ಬೆಳ್ತಂಗಡಿ ವಕೀಲರ ಸಂಘ ಹಾಗೂ ಹೈಕೋರ್ಟ್ ಪೀಠ ಹೋರಾಟ ಸಮಿತಿ ಬೆಳ್ತಂಗಡಿ ವತಿಯಿಂದ ” ಹೈಕೋರ್ಟ್ ಪೀಠಕ್ಕಾಗಿ ಪೋಸ್ಟ್ ಕಾರ್ಡ್ ಅಭಿಯಾನ”
ಬೆಳ್ತಂಗಡಿ; ಬೆಳ್ತಂಗಡಿ ವಕೀಲರ ಸಂಘ ಹಾಗೂ ಹೈಕೋರ್ಟ್ ಪೀಠ ಹೋರಾಟ ಸಮಿತಿ ಬೆಳ್ತಂಗಡಿ ವತಿಯಿಂದ " ಹೈಕೋರ್ಟ್ ಪೀಠಕ್ಕಾಗಿ ಪೋಸ್ಟ್ ಕಾರ್ಡ್ ಅಭಿಯಾನ" ನಕ್ಕೆಹಿರಿಯ ವಕೀಲರು ವಿಧಾನ ಪರಿಷತ್ ಸದಸ್ಯರೂ ಆದ ಪ್ರತಾಪ ಸಿಂಹ ನಾಯಕ್ ನೆರವೇರಿಸಿದರು.ಬಳಿಕ ಮಾತನಾಡಿದ ಅವರು ನಮ್ಮ ರಾಜ್ಯ ದಲ್ಲಿ ಕರಾವಳಿ ಕರ್ನಾಟಕಕ್ಕೆ ಅಂದರೆ ಮಂಗಳೂರಿಗೆ ಅಗತ್ಯವಾಗಿ ಹೈಕೋರ್ಟ್ ಪೀಠ ಬೇಕಾಗಿದೆ. ಈ ನಿಟ್ಟಿನಲ್ಲಿ ಇವತ್ತು ಹಮ್ಮಿಕೊಂಡ ಈ ಅಭಿಯಾನ ನಿಜಕ್ಕೂ ಪ್ರೇರಣಾದಾಯಕವಾಗಿದೆ. ಈ ಕಾರ್ಯಕ್ಕೆ ವಕೀಲರು, ಸಾರ್ವಜನಿಕರು, ಉದ್ಯಮಿಗಳು ಹಿರಿಯರು ದನಿಗೂಡಿಸಬೇಕು ತಮ್ಮ ಸಂಪೂರ್ಣ ಸಹಕಾರ ಬೆಂಬಲವನ್ನು...
ಅರಸಿನಮಕ್ಕಿಯಲ್ಲಿ ಶಿಕ್ಷಕಿಯ ಮೃತದೇಹ ಬಾವಿಯಲ್ಲಿ ಪತ್ತೆ
ಬೆಳ್ತಂಗಡಿ; ಅರಸಿನಮಕ್ಕಿಯ ಬೂಡುಮುಗೇರು ನಿವಾಸಿ ಅರಸಿನಮಕ್ಕಿ ಗೋಪಾಲಕೃಷ್ಣ ಅನುದಾನಿತ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ನಿರ್ವಹಿಸುತ್ತಿದ್ದ ತೇಜಸ್ವಿನಿ (23ವ.) ಅವರ ಮೃತದೇಹ ಅ. 23 ಗುರುವಾರದಂದು ಮನೆ ಸಮೀಪದ ಬಾವಿಯಲ್ಲಿ ಪತ್ತೆಯಾಗಿದೆ. ಇವರು ಕಳೆದ ಎರಡು ವರ್ಷಗಳಿಂದ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು.ಇವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರೆನ್ನಲಾಗಿದ್ದು, ಕಾಲು ಜಾರಿ ಬಾವಿಗೆ ಬಿದ್ದರೇ, ಅಥವಾ ಆತ್ಮಹತ್ಯೆ ಮಾಡಿಕೊಂಡರೇ ಎಂಬುದು ಇನ್ನು ಖಚಿತವಾಗಿಲ್ಲ, ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತರು ತಂದೆ, ತಾಯಿ, ಸಹೋದರಿಯರು, ಬಂಧು ಬಳಗವನ್ನು ಅಗಲಿದ್ದಾರೆ.
ಧರ್ಮಸ್ಥಳ; ಅ24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ವರ್ಧಂತ್ಯುತ್ಸವ
ಧರ್ಮಸ್ಥಳ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58 ನೇ ವರ್ಧಂತ್ಯುತ್ಸವ ಅ. 24 ರಂದು ಶುಕ್ರವಾರ ಧರ್ಮಸ್ಥಳದಲ್ಲಿ ನೌಕರವೃಂದದವರು, ಊರಿನ ನಾಗರಿಕರು, ಭಕ್ತರು ಹಾಗೂ ಅಭಿಮಾನಿಗಳ ಉಪಸ್ಥಿತಿಯಲ್ಲಿ ನಡೆಯಲಿದೆ.ಭಗವಾನ್ ಚಂದ್ರನಾಥಸ್ವಾಮಿ ಬಸದಿ ಹಾಗೂ ಶ್ರೀ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆಗಳು ನಡೆಯಲಿವೆ.ಊರಿನ ನಾಗರಿಕರು, ಭಕ್ತರು ಹಾಗೂ ಅಭಿಮಾನಿಗಳು ಪೂಜ್ಯ ಹೆಗ್ಗಡೆಯವರಿಗೆ ಶ್ರದ್ಧಾ-ಭಕ್ತಿಯಿಂದ ಗೌರವಾರ್ಪಣೆ ಮಾಡುವರು. ಸಭಾಕಾರ್ಯಕ್ರಮ:ಅಪರಾಹ್ನ ನಾಲ್ಕು ಗಂಟೆಯಿಂದ ನಡೆಯುವ ಸಮಾರಂಭದಲ್ಲಿ ತುಮಕೂರಿನ ಸಿದ್ಧಗಂಗ ಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದಾರೆ.ಶಾಸಕರುಗಳಾದ ಹರೀಶ್ ಪೂಂಜ, ಕೆ. ಪ್ರತಾಪಸಿಂಹ ನಾಯಕ್ ಮತ್ತು...
ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಆರೋಪಿಯ ಕಾಲಿಗೆ ಗುಂಡೇಟು ಬಂಧನ
ಬೆಳ್ತಂಗಡಿ; ಲಾರಿಯಲ್ಲಿ ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ತಂಡವನ್ನು ಬೆನ್ನಟ್ಟಿದ ಪೊಲೀಸರ ವಾಹನಕ್ಕೆ ಲಾರಿ ಡಿಕ್ಕಿಹೊಡೆಸಿ ಪರಾರಿಯಾಗಲು ಯತ್ನಿಸಿದ್ದ ಗೋಸಾಗಾಟಗಾರರ ಮೇಲೆ ಪೊಲೀಸರು ಗುಂಡು ಹಾರಿಸಿ ಆರೋಪಿಯನ್ನು ಬಂಧಿಸಿದ ಘಟನೆ ಪುತ್ತೂರಿನ ಈಶ್ವರ ಮಂಗಲದಲ್ಲಿ ಬುಧವಾರ ಬೆಳಗ್ಗೆ ನಡದಿದೆ. ಆರೋಪಿ ಅಬ್ದುಲ್ಲಾ (40 ವರ್ಷ) ಎಂಬಾತನಾಗಿದ್ದಾನೆ.ಐಚರ್ ವಾಹನದಲ್ಲಿ 10 ಜಾನುವಾರಗಳನ್ನು ಸಾಗಿಸುತ್ತಿದ್ದನು ಆತನೇ ಚಾಲಕನಾಗಿದ್ದು, ಇನ್ನೊಬ್ಬ ಆರೋಪಿಯೂ ವಾಹನದಲ್ಲಿದ್ದ. ವಾಹನವನ್ನು ನಿಲ್ಲಿಸಲು ಪೊಲೀಸರು ಸೂಚಿಸಿದಾಗ ಆತನು ನಿಲ್ಲಿಸದೆ ಇದ್ದು ಪೊಲೀಸ್‌ರು ಸುಮಾರು 10 ಕಿಮೀ ದೂರ ವಾಹನವನ್ನು ಬೆನ್ನಟ್ಟಿದರು, ಆರೋಪಿಯು ಪೊಲೀಸ್ ಜೀಪಿಗೆ ಹಿಂಬದಿಯಿಂದ...
ರಾಜ್ಯ ಮಟ್ಟದ ಸ್ಪೆಲ್ ಬಿ ಪರೀಕ್ಷೆಮುಂಡಾಜೆ ಕ್ರೈಸ್ಟ್ ಅಕಾಡಮಿ (ಐಸಿಎಸ್‌ಇ)ಶಾಲಾ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಬೆಳ್ತಂಗಡಿ; ಅಕ್ಟೋಬರ್ 12 ರಂದು ಬೆಂಗಳೂರಿನಲ್ಲಿ ನಡೆದ ಸ್ಪೆಲ್ ಬಿರಾಜ್ಯ ಮಟ್ಟದ ಪರೀಕ್ಷೆಯಲ್ಲಿಮುಂಡಾಜೆ ಕ್ರೈಸ್ಟ್ ಅಕಾಡಮಿ (ಐಸಿಎಸ್‌ಇ) ಶಾಲಾ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿ ಸಾಧನೆ ತೋರಿದ್ದಾರೆ.ಶಾಲೆಯ 3 ನೇ ತರಗತಿಯ ವಿದ್ಯಾರ್ಥಿ ಅಭಿಗೇಲ್ ಅನ್ ಥೋಮಸ್ ಪ್ರಥಮ ರ್ರ್ಯಾಂಕ್, 6 ನೇ ತರಗತಿಯ ಅಲಿನ್ ಮರಿಯಾ ಥೋಮಸ್ 5 ನೇ ರ್ರ್ಯಾಂಕ್ , ಅವಿನ ಪ್ರಿಯಾ ಫೆರ್ನಾಂಡೀಸ್ 14 ನೇ ರ್ರ್ಯಾಂಕ್, ಸ್ಮಹೀ ಪರಾಂಜಪೆ 19 ನೇ ರ್ರ್ಯಾಂಕ್, 8 ನೇ ತರಗತಿಯ ರೋಸ್ಣಾ ಪಿ.ಎಮ್ 8 ನೇ ರ್ರ್ಯಾಂಕ್, ತನುಷ್ವಿ...
ಧರ್ಮಸ್ಥಳ ಪ್ರಕರಣ ತಾರ್ಕಿಕ ಅಂತ್ಯ ಕಾಣುವ ವರೆಗೆ ಎಸ್.ಐ.ಟಿ ತನಿಖೆ ಮುಂದುವರಿಸಲು ಮಹಿಳಾ ಮುಖಂಡರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದತನಿಖೆ ನಡೆಸುತ್ತಿರುವ ಎಸ್.ಐ.ಟಿ ತನಿಖೆಯ ವ್ಯಾಪ್ತಿಗೆ ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ತರುವಂತೆ ಹಾಗೂ ಎಲ್ಲ ಪ್ರಕರಣಗಳ ಬಗ್ಗೆ ಸಮಗ್ರವಾದ ತನಿಖೆ ನಡೆಸುವಂತೆ ತನಿಖೆ ತಾರ್ಕಿಕ ಅಂತ್ಯ ಕಾಣುವ ವರೆಗೆ ಎಸ್.ಐ.ಟಿ ಮುಂದುವರಿಸುವಂತೆ ವಿವಿಧ ಮಹಿಳಾ ಸಂಘಟನೆಗಳ ಮುಖಂಡರುಗಳು ಬೆಂಗಳೂರಿನಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿ ಮನವಿ ಸಲ್ಲಿಸಿದ್ದಾರೆ.ಮನವಿಯಲ್ಲಿ ಧರ್ಮಸ್ಥಳ ದಲ್ಲಿ ನಡೆದಿರುವ ಎಲ್ಲ ಪ್ರಕರಣಗಳನ್ನು ಎಸ್.ಐ.ಟಿ ವ್ಯಾಪ್ತಿಗೆ ತರಬೇಕು, ಸಿ.ಬಿ.ಐ ಕೋರ್ಟ್ ಹೇಳಿರುವ ತಪಿತಸ್ತ ಅಧಿಕಾರಿಗಳ ಮೇಲಿನ ಕ್ರಮದ ಬಗ್ಗೆಯು...
ಬೆಳ್ತಂಗಡಿ: ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಸಾವು; ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು
ಬೆಳ್ತಂಗಡಿ; ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಕಳೆಂಜದಲ್ಲಿ ನಡೆದಿದ್ದು ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಕಳೆಂಜ ಗ್ರಾಮದ ನಿವಾಸಿ ಅನುರಾಜ್ (43) ಎಂಬಾತನೇ ಮೃತ ವ್ಯಕ್ತಿಯಾಗಿದ್ದಾರೆ.ವಿಪರೀತ ಕುಡಿತದ ಚಟ ಹೊಂದಿದ್ದ ಈತ ಅ17 ರಂದು ರಾತ್ರಿಯ ವೇಳೆ ಮನೆಯಲ್ಲಿ ವಿಷ ಸೇವಿಸಿದ್ದು ಆತನನ್ನು ಕೂಡಲೇ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತುಆದರೆ ಆತ ಚಿಕಿತ್ಸೆಗೆ ಸ್ಫಂದಿಸದೆ ಅ18ರಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಮೃತನ ಸಹೋದರ ಬಾಬು ನೀಡಿರುವ ದೂರಿನಂತೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ವಾಲಿಬಾಲ್ ನಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಜೆಸ್ವಿನ್ ಪಾಲಾಟಿ ಯವರಿಗೆ ಕೆ.ಎಸ್.ಎಂ.ಸಿ ಎ ವತಿಯಿಂದ ಅಭಿನಂದನೆ
ಬೆಳ್ತಂಗಡಿ; ಇತ್ತೀಚೆಗೆ ನಡೆದ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ವಿಜೇತರಾಗಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಸೈಟ್ ಸಾವಿಯೋ ಶಾಲೆಯ ವಿದ್ಯಾರ್ಥಿ ಜೆಸ್ವಿನ್ ಪಾಲಾಟಿ ಯವರನ್ನು ಬೆಳ್ತಂಗಡಿ ಧರ್ಮಪ್ರಾಂತ್ಯದ ಕೆ.ಎಸ್.ಎಂ.ಸಿಸಂಘಟನೆಯ ವತಿಯಿಂದ ಅಭಿನಂದಿಸಲಾಯಿತು. ತೋಟ್ಟತಾಡಿ ಫೊರೋನಾ ಚರ್ಚಿನ ಧರ್ಮಗುರುಗಳಾದ ಫಾ. ಜೋಸ್ ಪೂವತಿಂಕಲ್ ಅಭಿನಂದನಾ ಭಾಷಣ ಮಾಡಿದ್ರು. ಕೆ.ಎಸ್.ಎಂ.ಸಿ ಎ ಕೇಂದ್ರ ಸಮಿತಿ ಅಧ್ಯಕ್ಷ ಬಿಟ್ಟಿ ನೆಡುನಿಲಂ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿ ಸನ್ಮಾನಿಸಿದರು. ರೆ ಫಾ. ಮ್ಯಾಥ್ಯೂ ಮಣಪ್ಪಟ್ , ಸಂಘಟನೆಯ ಪಿ.ಆರ್.ಒ ಸೆಬಾಸ್ಟಿಯನ್ ಪಿ.ಸಿ , ತೊಟ್ಟತ್ತಾಡಿ ವಲಯ ಅಧ್ಯಕ್ಷ ಡೆನ್ನಿಸ್,...
ಬೆಳ್ತಂಗಡಿ: ಬಿಜೆಪಿ ಯುವ ಮೋರ್ಚಾದ ವತಿಯಿಂದ ಸಂಭ್ರಮದ ದೋಸೆ ಹಬ್ಬ
ಬೆಳ್ತಂಗಡಿ; ಬಿಜೆಪಿ ಯುವ ಮೋರ್ಚಾ ವತಿಯಿಂದ ದೀಪಾವಳಿ ದೋಸೆ ಹಬ್ಬ ಕಾರ್ಯಕ್ರಮಕ್ಕೆ ಸಂಭ್ರಮದ ಚಾಲನೆ ನೀಡಲಾಯಿತು.ಬಿಜೆಪಿ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ದೊಡ್ಡ ಬಳ್ಳಾಪುರದ ಶಾಸಕ ಧೀರಜ್ ಮುನಿರಾಜ್ ಅವರು ನೆರವೇರಿಸಿ ಮಾತನಾಡಿ ಶಾಸಕ ಹರೀಶ್ ಪೂಂಜ ಅವರು ತಾಲೂಕಿನ ಸಮಗ್ರವಾದ ಅಭಿವೃದ್ಧಿ ಗೆ ಶ್ರಮಿಸಿದ್ದಾರೆ. ಆರ್.ಎಸ್.ಎಸ್.ಬಗ್ಗೆ ಸರಿಯಾದ ಮಾಹಿತಿಯಿಲ್ಲದೆ ಪ್ರಿಯಾಂಕಾ ಖರ್ಗೆ ಅವರು ಮಾತನಾಡುತ್ತಿದ್ದಾರೆ ಅವರು ಒಮ್ಮೆ ಸಂಘದ ಕಾರ್ಯಕ್ರಮಕ್ಕೆ ಬಂದರೆ ಅವರ ತಪ್ಪು ಕಲ್ಪನೆ ಹೋಗಬಹುದು ಎಂದರು.ಸಂಸದ ಬ್ರಿಜೇಶ್ ಚೌಟ ಮಾತನಾಡಿ ದೇಶಕಟ್ಟುವ ಕಾರ್ಯಕ್ಕೆ ಪ್ರಧಾನಿ ನರೇಂದ್ರಮೋದಿಯವರೊಂದಿಗೆ ಪ್ರತಿಯೊಬ್ಬರೂ ಕೈಜೋಡಿಸಬೇಕಾಗಿದೆ...
ಬೆಳ್ತಂಗಡಿ ಬಂದಾರಿನ ಸಹೋದರಿಯರು ವಾಲಿಬಾಲ್ ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ
ಬೆಳ್ತಂಗಡಿ: 14ರ ಮತ್ತು 17ರ ವಯೋಮಾನದ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಚಿನ್ನದ ಪದಕ ಪಡೆದ ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದ ಸಹೋದರಿಯರು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಬಂದಾರಿನ ಮೊಗ್ರು ಗ್ರಾಮದ ದಂಡುಗ ನಿವಾಸಿ ಶೀಲಾವತಿ ಹಾಗೂ ಜನಾರ್ದನ ದಂಪತಿಯ ಪುತ್ರಿಯರಾದ ರಕ್ಷಿತಾ ಜೆ., ಹಾಗೂ ಯಕ್ಷಿತಾ ಜೆ., ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿನಿಯರು.ರಕ್ಷಿತಾ ಜೆ., ಬಂದಾರು ಸ.ಹಿ.ಪ್ರಾ ಶಾಲೆಯ ವಿದ್ಯಾರ್ಥಿನಿಯರಾಗಿದ್ದು 14ವರ್ಷ ವಯೋಮಿತಿಯ ವಿಭಾಗದಲ್ಲಿ ಹಾಗೂ ಯಕ್ಷಿತಾ ಜೆ., ಮುಂಡಾಜೆ ಅನುದಾನಿತ ಪ್ರೌಢಶಾಲೆಯ ವಿದ್ಯಾರ್ಥಿನಿಯಾಗಿದ್ದು 17ವಯೋಮಾನದ ವಿಭಾಗದಲ್ಲಿ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಭಾಗವಹಿಸಿದ್ದು...















