ಬೆಳ್ತಂಗಡಿ ಬಾಲಕಿ ಅಪಹರಣ ಯತ್ನ ಘಟನೆ ಎಸ್.ಪಿ ಸ್ಪಷ್ಟನೆ
ಬೆಳ್ತಂಗಡಿ: ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ಶಾಲಾ ವಿದ್ಯಾರ್ಥಿನಿಯ ಅಪಹರಣ, ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ ಬಳಿಕ, ದೂರಿನಲ್ಲಿ ಉಲ್ಲೇಖಿಸಿದಂತೆ ಯಾವುದೇ ವಾಹನ ಕಂಡುಬಂದಿಲ್ಲ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ವೈದ್ಯಕೀಯ ಪರೀಕ್ಷೆಯಲ್ಲಿ ಪ್ರಥಮವಾಗಿ ಇದು ಸ್ವಯಂ ಉಂಟುಮಾಡಿಕೊಂಡ ಗಾಯ (Self inflicted Wound) ಎಂದು ಕಂಡು ಬಂದಿದೆ. ಈ ಘಟನೆ ಕುರಿತು ತಾನು ಸುಳ್ಳು ಹೇಳಿಕೆ ನೀಡಿದ್ದೆನೆಂದು ಬಾಲಕಿಯ ಹೇಳಿಕೆ ನೀಡಿದ್ದಾಳೆ. ಬಾಲಕಿಯು ಅಪ್ರಾಪ್ತಯಾಗಿರುವುದರಿಂದ ಆಕೆಯ ಹಿತದೃಷ್ಠಿಯಿಂದ ಸದ್ರಿ ಘಟನೆಯನ್ನು ಸೂಕ್ಷ್ಮವಾಗಿ ಪರಿಗಣಿಸಿ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಅವರಿಂದ ಬಾಲಕಿಗೆ...
ಬೆಳ್ತಂಗಡಿ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ
ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆಯು ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಸಾಲ್ಯಾನ್ ರವರ ಅಧ್ಯಕ್ಷತೆಯಲ್ಲಿ ಪಂಚ ಗ್ಯಾರಂಟಿ ಯೋಜನೆ ಸದಸ್ಯ ಕಾರ್ಯದರ್ಶಿ ಹಾಗೂ ಕಾರ್ಯನಿರ್ವಹಣಾಧಿಕಾರಿಯವರಾದ ಭವಾನಿಶಂಕರ್ ಎನ್. ಇವರ ಉಪಸ್ಥಿತಿಯಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತಿಯ ಗ್ಯಾರಂಟಿ ಅನುಷ್ಟಾನ ಸಮಿತಿ ಕಛೇರಿಯಲ್ಲಿ ನಡೆಯಿತು.ಮೆಸ್ಕಾಂ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆಹಾರ ಇಲಾಖೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮತ್ತು ಉದ್ಯೋಗ ವಿನಿಮಯ ಕಛೇರಿಗಳ ಮೂಲಕ ಗೃಹಜ್ಯೋತಿ, ಗೃಹಲಕ್ಷ್ಮೀ, ಅನ್ನಭಾಗ್ಯ, ಶಕ್ತಿ ಹಾಗೂ ಯುವನಿಧಿ ಯೋಜನೆಗಳಲ್ಲಿ...
ನಾರಾವಿ ವ್ಯಕ್ತಿಯ ಮೇಲೆ ಹಲ್ಲೆ, ಜಾತಿನಿಂದನೆ ಪ್ರಕರಣದಾಖಲು
ಬೆಳ್ತಂಗಡಿ: ನಾರಾವಿಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ ಘಟನೆ ನಡೆದಿದ್ದು ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣದಾಖಲಿಸಲಾಗಿದೆ.ನಾರಾವಿ ನಿವಾಸಿಯಾಗಿರುವ ಸುಧೀರ್ ಎಂಬಾತನೇ ಹಲ್ಲೆಗೆ ಒಳಗಾದ ವ್ಯಕ್ತಿಯಾಗಿದ್ದು ಸ್ಥಳೀಯ ನಿವಾಸಿಗಳಾದ ರಕ್ಷಿತ್ ಹಾಗೂ ಚೇತನ್ ಎಂಬವರು ಹಲ್ಲೆ ನಡೆಸಿ ಜಾತಿನಿಂದನೆ ಮಾಡಿದ ಆರೋಪಿಗಳಾಗುದ್ದಾರೆ.ಸುಧೀರ್ ಮಧುಸೂದನ್ ಮತ್ತು ಯಶವಂತ್ ಫೆ.5ರಂದು ನಾರಾವಿ ಬೈದರ್ಕಳ ಗರಡಿ ನೇಮೋತ್ಸವಕ್ಕೆ ಹೋಗಿದ್ದು ತಡರಾತ್ರಿ ನಾರಾವಿ ಗ್ರಾಮಪಂಚಾಯತು ಸಭಾಂಗಣದಲ್ಲಿ ಮಲಗಿದ್ದರು. ಬೆಳಗ್ಗಿನ ಜಾವ ಇಲ್ಲಿಗೆ ಬಂದ ರಕ್ಷಿತ್ ಹಾಗೂ ಚೇತನ್ ಏಕಾಏಕಿಯಾಗಿ ಅವಾಚ್ಯವಾಗಿ ಬೈದು ಜಾತಿನಿಂದನೆ ಮಾಡಿ...
ಬೆಳ್ತಂಗಡಿ : ವಿದ್ಯಾರ್ಥಿನಿ ಕಿಡ್ನಾಪ್ ಯತ್ನ ಪ್ರಕರಣಕ್ಕೆ ಟ್ವಿಸ್ಟ್
ಬೆಳ್ತಂಗಡಿ : ಕಾಲೇಜ್ ವಿದ್ಯಾರ್ಥಿನಿಯನ್ನು ಮೂವರು ಕಾರಿನಲ್ಲಿ ಮುಸುಕುಧಾರಿಗಳು ಕಿಡ್ನಾಪ್ ಮಾಡಲು ಪ್ರಯತ್ನಿಸಿ ಚೂರಿಯಿಂದ ಇರಿದು ಪರಾರಿಯಾದ ಘಟನೆ ಸಂಬಂಧಿಸಿದಂತೆ ಪೊಲೀಸ್ ತನಿಖೆಯಲ್ಲಿ ಇಡಿ ಡ್ರಾಮ ಪ್ರಕರಣ ಬೆಳಕಿಗೆ ಬಂದಿದೆ. ಬೆಳ್ತಂಗಡಿ ನಗರದ ಸುದೇಮುಗೇರು ಎಂಬಲ್ಲಿ ಫೆ.9 ರಂದು ಬೆಳಗ್ಗೆ ಎಂದಿನಂತೆ 16 ವರ್ಷದ ಕಾಲೇಜ್ ವಿದ್ಯಾರ್ಥಿನಿ 8:30 ಕ್ಕೆ ಸ್ಕೂಟರ್ ನಲ್ಲಿ ಪ್ರಯಾಣ ಮಾಡುವಾಗ ಓಮಿನಿ ಕಾರಿನಲ್ಲಿ ಬಂದ ಮೂವರು ಕಿಡ್ನಾಪ್ ಮಾಡಲು ಯತ್ನಿಸಿ ಚೂರಿ ಇರಿದು ಪರಾರಿಯಾಗಿದ್ದರು ಎಂದು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿ ದೂರು ನೀಡಿದ್ದರು. ಬೆಳ್ತಂಗಡಿ ಪೊಲೀಸರು ಇಡಿ ದಿನ...
ಪಿಲ್ಯ 15ಲಕ್ಷ ವೆಚ್ಚದ ಕಾಲು ಸಂಕದ ಕಾಮಗಾರಿಗೆ ಶಾಸಕ ಹರೀಶ್ ಪೂಂಜ ಅವರಿಂದ ಶಿಲಾನ್ಯಾಸ
ಬೆಳ್ತಂಗಡಿ; ಪಿಲ್ಯ ಗ್ರಾಮದ ಬರಾಯ ಎಂಬಲ್ಲಿ ರೂ. 15 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕಾಲುಸಂಕ ಕಾಮಗಾರಿಗೆ ಶಾಸಕರಾದ ಹರೀಶ ್ ಪೂಂಜರವರು ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಸಿಎ ಬ್ಯಾಂಕ್ ಅಧ್ಯಕ್ಷರು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು
ಬೆಳ್ತಂಗಡಿ : ಕಾಲೇಜ್ ವಿದ್ಯಾರ್ಥಿನಿಯ ಕಿಡ್ನಾಪ್ ಗೆ ಯತ್ನ
ಬೆಳ್ತಂಗಡಿ : ಸ್ಕೂಟರ್ ನಲ್ಲಿ ಕಾಲೇಜ್ ತೆರಳುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಬಂದ ಮೂವರು ಅಪರಿಚಿತ ವ್ಯಕ್ತಿಗಳು ಕಿಡ್ನಾಪ್ ಮಾಡಲು ಯತ್ನಿಸಿದ ಘಟನೆ ನಡೆದಿದೆ. ಬೆಳ್ತಂಗಡಿ ನಗರದ ಸುದೇಮುಗೇರು ಎಂಬಲ್ಲಿನ ನಿವಾಸಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಎಂದಿನಂತೆ ಫೆ.9 ರಂದು ಬೆಳಗ್ಗೆ ಸುಮಾರು 8:30 ಕ್ಕೆ ಸ್ಕೂಟರ್ ನಲ್ಲಿ ಸಂತೆಕಟ್ಟೆ ಬಸ್ ಹತ್ತಲು ಹೋಗುವಾಗ ಅಪರಿಚಿತ ನಂಬರ್ ಪ್ಲೇಟ್ ಗೆ ಬಟ್ಟೆ ಕಟ್ಟಿದ ಕಾರಿನಲ್ಲಿ ಬಂದ ಮೂವರು ದುಷ್ಕರ್ಮಿಗಳು ಸ್ಕೂಟರಿಗೆ ಅಡ್ಡಗಟ್ಟಿ ವಿದ್ಯಾರ್ಥಿನಿಯನ್ನು ಕಾರಿನೊಳಗೆ ಎಳೆದು ತಂದಾಗ ಬೊಬ್ಬೆ ಹೊಡೆದು ವಿರೋಧ ವ್ಯಕ್ತಪಡಿಸಿ ಹೊರಬಂದಿದ್ದಾಳೆ...
ಮಂಗಳೂರು; ಬಾಲಕಿಯ ಅತ್ಯಾಚಾರ ಕೊಲೆ ಪ್ರಕರಣ ಮೂವರು ಆರೋಪಿಗಳಿಗೆ ಗಲ್ಲು ಶಿಕ್ಷೆ ಖಾಯಂಗೊಳಿಸಿದ ಹೈಕೋರ್ಟ್
ಮಂಗಳೂರು;7 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಪಾಪಿಗಳಿಗೆ ಗಲ್ಲು ಶಿಕ್ಷೆ ಖಾಯಂಗೊಳಿಸಿ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಗಲ್ಲು ಶಿಕ್ಷೆ ದೃಢೀಕರಿಸುವಂತೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಕ್ರಿಮಿನಲ್ ರೆಫರ್ಡ್ ಅರ್ಜಿ ಮತ್ತು ಶಿಕ್ಷೆ ರದ್ದುಪಡಿಸುವಂತೆ ಕೋರಿ ಅಪರಾಧಿಗಳಾದ ಮಧ್ಯಪ್ರದೇಶದ ಜಯಬನ್ ಆದಿವಾಸಿ ಅಲಿಯಾಸ್ ಜಯಸಿಂಗ್ ಮತ್ತು ಮುಖೇಶ್ ಸಿಂಗ್, ಜಾರ್ಖಂಡ್‌ನ ಮನೀಶ್ ತಿರ್ಕಿ ಹಾಗೂ ಸೀತಾ ರಂತು ಲೋಹಾರ್ ಕ್ರಿಮಿನಲ್ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ನೇತೃತ್ವದ...
ಕೊಕ್ಕಡ ಕೇಂದ್ರ ಸರಕಾರದ ಕಾರ್ಮಿಕ ನೀತಿ ವಿರುದ್ದ ವಾಹನ ಜಾಥಾ ವೇಳೆ ಮೋದಿ ಪರವಾಗಿ ಘೋಷಣೆ ಕೂಗಿದ ತಂಡ
ಬೆಳ್ತಂಗಡಿ; ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ದ ಅಖಿಲ ಬಾರತ ಮುಷ್ಕರದ ಪ್ರಚಾರದ ಅಂಗವಾಗಿ ನಡೆದ ವಾಹನ ಜಾಥಾದ ಕಾರ್ಯಕ್ರದ ವೇಳೆ ಕೊಕ್ಕಡದಲ್ಲಿ ತಂಡವೊಂದು ಮೋದಿ ಮೋದಿ ಎಂಬ ಘೋಷಣೆ ಕೂಗಿ ಕಾರ್ಯಕ್ರಮಕ್ಕೆ ಅಡ್ಡಿ ಪಡಿಸಲು ಪ್ರಯತ್ನಿಸಿದ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ.ವಾಹನಜಾಥಾದ ಅಂಗವಾಗಿ ಕೊಕ್ಕಡದಲ್ಲಿ ಶುಕ್ರವಾರ 7 ಗಂಟೆಯ ಸುಮಾರಿಗೆ ಸಭಾ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಸುನಿಲ್ ಕುಮಾರ್ ಬಜಾಲ್ ಮಾತನಾಡುತ್ತಿದ್ದರು ಈವೇಳೆ ಏಕಾಏಕಿ ಸುಮಾರು 20ಮಂದಿಯ ಗುಂಪು ಸೇರಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ನೋಡಿದ್ದಾರೆ ನಿರಂತರವಾಗಿ ಮೋದಿ ಮೋದಿ ಎಂಬ...
ಒಂದು ಕ್ವಿಂಟಾಲ್ ಗಾಂಜಾ ವಶಪಡಿಸಿದ ಪ್ರಕರಣ, ಕಕ್ಕಿಂಜೆಯ ಇಬ್ಬರು ಸೇರಿದಂತೆ ಮೂವರ ಆರೋಪಿಗಳ ಬಂಧನ
ಬೆಳ್ತಂಗಡಿ; ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನ19 ರಂದು ರೂ.53,03,000/- ಮೌಲ್ಯದ 1 ಕ್ವಿಂಟಾಲ್ 6 ಕೆ.ಜಿ 50 ಗ್ರಾಂ ಗಾಂಜಾ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಸದ್ರಿ ಪ್ರಕರಣದಲ್ಲಿ ತನಿಖೆ ಮುಂದುವರಿಸಲಾಗಿ, ಪ್ರಕರಣದ ಆರೋಪಿಗಳಿಗೆ ಹಣ ಮತ್ತು ವಾಹನದ ವ್ಯವಸ್ಥೆಯನ್ನು ಮಾಡಿದ ಬೆಳ್ತಂಗಡಿ ಚಾರ್ಮಾಡಿ ನಿವಾಸಿ ಮಹಮ್ಮದ್ ಫಯಾಜ್ ಡಿ ಕೆ (27) ಹಾಗೂ ಬೆಳ್ತಂಗಡಿ ಕಕ್ಕಿಂಜೆ ನಿವಾಸಿ ನಝಿರ್ (42) ಎಂಬವರನ್ನು ಬಂಧಿಸಲಾಗಿದೆ ಹಾಗೂ ಆರೋಪಿಗಳಿಗೆ ಮಾದಕವಸ್ತು ಗಾಂಜಾವನ್ನು ಪೂರೈಕೆ ಮಾಡುತ್ತಿದ್ದ ಒರಿಸ್ಸಾ ರಾಜ್ಯದ ದೀಪಕ್ ಪಾತ್ರ (37)...
ಬೆಳ್ತಂಗಡಿ : ಉಜಿರೆ ಕಟ್ಡದ ಬದಿಯಲ್ಲಿ ಕುಳಿತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ
ಬೆಳ್ತಂಗಡಿ : ವ್ಯಕ್ತಿಯೊಬ್ಬರ ಮೃತದೇಹ ಉಜಿರೆ- ಚಾರ್ಮಾಡಿ ರಸ್ತೆಯ ಬ್ಯಾಂಕ್ ಕಟ್ಟಡದ ಬದಿಯಲ್ಲಿ ಕುಳಿತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಚಾರ್ಮಾಡಿ ರಸ್ತೆಯಲ್ಲಿರುವ ಬ್ಯಾಂಕ್ ಆಫ್ ಬರೋಡ ಬ್ಯಾಂಕ್ ಕಟ್ಟಡದ ಬದಿಯಲ್ಲಿ ಫೆ.7 ರಂದು ಬೆಳಗ್ಗೆ ಕುಳಿತ ಸ್ಥಿತಿಯಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಸುರ್ಯ ಬರಮೇಲು ನಿವಾಸಿ ದೇವರಾಜ್(50) ಎಂಬವರ ಮೃತದೇಹ ಎಂದು ತಿಳಿದು ಬಂದಿದೆ ಬ್ಯಾಂಕ್ ಸಿಬ್ಬಂದಿ ಕಟ್ಟಡದ ಬದಿಯಲ್ಲಿ ಹೋಗುವಾಗ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.














