ಬೆಳ್ತಂಗಡಿ : ಧರ್ಮಸ್ಥಳದಲ್ಲಿ ಮತ್ತು ಬರುವ ಜ್ಯೂಸ್ ನೀಡಿ ವೃದ್ಧೆಯಕೈಯಿಂದ‌ 10 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

0

ಬೆಳ್ತಂಗಡಿ : ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ವೃದ್ದೆಗೆ ಮತ್ತು ಬರುವ ಲಡ್ಡು ಮತ್ತು ಜ್ಯೂಸ್ ನೀಡಿ ವೃದ್ಧೆಯನ್ನು ಅಸ್ವಸ್ಥರನ್ನಾಗಿಸಿ ಬಳಿಕ ಹತ್ತು ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಎಗರಿಸಿ ಪರಾರಿಯಾಗಿರುವ ಘಟನೆ ನಡೆದಿದ್ದು ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬೆಂಗಳೂರು ಜೆ.ಪಿ.ನಗರ ನಿವಾಸಿಯಾಗಿರುವ ಶ್ರೀಮತಿ ಪ್ರೇಮಾ.ಕೆ (70) ರವರು ಮೇ.23 ರಂದು ಬೆಂಗಳೂರಿನಿಂದ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿರುವ ತನ್ನ ಚಿಕ್ಕಮ್ಮನ ಮಗಳ ಮನೆಗೆ ಪೂಜಾ ಕಾರ್ಯಕ್ರಮಕ್ಕೆ ಬಂದವರು. ಬಳಿಕ ಮೇ.25 ರಂದು ಮಧ್ಯಾಹ್ನ ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನಕ್ಕೆ ಬಂದಿದ್ದರು. ದೇವರ...

ಬೆಳ್ತಂಗಡಿ ತಾಪಂನಲ್ಲಿ ಮಳೆಗಾಲದ ವಿಪತ್ತು ನಿರ್ವಹಣೆ ಕುರಿತು ಪೂರ್ವಭಾವಿ ಸಭೆ

0

ಬೆಳ್ತಂಗಡಿ;ಮುಂಗಾರು ಮಳೆಯ ಪೂರ್ವ ಸಿದ್ಧತೆ ಹಾಗೂ ಪ್ರಾಕೃತಿಕ ವಿಕೋಪದ ತುರ್ತು ಪರಿಹಾರೋಪಾಯಗಳನ್ನು ಕೈಗೊಳ್ಳುವ ಕುರಿತು ಬೆಳ್ತಂಗಡಿ ತಾಲೂಕು ಪಂಚಾಯಿತಿಯಲ್ಲಿ ಸೋಮವಾರ ಸಭೆ ನಡೆಯಿತು.ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ತಹಸೀಲ್ದಾರ್ ಪೃಥ್ವಿ ಸಾನಿಕಂ ಮಾತನಾಡಿ ಮನೆಗಳ ಸಮೀಪ ಮಣ್ಣು ಅಗೆಯುವುದನ್ನು ಮಾಡಬಾರದು. ನದಿಗಳತ್ತ ತೆರಳುವ ಜನರು ಹಾಗೂ ನದಿ ಪರಿಸರದಲ್ಲಿ ವಾಸಿಸುವವರು ಹೆಚ್ಚಿನ ಮುಂಜಾಗ್ರತೆಯನ್ನು ಕೈಗೊಳ್ಳಬೇಕು. ಯಾವುದೇ ರೀತಿಯ ಸಮಸ್ಯೆಗಳು ಕಂಡುಬಂದಲ್ಲಿ ತಕ್ಷಣ ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಬೇಕು. ಜನರು ಯಾವುದೇ ರೀತಿಯ ಅಪಾಯಗಳನ್ನು ಆಹ್ವಾನಿಸುವ ಕೆಲಸಗಳನ್ನು ಮಾಡಬಾರದು ಎಂದು ಸೂಚಿಸಿದರು.ತಾಲೂಕು ಆರೋಗ್ಯ ಅಧಿಕಾರಿ ಡಾ....

ಮಂಗಳೂರು ಪೊಲೀಸ್ ಸಿಬ್ಬಂದಿ ಕೊಲೆಯತ್ನ; ಅರಸಿನಮಕ್ಕಿನಿವಾಸಿ ಸಚಿನ್ ಹಾಗೂ ನೆಲ್ಯಾಡಿಯ ಚಂದನ್ ಬಂಧನ

0

ಮಂಗಳೂರು: ರಾತ್ರಿ ಬೀಟ್ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಸಿಮೆಂಟ್ ಶೀಟ್ ತುಂಡಿನಿಂದ ಹಲ್ಲೆ ನಡೆಸಿ ಕೊಲೆ ಯತ್ನ ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಕೇರಳ ರಾಜ್ಯದ ಕಾಂಳ್‌ಗಾಡ್ ಪ್ರದೇಶದಲ್ಲಿ ಬಂಧಿಸಿ ಉರ್ವ ಪೊಲೀಸ್‌ ಠಾಣೆಗೆ ಹಸ್ತಾಂತರಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬೆಳ್ತಂಗಡಿ ತಾಲೂಕು ಅರಸಿನಮಕ್ಕಿ ಹತ್ಯಡ್ಕ ನಿವಾಸಿ ಸಚಿನ್ ಕೆ ಆರ್(24) ಹಾಗೂ ಪುತ್ತೂರು ತಾಲೂಕು ನೆಲ್ಯಾಡಿ ಮಣ್ಣಗುಂಡಿ ನಿವಾಸಿ ಚಂದನ್(24) ಎಂದು ಗುರುತಿಸಲಾಗಿದೆ. ಮಂಗಳೂರು ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕೋಡಿಕಲ್ ನಾರಾಯಣಗುರು ಸಮುದಾಯ ಭವನ ರಸ್ತೆಯ ಎದುರು...

ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಷರತ್ತು ಬದ್ದ ಜಾಮೀನು ನೀಡಿದ ಉಚ್ಚ ನ್ಯಾಯಾಲಯ

0

ಬೆಳ್ತಂಗಡಿ; ಯಕ್ಷಗಾನ ಕಲಾವಿದ ದಿನೇಶ್ ಕೊಡಪದವು ರವರ ತಾಯಿ ಲೀಲಾವತಿ ಯವರು ಸಲ್ಲಿಸಿದ್ದ ದೂರಿನ ಮೇಲಿನ ಬಂಧನದ ಬೀತಿಯಲ್ಲಿದ್ದಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ನಿರೀಕ್ಷಣ ಜಾಮೀನು ಅರ್ಜಿ ವಿಚಾರಣೆ ನಡೆಸಿದ ರಾಜ್ಯ ಉಚ್ಚನ್ಯಾಯಾಲಯ ಮಹೇಶ್ ಶೆಟ್ಟಿ ತಿಮರೋಡಿ ಅವರ ಮಾತಿನ ಬಗ್ಗೆ ಕಟುವಾದ ಟೀಕೆ ಮಾಡಿದ್ದು ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ  ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ.ಪ್ರಕರಣದ ವಿಚಾರಣೆ ವೇಳೆ  ನ್ಯಾಯಾಲಯಶ್ರೀ ವೀರೇಂದ್ರ ಹೆಗ್ಗಡೆಯವರ ಬಗ್ಗೆ ಮಹೇಶ್ ತಿಮರೋಡಿ ಆಡಿಯೋ ದಲ್ಲಿ ಆಡಿದ ಮಾತುಗಳ ಬಗ್ಗೆ ಉಲ್ಲೇಖಿಸಿ‌ ಅದರ ಬಗ್ಗೆ ಕಠಿಣ ಪದಗಳಲ್ಲಿ...

ನಾರಾವಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗೆ ನೂತನ ಕಟ್ಟಡ ನಿರ್ಮಾಣಕ್ಕೆ ರೂ.2 ಕೋಟಿ ಅನುದಾನ ಬಿಡುಗಡೆ; ಹರೀಶ್ ಪೂಂಜ

0

ಬೆಳ್ತಂಗಡಿ:ಬೆಳ್ತಂಗಡಿ ತಾಲೂಕಿನ ನಾರಾವಿಯಲ್ಲಿರುವ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗೆ ನೂತನ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ರಾಜ್ಯ ಸರ್ಕಾರವು ರೂ.2 ಕೋಟಿ ಅನುದಾನವನ್ನು ಮಂಜೂರು ಮಾಡಿ ಬಿಡುಗಡೆಗೊಳಿಸಿದೆ ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ. ಈ ವಸತಿ ಶಾಲೆಯ ನೂತನ ಕಟ್ಟಡ ನಿರ್ಮಾಣದ ಅಗತ್ಯತೆಯನ್ನು ಮನಗಂಡು, ಸಂಬಂಧಿತ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಶಾಲೆಯಲ್ಲಿನ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿ, ಮೂಲಸೌಕರ್ಯಗಳ ಕೊರತೆ ಹಾಗೂ ಹೆಚ್ಚುತ್ತಿರುವ ಅಗತ್ಯತೆಯನ್ನು ಪರಿಗಣಿಸಿದ ರಾಜ್ಯ ಸರ್ಕಾರವು ಕಾಮಗಾರಿಗೆ ಅನುಮೋದನೆ ನೀಡಿ ರೂ.2.00...

ಧರ್ಮಸ್ಥಳದಲ್ಲಿ ಪತ್ತನಾಜೆ ಉತ್ಸವ ಸಮಾಪ್ತಿ: ವಿಶೇಷ ಪೂಜೆಗಳು ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

0

ಧರ್ಮಸ್ಥಳ; ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪತ್ತನಾಜೆ ಪ್ರಯುಕ್ತ ಸೋಮವಾರ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿಶೇಷ ರಂಗಪೂಜೆ ನೆರವೇರಿತು. ಬಳಿಕ ಶ್ರೀ ದೇವರ ಉತ್ಸವಮೂರ್ತಿಯ ಬಲಿ ಉತ್ಸವ, ವಸಂತ ಪೂಜೆ, ಅಷ್ಟಾವಧಾನ ಸೇವೆ ಹಾಗೂ ಧ್ವಜಮರ ಅವರೋಹಣ ವಿಧಿವಿಧಾನಗಳೊಂದಿಗೆ ಉತ್ಸವ ಮೂರ್ತಿಯು ಗರ್ಭಗುಡಿಗೆ ಪ್ರವೇಶಿಸುವ ಮೂಲಕ ಪ್ರಸಕ್ತ ಸಾಲಿನ ವಾರ್ಷಿಕ ವಿಶೇಷ ಸೇವೆಗಳು ಮತ್ತು ಉತ್ಸವಗಳು ಸಮಾಪ್ತಿಗೊಂಡವುಕಾರ್ತಿಕ ಮಾಸದ ದೀಪೋತ್ಸವದೊಂದಿಗೆ ಎಂದಿನಂತೆ ವಿಶೇಷ ಸೇವೆಗಳು ಹಾಗೂ ಉತ್ಸವಗಳು ಪುನರಾರಂಭಗೊಳ್ಳಲಿವೆ. ಸೋಮವಾರದ ಕಾರಣ ಕ್ಷೇತ್ರದಲ್ಲಿ ಭಕ್ತರ ದಟ್ಟಣೆ ಹೆಚ್ಚಾಗಿದ್ದು, ಊರು-ಪರಊರುಗಳಿಂದ ಆಗಮಿಸಿದ ಸಾವಿರಾರು ಭಕ್ತರು...

ಬೆಳ್ತಂಗಡಿ : ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು

0

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ ಬಳಿ 2012 ರಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿ ಜೈಲಿಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳ್ತಂಗಡಿ ನ್ಯಾಯಲಯCC No.3221/2018 ಕಲಂ- 379..201 IPC & 98 KP ACT ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದ ವಾರಂಟ್ ಆರೋಪಿ ಆಂದ್ರಪ್ರದೇಶ ರಾಜ್ಯದ ಸತ್ಯಸಾಯಿ ಜಿಲ್ಲೆಯ ರೊಲ್ಲ ಗ್ರಾಮದ ನಿವಾಸಿ  ರಂಗನಾಥ್(36) ಎಂಬಾತ ಕಳೆದ ಸುಮಾರು 10 ವರ್ಷಗಳಿಂದ ತಲೆ ಆರೋಪಿಯನ್ನು ಮೇ.25 ರಂದು ಆಂಧ್ರಪ್ರದೇಶದ ಸತ್ಯಶಾಯಿ...

ಬೆಳ್ತಂಗಡಿ : ಮರಕ್ಕೆ ನೇಣುಬಿಗಿದು ವೃದ್ಧ ಆತ್ಮಹತ್ಯೆ

0

ಬೆಳ್ತಂಗಡಿ : ವೃದ್ಧರೊಬ್ಬರು ಮನೆಯ ಹಿಂಬಾಗದ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯ ಕಡಿರುದ್ಯಾವರದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಎರ್ಮಾಲ್ ಪಲ್ಕೆ ನಿವಾಸಿ ಕರಿಯ(63) ಎಂಬವರು ಮೇ.26 ರಂದು ಬೆಳಗ್ಗೆ  ಮನೆಯಲ್ಲಿ ಯಾರು ಇಲ್ಲದ ವೇಳೆ ತನ್ನ ಮನೆಯ ಹಿಂಭಾಗದ ಮರಕ್ಕೆ ನೈಲಾನ್ ಹಗ್ಗದಿಂದ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಬೆಳ್ತಂಗಡಿ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.‌ ಈ ಬಗ್ಗೆ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ; ಕಾರು ಬೈಕ್ ನಡುವೆ ಅಪಘಾತ ಯುವ ಫೋಟೋ ಗ್ರಾಫರ್ ಮೃತ್ಯು

0

ಬೆಳ್ತಂಗಡಿ: ಕಾರು ಮತ್ತು ಬೈಕ್ ನಡುವೆ ಸೋಮಂತಡ್ಕ ಅಗರಿ ಕ್ರಾಸ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭಿರವಾಗಿ ಗಾಯಗೊಂಡಿದ್ದ ಯುವ ಪೋಟೋಗ್ರಾಫ‌ರ್ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಳೆಂಜ ಅಶ್ವಥಡಿ ಮನೆಯ ನಿವಾಸಿ ನೋಣಯ್ಯ ಗೌಡ ಅವರ ಪುತ್ರ, ಯುವ ಪೋಟೋಗ್ರಾಫ‌ರ್ ಗಣೇಶ್ ಗೌಡ (36ವ ) ಮೃತ ವ್ಯಕ್ತಿಯಾಗಿದ್ದಾರೆ.ಇವರು ಮೇ 24 ರಂದು ಉಜಿರೆಯಿಂದ ಕಕ್ಕಿಂಜೆ ಕಡೆಗೆ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಎದುರಿನಿಂದ‌ ಬಂದ ಕಾರಿಗೆ ಡಿಕ್ಕಿಹೊಡೆದಿದ್ದು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದರು ಕೂಡಲೇ ಅವರನ್ನು ಮಂಗಳೂರಿನ ಆಸ್ಪತ್ರೆಗೆ...

ಬೆಳ್ತಂಗಡಿ; ಮದ್ದಡ್ಕದಲ್ಲಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ

0

ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ ಕಾರಿನ ಡೋರ್ ಲಾಕ್ ಆಗಿ ಮಗು ಕಾರಿನೊಳಗೆ ಸಿಕ್ಕಾಕಿಗೊಂಡ ಘಟನೆ ಮೆ 25 ರoದು ನಡೆದಿದೆ ಕಾರಿನ ಡ್ರೈವರ್ ಕಾರು ನಿಲ್ಲಿಸಿ ಅಂಗಡಿಗೆ ತೆರಳಿದ ಸಂದರ್ಭದಲ್ಲಿ ಕಾರಿನ ಲಾಕ್ ಆಟೋಮೆಟಿಕ್ ಆಗಿ ಲಾಕ್ ಆಗಿ ಮಗು ಕಾರಿನೊಳಗೆ ಸಿಲುಕಿಕೊಂಡಿತ್ತು. ಕಾರಿನ ಡೋರು ತೆರೆಯಲು ಸಾರ್ವಜನಿಕರು ವಿವಿಧ ರೀತಿಯಲ್ಲಿ ಪ್ರಯತ್ನ ಪಟ್ಟರು ಡೋರ್ ತೆರೆಯಲಾಗದೆ ಕೊನೆಗೂ ಕಾರಿನ ಗ್ಲಾಸನ್ನು ಒಡೆದು ಮಗುವನ್ನು ರಕ್ಷಿಸಲಾಯಿತು.