರ್ತನೆ; ಒಕ್ಕಲೆಬ್ಬಿಸಿದ ಕುಟುಂಬಕ್ಕೆ ಕೂಡಲೇ ಪರಿಹಾರ ಒದಗಿಸಿ ಸಿಪಿಐಎಂ ಒತ್ತಾಯ

0

ಬೆಳ್ತಂಗಡಿ; ಕುದುರೇಮುಖ ರಾಷ್ಟ್ರೀಯ ಉದ್ಯಾನವನದಿಂದ ಅರಣ್ಯವಾಸಿ ಬಡ ರೈತ ಕುಟುಂಬಗಳ ಒಕ್ಕಲೆಬ್ಬಿಸುವ ಪ್ರಕ್ರಿಯೆಗೆ ಅರಣ್ಯ ಇಲಾಖೆ ಮುಂದಾಗಿದ್ದು ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಕುದುರೇಮುಖ ರಾಷ್ಟ್ರೀಯ ಉದ್ಯಾನವನದೊಳಗಿನ ನಿವಾಸಿ ಪಿ.ಟಿ ಜೋಸೆಫ್ ಹಾಗೂ ಅವರ ಕುಟುಂಬವನ್ನು ಅಕ್ಟೋಬರ್ 31ರಂದು ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಅಧಿಕಾರಿಗಳು ಪೋಲೀಸ್ ಬೆದರಿಕೆಯೊಂದಿಗೆ ಒಕ್ಕೆಲಬ್ಬಿಸಿದ್ದು ಅವರ ಕೃಷಿಯನ್ನು ಮತ್ತು ವಾಸದ ಮನೆಯನ್ನು ಸಂಪೂರ್ಣವಾಗಿ ನಾಶ ಪಡಿಸಿರುವುದು ಅತ್ಯಂತ ಖಂಡನೀಯ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಸಿಪಿಐಎಂ ಬೆಳ್ತಂಗಡಿ ತಾಲೂಕು ಕಾರ್ಯದರ್ಶಿ ಬಿ.ಎಂ.ಭಟ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.ಕಳೆದ ಐದು...

ಧರ್ಮಸ್ಥಳ ಪ್ರಕರಣ ಎಸ್.ಐ.ಟಿ ತನಿಖೆ; ತಾಳೆಯಾಗದ ಗ್ರಾ.ಪಂ ಹಾಗೂ ಪೊಲೀಸ್ ಠಾಣೆಯ ಮಾಹಿತಿಗಳು

0

ಬೆಳ್ತಂಗಡಿ: ಒಂದೆಡೆ ಎಸ್.ಐ.ಟಿ ತನಿಖೆಗೆ ಸಂಬಂದಿಸಿದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ಬಂದಿದ್ಧರೆ ಮತ್ತೊಂದೆಡೆಯಿಂದ ತನಿಖೆಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಗಳು ಲಭ್ಯವಾಗುತ್ತಿದ್ದು ಮೃತದೇಹಗಳನ್ನು ಹೂತು ಹಾಕಿರುವ ಬಗ್ಗೆ ಧರ್ಮಸ್ಥಳ ಗ್ರಾಮಪಂಚಾಯತಿನಿಂದ ಪಡೆದಿರುವ ಮಾಹಿತಗಳು ಹಾಗೂ ಪೊಲೀಸ್ ಠಾಣೆಯಿಂದ ಲಭಿಸುತ್ತಿರುವ ಮಾಹಿತಿಗಳು ತಾಳೆಯಾಗುತ್ತಿಲ್ಲ ಎಂಬ ಮಾಹಿತಿಗಳು ಎಸ್.ಐ.ಟಿ ಮೂಲದಿಂದ ವ್ಯಕ್ತವಾಗುತ್ತಿದೆ.ಆರಂಭದಲ್ಲಿ ಹಲವಾರು ಪ್ರಕರಣಗಳಿಗೆ ಸಂಬಂಧಿಸಿದಂತೆ ಮಾಹಿತಿಗಳು ಪೊಲೀಸ್ ಇಲಾಖೆಯಿಂದ ಲಭ್ಯವಾಗಿರಲಿಲ್ಲ. ಸಾಕಷ್ಟು ಹುಡುಕಾಟದ ಬಳಿಕ ಒಂದಿಷ್ಟು ದಾಖಲೆಗಳು ಎಸ್.ಐ.ಟಿ ಗೆ ಲಭಿಸಿದ್ದರೂ ಇನ್ನೂ ಕೆಲವು ಪ್ರಕರಣಗಳ ಮಾಹಿತಿಗಳು ಎಸ್.ಐ.ಟಿ ಗೆ ಲಭ್ಯವಾಗಿಲ್ಲ ಎಂದು ಹಿರಿಯ ಅಧಿಕಾರಿಗಳ ಮೂಲಗಳಿಂದ...

ಒಕ್ಕಲೆಬ್ಬಿಸಿದ ಕ್ರಮಕ್ಕೆ ಬೆಳ್ತಂಗಡಿ ಯ ಕರ್ನಾಟಕ ಸೀರೋ ಮಲಬಾರ್ ಕೆಥೋಲಿಕ್ ಅಸೋಸಿಯೇಷನ್ ರಿ.(ಕೆ ಎಸ್ ಎಂ ಸಿ ಏ) ಖಂಡನೆ

0

ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಜೋಸೆಫ್ ಕುಟುಂಬ ಕಳೆದ 50 ಕ್ಕಿಂತ ಹೆಚ್ಚು ವರ್ಷಗಳು ವಾಸಿಸುತ್ತಿದ್ದು ಸರಕಾರ ಸಾಗುವಳಿಚೀಟಿ ನೀಡಿದ ಕೃಷಿ ಸ್ಥಳವನ್ನು ಅರಣ್ಯ ಪ್ರದೇಶ ಎಂಬ ಹೆಸರಿನಲ್ಲಿ ಏಕಾ ಏಕಿ ಒಕ್ಕಲೆಬ್ಬಿಸುವ ಕ್ರಮ ಕೃಷಿಕರಿಗೆ ಮಾಡಿದ ಅನ್ಯಾಯ ಎಂದು ಕೆ ಎಸ್ ಎಂ ಸಿ ಏ ಕೇಂದ್ರ ಸಮಿತಿ ಆರೋಪಿಸಿದೆ. ಬಿಟ್ಟಿ ನೆಡುನಿಲಂ ರವರ ಅಧ್ಯಕ್ಷತೆಯಲ್ಲಿ ತುರ್ತು ಸಭೆ ಸೇರಿ ಈ ಖಂಡನಾ ನಿರ್ಣಯವನ್ನು ಮಾಡಿದೆ. ನಿರ್ದೇಶಕರಾದ ರೆ ಫಾ ಆದರ್ಶ್ ಜೋಸೆಫ್ ಮಾತನಾಡಿ ಬಡ ಕೃಷಿಕರನ್ನು ಒಕ್ಕಲೆಬ್ಬಿಸುವ ಸರಕಾರದ ಇಂಥ...