ಬೆಳ್ತಂಗಡಿ; ಅರಣ್ಯದಲ್ಲಿ ಹುಲಿ ಗಣತಿಗೆ ಅಳವಡಿಸಲಾಗಿದ್ದ ಕ್ಯಾಮರ ಕಳವು ಪ್ರಕರಣ ದಾಖಲು
ಬೆಳ್ತಂಗಡಿ: ಸವಣಾಲು ಗ್ರಾಮದ ಪೇಲ ಎಂಬಲ್ಲಿ ಹುಲಿ ಗಣತಿಯ ಸಲುವಾಗಿ ಹಾಕಲಾಗಿದ್ದ ಎರಡು ಕ್ಯಾಮೆರಾಗಳನ್ನು ಕಳ್ಳರು ಕಳ್ಳತನ ಮಾಡಿರುವ ಬಗ್ಗೆ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಉಪವಲಯ ಅರಣ್ಯಾಧಿಕಾರಿ ರವೀಂದ್ರ ಕೆ. ಅವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.ಸವಣಾಲು ಗ್ರಾಮದ ಪೇಲ ಎಂಬಲ್ಲಿ ಮೇ ಒಂದರಂದು ಹುಲಿ ಗಣತಿಗಾಗಿ ಕ್ಯಾಮೆರಗಳನ್ನು ಅಳವಡಿಸಲಾಗಿತ್ತು.ಮೇ 13 ರಂದು ಪರಿಶೀಲಿಸಿದಾಗ ಎರಡು ಕ್ಯಾಮರಾಗಳನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುವುದಾಗಿ ಕಂಡು ಬಂದಿದೆ ಕಳವಾದ ಕ್ಯಾಮರಾಗಳ ಅಂದಾಜು ಮೌಲ್ಯ ರೂ 48000 ಆಗಿದ್ದು ಈ ಬಗ್ಗೆ ಬೆಳ್ತಂಗಡಿ...
ತಾಲೂಕಿಗೆಪ್ರತ್ಯೇಕ ಯೋಜನಾ ಪ್ರಾಧಿಕಾರವನ್ನು ರಚನೆ ಮಾಡುವಂತೆ ನಗರ ಮತ್ತು ಗ್ರಾಮಾಂತರ ಯೋಜನಾಪ್ರಾಧಿಕಾರದ ನಿರ್ದೇಶಕರಿಗೆ ರಕ್ಷಿತ್ ಶಿವರಾಂ ಮನವಿ
ಬೆಳ್ತಂಗಡಿ. ತಾಲೂಕಿನಲ್ಲಿ ಏಕನಿವೇಶನ ಹಾಗೂ 9/11 ಅರ್ಜಿಗಳ ವಿಲೇವಾರಿಯಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆ ಹಾಗೂ ವಿಳಂಬದ ಬಗ್ಗೆ, ಟೋಕನ್ ವ್ಯವಸ್ತೆಯನ್ನು ಸರಿಪಡಿಸುವಂತೆ ಮತ್ತು ಹೆಚ್ಚುವರಿ ಸಿಬ್ಬಂದಿ ನಿಯೋಜಿಸುವ ಬಗ್ಗೆಇಂದು ಬೆಂಗಳೂರಿನಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ನಗರ ಮತ್ತು ಗ್ರಾಮಾಂತರ ಯೋಜನಾ ಪ್ರಾಧಿಕಾರದ ನಿರ್ದೇಶಕರಾದಎನ್.ಕೆ ತಿಪ್ಪೇಸ್ವಾಮಿ ಅವರನ್ನು ಭೇಟಿ ಮಾಡಿ ಮನವಿ ಮಾಡಿದರು.ಇದರೊಂದಿಗೆ ಸದರಿ ಸಮಸ್ಯೆಗಳ ಬಗ್ಗೆ ಸಾರ್ವಜನಿಕರ ಹಿತದೃಷ್ಟಿಯಿಂದ ಬೆಳ್ತಂಗಡಿ ತಾಲ್ಲೂಕಿನ ಕೇಂದ್ರ ಭಾಗದಲ್ಲಿ ಬೆಳ್ತಂಗಡಿ ಯೋಜನಾ ಪ್ರಾಧಿಕಾರವನ್ನು ರಚಿಸಿ. ಎಲ್ಲ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವಂತೆಯೂ ಮನವಿ ಸಲ್ಲಿಸಿದರು.
ಬೆಳ್ತಂಗಡಿ; ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ – ಮಾಹಿತಿ ಕಾರ್ಯಕ್ರಮ
ಬೆಳ್ತಂಗಡಿ: ರಾಜ್ಯ ಸರಕಾರದ ಆದೇಶದಂತೆ ರಾಜ್ಯದ ಎಲ್ಲ ಕಡೆಗಳಲ್ಲಿ ವ್ಯಾಪಾರ ವ್ಯವಹಾರ ಮಳಿಗೆಗಳಲ್ಲಿ ಅಳವಡಿಸಲಾಗುವ ನಾಮಫಲಕಗಳಲ್ಲಿ 60% ಕನ್ನಡ ಬರಹ ಇರಬೇಕಾಗಿದ್ದು; ಈ ಆದೇಶದ ಅನುಷ್ಠಾನಕ್ಕೆ ಆಡಳಿತ ವ್ಯವಸ್ಥೆಯನ್ನು ಸ್ಥಳೀಯವಾಗಿ ಸಜ್ಜುಗೊಳಿಸಲು ಬೆಳ್ತಂಗಡಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಮೇ 15ರಂದು ನಡೆದ ತಾಲೂಕಿನ ಗ್ರಾಮ ಪಂಚಾಯತ್‌ಗಳ ಅಭಿವೃದ್ಧಿ ಅಧಿಕಾರಿಗಳ ಸಭೆಯಲ್ಲಿ ಅಗತ್ಯ ಮಾಹಿತಿ ನೀಡಲಾಯಿತು.ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಜಾಗೃತಿ ಸಮಿತಿಯ ಸದಸ್ಯರಾದ ಜೈಕನ್ನಡಮ್ಮ ಪತ್ರಿಕೆಯ ಸಂಪಾದಕ ದೇವಿಪ್ರಸಾದ್ ಸವಿವರವಾಗಿ ಮಾಹಿತಿ ನೀಡುತ್ತಾ; ಬೆಳ್ತಂಗಡಿ ತಾಲೂಕಿನಲ್ಲಿ ಎಲ್ಲಕಡೆ ಕನ್ನಡ ನಾಮಫಲಕಗಳ ಕಡ್ಡಾಯ ಅಳವಡಿಕೆಗೆ...
ಬೆಳ್ತಂಗಡಿ; ಪೊಲೀಸ್ ಸಿಬ್ಬಂದಿ ಮನೆಯಲ್ಲಿ ಕಳ್ಳತನ; ಚಿನ್ನಾಭರಣ ನಗದು ಕಳವು
ಬೆಳ್ತಂಗಡಿ: ಪದ್ಮುಂಜದ ಗಾಡಕೋಡಿ ಎಂಬಲ್ಲಿಯ ಬೆಳ್ತಂಗಡಿ ಪೋಲೀಸ್ ಸಿಬ್ಬಂದಿ ಕರುಣಾಕರ ಗೌಡ ಎಂಬವರ ಮನೆಯಲ್ಲಿ ಮೇ 15 ರಂದು ರಾತ್ರಿ ಕಳವಾಗಿದ್ದು ಈ ಬಗ್ಗೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಸುಮಾರು 13 ಲಕ್ಷ ರೂಪಾಯಿ ವೆಚ್ಚದ ಚಿಣ್ಣಾಭರಣ ಒಂದು ಲಕ್ಷ ರೂಪಾಯಿ ನಗದು ಕಳುವಾಗಿದೆ ಎಂದು ದೂರು ನೀಡಿಲಾಗಿದೆ . ಮನೆಯ ಒಡೆಯ ಕರುಣಾಕರ ಮನೆಯಲ್ಲಿ ಒಬ್ಬರೇ ಇದ್ದು ಪತ್ನಿ ಮಕ್ಕಳು ಬೆಂಗಳೂರಿನಲ್ಲಿ ಇದ್ದರು ಎಂದು ತಿಳಿದುಬಂದಿದೆ. ಕರುಣಾಕರ ರಾತ್ರಿ ಒಂದು ಗಂಟೆಯವರೆಗೂ ಎಚ್ಚರಿಕೆಯಲ್ಲಿದ್ದು ಬೆಳಿಗ್ಗೆ ಏಳುವರೆಗಂಟೆಗೆದ್ದು ನೋಡುವಾಗ ಬಾಗಿಲಿನ ಚಿಲಕ ತೆರೆದಿರುವುನ್ನು ನೋಡಿ...
ದೇಶದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ
ಬೆಳ್ತಂಗಡಿ; ನಿರೀಕ್ಷೆ ಯಂತೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಏರಿಕೆ ಮಾಡಲಾಗಿದೆ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ತಲಾ 3 ರೂಪಾಯಿ ಹೆಚ್ಚಳವಾಗಿದೆಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ತಲಾ 3 ರೂಪಾಯಿ ಹೆಚ್ಚಳವಾಗಿದೆ. ಪರಿಷ್ಕೃತ ದರ ಇಂದು ಬೆಳಿಗ್ಗೆಯಿಂದಲೇ ಜಾರಿಯಾಗಿದೆ. ದರ ಏರಿಕೆಯಿಂದ ಬೆಂಗಳೂರಿನಲ್ಲಿ ಪ್ರತಿ ಲೀಟರ್ ದರ 106.17 ರೂ. ಏರಿಕೆಯಾದರೆ ಡಿಸೇಲ್ ದರ 94.10 ರೂ. ತಲುಪಿದೆ.
ಖಿಳರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ಬೆಳ್ತಂಗಡಿ ವತಿಯಿಂದ ನೂತನ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ.
ಬೆಳ್ತಂಗಡಿ, ಮೇ 13: ಖಿಳರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ಬೆಳ್ತಂಗಡಿ ಇದರ ವತಿಯಿಂದ ನೂತನ ಸ್ಮಾರ್ಟ್ ಕ್ಲಾಸ್ ಹಾಗೂ ಮದರಸ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮವು ಖಿಳರ್ ಜುಮ್ಮಾ ಮಸೀದಿ ಆಡಳಿತ ಸಮಿತಿ ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಅಧ್ಯಕ್ಷತೆಯಲ್ಲಿ ಬುಧವಾರ ನಡೆಯಿತು. ದಾರುಸ್ಸಲಾಂ ಇದರ ಚೇರ್‌ಮನ್ ಝೈನುಲ್ ಆಬಿದ್ ಜೆಫ್ರಿ ತಂಙಳ್ ನೂತನ ಮದರಸ ಕೊಠಡಿಯನ್ನು ಉದ್ಘಾಟಿಸಿದರು. ಬಳಿಕ ಖತೀಬ್ ಹನೀಫ್ ಫೈಝಿ ಅವರು ಸ್ಮಾರ್ಟ್ ಕ್ಲಾಸ್ ಅನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಖಾದರ್ ನಾವೂರು ಅವರು, ಇಂದಿನ ಮಕ್ಕಳು ದಾರಿ ತಪ್ಪಲು...
ಮುಂಡಾಜೆ ತಾತ್ಕಾಲಿಕ ತಡೆಗೋಡೆಗೆಕಾರು ಡಿಕ್ಕಿ
ಬೆಳ್ತಂಗಡಿ:ರಸ್ತೆ ಕಾಮಗಾರಿ ಅಂಗವಾಗಿ ರಸ್ತೆ ಬದಿ ಹಾಕಲಾಗಿರುವ ತಾತ್ಕಾಲಿಕ ತಡೆಗೋಡೆಗೆ ಕಾರು ಡಿಕ್ಕಿ ಹೊಡೆದ ಪ್ರಕರಣ ಬುಧವಾರ ತಡರಾತ್ರಿ ನಡೆದಿದೆ.ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದ್ದು, ಮುಂಡಾಜೆಯ ಸನ್ಯಾಸಿಕಟ್ಟೆ ಶ್ರೀ ಪರಶುರಾಮ ದೇವಸ್ಥಾನದ ಮುಂಭಾಗದಿಂದ ಹಾದುಹೋಗುವ ರಸ್ತೆಯ ಒಂದು ಬದಿ ನೂತನ ಸೇತುವೆ ರಚನೆ ಕಾಮಗಾರಿ ನಡೆಯುತ್ತಿದ್ದು ಇದು ಪೂರ್ಣಗೊಂಡಿಲ್ಲ. ಈ ರಸ್ತೆ ಮೂಲಕ ವಾಹನ ಸಂಚಾರ ನಡೆಸದಂತೆ ರಸ್ತೆ ಬದಿ ತಾತ್ಕಾಲಿಕ ತಡೆಗೋಡೆಯನ್ನು ಇರಿಸಲಾಗಿದೆ. ಚಾರ್ಮಾಡಿ ಕಡೆಯಿಂದ ಉಜಿರೆ ಕಡೆ ಹೋಗುತ್ತಿದ್ದ ಕಾರು ಇದಕ್ಕೆ ಡಿಕ್ಕಿಯಾಗಿದ್ದು ಕಾರಿಗೆ ಹಾನಿ ಉಂಟಾಗಿದೆ.ಕಾರಿನಲ್ಲಿದ್ದವರು...
ದೀಪಕ್.ಜಿ. ಬೆಳ್ತಂಗಡಿ ಮಂಗಳೂರು ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಗೆ ಆಯ್ಕೆ
ಮಂಗಳೂರು : ಅನಾರೋಗ್ಯ ಪೀಡಿತ ಬಡವರ ಚಿಕಿತ್ಸೆಗೆ ನೆರವು, ಸೂರಿಲ್ಲದ ಬಡ ಕುಟುಂಬಗಳಿಗೆ ಮನೆ ನಿರ್ಮಾಣ, ಉಚಿತ ಆರೋಗ್ಯ ಶಿಬಿರ, ರಕ್ತದಾನ ಶಿಬಿರ, ಸರ್ಕಾರಿ ಶಾಲೆಗಳ ಶೌಚಾಲಯ ಸ್ವಚ್ಛತಾ ಅಭಿಯಾನ..ಹೀಗೆ ಹತ್ತು ಹಲವು ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಬೆಳ್ತಂಗಡಿಯ ಸಮಾಜ ಸೇವಕ ದೀಪಕ್.ಜಿ.ಅವರು ಮಂಗಳೂರು ಪ್ರೆಸ್ ಕ್ಲಬ್‌ನ 2025-26ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ನೇತೃತ್ವದ ಸಮಿತಿ ಆಯ್ಕೆ ನಡೆಸಿದ್ದು, ಪ್ರಶಸ್ತಿಯು 10,001 ರೂ.ನಗದು, ಪ್ರಶಸ್ತಿ ಫಲಕ , ಸ್ಮರಣಿಕೆ ಒಳಗೊಂಡಿದೆ. ಮೇ 24ರಂದು ಮಂಗಳೂರಿನ...
ಕೇರಳ ಮುಖ್ಯಮಂತ್ರಿ ಯಾಗಿ ವಿ.ಡಿ ಸತೀಶನ್ ಆಯ್ಕೆ
ಕೇರಳದಲ್ಲಿ ಯುಡಿಎಫ್ ಮೈತ್ರಿಕೂಟ ಭಾರೀ ಬಹುಮತ ಪಡೆದ ಹೊರತಾಗಿಯೂ ಮುಖ್ಯಮಂತ್ರಿ ಘೋಷಣೆ ಮಾಡುವಲ್ಲಿ ಕಾಂಗ್ರೆಸ್ ವಿಳಂಬ ಧೋರಣೆ ತೋರಿದ್ದು ರಾಷ್ಟ್ರ ಮಟ್ಟದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಕೇರಳದ ಮೂವರು ಪ್ರಬಲ ನಾಯಕರ ನಡುವಿನ ತೀವ್ರ ಪೈಪೋಟಿ ಕಾಂಗ್ರೆಸ್ ಹೈಕಮಾಂಡ್ ನ ತಲೆ ನೋವಿಗೆ ಕಾರಣವಾಗಿತ್ತು. ಕೊನೆಗೂ ಕಾಂಗ್ರೆಸ್ ನಾಯಕತ್ವ ಜನರ ಒತ್ತಡಕ್ಕೆ ಮಣಿದು ಜನ ನಾಯಕ ವಿ.ಡಿ. ಸತೀಶನ್ ಅವರಿಗೆ ಮುಖಮಂತ್ರಿ ಕುರ್ಚಿಯ ಮೇಲೆ ಕುಳಿತುಕೊಳ್ಳಲು ಅವಕಾಶ ಒದಗಿಸಿದೆ.ಹೈಕಮಾಂಡ್ ವಲಯದಲ್ಲಿ ಅಪಾರ ಪ್ರಭಾವ ಹೊಂದಿದ್ದ ಸಂಸದ ಕೆ.ಸಿ.ವೇಣುಗೋಪಾಲ್ ಅವರು ಕೊನೆಯ ಕ್ಷಣದ ವರೆಗೂ ಪ್ರಯತ್ನ...
ಸಿಯೋನ್ ಆಶ್ರಮದಲ್ಲಿ ಅಂತರಾಷ್ಟ್ರೀಯ ದಾದಿಯರ ದಿನಾಚರಣೆ ಆಚರಣೆ.
ಬೆಳ್ತಂಗಡಿ; ಸಿಯೋನ್ ಆಶ್ರಮದಲ್ಲಿ ಅಂತರಾಷ್ಟ್ರೀಯ ದಾದಿಯರ ದಿನವನ್ನು ಗೌರವಪೂರ್ವಕವಾಗಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಆಶ್ರಮದ ಮುಖ್ಯ ವೈದ್ಯಾಧಿಕಾರಿಗಳಾದ ಡಾ. ಶಿವಾನಂದ ಸ್ವಾಮಿ ಅವರು ಮಾತನಾಡಿ, ದಾದಿಯರ ಸೇವೆಯ ಮಹತ್ವವನ್ನು ವಿವರಿಸಿದರು. ದಾದಿಯರು ಸಮಾಜದ ಆರೋಗ್ಯ ವ್ಯವಸ್ಥೆಯ ನಿಜವಾದ ಆಧಾರಸ್ತಂಭಗಳಾಗಿದ್ದು, ಅನಾರೋಗ್ಯ ಪೀಡಿತರ ಹಾಗೂ ಅಗತ್ಯವಿರುವವರ ಸೇವೆಯಲ್ಲಿ ಅಪಾರ ಸಹನೆ, ಪ್ರೀತಿ ಮತ್ತು ತ್ಯಾಗ ಮನೋಭಾವದಿಂದ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಅವರು ತಿಳಿಸಿದರು. “ದಾದಿಯರ ಸೇವೆ ಮಾನವೀಯತೆಯ ಪ್ರತಿರೂಪವಾಗಿದ್ದು, ಅವರ ಸೇವೆ ದೇವರ ಸೇವೆಗೆ ಸಮಾನ” ಎಂದು ಅವರು ಅಭಿಪ್ರಾಯಪಟ್ಟರು. ಅವರ ನಿರಂತರ ಸೇವೆ ಹಾಗೂ ಕಾಳಜಿಯನ್ನು...















