ನೆರಿಯ; ಬೆಂಕಿ ಆಕಸ್ಮಿಕದಲ್ಲಿ ಮನೆ ಸುಟ್ಟು ಹೋದ ಹರೀಶ್ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ
ಬೆಳ್ತಂಗಡಿ; ನೆರಿಯ ಗ್ರಾಮದಲ್ಲಿ ಬೆಂಕಿ ಆಕಸ್ಮಿಕದಲ್ಲಿ ಸಂಪೂರ್ಣವಾಗಿ ಸುಟ್ಟು ಹೋದ ಹರೀಶ್ ವಿ. ಅವರ ಮನೆಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಮಂಗಳವಾರ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು. ತಾತ್ಕಾಲಿಕವಾಗಿ ವಾಸ್ತವ್ಯವಿರಲು ಮನೆಯ ವ್ಯವಸ್ಥೆಯನ್ನು ಮತ್ತು ಮುಂದಿನ ಮನೆ ನಿರ್ಮಾಣದ ಕುರಿತು ಸ್ಥಳೀಯ ಕಾರ್ಯಕರ್ತರೊಂದಿಗೆ ಚರ್ಚಿಸಲಾಯಿತು.ಇದೆ ಸಂದರ್ಭದಲ್ಲಿ ಶಾಸಕರು ವೈಯಕ್ತಿಕವಾಗಿ ಹರೀಶ್ ಅವರಿಗೆ ಸಹಾಯ ಧನವನ್ನು ನೀಡಿ ಧೈರ್ಯ ತುಂಬಿದರು ಈ ಸಂದರ್ಭದಲ್ಲಿ ಬಿ.ಜೆ.ಪಿ ಮಹಾಶಕ್ತಿ ಕೇಂದ್ರ ಪ್ರಮುಖರಾದ ಬಾಬು ಗೌಡ ಪರ್ಪಳ, ಶಕ್ತಿ ಕೇಂದ್ರ ಪ್ರಮುಖರರಾದ ವಿಶ್ವನಾಥ ಅಣಿಯೂರು,ಗ್ರಾಮ...
ನಾವರ; ರಸ್ತೆ ಬದಿಯಲ್ಲಿ ಬಲಿಗಾಗಿ ಕಾಯುತ್ತಿರುವ ತೆರದ ಬಾವಿ
ಬೆಳ್ತಂಗಡಿ; ಸುಲ್ಕೇರಿ ಮೊಗ್ರು ಗ್ರಾಮಪಂಚಾಯತಿನ ನಾವರ ಗ್ರಾಮದ ದೇವರ ಗುಡ್ಡೆ ಎಸ್.ಸಿ ಕಾಲೊನಿಯಲ್ಲಿ ರಸ್ತೆ ಬದಿಯಲ್ಲಿ ತೆರೆದ ಬಾವಿಯೊಂದು ಬಲಿಗಾಗಿ ಬಾಯಿತೆರದು ಕಾಯುತ್ತಿದೆ.ರಸ್ತೆಯ ಬದಿಯಲ್ಲಿಯೇ ಇರುವ ಈ ಬಾವಿಗೆ ಯಾವುದೇ ಆವರಣಗೋಡೆ ತಡೆಬೇಲಿಯಿಲ್ಲ. ವಾಹನ ಸವಾರರು ಒಂದಿಷ್ಟು ಎಚ್ಚರ ತಪ್ಪಿದರೂ ಆಪಾಯವಿದೆ. ಕಿರಿದಾದರಸ್ತೆಯಿಂದ ಕೇವಲ ನಾಲ್ಕು ಫೀಟ್ ಅಂತರದಲ್ಲಿ ಈ ಬಾವಿಯಿದೆ. ಪ್ರತಿ ನಿತ್ಯ ಸಾರ್ವಜನಿಕರು ಓಡಾಡು ರಸ್ತೆ ಇದಾಗಿದ್ದು ಶಲಾಮಕ್ಕಳೂ ಇದೇ ದಾರಿಯಲ್ಲಿ ನಡೆದುಕೊಂಡು ಹೋಗುತ್ತಾರೆ. ನೀರು ಹಾಗೂ ತ್ಯಾಜ್ಯ ತುಂಬಿರುವ ಈ ಬಾವಿ ಅಪಾಯಕಾರಿಯಾಗಿ ಬಾಗಿ ತೆರೆದು ರಸ್ತೆಬದಿಯಲ್ಲಿಯೇ ನಿಂತಿದೆ.ಈ...
ಸಮೀಕ್ಷೆ ಹಿನ್ನಲೆ ಸರಕಾರಿ ಶಾಲೆಗಳಿಗೆ ಅ 18ರ ವರೆಗೆ ರಜೆ ಘೋಷಣೆ ಮುಖ್ಯಮಂತ್ರಿ ಆದೇಶ
ಬೆಳ್ತಂಗಡಿ: ರಾಜ್ಯದಲ್ಲಿ ಈಗಾಗಲೇ ನಡೆಯುತ್ತಿರುವ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಗಳು ನಡೆಯುತ್ತಿದ್ದು ನಿಗದಿತ ಸಮಯಕ್ಕೆ ಸಮೀಕ್ಷೆ ಮುಗಿಯದ ಹಿನ್ನೆಲೆಯಲ್ಲಿ ಅ.8ರಿಂದ ಅ.18ರವರೆಗೆ ರಾಜ್ಯದ ಎಲ್ಲಾ ಸರಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ರಜೆಯನ್ನು ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.ಅ.7ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಶಿಕ್ಷಣ ಸಚಿವರು ನಡೆಸಿದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದ್ದು, ಅ.18ನೇ ತಾರೀಕಿನ ಒಳಗೆ ಬಾಕಿ ಇರುವ ಎಲ್ಲಾ ಸಮೀಕ್ಷೆ ಕಾರ್ಯಗಳನ್ನು ಮುಗಿಸಲು ಸೂಚನೆ ನೀಡಲಾಗಿದೆ.
ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕದ ಪದಗ್ರಹಣ ಸಮಾರಂಭ
ಬೆಳ್ತಂಗಡಿ; ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕದ ನೂತನ ಸಮಿತಿಯ ಪದಗ್ರಹಣ ಕಾರ್ಯಕ್ರಮ ಜೆ.ಎಮ್.ಎಫ್ ಸಭಾ ಭವನದಲ್ಲಿ ನಿಕಟ ಪೂರ್ವ ಅಧ್ಯಕ್ಷರಾದ ಬಿ.ಶೇಖುಂಞ್ಞ ಯವರು ನೂತನ ಅಧ್ಯಕ್ಷರಾದ ಖಾಲಿದ್ ಪುಲಾಬೆ ಯವರಿಗೆ ಅಧಿಕಾರ ಹಸ್ತಾಂತರಿಸುವ ಮೂಲಕ ನಡೆಯಿತು. ಹಿರಿಯರಾದ ಅಬ್ದುಲ್ ಲತೀಫ್ ಸಾಹೇಬ್ ಜಮೀಯತುಲ್ ಫಲಾಹ್ ನಡೆದು ಬಂದ ದಾರಿ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು. ನಿಕಟ ಪೂರ್ವ ಕೋಶಾಧಿಕಾರಿ ಅಬ್ಬೋನು ಮದ್ದಡ್ಕ, ನೂತನ ಪ್ರಧಾನ ಕಾರ್ಯದರ್ಶಿಗಳಾದ ಉಮರ್ ಬೆಳ್ತಂಗಡಿ, ಉಪಾಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ, ಜೊತೆ ಕಾರ್ಯದರ್ಶಿ ಆಲಿಯಬ್ಬಾ ಪುಲಾಬೆ, ಪತ್ರಿಕಾ ಕಾರ್ಯದರ್ಶಿ ಇಲ್ಯಾಸ್ ಕರಾಯ,...
ಬೆಳ್ತಂಗಡಿ : ನೆರಿಯ ಮನೆಗೆ ಬೆಂಕಿ ಬಿದ್ದು ಹಾನಿಯಾದ ಕುಟುಂಬಕ್ಕೆ ಕಿರಣ್ ಚಂದ್ರ ಡಿ ಪುಷ್ಪಗಿರಿ ಸಹಾಯ ಹಸ್ತ
ಬೆಳ್ತಂಗಡಿ : ನೆರಿಯ ನಿವಾಸಿ ಹರೀಶ್ ವಿ. ಮನೆಗೆ ಅ.6 ರಂದು ರಾತ್ರಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಮನೆಗೆ ಸಂಪೂರ್ಣವಾಗಿ ಹಾನಿಯಾಗಿದ್ದು ಮನೆಗೆ ಕಿರಣ್ ಚಂದ್ರ ಡಿ ಪುಷ್ಪಗಿರಿಯವರಟೀಂ ಪುಷ್ಪಗಿರಿ ತಂಡದ ಸದಸ್ಯರು ಘಟನಾ ಸ್ಥಳಕ್ಕೆ ತುರ್ತಾಗಿ ಬೇಟಿ, ಕಿರಣ್ ಚಂದ್ರ ರವರ ಸಲಹೆ ಮೇರೆಗೆ ಮನೆ ಪುನರ್ನಿರ್ಮಾಣ ಕಾರ್ಯಕ್ಕೆ 25 ಸಾವಿರ ರೂಪಾಯಿಗಳ ಧನ ಸಹಾಯ ಮಾಡಿದರು. ಈ ಸಂಧಭದಲ್ಲಿ ಮನೆಯವರ ಜೊತೆ ಕರೆ ಮಾಡಿ ಮಾತನಾಡಿದ ಕಿರಣ್ ಚಂದ್ರ ಡಿ. ಪುಷ್ಪಗಿರಿಯವರು ಮನೆಯ ದುರಸ್ತಿ ಕಾರ್ಯಕ್ಕೆ ಇನ್ನಷ್ಟು ಆರ್ಥಿಕ ಸಹಾಯ ಮಾಡುವುದಾಗಿ...
ನಾರಾವಿ ಮನೆಯ ಬೀಗ ಒಡೆದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು
ಬೆಳ್ತಂಗಡಿ; ನಾರಾವಿ ಗ್ರಾಮಪಂಚಾಯತು ವ್ಯಾಪ್ತಿಯ ಕುತ್ಲೂರು ಗ್ರಾಮದ ಮಂಜುಶ್ರೀನಗರ ಶ್ರೀ ಅನಘ ಎಂಬಲ್ಲಿನ ನಿವಾಸಿ ಅವಿನಾಶ್ ಎಂಬವರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಬೀಗ ಒಡೆದು ನುಗ್ಗಿದ ಕಳ್ಳರು 9.5 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ ಘಟನೆ ನಡೆದಿದ್ದು ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಮನೆಯವರು ಅ2ರಂದು ಮನೆಗೆ ಬೀಗ ಹಾಕಿ ಹೋಗಿದ್ದು ಅ 6 ರಂದು ಬಂದು ನೋಡಿದಾಗ ಮನೆಯ ಬೀಗ ಒಡೆದಿದ್ದು ಕಳ್ಳತನವಾಗಿರುವುದು ಕಂಡು ಬಂದಿದೆ. ಮನೆಯೊಳಗೆ ಪ್ರವೇಶಿಸಿದ ಕಳ್ಳರು ಬೆಡ್ ರೂಮಿನ ಕಪಾಟಿನ ಬೀಗ ಒಡೆದು...
ಶಿಬಾಜೆ; ಅರಣ್ಯ ಇಲಾಖೆ ಕೃಷಿ ನಾಶಮಾಡಿದ ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ
ಬೆಳ್ತಂಗಡಿ: ಶಿಬಾಜೆ ಗ್ರಾಮದ ಅರಂಪಾದೆ ಎಂಬಲ್ಲಿ ಕಳೆದ ಹಲವು ದಶಕಗಳಿಂದ ವಾಸವಿದ್ದ ಒ. ಪಿ. ಜಾರ್ಜ್ ಅವರ ರಬ್ಬರ್ ಕೃಷಿ ತೋಟವನ್ನು ಅರಣ್ಯ ಇಲಾಖೆಯವರು ಕಡಿದು ನಾಶಪಡಿಸಿರುವ ಹಿನ್ನೆಲೆಯಲ್ಲಿ ಅ.6ರಂದು ಶಾಸಕ ಹರೀಶ್ ಪೂಂಜ ಅವರು ಪ್ರದೇಶಕ್ಕೆ ಭೇಟಿ ನೀಡಿ ಮನೆಯವರೊಂದಿಗೆ ಮಾತುಕತೆ ನಡೆಸಿದರು.ಶಿಬಾಜೆ ಗ್ರಾಮದಲ್ಲಿ 184ಸರ್ವೇ ನಂಬರ್ ನಲ್ಲಿ ಸುಮಾರು 80ಕ್ಕೂ ಹೆಚ್ಚಿನ ಕುಟುಂಬ ವಾಸವಿದ್ದು ಇದರಲ್ಲಿ ಹೆಚ್ಚಿನವರು ಜೀವನಕ್ಕೆ ಇದೇ ಭೂಮಿಯನ್ನು ನಂಬಿಕೊಂಡು ಇಲ್ಲಿ ಕೃಷಿ ಮಾಡಿ ಜೀವನ ಮಾಡುತ್ತಿದ್ದಾರೆ. ಇದೀಗ ಅರಣ್ಯ ಇಲಾಖೆ ಏಕಾಏಕಿ ಒಬ್ಬ ಕೃಷಿಕನ ಜಾಗವನ್ನು...
ಬೆಳ್ತಂಗಡಿ; ನೆರಿಯದಲ್ಲಿ ಬೆಂಕಿ ಆಕಸ್ಮಿಕ ಮನೆ ಸಂಪೂರ್ಣ ಭಸ್ಮ
ಬೆಳ್ತಂಗಡಿ; ತಾಲೂಕಿನ ನೆರಿಯ ಗ್ರಾಮದ ಕಡ್ಡಿಬಾಗಿಲು ಎಂಬಲ್ಲಿ ಹರೀಶ್ ಎಂಬವರ ಮನೆಯಲ್ಲಿ ವೇಳೆ ಬೆಂಕಿ ಅನಾಹುತ ಉಂಟಾಗಿ ಮನೆಗೆ ಭಾರಿ ಹಾನಿಯಾದ ಘಟನೆ ಸೋಮವಾರ ರಾತ್ರಿಯ ನಡೆದಿದೆ. ಘಟನೆಯ ವೇಳೆ ಮನೆಯಲ್ಲಿ ಯಾರು ಇಲ್ಲದ ಕಾರಣ ಯಾವುದೇ ಸಾವು ನೋವು ಉಂಟಾಗಿಲ್ಲ.ಹರೀಶ್ ಅವರು ಭಜನೆ ಗುರುಗಳಾಗಿದ್ದು ಅವರು ತಮ್ಮ ತಂಡದೊಂದಿಗೆ ಬೇರೆಡೆ ತೆರಳಿದ್ದರು. ಪತ್ನಿ ಹಾಗೂ ಒಬ್ಬಳು ಮಗಳು ತವರು ಮನೆಗೆ ಹೋಗಿದ್ದರು.ಇನ್ನಿಬ್ಬರು ಮಕ್ಕಳು ಮನೆಯಲ್ಲಿ ಇದ್ದರು. ಅವರು ಸಂಜೆಯ ವೇಳೆ ಪಕ್ಕದ ಮನೆಗೆ ಹೋಗಿದ್ದರು.ಬಳಿಕ ರಾತ್ರಿಯ ಆಗುತ್ತಿದ್ದ ಅಂತೆಯೇ ಬೆಂಕಿ ಅನಾಹುತ...
ಧರ್ಮಸ್ಥಳ ಪ್ರಕರಣ ಆಂಬುಲೆನ್ಸ್ ಚಾಲಕ ಹಮೀದ್ ಹಾಗೂ ಜಲೀಲ್ ಅವರ ವಿಚಾರಣೆ ಮುಗಿಸಿದ ಎಸ್.ಐ.ಟಿ
ಬೆಳ್ತಂಗಡಿ: ಧರ್ಮಸ್ಥಳಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ವಿಚಾರಣೆಗಾಗಿ ಎರಡನೇ ಬಾರಿ ಇಬ್ಬರು ಆಂಬುಲೆನ್ಸ್ ಚಾಲಕರಾದ ಜಲೀಲ್ ಬಾಬಾ ಮತ್ತು ಹಮೀದ್ ಸೋಮವಾರ ಮಧ್ಯಾಹ್ನ ಬೆಳ್ತಂಗಡಿ ಎಸ್ ಐಟಿಗೆ ಆಗಮಿಸಿದ್ದು ಸಂಜೆಯ ವೇಳೆಗೆ ತಮ್ಮ ಹೇಳಿಕೆಗಳನ್ನು ದಾಖಲಿಸಿ ಹಿಂತಿರುಗಿದ್ದಾರೆ.ಬೆಳ್ತಂಗಡಿಯಲ್ಲಿ ಕಳೆದ ಸುಮಾರು 20 ವರ್ಷಗಳಿಗೂ ಹೆಚ್ಚು ಸಮಾಯದಿಂದ ಆಂಬುಲೆನ್ಸ್ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಇವರನ್ನು ಎಸ್ಐಟಿ ಶನಿವಾರ ರಾತ್ರಿವರೆಗೆ ಮಾಹಿತಿ ಪಡೆದು ಹೇಳಿಕೆ ದಾಖಲಿಸುವ ಕಾರ್ಯ ನಡೆದಿತ್ತು. ಆದರೆ ಅದು ಪೂರ್ಣಗೊಳ್ಳದ ಕಾರಣ ಸೋಮವಾರ ಮತ್ತೆ ಎಸ್ ಐಟಿಗೆ ಆಗಮಿಸಿದ್ದರು.ಧರ್ಮಸ್ಥಳ ಗ್ರಾಮದಿಂದ ಮೃತದೇಹಗಳನ್ನು ಸಾಗಾಟ...
ಮುಂಡಾಜೆ ಕ್ರೈಸ್ಟ್ ಅಕಾಡೆಮಿಯಲ್ಲಿ ಆರೋಗ್ಯ ತಪಾಸಣೆ ಮತ್ತು ಪ್ರಥಮ ಚಿಕಿತ್ಸಾ ತರಬೇತಿ ಶಿಬಿರ
ಬೆಳ್ತಂಗಡಿ:ಮುಂಡಾಜೆಯ ಕ್ರೈಸ್ಟ್ ಅಕಾಡೆಮಿಯಲ್ಲಿ ಆರೋಗ್ಯ ತಪಾಸಣೆ ಮತ್ತು ಪ್ರಥಮ ಚಿಕಿತ್ಸಾ ತರಬೇತಿ ಶಿಬಿರ ಭಾನುವಾರ ಜರಗಿತು.ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪ್ರಕಾಶ್ ಪ್ರಭು ಶಿಬಿರ ಉದ್ಘಾಟಿಸಿದರು.ಕ್ರೈಸ್ಟ್ ಅಕಾಡೆಮಿಯ ಪ್ರಿನ್ಸಿಪಾಲ್ ಫಾ.ಜಾರ್ಜ್ ಸಿ.ಎಂ.ಐ., ಮುಂಡಾಜೆ ರೋಟರಿ ಸಮುದಾಯದಳದ ಅಧ್ಯಕ್ಷ ಪಿ.ಸಿ.ಸೆಬಾಸ್ಟಿಯನ್, ಕಾರ್ಯದರ್ಶಿ ರಾಕೇಶ್, ಬೆನಕ ಆಸ್ಪತ್ರೆಯ ಜನರಲ್ ಮ್ಯಾನೇಜರ್ ದೇವಸ್ಯ, ಪಿಆರ್ ಒ ಎಸ್.ಜಿ.ಭಟ್, ರೋಟರಿ ಕ್ಲಬ್ ಬೆಳ್ತಂಗಡಿ ಮಾಜಿ ಅಧ್ಯಕ್ಷರಾದ ಅನಂತ ಭಟ್ ಮಚ್ಚಿಮಲೆ, ಮೇ.ಜ. ಎಂ.ವಿ.ಭಟ್, ವೆಂಕಟೇಶ್ವರ ಭಟ್ ಕಜೆ ಮತ್ತಿತರರು ಉಪಸ್ಥಿತರಿದ್ದರು.ಉಚಿತ ಮಧುಮೇಹ ತಪಾಸಣೆ, ರಕ್ತದೊತ್ತಡ, ಇಸಿಜಿ,ಸ್ತ್ರೀ ರೋಗ ಮತ್ತು...















