ಡಿ.13: ಕಡಬದಲ್ಲಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ದ.ಕ. ಜಿಲ್ಲಾ ಸಮ್ಮೇಳನ

0

ಮಂಗಳೂರು: ವಿಜಯ್ ದಿವಸ್ ಅಂಗವಾಗಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ದ.ಕ. ಜಿಲ್ಲಾ ಸಮ್ಮೇಳನ ಡಿ.13ರಂದು ಕಡಬದ ನೆಲ್ಯಾಡಿಯ ಬಿರ್ವ ಸಭಾಂಗಣದಲ್ಲಿ ಬೆಳಗ್ಗೆ 9:30ರಿಂದ ನಡೆಯಲಿದೆ ಎಂದು ದ.ಕ. ಜಿಲ್ಲಾ ಘಟಕದ ಅಧ್ಯಕ್ಷ ನೋಬರ್ಟ್ ರೋಡ್ರಿಗಸ್ ನಗರದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ 1971ರ ಇಂಡೋ-ಪಾಕ್ ಯುದ್ಧದಲ್ಲಿ ಭಾಗಿಯಾದ ದ.ಕ. ಜಿಲ್ಲೆಯ ಯೋಧರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು. ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ರಾಜ್ಯಾಧ್ಯಕ್ಷ ಡಾ.ಶಿವಣ್ಣ ಎನ್.ಕೆ., ಮಾಜಿ ಸಂಸದೆ ತೇಜಸ್ವಿನಿ ಗೌಡ, ಪುತ್ತೂರು ಶಾಸಕರಾದ...

ದ್ವೇಷ ಭಾಷಣ ಕಲ್ಲಡ್ಕ ಪ್ರಭಾಕರ ಭಟ್ ಗೆ ಜಾಮೀನು ಮಂಜೂರು

0

ಪುತ್ತೂರು: ದ್ವೇಷ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರ್.ಎಸ್. ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಪುತ್ತೂರು ತಾಲೂಕಿನ ಉಪ್ಪಳಿಗೆ ಎಂಬಲ್ಲಿ ಅ.22ರಂದು ನಡೆದ ದೀಪೋತ್ಸವ ಮತ್ತು ಗೋಪೂಜೆಯಲ್ಲಿ ಭಾಗವಹಿಸಿದ್ದ ಕಲ್ಲಡ್ಕ ಪ್ರಭಾಕರ ಭಟ್ ಕೋಮು ಪ್ರಚೋದನಾತ್ಮಕವಾಗಿ ಭಾಷಣ ಮಾಡಿರುವ ಬಗ್ಗೆ ಈಶ್ವರಿ ಪದ್ಮುಂಜ ಅವರು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿದ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ಮನೆಗೆ ನೋಟೀಸ್ ಜಾರಿಗೊಳಿಸಿದ್ದರು. ಬಳಿಕದ...

ಧರ್ಮಸ್ಥಳ ಪ್ರಕರಣ ಅಪೂರ್ಣ ಎಸ್.ಐ.ಟಿ ವರದಿ, ಸುಳ್ಳು ಸಾಕ್ಷ್ಯದ ಕುರಿತು ವಿಚಾರಣೆ ಡಿ26ಕ್ಕೆ ತೀರ್ಪು ಕಾಯ್ದಿರಿಸಿದ ನ್ಯಾಯಾಲಯ

0

ಬೆಳ್ತಂಗಡಿ; ಧರ್ಮಸ್ಥಳ ಪ್ರಕರಣದಲ್ಲಿ ಎಸ್.ಐ.ಟಿ‌ ಸಲ್ಲಿಸಿರುವ ವರದಿಯ ಕುರಿತಾಗಿ ಬೆಳ್ತಂಗಡಿ ನ್ಯಾಯಾಲಯದಲ್ಲಿ ಎಸ್.ಐ.ಟಿ ಪರವಾಗಿ ವಾದ ಮಂಡನೆ ಮುಕ್ತಾಯವಾಗಿದ್ದು ಅಪೂರ್ಣ ವರದಿಯ ಹಿನ್ನಲೆಯಲ್ಲಿ ಸುಳ್ಳು ಸಾಕ್ಷಿಯ ಕುರಿತು ಈ ಕೂಲೇ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಪ್ರಕರಣದ ತೀರ್ಪನ್ನು ಡಿ.26 ಕ್ಕೆ ಮುಂದೂಡಿ ದೆಎಸ್.ಐ.ಟಿ ಪರವಾಗಿ ವಾದ ಮಂಡಿಸಿದ ಸರಕಾರಿ ವಕೀಲರು ಮುಂದಿನ ತನಿಖೆಯ ಕುರಿತು ನ್ಯಾಯಾಲಯದಿಂದ ನಿರ್ದೇಶನ ನೀಡುವಂತೆ ಕೇಳಿಕೊಂಡಿತ್ತು. ವಾದ ಆಲಿಸಿದ ನ್ಯಾಯಾಲಯಎಸ್.ಐ.ಟಿ ನ್ಯಾಯಾಲಯದಲ್ಲಿ ಸಲ್ಲಿಸಿರುವ ವರದಿಯು ಪರಿಪೂರ್ಣ ವರದಿಯಲ್ಲ ಇದರಿಂದಾಗಿ ಸುಳ್ಳು ಸಾಕ್ಷಿಯ ಕುರಿತು ತೀರ್ಮಾನ ತೆಗೆದುಕೊಳ್ಳುವುದು ಸಾಧ್ಯವಿಲ್ಲ...

ದಕ್ಷಿಣ ಕನ್ನಡ ಜಿಲ್ಲೆಯಲ್ಲೆ ಅತಿ ದೊಡ್ಡ ಕ್ರಿಸ್ಮಸ್ ನಕ್ಷತ್ರ ನೆಲ್ಯಾಡಿ ಸಂತ ಅಲ್ಫೋನ್ಸಾ ಚರ್ಚಿನ ಎಸ್ ಎಂ ವೈ ಎಂ ಯುವಕರಿಂದ ನಿರ್ಮಾಣ.

0

ನೆಲ್ಯಾಡಿ:ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ಎಸ್ ಎಂ ವೈ ಎಂ ಯುವಕರು ವಿಶಿಷ್ಟ ಸಾಧನೆ ಯನ್ನು ಸಾದಿಸಿ ದಾಖಲೆಯ ಪುಟಸೇರಿದ್ದಾರೆ. ಸುಮಾರು 42 ಅಡಿ ಎತ್ತರದ ಈ ನಕ್ಷತ್ರಕ್ಕೆ ಜಿಲ್ಲೆಯ ಅತಿ ಎತ್ತರದ ಕ್ರಿಸ್ಮಸ್ ನಕ್ಷತ್ರ ಎಂಬ ಮಾನ್ಯತೆ ದೊರೆತಿದೆ. ಏಕತೆ, ಪರಿಸರ ಸ್ನೇಹಿ ಅಲಂಕಾರ ಮತ್ತು ಸೌಹಾರ್ಧತೆಯ ಸಂಕೇತವಾಗಿರುವ ಈ ವಿಶಿಷ್ಠ ಸಾಧನೆ ಫಾ. ಶಾಜಿ ಮ್ಯಾಥ್ಯೂ ಮತ್ತು ಫಾ. ಅಲೆಕ್ಸ್ ಜಾನ್ಸನ್ ಅವರ ಮಾರ್ಗದರ್ಶನ ಮತ್ತು ಸಹಕಾರ ಹಾಗೂ ನೆಲ್ಯಾಡಿ ಅಲ್ಫೋನ್ಸ ಚರ್ಚ್...

ಹೈಕೋರ್ಟ್ ನ ಹಿರಿಯ ನ್ಯಾಯವಾದಿ ಬಾಲನ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಭೇಟಿ

0

ಬೆಳ್ತಂಗಡಿ; ಹೈಕೋರ್ಟ್ ನ ಹಿರಿಯ ನ್ಯಾಯವಾದಿ ಬಾಲನ್ ಅವರು ಡಿ 9 ಮಂಗಳವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಭೇಟಿ ನೀಡಿ ಸ್ಥಳೀಯ ನ್ಯಾಯವಾದಿಗಳೊಂದಿಗೆ ಮಾತುಕತೆ ನಡೆಸಿದರು.ರಾಜ್ಯ ವಕೀಲರ ಸಂಘದ ಚುನಾವಣೆಯ ಹಿನ್ನಲೆಯಲ್ಲಿ ಚುನಾವಣಾ ಕಣದಲ್ಲಿರುವ ಬಾಲನ್ ಅವರು ವಕೀಲರುಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದರು.ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷರಾದ ಅಲೋಶಿಯಸ್ ಲೋಬೋ ಹಾಗೂ ಇತರ ನ್ಯಾಯವಾದಿಗಳು ಉಪಸ್ಥಿತರಿದ್ದರು.

ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಂದ  ಮಹಿಳಾ ಕಬಡ್ಡಿ ವಿಶ್ವಕಪ್ ವಿಜೇತೆ ಧನಲಕ್ಷ್ಮಿ ಪೂಜಾರಿ ಅವರಿಗೆ ಅಭಿನಂದನೆ

0

ಬೆಂಗಳೂರು; ಢಾಕಾದಲ್ಲಿ ನಡೆದ ಮಹಿಳಾ ಕಬಡ್ಡಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಚಿನ್ನ ಗೆದ್ದ ಭಾರತ ತಂಡದಲ್ಲಿರುವ ರಾಜ್ಯದ ಆಟಗಾರ್ತಿ ಧನಲಕ್ಷ್ಮಿ ಪೂಜಾರಿ ಅವರಿಗೆ ಸುವರ್ಣಸೌಧದ ವಿಧಾನಸಭಾ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿದರು.ಅಧಿವೇಶನ ವೀಕ್ಷಣೆಗೆ ಬಂದಿದ್ದ ಧನಲಕ್ಷ್ಮಿ ಪೂಜಾರಿ ಮತ್ತು ಅವರ ತರಬೇತುದಾರರನ್ನು ವಿಶೇಷವಾಗಿ ಸ್ವಾಗತಿಸಿ, ಅವರ ಸಾಧನೆಯನ್ನು ಗೌರವಿಸಲಾಯಿತು.ಈಗಾಗಲೇ ರಾಜ್ಯ ಸರ್ಕಾರ ಧನಲಕ್ಷ್ಮಿ ಅವರಿಗೆ ಐದು ಲಕ್ಷ ನಗದು‌ ಪ್ರೋತ್ಸಾಹಧನ ನೀಡಿದೆ.

ಡಿ 13-14: ಬಳಂಜ ಶಾಲೆಗೆ ಅಮೃತ ಮಹೋತ್ಸವ ಸಂಭ್ರಮ ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಪಿಕೆ ಮಾಹಿತಿ

0

ಬಳಂಜ:ಸುಮಾರು 73 ವರ್ಷಗಳ ಹಿಂದೆ ಗ್ರಾಮೀಣ ಪ್ರದೇಶದ ಮಕ್ಕಳಿಗೆ ವಿದ್ಯೆ ಸುಲಭದಲ್ಲಿ ದೊರಕಬೇಕು ಎಂಬ ದೂರದೃಷ್ಟಿಯಿಂದ ಗ್ರಾಮೀಣ ಪ್ರದೇಶದ ಬಳಂಜದ ಪಟೇಲರಾಗಿದ್ದ ಕಿನ್ನಿ ಯಾನೆ ಕೋಟಿ ಪಡಿವಾಳರು ಆಗ ಸಮಾಜದಲ್ಲಿ ಗುರುತಿಸಿ, ಗಣ್ಯರ ನೆರವಿನೊಂದಿಗೆ ಆರಂಭಿಸಿದ ಈ ಸಂಸ್ಥೆ ಸಾವಿರಾರು ಮಕ್ಕಳಿಗೆ ವಿದ್ಯೆಯನ್ನು ನೀಡಿ ಸಮಾಜದಲ್ಲಿ ಉತ್ತಮ ಪ್ರಜೆಯಾಗಲು ದಾರಿ ತೋರಿದೆ ಎಂದು ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ ಪಿಕೆ ಹೇಳಿದರು. ಅವರು ಡಿ. 8ರಂದು ಬಳಂಜ ಶಾಲಾ ಅಮೃತ ಮಹೋತ್ಸವದ ಅಂಗವಾಗಿ ಅಮೃತ ಮಹೋತ್ಸವ ಕಾರ್ಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು ಈ...

ಪುತ್ತೂರು ನಿಲ್ಲಿಸಿದ್ದ ಲಾರಿಯಿಂದ ಲಕ್ಷಾಂತರ ಮೌಲ್ಯದ ಕಾಫಿ ಬೀಜ ಕಳ್ಳತನ ಆರೋಪಿಗಳ ಬಂಧನ

0

ಬೆಳ್ತಂಗಡಿ; ಪುತ್ತೂರಿನಲ್ಲಿ ನಿಲ್ಲಿಸಿದ್ದ ಲಾರಿಯಿಂದ ಕಾಫಿ ಬೀಜ ತುಂಬಿದ್ದ ಚೀಲಗಳನ್ನು ಕಳ್ಳತನ ಮಾಡಿದ ಪ್ರಕರಣದಲ್ಲಿ ಐವರು ಆರೋಪಿಗಳನ್ನುಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಗಳು ಆಶ್ಲೇಷ ಭಟ್, ನಾರಾಯಣ ಶೆಟ್ಟಿಗಾರ್, ಮಿಧುನ್ ಕುಮಾರ್, ವಿಕಯ ಶೆಟ್ಟಿ, ಮಹಮ್ಮದ್ ಆಶ್ರಫ್ ಎಂಬವರಾಗಿದ್ದಾರೆ.ಕಳವಾದ ಎಲ್ಲಾ 80 ಕಾಫಿ ಚೀಲಗಳು ಹಾಗೂ ಕೃತ್ಯಕ್ಕೆ ಬಳಸಿದ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸ್‌ ಇಲಾಖೆ ತಿಳಿಸಿದೆ.ಪಿರ್ಯಾದಿದಾರರಾದ ಪುತ್ತೂರು ಕಬಕ ನಿವಾಸಿ ತೃತೇಶ್ (29) ಅವರ ದೂರಿನಂತೆ, ಡಿ.3ರಂದು ಪಿರಿಯಾ ಪಟ್ಟಣದ ಕಾಫಿ ಕ್ಯೂರಿಂಗ್ ಕಂಪೆನಿಯಿಂದ ತಲಾ 60 ಕೆ.ಜಿ ತೂಕದ 320 ಬ್ಯಾಗ್‌ಗಳನ್ನು...

ಬೆಳಾಲು; ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ  ಜನಸ್ಪಂದನ ಸಭೆ

0

ಬೆಳಾಲು: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಬೆಳಾಲು ಗ್ರಾಮ ಪಂಚಾಯತ್ ಜನಸ್ಪಂದನ ಸಭೆ ಡಿ. 8 ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಬೀಮಂಡೆ ಪ್ರದೇಶದಲ್ಲಿ ಕುಡಿಯುವ ನೀರು ಟ್ಯಾಂಕ್ ನಿರ್ಮಿಸಲಾಗಿದೆ ಆದರೆ ಇನ್ನೂ ನೀರು ಪೂರೈಕೆ ಆಗಿಲ್ಲ , ಬೆಳಾಲು - ಮಂಗಳೂರು ಸಾರಿಗೆ ಬಸ್ ಸೌಲಭ್ಯ ಕಲ್ಪಿಸಬೇಕು ಇದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ, ಬೆಳಾಲಿನಲ್ಲಿ ಲೋ ವಾಲ್ ಟೇಜ್ ಸಮಸ್ಯೆಯಿದೆ ಹಾಗೆಯೇ ವನ್ಯಜೀವಿಗಳ ಉಪಟಳವಿದೆ ಎಂದು ಗ್ರಾಮಸ್ಥ ಸುರೇಶ್ ಭಟ್ ಹೇಳಿದರು. ದೊಂಪದಪಲ್ಕೆ ಅಂಗನವಾಡಿ ಕೇಂದ್ರ ಆವರಣ...

ಹುಟ್ಟೂರಿಗೆ ಆಗಮಿಸಿದ ನಿವೃತ್ತ ಸೈನಿಕ ಮುಗೇರಡ್ಕ ಶ್ರೀ ಅಶೋಕ್ ಪಿ.ಎಲ್ ರವರಿಗೆ ಶಾಸಕ ಹರೀಶ್ ಪೂಂಜರವರಿಂದ ಗೌರವಾರ್ಪಣೆ

0

ಬೆಳ್ತಂಗಡಿ : ದೇಶದ ಸೈನ್ಯದಲ್ಲಿ ಅನನ್ಯ ಸೇವೆಗೈದು ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ ಬೆಳ್ತಂಗಡಿ ತಾಲೂಕಿನ ಬಂದಾರು ಪಂಚಾಯತ್ ವ್ಯಾಪ್ತಿಯ ಮೊಗ್ರು ಗ್ರಾಮ ಮುಗೇರಡ್ಕದ ಶ್ರೀ ಅಶೋಕ್ ಪಿ.ಎಲ್ ರವರಿಗೆ ಶಾಸಕರ ನಿವಾಸದಲ್ಲಿ ಡಿ. 08 ರಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಗೌರವಾರ್ಪಣೆ ಸಲ್ಲಿಸಿದರು.ದಿ. ಲಕ್ಷ್ಮಣ ಗೌಡ ಮತ್ತು ಕುಸುಮ ದಂಪತಿಯ ಪುತ್ರನಾದ ಅಶೋಕ್ ಪಿ ಲ್ ಇವರು ಪ್ರತಿಭಾನ್ವಿತ ವಿದ್ಯಾರ್ಥಿಯಾಗಿ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಪ್ರಥಮ ದರ್ಜೆ ಯಲ್ಲಿ ತೇರ್ಗಡೆ ಪಡೆದು, ಉತ್ತಮ ವಾಲಿಬಾಲ್ ಕ್ರೀಡಾಕೂಟವಾಗಿದ್ದು, ಇವರು 2003 ರಲ್ಲಿ ಭಾರತ...