ಬೆಳ್ತಂಗಡಿ ಹಾಗೂ ಪುತ್ತೂರಿನಲ್ಲಿ ಕಳ್ಳತನ ಶಂಕಿತ ಆರೋಪಿಯ ಫೊಟೋ ಬಿಡುಗಡೆ ಮಾಹಿತಿ ನೀಡಲು ಸಾರ್ವಜನಿಕರಲ್ಲಿ ಮನವಿ

0

ಬೆಳ್ತಂಗಡಿ; ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಬೆಳ್ತಂಗಡಿ ಹಾಗೂ ಉಪ್ಪಿನಂಗಡಿ ಪರಿಸರಗಳಲ್ಲಿ ಕಳೆದ ಎರಡು ದಿನಗಳಲ್ಲಿ ನಡೆದಿರುವ ಮನೆಗಳ್ಳತನ ಪ್ರಕರಣಗಳಲ್ಲಿ ಕೇರಳ ಕಣ್ಣೂರು ತಳಿಪರಂಬು ನಿವಾಸಿ ತಂಗಚ್ಚ @ ಮ್ಯಾಧ್ಯೂ @ ಬಶೀರ್ ಎಂಬಾತನು ಬಾಗಿಯಾಗಿರುವ ಸಂಶಯವಿದ್ದು, ಈತನ ಬಗ್ಗೆ ಮಾಹಿತಿ ಲಭ್ಯವಾದಲ್ಲಿ ಪೊಲೀಸರಿಗೆ ತಿಳಿಸುವಂತೆ ಪೊಲೀಸ್ ಇಲಾಖೆ ವಿನಂತಿಸಿದೆ. ಸದ್ರಿ ಶಂಕಿತ ವ್ಯಕ್ತಿಯ ವಿರುದ್ದ ಈಗಾಗಲೇ ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಜಾಮೀನುರಹಿತ ದಸ್ತಗಿರಿ ವಾರೆಂಟ್‌ ಜಾರಿಯಾಗಲು ಬಾಕಿಯಿರುತ್ತದೆ. ಈತನ ಬಗ್ಗೆ ಯಾವುದೇ ಮಾಹಿತಿ ಲಭ್ಯವಾದಲ್ಲಿ, ಉಪ್ಪಿನಂಗಡಿ ಪೊಲೀಸ್ ಠಾಣೆ: 08251-251055, 9480805362 ಬೆಳ್ತಂಗಡಿ ಪೊಲೀಸ್‌...

ರೆಖ್ಯ ಯುವಕ ನಾಪತ್ತೆ ಪ್ರಕರಣ; ಮೂರು ದಿನಗಳ ಬಳಿಕ ಶಿರಾಡಿ ಹೊಳೆ ಬದಿಯಲ್ಲಿ ಪತ್ತೆ; ಶೌರ್ಯ ವಿಪತ್ತು  ನಿರ್ವಹಣಾ ತಂಡದ ಕಾರ್ಯಾಚರಣೆ

0

ಬೆಳ್ತಂಗಡಿ, ರೆಖ್ಯ ಗ್ರಾಮದ ದೇವಸ ಎಂಬಲ್ಲಿಗೆ ಸಂಬಂಧಿಕರ ಮನೆಗೆ ಆಗಮಿಸಿದ್ದ ನೆಲ್ಯಾಡಿ ಪಾಲೇತ್ತಾಡಿ ನಿವಾಸಿ ಅಶ್ವಿತ್ ಕುಮಾರ್ (37) ಅವರು ಮೇ 17 ರಂದು ಸಂಜೆ 4.15 ರ ಬಳಿಕ ಕಣ್ಮರೆಯಾಗಿದ್ದರು ಶೌರ್ಯ ವಿಪತ್ತು ನುರ್ವಹಣಾ ತಂಡದವರು ಹಾಗೂ ಸ್ಥಳೀಯರು‌ ನಡೆಸಿದ   ನಿರಂತರ ಹುಡುಕಾಟದ ಬಳಿಕ ಶಿರಾಡಿ ಗ್ರಾಮದ ಕುಕ್ಕುಂಜ ಸಮೀಪದ ಉದನೆ ಹೊಳೆಯ ಸಮೀಪದಲ್ಲಿ ಮೇ 19 ಮಂಗಳವಾರ ಮಧ್ಯಾಹ್ನ  ವೇಳೆಗೆ ನಿತ್ರಾಣವಾಗಿ ಕುಳಿತಿದ್ದ ಅಶ್ವಿತ್ ಕುಮಾರ್ ಅವರನ್ನು ಪತ್ತೆಹಚ್ಚಿದ್ದಾರೆ. ಯುವಕ ನಾಪತ್ತೆಯಾದ ಬಳಿಕ ಸುತ್ತಲಿನ ಪ್ರದೇಶದಲ್ಲಿ ಹುಡುಕಾಟ ನಡೆಸಿದಾಗ ಸಿಗದೇ ಇದ್ದಾಗ...

ಬೆಳ್ತಂಗಡಿ : ಶಿಬಾಜೆಯ ಶ್ರೀಧರ ಕೊಲೆ ಪ್ರಕರಣ; ಮಂಪರು ಪರೀಕ್ಷೆ ಹಾಗೂ ಬ್ರೈನ್ ಮ್ಯಾಪಿಂಗ್ ಗೆ ಆರೋಪಿಗಳ ನಕಾರ

0

ಬೆಳ್ತಂಗಡಿ: ಶಿಬಾಜೆ ಗ್ರಾಮದಲ್ಲಿ 2022ರ ಡಿಸೆಂಬರ್ 18 ರಂದು ನಡೆದ ಶ್ರೀಧರ ಕೊಲೆ ಪ್ರಕರಣದ ಹೆಚ್ಚಿನ ತನಿಖೆಗಾಗಿ ಸರಕಾರ ಪ್ರಕರಣವನ್ನು ಎಸ್‌ಐಟಿಗೆ ನೀಡಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ವೇಳೆ ಆರೋಪಿಗಳು ಮಂಪರು ಪರೀಕ್ಷೆ ಮತ್ತು ಬ್ರೈನ್ ಮ್ಯಾಪಿಂಗ್‌ಗೆ ಆರಂಭದಲ್ಲಿ ಒಪ್ಪಿಗೆ ಸೂಚಿಸಿ ಬಳಿಕ ನ್ಯಾಯಾಲಯದ ಮುಂದೆ ನಿರಾಕರಿಸಿರುವ ಬಗ್ಗೆ ವರದಿಯಾಗಿದೆ. ಶ್ರೀಧರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ವಿಚಾರಣೆ ನಡೆಸುತ್ತಿದ್ದು ಆರೋಪಿಗಳಾದ ತಿಮ್ಮಪ್ಪ ಪೂಜಾರಿ, ಲಕ್ಷ್ಮಣ ಪೂಜಾರಿ, ಕೆ.ಎಲ್.ಆನಂದ್ ಗೌಡ, ಮಹೇಶ್‌ನ ನ್ನು ಮಂಪರು ಪರೀಕ್ಷೆಗೆ ಒಳಪಡಿಸುವಂತೆ ಎಸ್‌ಐಟಿ ನ್ಯಾಯಾಲಯದ ಮೊರೆ...

ಬೆಳ್ತಂಗಡಿ; ಸಂಬಂಧಿಕರ ಮನೆಗೆ ಬಂದಿದ್ದ ನೆಲ್ಯಾಡಿಯ ವ್ಯಕ್ತಿ ನಾಪತ್ತೆ

0

ಬೆಳ್ತಂಗಡಿ; ತಾಲೂಕಿನ ರೆಖ್ಯ ಗ್ರಾಮದ ದೇವಸದ ಸಮೀಪ ಸಂಬಂಧಿಕರ ಮನೆಗೆ ಆಗಮಿಸಿದ್ದ ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವ ಘಟನೆ ವರದಿಯಾಗಿದ್ದು ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ನಾಪತ್ತೆಯಾದವರನ್ನು ನೆಲ್ಯಾಡಿ ಪಾಲೇತ್ತಾಡಿ ನಿವಾಸಿ ಅಶ್ಚಿತ್ ಕುಮಾರ್ (37) ಎಂದು ಗುರುತಿಸಲಾಗಿದೆ. ಅಶ್ವಿತ್ ಕುಮಾರ್ ಅವರು ಮೇ 17ರಂದು ಸಂಜೆ ಸುಮಾರು 4.15ರ ವೇಳೆಗೆ ಮನೆಯಿಂದ ಹೊರಗೆ ತೆರಳಿದ್ದು, ಬಳಿಕ ಮರಳಿ ಬಾರದೆ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಆತಂಕಗೊಂಡ ಕುಟುಂಬಸ್ಥರು ಸ್ಥಳೀಯರ ಸಹಕಾರದೊಂದಿಗೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ತೀವ್ರ ಹುಡುಕಾಟ ನಡೆಸಿದ್ದಾರೆ. ಘಟನೆಯ ಮಾಹಿತಿ ತಿಳಿದು ಶೌರ್ಯ ವಿಪತ್ತು...

ಬೆಳ್ತಂಗಡಿ : ವರದಕ್ಷಿಣೆ ಕಿರುಕಳಕ್ಕೆ ಮನನೊಂದು ಪತ್ನಿ ಆತ್ಮಹತ್ಯೆ- ಪತಿ ಬಂಧನ

0

ಬೆಳ್ತಂಗಡಿ : ಮದ್ಯಪಾನ ಸೇವಿಸಿ ಪ್ರತಿದಿನ ಪತಿ ನೀಡುತ್ತಿದ್ದ ಕಿರುಕಳಕ್ಕೆ ಬೆಸತ್ತು ಮನನೊಂದು ಪತ್ನಿ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪಾರೆಂಕಿ ಗ್ರಾಮದ ಬಂಗೇರುಕಟ್ಟೆ ದೋಟ ಎಂಬಲ್ಲಿ ಮೇ.15 ರಂದು ನಡೆದಿದೆ. ಮೃತಪಟ್ಟ ಮಹಿಳೆ ಸಂದ್ಯಾ (27) ಆಗಿದ್ದು ಅವರ ಸಹೋದರ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ಮೇ.16 ರಂದು ದೂರು ನೀಡಿದ್ದು ಪತಿ ಧನಂಜಯ್ ಮೇಲೆ ವರದಕ್ಷಿಣೆ ನಿಷೇಧ ಕಾಯಿದೆ ಅಡಿ ಪ್ರಕರಣ ದಾಖಲಾಗಿದ್ದು ಆತನನ್ನು ಪೊಲೀಸರು ಮೇ. 17 ರಂದು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಘಟನೆಯ...

ಬೆಳ್ತಂಗಡಿ : ಅಕ್ರಮ ಜೂಜಾಟದ ಮೇಲೆ ವೇಣೂರು ಪೊಲೀಸರ ದಾಳಿ: 17 ಮಂದಿ ಆರೋಪಿಗಳ ಬಂಧನ

0

ಬೆಳ್ತಂಗಡಿ : ಕರಿಮಣೇಲು ಗ್ರಾಮದ ಬೋಳಾರಗುತ್ತು ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಉಳಾಯಿ -ಪಿದಾಯಿ ಜೂಜಾಟ ಆಡುತ್ತಿದ್ದ ಬಗ್ಗೆ ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಅಕ್ಷಯ್ ಡವಗಿ ಅವರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಮೇ.17 ರಂದು ರಾತ್ರಿ 7:30 ಕ್ಕೆ ದಾಳಿ ಮಾಡಿದ್ದಾರೆ. ಜೂಜಾಟ ಆಡುತ್ತಿದ್ದ ಪಡಂಗಡಿಯ ಅಶೋಕ್(37) ,ಪಡಂಗಡಿಯ ವಿತೇಶ್(33), ವೇಣೂರು ಕರಿಮಣೇಲಿನ ರಾಜೇಶ್(35), ವೇಣೂರು ಕತ್ತೋಡಿಬೈಲಿನ ರಮೇಶ್(40) , ಕುಕ್ಕೇಡಿ ಬರ್ನತ್ಯಾರಿನ ರಾಜೇಶ್(42), ಕಾರ್ಕಳ ಮುಗಿರಡ್ಡಸ ಪ್ರಮೀತ್(35), ನಾರಾವಿ ಅರಸಿಕಟ್ಟೆಯ ಕರುಣಾಕರ(38), ವೇಣೂರು ಶಿವಾಜಿನಗರದ ಶೇಖರ್(50), ಮರೋಡಿಯ ಸಧಾಕರ(42),...

ಬೆಳ್ತಂಗಡಿ : ಪಂಜಾಬ್ ನಲ್ಲಿ ಅಸಹಜವಾಗಿ ಮೃತಪಟ್ಟ ಆಕಾಂಕ್ಷ ಎಸ್ ಪ್ರಕರಣಕ್ಕೆ ಒಂದು ವರ್ಷ; ಇನ್ನೂ ನ್ಯಾಯ ಮರೀಚಿಕೆ ಕುಟುಂಬಸ್ಥರ ಕಣ್ಣೀರು

0

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಬೋಳಿಯಾರ್ ನಿವಾಸಿ ಸುರೇಂದ್ರನ್ ನಾಯರ್ ಮತ್ತು ಸಿಂಧೂದೇವಿ ದಂಪತಿ ಪುತ್ರಿ ಆಕಾಂಕ್ಷ ಎಸ್ ನಾಯರ್ ಅವರು ಪಂಜಾಬ್ ನಲ್ಲಿ ಅಸಹಜವಾಗಿ ಮೃತಪಟ್ಟ ಘಟನೆಗೆ ಮೇ.17 ಕ್ಕೆ (ಇಂದಿಗೆ) ಒಂದು ವರ್ಷ ತುಂಬುತ್ತಿದೆ. ಮಗಳ ಸಾವಿಗೆ ನಿಖರ ಕಾರಣವೇನು ಎಂಬುದಾಗಿ ಹೆತ್ತವರು ಹಾಗೂ ಕುಟುಂಬಸ್ಥರಿಗೆ ಇನ್ನೂ ಸರಿಯಾದ ಮಾಹಿತಿಯಿಲ್ಲ. ಈಗಲೂ‌ ನ್ಯಾಯಕ್ಕಾಗಿ ಹಾತೊರೆಯುತ್ತಿದ್ದಾರೆ, ಅವರ ಕೂಗು ಅರಣ್ಯ ರೋಧನವಾಗಿದೆ.ಈ‌ಮಧ್ಯೆ ಪೋಸ್ಟ್ ಮಾರ್ಟಂ ವರದಿಯಲ್ಲಿ ಆಕೆ ಕಟ್ಟಡದಿಂದ ಹಾರುವ ಮುನ್ನವೇ ಹೃದಯಾಘಾತದಿಂದ ಮತ್ತು ರಕ್ತ ಹೆಪ್ಪುಗಟ್ಟಿ ಮೃತರಾಗಿದ್ದಾರೆ ಎಂದು ಉಲ್ಲೇಖವಿದ್ದು...

ಶ್ರೀ ಕ್ಷೇತ್ರ ಬಂಗಾಡಿ ಸತ್ಯಸಾರಮಾನಿ ಕಾನದ ಕಟದ ದೈವಸ್ಥಾನದ ವಾರ್ಷಿಕ ಪರ್ವ ಮತ್ತು ಜೀರ್ಣೋದ್ಧಾರ ವಿಜ್ನಾಪನಾ ಪತ್ರ ಬಿಡುಗಡೆ

0

ಶ್ರೀ ಕ್ಷೇತ್ರ ಬಂಗಾಡಿ ಸತ್ಯಸಾರಮಾನಿ ಕಾನದ ಕಟದ ದೈವಸ್ಥಾನದ ವಾರ್ಷಿಕ ಪರ್ವ ಮತ್ತು ಜೀರ್ಣೋದ್ಧಾರ ವಿಜ್ನಾಪಣಾ ಪತ್ರ ಬಿಡುಗಡೆಕಾರ್ಯಕ್ರಮವನ್ನು ಸುಳ್ಯ ವಿಧಾನ ಸಭಾ ಕ್ಷೇತ್ರದಶಾಸಕರಾದ ಕು ಭಾಗೀರಥಿ ಮುರುಳ್ಯ ರವರುಉದ್ಘಾಟನೆ ಮಾಡಿ ' ಸತ್ಯಸಾರಮಾನಿ ಕಾನದ ಕಟದರ ಜನ್ಮಭೂಮಿಯಲ್ಲಿ ದೈವಸ್ಥಾನದ ಜೀರ್ಣೋದ್ಧಾರ ಆಗಲಿರುವುದು ಸಂತೋಷದ ವಿಚಾರ ಈ ಕಾರ್ಯಕ್ಕೆ ಸರಕಾರದ ವತಿಯಿಂದಸಿಗಬೇಕಾದ ಸೌಲಭ್ಯಗಳನ್ನು ಕೊಡಿಸುವಲ್ಲಿನಾನು ಸಹಕಾರ ನೀಡುತ್ತೇನೆ ಎಂದು ಹೇಳಿದರು. ಸಮಾರಂಭದಲ್ಲಿ ಗ್ಯಾರಿಂಟಿ ಯೋಜನೆಗಳ ಜಿಲ್ಲಾ ಉಪಾಧ್ಯಕ್ಷರಾದ  ಶೇಖರ್ ಕುಕ್ಕೇಡಿ ರವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಾ " ಶ್ರೀ ಸತ್ಯಸಾರಮಾನಿ ಕಾನದ ಕಟದ...

ಪಡಂಗಡಿ ಬೈಕ್ ಕಾರು ನಡುವೆ ಭೀಕರ ಅಪಘಾತ ಪತ್ನಿ ಸಾವು ಪತಿಗೆ ಗಂಭೀರ ಗಾಯ

0

ಬೆಳ್ತಂಗಡಿ: ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಮಹಿಳೆಯೊಬ್ಬರು ದುರ್ಮರಣ ಹೊಂದಿರುವಂತಹ ಘಟನೆ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ಬಳಿ ಮೇ.17 ರಂದು ರಾತ್ರಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ಬಳಂಜ ಫಾರ್ಮ್ ನ ಮಾಲೀಕ ಅನಿಲ್ ಭಟ್(45) ಅವರ ಪತ್ನಿ ಶೈಲಜಾ (35) ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ. ಅನಿಲ್ ಭಟ್ ಗೆ ಗಾಯವಾಗಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಗ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಅನಿಲ್ ಭಟ್ ಮತ್ತು ಪತ್ನಿ ಶೈಲಜಾ ಅವರು ತಮ್ಮ ಫಾರ್ಮ್ ನ ಕೆಲಸ ಮುಗಿಸಿ ಅವರ...

ಮಂಗಳೂರು; ಲಿಫ್ಟ್ ನಲ್ಲಿ ಸಿಲುಕಿ ಬೆಳಾಲಿನ ಯುವಕ ಮೃತ್ಯು

0

ಮಂಗಳೂರು: ನಗರದ ಕುಂಟಿಕಾನ ಬಳಿಯ ಆನ್‌ಲೈನ್‌ ಡೆಲಿವರಿ ಸಂಸ್ಥೆಯೊಂದರ ಕಟ್ಟಡದ ಲಿಫ್ಟ್‌ನಲ್ಲಿ ಸಿಲುಕಿ ಯುವಕನೊಬ್ಬ ಮೃತಪಟ್ಟ ಘಟನೆ ಶನಿವಾರ ನಡೆದಿದೆ. ಬೆಳ್ತಂಗಡಿಯ ಬೆಳಾಲು ಪೂಂಜಕೆರೆ ನಿವಾಸಿ ನೌಫಾಲ್ (28) ಮೃತ ಯುವಕ ಎಂದು ತಿಳಿದು ಬಂದಿದೆ. ನೌಫಲ್ ಕಾರ್ಯನಿಮಿತ್ತ ಲಿಫ್ಟ್‌ನಲ್ಲಿ ಮೇಲಕ್ಕೆ ಹೋಗುವಾಗ ಒಂದನೇ ಮಹಡಿ ಮತ್ತು ನೆಲಮಹಡಿ ಮಧ್ಯಭಾಗದಲ್ಲಿ ಲಿಫ್ಟ್ ಕೆಟ್ಟು ನಿಂತಿದೆ. ಈ ಸಂದರ್ಭ ನೌಫಲ್ ಅವರು ಲಿಫ್ಟ್ ನಲ್ಲಿ ಬಾಕಿಯಾಗಿರುವ ಬಗ್ಗೆ ಮಾಹಿತಿ ಪಡೆದ ಅಲ್ಲಿದ್ದ ಸಹೋದ್ಯೋಗಿಗಳು ರಕ್ಷಣೆಗೆ ಧಾವಿಸಿದ್ದಾರೆ. ಒಂದನೇ ಮಹಡಿಯಲ್ಲಿ ಲಿಫ್ಟ್‌ನ ಅರ್ಧಭಾಗ ಇದ್ದ ಕಾರಣ ಲಿಫ್ಟ್ ಬಾಗಿಲು...