ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಶಾಸಕ ಹರೀಶ್ ಪೂಂಜ ಅವರಿಂದ ಅಭಿನಂದನೆ
ಬೆಳ್ತಂಗಡಿ; ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ 2026-2027ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ರಾಜಕೇಸರಿ ಸೇವಾ ಟ್ರಸ್ಟ್ (ರಿ) ಇದರ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಹಾಗೂ ಸದಸ್ಯರಿಗೆ, ಉರಗ ಪ್ರೇಮಿ ಉಜಿರೆಯ ಸ್ನೇಕ್ ಜೋಯಿ, ಪ್ರರ್ತಕರ್ತರಾದ ಮನೋಹರ ಬಳಂಜ, ದೈವ ನರ್ತಕರಾದ ಬೇಬಿ ಪರವ, ಯಕ್ಷಗಾನ ಕಲಾವಿದರಾದ ಸುಂದರ ಬಂಗಾಡಿ ಇವರನ್ನು ಶಾಸಕರಾದ ಶ್ರೀ ಹರೀಶ್ ಪೂಂಜರವರು ಅವರ ಗೃಹ ಮಿಥಿಲಾದಲ್ಲಿ ಅಭಿನಂದಿಸಿದರು.
ಬೆಳ್ತಂಗಡಿ: ಉಪ್ಪಿನಂಗಡಿ ರಸ್ತೆ ದುರಸ್ತಿಗೆ ಒತ್ತಾಯಿಸಿ SDPI ಪ್ರತಿಭಟನೆ; ಗುಂಡಿಮಯ ರಸ್ತೆ; ಸರ್ಕಾರಕ್ಕೇನು ಕಣ್ಣಿಲ್ಲವೇ? ಶಾಸಕ ಹರೀಶ್ ಪೂಂಜಾ ವಿರುದ್ಧ ಅನ್ವರ್ ಸಾದತ್ ವಾಗ್ದಾಳಿ
ಬೆಳ್ತಂಗಡಿ, ನ.2: ಹಲವು ವರ್ಷಗಳಿಂದ ಹದಗೆಟ್ಟಿರುವ ಗುರುವಾಯನಕೆರೆ ಉಪ್ಪಿನಂಗಡಿ ರಾಜ್ಯ ಹೆದ್ದಾರಿಯನ್ನು ಶೀಘ್ರ ಮರುಡಾಮರೀಕರಣಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಸೋಮವಾರ ಕಲ್ಲೇರಿ ಜಂಕ್ಷನ್‌ನಲ್ಲಿ ಬೃಹತ್ ಸಾರ್ವಜನಿಕ ಪ್ರತಿಭಟನಾ ಧರಣಿ ನಡೆಯಿತು. ಪ್ರತಿಭಟನೆಯಲ್ಲಿ ಪಕ್ಷದ ನಾಯಕರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಸ್ತೆ ದುಸ್ಥಿತಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪಕ್ಷದ ಬೆಳ್ತಂಗಡಿ ಕ್ಷೇತ್ರಾಧ್ಯಕ್ಷ ಅಕ್ಬರ್ ಬೆಳ್ತಂಗಡಿ ಅಧ್ಯಕ್ಷತೆ ವಹಿಸಿದ್ದರು. ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಅಲ್ಫೋನ್ಸ್...
ಬೆಳ್ತಂಗಡಿ : ಸೌಜನ್ಯ ಮೃತದೇಹ ಸಿಕ್ಕಿದ ಸ್ಥಳಕ್ಕೆ ಎಸ್ಐಟಿ ಮುಖ್ಯಸ್ಥರ ಭೇಟಿ
ಬೆಳ್ತಂಗಡಿ : ಧರ್ಮಸ್ಥಳ ದಲ್ಲಿ ವಿದ್ಯಾರ್ಥಿನಿ ಕು.ಸೌಜನ್ಯ ಕೊಲೆಯಾಗಿ ಮೃತದೇಹ ಸಿಕ್ಕ ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ ಸಮೀಪ ಮಣ್ಣಸಂಕದ ಸ್ಥಳಕ್ಕೆ ನ.2 ರಂದು ಎಸ್ಐಟಿ ಮುಖ್ಯಸ್ಥ ಚೇತನ್ ಸಿಂಗ್ ರಾಥೋಡ್‌ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.ತಂಡದಲ್ಲಿ ಎಸ್.ಐ.ಟಿ ಅಧಿಕಾರಿಗಳಾದ ಐಪಿಎಸ್ ನಿಶಾ ಜೆಮ್ಸ್, ಎಸಿಪಿ ಮನೋಜ್ ಕುಮಾರ್ ನಾಯಕ್ ಇದ್ದರು. ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು ಸೌಜನ್ಯ ಮೃತದೇಹದೊರೆತ ಸ್ಥಳದಲ್ಲಿ ಪರಿಶೀಲನೆ ನಡೆಸಿ ಮಾಹಿತಿಗಳನ್ನು ಕಲೆ ಹಾಕಿದರು.
ಧರ್ಮಸ್ಥಳ ಸೌಜನ್ಯ ಪ್ರಕರಣ ತನಿಖಾ ತಂಡದ ಮುಖ್ಯಸ್ಥ ಚೇತನ್ ಸಿಂಗ್ ರಾಥೋಡ್ ಎಸ್.ಐ.ಟಿ ಕಚೇರಿಗೆ ಭೇಟಿ
ಮಂಗಳೂರು: ಧರ್ಮಸ್ಥಳ ಸೌಜನ್ಯಾ ಕೊಲೆ ಹಾಗೂ ಅತ್ಯಾಚಾರ ಮರುತನಿಖೆಗೆ ರಚನೆಯಾಗಿರುವ ಎಸ್‌ಐಟಿ ತಂಡದ ನೂತನ ಮುಖ್ಯಸ್ಥರಾಗಿ ನೇಮಕಗೊಂಡಿರುವ ಚೇತನ್ ಸಿಂಗ್ ರಾಥೋಡ್ ಅವರು ಮೊದಲ ಬಾರಿಗೆ ಮಂಗಳೂರಿನ ಎಸ್‌ಐಟಿ ಕಚೇರಿಗೆ ಆಗಮಿಸಿದ್ದಾರೆ. ಈ ವೇಳೆ ಎಸ್‌ಐಟಿ ತಂಡದ ಸದಸ್ಯರಾದ ಸುಧೀರ್ ಕುಮಾರ್ ರೆಡ್ಡಿ, ನಿಶಾ ಜೇಮ್ಸ್, ಲೋಕೇಶ್ ಜಗಲ್ ಸಾರ್ ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಬೆಳ್ತಂಗಡಿ: ತಾಲೂಕಿನ ಏಳು ಮಂದಿ ಸಾಧಕರು ಹಾಗೂ ಎರಡು ಸಂಘಟನೆಗಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
ಬೆಳ್ತಂಗಡಿ: ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ತಾಲೂಕಿನ ಏಳು ಮಂದಿ ಸಾಧಕರು ಹಾಗೂ ಎರಡು ಸಂಘ-ಸಂಸ್ಥೆಗಳು ಸೇರಿದಂತೆ ಒಟ್ಟು ಒಂಬತ್ತು ಮಂದಿಗೆ ಈ ಬಾರಿಯ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.ಪತ್ರಿಕೋದ್ಯಮ, ಸಮಾಜ ಸೇವೆ, ಕಲಾ ಕ್ಷೇತ್ರ, ಶಿಕ್ಷಣ, ಜಾನಪದ ಹಾಗೂ ಸಾಮಾಜಿಕ ಚಟುವಟಿಕೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮದೇ ಆದ ವಿಶಿಷ್ಟ ಕೊಡುಗೆ ನೀಡಿರುವ ತಾಲೂಕಿನ ಸಾಧಕರನ್ನು ಗುರುತಿಸಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.ಪತ್ರಿಕೋದ್ಯಮ ಕ್ಷೇತ್ರದಲ್ಲಿ ವಿಜಯವಾಣಿ ದಿನಪತ್ರಿಕೆಯ ಬೆಳ್ತಂಗಡಿ ವರದಿಗಾರ ಹಾಗೂ ಬೆಳ್ತಂಗಡಿ ತಾಲೂಕು ಪತ್ರಕರ್ತರ...
ನ 2 ಸೋಮವಾರ (ಇಂದು) ಶಿಶಿಲ ಬೈರಾಪುರ ರಸ್ತೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
ಬೆಳ್ತಂಗಡಿ: ಬಹಳಷ್ಟು ವರ್ಷಗಳ ಬೇಡಿಕೆಯಾದ ಶಿಶಿಲ-ಬೈರಾಪುರ ರಸ್ತೆ ಅಭಿವೃದ್ಧಿ ಹಕ್ಕೋತ್ತಾಯ ಸಮಿತಿ ಶಿಶಿಲ ಇದರ ವತಿಯಿಂದ ನ.2ರಂದು ಸೋಮವಾರ ಅರಸಿನಮಕ್ಕಿಯಲ್ಲಿ ಶಿಶಿಲ-ಬೈರಪುರ ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ಬೃಹತ್ ಹಕ್ಕೋತ್ತಾಯ ಸಮಾವೇಶ ಹಮ್ಮಿಕೊಳ್ಳಲಾಗಿದೆ, ಸಚಿವರು, ಸಂಸದರು, ಶಾಸಕರು ಸೇರಿದಂತೆ ವಿವಿಧ ಪಕ್ಷಗಳ ನಾಯಕರು ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್, ಸಂಸದ ಬ್ರಿಜೇಶ್ ಚೌಟ, ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಹರೀಶ್ ಪೂಂಜ, ಕೆಪಿಸಿಸಿ ಜಿಲ್ಲಾ ಅಧ್ಯಕ್ಷ ಪದ್ಮರಾಜ್ ಆರ್.ಪೂಜಾರಿ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್...
ಬೆಳ್ತಂಗಡಿ : ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಗೃಹ ಇಲಾಖೆ
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಪುತ್ತೂರು ಉಪವಿಭಾಗಾಧಿಕಾರಿ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಉಜಿರೆಯ ಸೌಜನ್ಯ ಪರ ಹೋರಾಟಗಾರ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಅರ್ಜಿಯನ್ನು ಗೃಹ ಇಲಾಖೆಯ ಸಕ್ಷಮ ಅಪೀಲು ಪ್ರಾಧಿಕಾರ ತಿರಸ್ಕರಿಸಿದೆ. ಇದರಿಂದಾಗಿ ತಿಮರೋಡಿ ಅವರ ಗಡಿಪಾರು ಆದೇಶ ಮುಂದುವರಿಯುವ ಸಾಧ್ಯತೆ ಎದುರಾಗಿದೆ.ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ದಾಖಲಾಗಿರುವ ವಿವಿಧ ಕ್ರಿಮಿನಲ್ ಪ್ರಕರಣಗಳು ಹಾಗೂ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿಗೆ...
ಸ್ವಸಹಾಯ ಸಂಘಗಳ ಮೂಲಕ ಮಹಿಳಾ ಸಬಲೀಕರಣದ ಅಧ್ಯಯನ: ಫಾತಿಮಾ ಸಫೀರಾಗೆ ಪಿಎಚ್.ಡಿ
ಉಜಿರೆ: ಮಹಿಳಾ ಸಬಲೀಕರಣದಲ್ಲಿ ಸ್ವಸಹಾಯ ಸಂಘಗಳ ಪಾತ್ರದ ಕುರಿತು ಸಂಶೋಧನೆ ನಡೆಸಿದ ಉಜಿರೆಯ ಎಸ್‌ಡಿಎಂ ಕಾಲೇಜಿನ (ಸ್ವಾಯತ್ತ) ವಾಣಿಜ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ಫಾತಿಮಾ ಸಫೀರಾ ಅವರು ಮಂಗಳೂರು ವಿಶ್ವವಿದ್ಯಾಲಯದಿಂದ ಪಿಎಚ್.ಡಿ. ಪದವಿ ಪಡೆದಿದ್ದಾರೆ."ಮಹಿಳಾ ಸಬಲೀಕರಣದಲ್ಲಿ ಸ್ವಸಹಾಯ ಸಂಘಗಳ ಪಾತ್ರ: ದಕ್ಷಿಣ ಕನ್ನಡ ಜಿಲ್ಲೆಯ ಮುಸ್ಲಿಂ ಮಹಿಳೆಯರನ್ನು ಕುರಿತ ಅಧ್ಯಯನ" ಎಂಬ ವಿಷಯದ ಕುರಿತು ಅವರು ಸಂಶೋಧನೆ ಕೈಗೊಂಡಿದ್ದರು. ಸ್ವಸಹಾಯ ಸಂಘಗಳು ಮುಸ್ಲಿಂ ಮಹಿಳೆಯರ ಆರ್ಥಿಕ ಸ್ವಾವಲಂಬನೆ, ಸಾಮಾಜಿಕ ಸ್ಥಾನಮಾನ, ನಿರ್ಧಾರ ಕೈಗೊಳ್ಳುವ ಸಾಮರ್ಥ್ಯ ಹಾಗೂ ಸಬಲೀಕರಣದ ಪ್ರಕ್ರಿಯೆಯಲ್ಲಿ ವಹಿಸುವ ಪಾತ್ರವನ್ನು ಈ ಅಧ್ಯಯನವು...
ಗುರುವಾಯನಕೆರೆ- ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಅವ್ಯವಸ್ಥೆ : ಕುಪ್ಪೆಟ್ಟಿ ನಾಗರಿಕ ಹೋರಾಟ ಸಮಿತಿಯಿಂದ, ಲೋಕೋಪಯೋಗಿ ಮುಖ್ಯ ಇಂಜಿನಿಯರ್ ಭೇಟಿ
ಬೆಳ್ತಂಗಡಿ; ಕಳೆದ ಮೂರು ವರ್ಷಗಳಿಂದ ವಾಹನ ಸಂಚಾರರಿಗೆ, ನಾಗರಿಕರಿಗೆ ತಲೆ ನೋವಾಗಿ ಪರಿಣಮಿಸಿರುವ ಗುರುವಾಯನಕೆರೆ - ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಪಿಲಿಗೂಡು-ಕುಪ್ಪೆಟ್ಟಿ-ಉಪ್ಪಿನಂಗಡಿ ಭಾಗದ ಹತ್ತು ಕಿಲೋಮೀಟರ್ ರಸ್ತೆಯು ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದ್ದು, ವಾಹನ ಸವಾರರು ಸಂಚರಿಸಲು ಅಸಾಧ್ಯವಾಗುವಷ್ಟರ ಮಟ್ಟಿಗೆ ತಲುಪಿದೆ.ರಸ್ತೆಯ ದುರಸ್ತಿಯಬಗ್ಗೆ ಸ್ಥಳೀಯವಾಗಿ ನಾಗರಿಕ ಹೋರಾಟ ಸಮಿತಿ ರಚಿಸಲಾಗಿದ್ದು ಹೋರಾಟ ಸಮಿತಿಯ ಮುಖಂಡರುಗಳುಮಂಗಳೂರಿಗೆ ಬಂದ ವೇಳೆ ಲೋಕೋಪಯೋಗಿ ಇಲಾಖೆಯ ಚೀಫ್ ಇಂಜಿನಿಯರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು ರಸ್ತೆ ದುರಸ್ತಿಗೆ ಅನುದಾನಒದಗಿಸುವಂತೆ ವಿನಂತಿಸಿದರು., ನಾಳೆಯೇ ಉನ್ನತ ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಿ ಪರಿಶೀಲಿಸಿ ಅಗತ್ಯ ಕ್ರಮ...
ಶಿಶಿಲ–ಬೈರಾಪುರ ರಸ್ತೆ ಹಕ್ಕೊತ್ತಾಯ ಸಮಾವೇಶಕ್ಕೆ ಶಾಸಕ ಹರೀಶ್ ಪೂಂಜ ಬೆಂಬಲ
ಬೆಳ್ತಂಗಡಿ; ನ. 2ರ ಅರಸಿನಮಕ್ಕಿ ಸಮಾವೇಶಕ್ಕೆ ಸಹಕಾರ – 18 ಕಿ.ಮೀ. ಸಂಪರ್ಕ ರಸ್ತೆ ಅಭಿವೃದ್ಧಿಗೆ ವೈಜ್ಞಾನಿಕ ಡಿಪಿಆರ್ ಸಿದ್ಧಪಡಿಸಲು ಸರ್ಕಾರಕ್ಕೆ ಒತ್ತಾಯ ಬೆಳ್ತಂಗಡಿ: ಮಲೆನಾಡು ಮತ್ತು ಕರಾವಳಿ ಭಾಗದ ಜನರ ಬಹುದಶಕಗಳ ಬೇಡಿಕೆಯಾಗಿರುವ ಶಿಶಿಲ–ಬೈರಾಪುರ ಸಂಪರ್ಕ ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ನ. 2ರಂದು ಅರಸಿನಮಕ್ಕಿಯಲ್ಲಿ ನಡೆಯಲಿರುವ ಬೃಹತ್ ಹಕ್ಕೊತ್ತಾಯ ಸಮಾವೇಶಕ್ಕೆ ಬೆಳ್ತಂಗಡಿ ಶಾಸಕ ಶ್ರೀ ಹರೀಶ್ ಪೂಂಜ ಅವರು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಭಾಗದ ಜನರ ಸಂಚಾರ, ಶಿಕ್ಷಣ, ಆರೋಗ್ಯ, ಕೃಷಿ ಹಾಗೂ ಆರ್ಥಿಕ ಅಭಿವೃದ್ಧಿಯ ದೃಷ್ಟಿಯಿಂದ ಮಹತ್ವದ ಯೋಜನೆಯಾಗಿರುವ ಶಿಶಿಲ–ಬೈರಾಪುರ...















