ಬಂಗ್ಲೆ ಗುಡ್ಡದಲ್ಲಿ ಪತ್ತೆಯಾಗಿರುವುದು ಪುರುಷರ ತಲೆಬುರುಡೆ?

0

ಬೆಳ್ತಂಗಡಿ : ಎಸ್‌.ಐ.ಟಿ ಕಾರ್ಯಾಚರಣೆಯಲ್ಲಿ ಬುಧವಾರ ಪತ್ತೆಯಾದ ಐದು ಮಾನವನ ಅಸ್ಥಿಪಂಜರಗಳಿಗೆ ಸಂಬಂಧಿಸಿದಂತೆ ಕೆಲವೊಂದು ಪ್ರಾಥಮಿಕ ಮಾಹಿತಿಗಳು ಹೊರಬಂದಿದ್ದು ಮಹಜರು ಮಾಡಲಾಗಿರುವ ಐದು ಅವಶೇಷಗಳು ಪುರುಷರದ್ದಾಗಿದೆ ಎಂದು ಎಸ್.ಐ.ಟಿ ಮೂಲಗಳಿಂದ‌ ಮಾಹಿತಿ ಲಭ್ಯವಾಗುತ್ತಿದೆ.ಧರ್ಮಸ್ಥಳ ಗ್ರಾಮದ ನೇತ್ರಾವತಿ ಬಂಗ್ಲೆಗುಡ್ಡೆ ಪ್ರದೇಶದಲ್ಲಿ ಸೆ.17 ರಂದು ನಡೆಸಿದ ಕಾರ್ಯಾಚರಣೆಯಲ್ಲಿ ಐದು ಮಾನವನ ತಲೆಬುರುಡೆ ಸಮೇತ ಅವಶೇಷಗಳು ಪತ್ತೆಯಾಗಿದೆ. ತಲೆಬುರುಡೆ ಮತ್ತು ಅವಶೇಷಗಳನ್ನು ತಜ್ಞ ವೈದ್ಯರ ತಂಡ ಮಹಜರು ವೇಳೆ ಮೇಲ್ನೋಟಕ್ಕೆ ಐದು ಕೂಡ ಪುರುಷನ ತಲೆಬರುಡೆ ಮತ್ತು ಅವಶೇಷಗಳು ಎಂದು ವೈದ್ಯರು ಅಭಿಪ್ರಾಯ ಪಟ್ಟಿರುವುದಾಗಿ ತಿಳಿದು ಬಂದಿದೆ. ಹೆಚ್ಚಿನ...

ಬೆಳ್ತಂಗಡಿ; ನಿಯಂತ್ರಣ ತಪ್ಪಿ ಅಣಿಯೂರು ಹೊಳೆಗೆ ಬಿದ್ದ ಸ್ಕೂಟರ್

0

ಬೆಳ್ತಂಗಡಿ: ನಿಯಂತ್ರಣ ತಪ್ಪಿ ಅಣಿಯೂರು ಹೊಳೆಗೆ ಸ್ಕೂಟರ್ ಬಿದ್ದ ಘಟನೆ ಸೆ. 18ರಂದು ನಡೆದಿದೆ. ಸ್ಕೂಟರ್ ಸವಾರ ಶಿವಾನಂದ ಎಂಬವರು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.ಸ್ಕೂಟರ್ ನಿಯಂತ್ರಣ ಕಳೆದುಕೊಂಡು ನದಿಗೆ ಉರುಳಿಬಿದ್ದಿದೆಸೇತುವೆಯ ತಡೆ ಗೋಡೆಯಲ್ಲಿ ಕೈ ಹಿಡಿದ ಪರಿಣಾಮವಾಗಿ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಸ್ಥಳೀಯಯುವಕರ ಸಹಾಯದಿಂದ ಸ್ಕೂಟರನ್ನು ನದಿಯಿಂದ ಮೇಲೆತ್ತಲಾಯಿತು.

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಜಯನಂದ ಪೂಜಾರಿ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ನವೀನ್ ಕುಮಾರ್ ಆಯ್ಕೆ

0

ಬೆಳ್ತಂಗಡಿ. ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಜಯಾನಂದ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ನವೀನ್ ಕುಮಾರ್ ಪ್ರಧಾನ ಅರ್ಚಕ ನಾರಾಯಣರಾವ್ ಸದಸ್ಯರಾಗಿ , ರಾಜು ಸಾಲಿಯಾನ್, ಶ್ರೀಮತಿ ರೇಖಾ ದೇವಾಡಿಗ, ರತ್ನಾಕರ ಕೋಟ್ಯಾನ್, ಗಿರಿಯಪ್ಪ ನಾಯ್ಕ ಶ್ರೀಮತಿ ಕೇಶವತಿ ,ಪುಷ್ಪರಾಜ್ ನೇಮಕವಾಗಿದ್ದಾರೆ, ನೇಮಕಾತಿ ಪ್ರಕ್ರಿಯೆಯನ್ನು ದೇವಸ್ಥಾನದ ಆಡಳಿತ ಅಧಿಕಾರಿ ಸುಲ್ಕೇರಿ ಗ್ರಾಮ ಪಂಚಾಯತ್ ಕಾರ್ಯದರ್ಶಿ, ಕೊರಗಪ್ಪ ನಾಯ್ಕ ನಡೆಸಿಕೊಟ್ಟರು.

ಫೋಟೋಗ್ರಫಿಯಲ್ಲಿ ಅಪಾರ ಅವಕಾಶಗಳಿವೆ. ರುಡ್‌ಸೆಟ್ ಸಂಸ್ಥೆಯಲ್ಲಿ  ಫೋಟೊಗ್ರಫಿ ತರ ಬೇತಿಯ ಸಮಾರೋಪ

0

ಉಜಿರೆ: ಫೋಟೋಗ್ರಫಿಯಲ್ಲಿ ಇಂದು ಅಪಾರ ಅವಕಾಶಗಳ:ಇದ್ದು, ಭಾವನೆಗಳನ್ನು ಅರ್ಥಮಾಡಿಕೊಂಡು ಸಂದರ್ಭೋಚಿತವಾಗಿ ತಾಳ್ಮೆಯಿಂದ ಫೋಟೊ ತೆಗೆಯಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸಲಹೆ ನೀಡಿದರು.ರುಡ್‌ಸೆಟ್ ಸಂಸ್ಥೆಯಲ್ಲಿ ನಡೆದ ಫೋಟೊಗ್ರಫಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಪ್ರಮಾಣಪತ್ರ ವಿತರಿಸಿ ಶುಭ ಹಾರೈಸಿದರು.ಹಾಸನದ ಮಂಗಳಾ, ರೂಪಾ, ಮಂಡ್ಯದ ಮಧುಕರ್ ತರಬೇತಿ ಬಗ್ಯೆ ಅನುಭವ, ಅನಿಸಿಕೆ ವ್ಯಕ್ತಪಡಿಸಿದರು.ಸಂಸ್ಥೆಯ ನಿರ್ದೇಶಕ ಅಜೇಯ ಸ್ವಾಗತಿಸಿದರು. ಉಪನ್ಯಾಸಕ ಕರುಣಾಕರ ಜೈನ್ ಧನ್ಯವಾದವಿತ್ತರು. ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರ್ವಹಿಸಿದರು. ಧರ್ಮಸ್ಥಳದಲ್ಲಿ ಪುರಾಣ ವಾಚನ-ಪ್ರವಚನ ಸಮಾರೋಪ ಸಮಾರಂಭ:ಚಿತ್ರ: ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು...

ಕಾಜೂರು ಆಡಳಿತ ಮಂಡಳಿಗೆ ನೂತನ ಪದಾಧಿಕಾರಿಗಳ ಆಯ್ಕೆ ಮೂರನೇ ಅವಧಿಗೆ ಅಧ್ಯಕ್ಷರಾಗಿ ಕೆ.ಯು ಇಬ್ರಾಹಿಂ, ಕಾರ್ಯದರ್ಶಿಯಾಗಿ ಜೆ ಹೆಚ್ ಅಬೂಬಕ್ಕರ್ ಸಿದ್ದೀಕ್

0

ಬೆಳ್ತಂಗಡಿ: ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ‌ ದರ್ಗಾ ಶರೀಫ್ ಕಾಜೂರು ಇದರ 2025-28 ಸಾಲಿನಅದ್ಯಕ್ಷರಾಗಿ ಕೆ.ಯು ಇಬ್ರಾಹಿಂ, ಪ್ರಧಾನ ಕಾರ್ಯದರ್ಶಿಯಾಗಿ ಜೆ.ಹೆಚ್ ಅಬೂಬಕ್ಕರ್ ಸಿದ್ದೀಕ್, ಕೋಶಾಧಿಕಾರಿಯಾಗಿ ಡಿ.ವೈ ಉಮರ್ ಕುಕ್ಕಾವು, ಉಪಾದ್ಯಕ್ಷರಾಗಿ ಮುಹಮ್ಮದ್ ಬಶೀರ್ ಅಹ್ಸನಿ ಇವರು ಆಯ್ಕೆಯಾಗಿದ್ದಾರೆ. ಕಾರ್ಯಕಾರಿ ಸಮಿತಿ ನಿರ್ದೇಶಕರುಗಳಾಗಿಅಬ್ದುಲ್ ಸಲೀಂ, ಕೆ.ಯು ಹನೀಫ್, ಬದ್ರುದ್ದೀನ್ ಹೆಚ್, ಅಬ್ದುಲ್ ಹಕೀಂ ಕೆ.ಕೆ, ಕೆ.ಯು ಮುಹಮ್ಮದ್ ಸಖಾಫಿ, ಶರೀಫ್ ಸ‌ಅದಿ ಮತ್ತುಯಾಕೂಬ್ ಎನ್ ಎಂ ನಿರ್ದೇಶಕರುಗಳಾಗಿ ಆಯ್ಕೆಯಾಗಿದ್ದಾರೆ. ವಕ್ಫ್ ನಿಯಮಾವಳಿಯಂತೆ ಇತ್ತೀಚೆಗೆ ಮತದಾನದ ಮೂಲಕ 11 ಮಂದಿಯ ಆಯ್ಕೆ ನಡೆದಿತ್ತು. ಚುನಾಯಿತ ಪ್ರತಿನಿಧಿಗಳುಸೆ.17 ರಂದು...

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ತಲವಾರು ಮತ್ತು ಬಂದೂಕು ಪತ್ತೆ; ಎಸ್.ಐ.ಟಿ ಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

0

ಬೆಳ್ತಂಗಡಿ : ಬುರುಡೆ ಚಿನ್ನಯ್ಯನ ಪ್ರಕರಣ ಸಂಬಂಧ ಎಸ್.ಐ.ಟಿ ಅಧಿಕಾರಿಗಳು ನ್ಯಾಯಾಲಯದಿಂದ ವಾರಂಟ್ ಪಡೆದು ಉಜಿರೆ ಮಹೇಶ್ ಶೆಟ್ಟಿ ಮನೆಯಲ್ಲಿ ಆಗಸ್ಟ್ 26 ರಂದು ಶೋಧ ಕಾರ್ಯ ನಡೆಸಿದಾಗ ಒಟ್ಟು 44 ವಸ್ತುಗಳನ್ನು ಮಹಜರು ನಡೆಸಿ ವಶಪಡಿಸಿಕೊಳ್ಳಲಾಗಿತ್ತು. ಈ ವೇಳೆ ಎರಡು ಮರದ ಹಿಂದು ಇರುವ ತಲವಾರ್ ಮತ್ತು ಒಂದು ಬಂದೂಕು ಪತ್ತೆಯಾಗಿತ್ತು. ಈ ಬಗ್ಗೆ ಬೆಳ್ತಂಗಡಿ ನ್ಯಾಯಾಲಯಕ್ಕೆ ವರದಿಯನ್ನು ಸಲ್ಲಿಸಲಾಗಿತ್ತು. ಈ ಸಂಬಂಧ ಎಸ್.ಐ.ಟಿ ಎಸ್ಪಿ ಸಿ.ಎ.ಸೈಮನ್ ಸೆ.16 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಉಜಿರೆ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಅಕ್ರವಾಗಿ...

ಬೆಳ್ತಂಗಡಿ : ಬಂಗ್ಲೆಗುಡ್ಡೆಯಲ್ಲಿ ಮೂರು ತಲೆಬರುಡೆ ಪತ್ತೆ

0

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣಕ್ಕೆ‌ ಸಂಬಂಧಿಸಿದಂತೆ ನಡೆಯುತಗತಿರುವ  ಎಸ್.ಐ‌.ಟಿ ಕಾರ್ಯಾಚರಣೆಯಲ್ಲಿ  ನೇತ್ರಾವತಿ ಸ್ನಾನಘಟ್ಟದ ಸಮೀಪ ಬಂಗ್ಲೆ ಗುಡ್ಡದಲ್ಲಿ ಮೂರು ಮಾನವನ ತಲೆಬರುಡೆ ಹಾಗೂ ಒಂದು ಐಡಿ ಕಾರ್ಡ್ ಪತ್ತೆಯಾಗಿರುವುದಾಗಿ ಎಸ್.ಐ.ಟಿ ಮೂಲಗಳು ತಿಳಿಸಿದೆ. ಧರ್ಮಸ್ಥಳ ಗ್ರಾಮದ ನೇತ್ರಾವತಿ ಬಂಗ್ಲೆಗುಡ್ಡೆ ಪ್ರದೇಶದಲ್ಲಿ ಸೆ.16 ರಂದು 5 ಗಂಟೆ ವೇಳೆಗೆ ಎಸ್‌.ಐ.ಟಿ ಅಧಿಕಾರಿಗಳ ಕಾರ್ಯಾಚರಣೆಯಲ್ಲಿ ಮಾನವನ ಮೂರು ತಲೆ ಬುರುಡೆ ಮತ್ತು ಒಂದು ಗಂಡಸ್ಸಿನ ಹಿರಿಯ ನಾಗರಿಕ ಐಡಿ ಕಾರ್ಡ್ ಪತ್ತೆಯಾಗಿದ್ದು ಮಹಜರು ಕಾರ್ಯ ನಡೆಸುತ್ತಿದ್ದಾರೆ.

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣ ನೇತ್ರಾವತಿ  ಬಂಗ್ಲೆ ಗುಡ್ಡೆಯಲ್ಲಿ ಒಂಬತ್ತು ಜಾಗದಲ್ಲಿ ಮಾನವನ ಅವಶೇಷಗಳು ಪತ್ತೆ

0

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ನೇತ್ರಾವತಿ ಬಂಗ್ಲೆಗುಡ್ಡೆ ಪ್ರದೇಶದಲ್ಲಿ ಎಸ್‌.ಐ.ಟಿ ಕಾರ್ಯಾಚರಣೆ ವೇಳೆ ಒಂಬತ್ತು ಸ್ಥಳಗಳಲ್ಲಿ ಮಾನವನ ಮೂಳೆಗಳ ಅವಶೇಷಗಳು ಪತ್ತೆಯಾಗಿರುವುದಾಗಿ ಎಸ್‌.ಐ.ಟಿ ಮೂಲಗಳಿಂದ ಮಾಹಿತಿ ಲಭ್ಯವಾಗುತ್ತಿದೆ.ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಸೆ.17 ರಂದು ಎಸ್.ಐ.ಟಿ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ಒಂಬತ್ತು ಸ್ಥಳಗಳಲ್ಲಿ ಮಾನವನ ಅವಶೇಷಗಳು ಪತ್ತೆಯಾಗಿದ್ದು ಅದನ್ನು ಅಧಿಕಾರಿಗಳು ಮಹಜರು ನಡೆಸುತ್ತಿದ್ದಾರೆ ಎಂದು ತಿಳೊದು ಬಂದಿದೆ.

ಧರ್ಮಸ್ಥಳ ಪ್ರಕರಣ ಮಹತ್ವದ ಬೆಳವಣಿಗೆ; ಇಡೀ ಬಂಗ್ಲೆ ಗುಡ್ಡೆ ಅರಣ್ಯ ಪರಿಶೀಲನೆ ಆರಂಭಿಸಿದ ಎಸ್.ಐ.ಟಿ

0

ಬೆಳ್ತಂಗಡಿ; ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ನೇತ್ರಾವತಿ ಸ್ನಾನಘಟ್ಟದ ಬಂಗ್ಲೆ ಗುಡ್ಡೆಯಲ್ಲಿ ಹಲವಾರು ಮೃತದೇಹಗಳ ಅವಶಿಷ್ಟಗಳಿವೆ ಎಂಬ ಹೇಳಿಕೆಗಳ ಹಿನ್ನಲೆಯಲ್ಲಿ ಎಸ್.ಐ.ಟಿ ತಂಡ ಇಡೀ ಬಂಗ್ಲೆ ಗುಡ್ಡೆ ಅರಣ್ಯವನ್ನು ಹುಡುಕುವ ಕಾರ್ಯ ಆರಂಭಿಸಿದ್ದಾರೆ. ಸಾಕ್ಷಿ ದೂರುದಾರ ಚಿನ್ನಯ್ಯ ತಂದಿದ್ದ ತಲೆಬುರುಡೆ ಇದೇ ಬಂಗ್ಲೆ ಗುಡ್ಡದಿಂದ ತಂದಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ‌ ಇದೆ ಸ್ಥಳ ಮಹಜರು ನಡೆಸಲು ತೆರಳಿದ ವೇಳೆ ಹಲವಾರು ಮೃತದೇಹಗಳ ಅವಶೇಷಗಳು ಇಲ್ಲಿ ಕಂಡುಬಂದಿರುವುದಾಗಿ ವಿಠಲ ಗೌಡ ಹೇಳಿಕೆ ನೀಡಿದ್ದರು ಈ ಹಿನ್ನಲೆಯಲ್ಲಿ ಕಳೆದ ಕೆಲವು ದಿನಗಳಿಂದ ಇಲ್ಲಿ ಸ್ಥಳಪರಿಶೀಲನೆ ನಡೆಸುವ ಬಗ್ಗೆ ಎಸ್.ಐ.ಟಿಯ ಅಧಿಕಾರಿಗಳು...

ಸಹಕಾರ ಸಂಘಗಳು ರೈತಪರವಾಗಿ ಕಾರ್ಯನಿರ್ವಹಿಸಲಿ; ಹರಿದಾಸ್

0

ಸಹಕಾರ ಸಂಘಗಳು ಕೇವಲ ಹಣಕಾಸು ವ್ಯವಹಾರ ನಡೆಸದೆ ರೈತಪರ ಕಾರ್ಯಚಟುವಟಿಕೆಗಳನ್ನು ನಡೆಸಿದರೆ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುವ ಮೂಲಕ ಸಹಕಾರ ರಂಗಕ್ಕೆ ವಿಶೇಷ ಕೊಡುಗೆ ನೀಡಬಹುದು ಎಂದು ಹಿರಿಯ ಸಹಕಾರಿ , ಸಂಗಾತಿ ಎಕೆಜಿ ಬೀಡಿ ಕಾರ್ಮಿಕರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಇದರ ಅಧ್ಯಕ್ಷ ಹರಿದಾಸ್ ಎಸ್. ಎಂ ಹೇಳಿದರು. ಬೆಳ್ತಂಗಡಿ ಅನನ್ಯ ಸಭಾಂಗಣದಲ್ಲಿ ಸಂಗಾತಿ ಎಕೆಜಿ ಬೀಡಿ ಕಾರ್ಮಿಕರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಮತ್ತು ಅಳದಂಗಡಿ ತೋಟಗಾರಿಕಾ ರೈತ ಉತ್ಪಾದಕರ ಸಂಘ ಇದರ ವಾರ್ಷಿಕ ಮಹಾಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು‌. ದೇಶದ ಜೀವನಾಡಿ...