ಸುಬ್ರಹ್ಮಣ್ಯ ಸ್ವಾಮೀಜಿ ಧರ್ಮಸ್ಥಳಕ್ಕೆ ಭೇಟಿ
ಧರ್ಮಸ್ಥಳ: ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಮಂಗಳವಾರ ಧರ್ಮಸ್ಥಳಕ್ಕೆ ಆಗಮಿಸಿದಾಗ ಅವರನ್ನು ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು.ಬಳಿಕ ಹೆಗ್ಗಡೆಯವರ ಬೀಡಿನಲ್ಲಿ ಸ್ವಾಮೀಜಿಯವರ ಪಾದಪೂಜೆ ನಡೆಸಲಾಯಿತು.ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸ್ವಾಮೀಜಿಯವರಿಗೆ ಮಾಲಾರ್ಪಣೆ ಮಾಡಿ, ಶಾಲು ಹೊದಿಸಿ, ಫಲಕಾಣಿಕೆ ನೀಡಿ ಗೌರವಿಸಿದರು.ಸ್ವಾಮೀಜಿಯವರು ಹೆಗ್ಗಡೆಯವರಿಗೆ ಸುಬ್ರಹ್ಮಣ್ಯದ ಪ್ರಸಾದ ನೀಡಿ ಶುಭ ಹಾರೈಸಿದರು.ಹೇಮಾವತಿ ವೀ. ಹೆಗ್ಗಡೆ ಮತ್ತು ಡಿ. ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು.ಪೂಜ್ಯ ಸ್ವಾಮೀಜಿಯವರು ದೇವರ ದರ್ಶನ ಪಡೆದು ಹಿಂತಿರುಗಿದರು.
ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಚಿನ್ನಯ್ಯನ ಜಾಮೀನು ಅರ್ಜಿ ವಜಾ
ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಚಿನ್ನಯ್ಯನ ಜಾಮೀನು ಅರ್ಜಿ ಸೆ.16 ಕ್ಕೆ ವಜಾಗೊಂಡಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತುಹಾಕಿರುವುದಾಗಿ ಹೇಳಿ ಬುರುಡೆ ಜೊತೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಿದ ಬಳಿಕ ಹಲವಾರು ಬೆಳವಣಿಗಳು ನಡೆದಿದ್ದವು. ಬೆಳ್ತಂಗಡಿ ಎಸ್‌ಐಟಿ ಅಧಿಕಾರಿಗಳು ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 23 ರಂದು ಬಂಧಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿ 12 ದಿನಗಳ ಕಾಲ ಕಸ್ಟಡಿಗೆ ಪಡೆದ ತನಿಖೆ ನಡೆಸಿ ಸೆ.3 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಆರೋಪಿ ಚಿನ್ನಯ್ಯನನ್ನು ಮತ್ತೆ...
ವಿದ್ಯಾದಾನದ ಮೂಲಕ ಸಮಾಜಕ್ಕೆ ಪೂಜ್ಯ ಡಿ. ವೀರೇಂದ್ರ ಹೆಗ್ಗಡೆಯವರ ಕೊಡುಗೆ ಅಪಾರ; ವೀರು ಶೆಟ್ಟಿ
ಧರ್ಮಸ್ಥಳ: ಪ್ರಾಥಮಿಕ ಶಿಕ್ಷಣದಿಂದ ಆರಂಭಗೊಂಡು ಸ್ನಾತಕೋತ್ತರ ಪದವಿ, ವೃತ್ತಿಪರ ಶಿಕ್ಷಣ ಸೇರಿದಂತೆ ಶಿಕ್ಷಣ ಐವತ್ತಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಿ ಮುನ್ನಡೆಸುತ್ತಿರುವಡಾ. ಡಿ. ವೀರೇಂದ್ರ ಹೆಗ್ಗಡೆಯವರು ರಾಜ್ಯಾದ್ಯಂತ ಮೌಲ್ಯಾಧಾರಿತ ಶಿಕ್ಷಣ ಒದಗಿಸುವಲ್ಲಿ ಅಪಾರ ಕೊಡುಗೆ ನೀಡಿದ್ದಾರೆ ಎಂದು ಶ್ರೀ ಧರ್ಮಸ್ಥಳ ಭಜನಾ ಕಮ್ಮಟದ ಕಾರ್ಯದರ್ಶಿ ಎ. ವೀರು ಶೆಟ್ಟಿ ಹೇಳಿದರು.ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ ೨೭ನೇ ವರ್ಷದ ಭಜನಾ ತರಬೇತಿ ಕಮ್ಮಟದ ಉಪನ್ಯಾಸ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರದಿಂದ ನಡೆಯುವ ವಿದ್ಯಾದಾನ ಕುರಿತು ವಿಶೇಷ ಉಪನ್ಯಾಸ ನೀಡಿದರು.ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು ಡಾ. ಹೆಗ್ಗಡೆಯವರು...
ಚಿನ್ನಯ್ಯನ ಜಾಮೀನು ಅರ್ಜಿ ಇಂದು (ಸೆ.16) ತೀರ್ಪು ಪ್ರಕಟ
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ದೂರು ದಾರನಾಗಿ ಬಂದು ಇದೀಗ ಶಿವಮೊಗ್ಗ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಸಾಕ್ಷಿ ದೂರುದಾರ ಚಿನ್ನಯ್ಯನ ಜಾಮೀನು ಅರ್ಜಿಯಲ್ಲಿ ಸೆ 16 ರಂದು ಬೆಳ್ತಂಗಡಿ ನ್ಯಾಯಾಲಯ ತೀರ್ಪು ಪ್ರಕಟಿಸಲಿದೆ.ಸೆ.12 ರಂದು ಬೆಳ್ತಂಗಡಿ ನ್ಯಾಯಾಲಯದಲ್ಲಿ ವಿಚಾರಣೆನಡೆಸಿದ ನ್ಯಾಯಾಲುವು ತೀರ್ಪನ್ನು ಸೆ 16 ಕ್ಕೆ ಕಾಯ್ದಿರಿಸಿತ್ತು.ಪ್ರಕರಣದ ವಿಚಾರಣೆ ವೇಳೆ ಎಸ್.ಐ.ಟಿ ಯಿಂದ ಜಾಮೀನು ನೀಡದಂತೆ ಕೋರ್ಟ್ ಗೆ ಆಕ್ಷೇಪಣೆ ಸಲ್ಲಿಸಿದ್ದರು. ಚಿನ್ನಯ್ಯ ಪರ ಉಚಿತ ಕಾನೂನು ಸೇವಗಳ ಪ್ರಾಧಿಕಾರದ ವಕೀಲರು ವಾದ ಮಂಡಿಸಿದ್ದರು.ಪ್ರಕರಣದ ವಿಚಾರಣೆ ಆಲಿಸಿದ ನ್ಯಾಯಾಧೀಶರು ಜಾಮೀನು...
ಧರ್ಮಸ್ಥಳ ಪ್ರಕರಣ; ತಾವು ಗುರುತಿಸಿದ ಸ್ಥಳಗಳನ್ನು ಅಗೆದು ಪರಿಶೀಲಿಸುವಂತೆ ಹೈಕೋರ್ಟ್ ಗೆ ಪುರಂದರ, ತುಕಾರಾಮ ಅರ್ಜಿ ಎಸ್.ಐ.ಟಿ.ಗೆ ನೋಟೀಸ್
ಬೆಳ್ತಂಗಡಿ; ಧರ್ಮಸ್ಥಳದ ಗ್ರಾಮದಲ್ಲಿ ನಾವು ಗುರುತಿಸಿರುವ ಸ್ಥಳಗಳಲ್ಲಿ ಕೂಡಲೇ ಅಗೆಯಲು ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ನಿರ್ದೇಶನ ನೀಡಬೇಕು ಎಂದು ಕೋರಿ ಧರ್ಮಸ್ಥಳ ನಿವಾಸಿಗಳಾದ ಪುರಂದರ ಗೌಡ ಹಾಗೂ ತುಕಾರಾಮ ಗೌಡ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಸೋಮವಾರ ಎಸ್.ಐ.ಟಿ ಗೆ ನೋಟೀಸ್ ನೀಡಿದೆ ಈ ಸಂಬಂಧ ಧರ್ಮಸ್ಥಳ ಗ್ರಾಮದ ಪುರಂದರ ಗೌಡ ಹಾಗೂ ತುಕಾರಾಂ ಗೌಡ ಸಲ್ಲಿಸಿರುವ ರಿಟ್ ಅರ್ಜಿ ಕುರಿತು ಸೋಮವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಧರ್ಮಸ್ಥಳ ಸಾಮೂಹಿಕ ಅಂತ್ಯ...
ಧರ್ಮಸ್ಥಳ; ಹದಗೆಟ್ಟ ನೇರ್ತನೆ ರಸ್ತೆ ಗ್ರಾಮಸ್ಥರಿಂದ ಶ್ರಮದಾನದ ಮೂಲಕ ದುರಸ್ತಿ
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ನೇರ್ತನೆ ರಸ್ತೆ ಸಂಪೂರ್ಣವಾಗಿ ಹದಗೆಟ್ಟು ಹೋಗಿದ್ದು ವಾಹನ ಸಂಚಾರ ಕಷ್ಟಕರವಾಗಿದ್ದ ಹಿನ್ನಲೆಯಲ್ಲಿ ಸೆ14 ಭಾನುವಾರ ಸ್ಥಳೀಯ ನಿವಾಸಿಗಳು ಶ್ರಮದಾನದ ಮೂಲಕ ಈ ರಸ್ತೆ ದುರಸ್ತಿಯ ಕಾರ್ಯ ನಡೆಸಿದರು. ಮಳೆಗಾಲದಲ್ಲಿರಸ್ತೆ ಸಂಪೂರ್ಣವಾಗಿ ಹದಗೆಟ್ಟು ಹೋಗಿದ್ದು ಅಲ್ಲಲ್ಲಿ ದೊಡ್ಡ ಹೊಂಡಗಳು ನಿರ್ಮಾಣವಾಗಿತ್ತು ವಾಹನಗಳ ಸಂಚಾರವೇ ಅಸಾಧ್ಯವಾಗುವ ಸ್ಥಿತಿ ನಿರ್ಮಾಣವಾಗಿತ್ತು ಈ ಬಗ್ಗೆ ಗ್ರಾಮಸ್ಥರು ಗ್ರಾಮಪಂಚಾಯತಿನ ಗಮನ ಸೆಳೆದಿದ್ದರೂ ಯಾವದೇ ಕ್ರಮ ಕೈಗೊಳ್ಳದ ಹಿನ್ನಲೆಯಲ್ಲಿ ಸ್ಥಳೀಯರು ಶ್ರಮದಾನ ನಡೆಸಿ ರಸ್ತೆಯನ್ನು ಸಂಚಾರಕ್ಕೆ ಯೋಗ್ಯವಾಗಿಸುವ ಪ್ರಯತ್ನ ನಡೆಸಿದ್ದಾರೆ
ಉಜಿರೆ ರಬ್ಬರ್ ಸೊಸೈಟಿಆಡಳಿತ ಮಂಡಳಿಯ 15 ನಿರ್ದೇಶಕರುಗಳ ಸ್ಥಾನಕ್ಕೆ ಆವಿರೋಧ ಆಯ್ಕೆ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘುಳ ಉಜಿರೆ ಇದರ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ 15 ನಿರ್ದೇಶಕರುಗಳ ಸ್ಥಾನಕ್ಕೆ ಸೆ.21ರಂದು ನಿಗದಿಯಾಗಿದ್ದ ಚುನಾವಣೆಗೆ ಎಲ್ಲಾ ಸ್ಥಾನಗಳಿಗೆ ನಿರ್ದೇಶಕರುಗಳು ಆವಿರೋಧವಾಗಿ ಆಯ್ಕೆಯಾಗಿದ್ದಾರೆ.ಸಹಕಾರಿ ಸಂಘ- ಸಂಸ್ಥೆಗಳು ಸ್ಥಾನದಿಂದ ಹಾಲಿ ಅಧ್ಯಕ್ಷ ಶ್ರೀಧರ ಜಿ. ಭಿಡೆ, ಸಾಮಾನ್ಯ ಸ್ಥಾನ ಬೆಳ್ತಂಗಡಿ ಫಿರ್ಕಾದಿಂದ ಹಾಲಿ ಉಪಾಧ್ಯಕ್ಷ ಅನಂತ ಭಟ್ ಮಚ್ಚಿಮಲೆ, ಹಿಂದುಳಿದ ವರ್ಗ ಎ ಮೀಸಲು ಸ್ಥಾನ ಬೆಳ್ತಂಗಡಿ ಫಿರ್ಕಾದಿಂದ ಸೋಮನಾಥ ಬಂಗೇರ ವರ್ಪಾಳೆ, ಹಿಂದುಳಿದ ವರ್ಗ ಬಿ.ಮೀಸಲು ಸ್ಥಾನ...
ಬಂಗ್ಲೆ ಗುಡ್ಡ ವಾಮಾಚಾರದತ್ತ ಎಸ್.ಐ.ಟಿ ತನಿಖೆ
ಬೆಳ್ತಂಗಡಿ; ಧರ್ಮಸ್ಥಳ ಪ್ರಕರಣಕ್ಕೆ ಸಬಂಧಿಸಿದಂತೆ ನಡೆಯುತ್ತಿರುವ ಎಸ್.ಐ.ಟಿ ತನಿಖೆಯಲ್ಲಿ ಹೊಸ ಬೆಳವಣಿಗೆಗಗಳು ನಡೆದಿದ್ದು ತನಿಖೆ ಹೊಸ ದಿಕ್ಕಿನತ್ತ ಹೊರಳುತ್ತಿದೆ.ಬಂಗ್ಲೆಗುಡ್ಡದಲ್ಲಿ ಹಲವಾರು ಮೃತದೇಹಗಳು ಪತ್ತೆಯಾಗಿರುವುದಾಗಿಯೂ ವಾಮಾಚಾರ ಮಾಡಲಾಗಿರುವಂತೆ ಕಂಡುಬರುತ್ತಿರುವುದಾಗಿ ವಿಠಲಗೌಡ ವೀಡಿಯೋ ಮಾಡಿ ಆರೋಪ ಮಾಡಿದ್ದ ತಾನು ಇಲ್ಲಿನ ಮೃತದೇಹಗಳನ್ನು ಎಸ್.ಐ.ಟಿ ಗೆ ತೋರಿಸಿರುವುದಾಗಿಯೂ ಹೇಳಿಕೆ ನೀಡಿದ್ದ. ಇದೀಗ ಇಲ್ಲಿ ನಡೆದಿರಬಹುದಾದ ವಾಮಾಚಾರಗಳ ವಿಚಾರದತ್ತ ಎಸ್.ಐ.ಟಿ ತಂಡ ಗಮನ ಹರಿಸುತ್ತಿರುವಿದಾಗಿ ತಿಳಿದು ಬಂದಿದೆ.ಸ್ಥಳೀಯವಾಗಿ ವಾಮಚಾರ ಮಾಡುವವರ ಬಗ್ಗೆ ಮಾಹಿತಿ ಸಂಗ್ರಹಿಸುವ ಪ್ರಯತ್ನವನ್ನು ತಂಡ ನಡೆಸಿರುವವುದಾಗಿ ತಿಳಿದು ಬಂದಿದೆ.ವಾಮಾಚಾರ ನಡೆದಿರುವ ಬಗ್ಗೆ ದೂರುಗಳು ಬಂದಿರುವ ಹಿನ್ನಲೆಯಲ್ಲಿ...
ಧರ್ಮಸ್ಥಳದಲ್ಲಿ 27 ನೇ ವರ್ಷದ ಭಜನಾ ಕಮ್ಮಟ: ಉದ್ಘಾಟನೆ
ಭಜನೆಯಿಂದ ಉತ್ತಮ ಸಂಸ್ಕಾರಯುತ ಆರೋಗ್ಯಪೂರ್ಣ ಸಮಾಜ ನಿರ್ಮಾಣ.ಬೆಳ್ತಂಗಡಿ: ಪಂಚೇಂದ್ರಿಯಗಳ ನಿಯಂತ್ರಣದೊಂದಿಗೆ ಪರಿಶುದ್ಧ ದೇಹ ಮತ್ತು ಮನಸಿನಿಂದ ರಾಗ, ತಾಳ, ಲಯಬದ್ಧವಾಗಿ ಭಜನೆ ಮಾಡುವುದರಿಂದ ಉತ್ತಮ ಸಂಸ್ಕಾರಯುತ ಆರೋಗ್ಯಪೂರ್ಣ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಮೂಡಬಿದ್ರೆಯ ಆಳ್ವಾಸ್ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಹೇಳಿದರು.ಅವರು ಭಾನುವಾರ ಧರ್ಮಸ್ಥಳದಲ್ಲಿ ಮಹೋತ್ಸವ ಸಭಾಭವನದಲ್ಲಿ 27 ನೇ ವರ್ಷದ ಭಜನಾ ಕಮ್ಮಟವನ್ನು ಉದ್ಘಾಟಿಸಿ ಮಾತನಾಡಿದರು.ಭಜನೆಯಿಂದ ಸುಲಭದಲ್ಲಿ ದೇವರ ಅನುಗ್ರಹಕ್ಕೆ ಪಾತ್ರರಾಗಬಹುದು, ಭಜನೆಯಿಂದ ಜನಜಾಗೃತಿ ಉಂಟಾಗಿ ಎಲ್ಲರೂ ಸಮಾನರಾಗಿ, ಗುರು-ಹಿರಿಯರಿಂದ ಮಾರ್ಗದರ್ಶನ, ಪ್ರೇರಣೆ ಪಡೆದು ದೃಢಭಕ್ತಿ ಮತ್ತು...
ಬೆಳ್ತಂಗಡಿ : ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಬೆಳ್ತಂಗಡಿ ಕಚೇರಿಗೆ; ನಾಳೆಯಿಂದ ತನಿಖೆಯಲ್ಲಿ ಆಗಲಿದೆ ಮಹತ್ವದ ಬೆಳವಣಿಗೆ
ಬೆಳ್ತಂಗಡಿ : ಎಸ್.ಐ.ಟಿ ಮುಖ್ಯಸ್ಥ ಪ್ರವವ್ ಮೊಹಂತಿ ಸೆ.14 ರಂದು ಬೆಳಗ್ಗೆ 11:40 ಕ್ಕೆ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಆಗಮಿಸಿದ್ದಾರೆ. ಜೊತೆಯಲ್ಲಿ ಐಪಿಎಸ್ ಜಿತೇಂದ್ರ ಕುಮಾರ್ ದಯಾಮ, ಎಸ್.ಪಿ ಸನ್ ಕೂಡ ಆಗಮಿಸಿದ್ದಾರೆ. ಬೆಳ್ತಂಗಡಿ ಎಸ್.ಐ.ಟಿ ಕಚೇರಿಯಲ್ಲಿ ಪ್ರಣವ್ ಮೊಹಂತಿ ಅವರು ಅಧಿಕಾರಿಗಳೊಂದಿಗೆ ಮಹತ್ವದ ಸಭೆಗಳನ್ನು ನಡೆಸಲಿರುವುದಾಗಿ ತಿಳಿದು ಬಂದಿದೆ.ಸಾಕ್ಷಿ ದೂರುದಾರ ತಂದಿದ್ದ ತಲೆಬುರುಡೆಯ ವಿಚಾರದಲ್ಲಿ ತನಿಖೆ ಬಹುತೇಕ ಪೂರ್ಣಗೊಳ್ಳುವ ಹಂತದಲ್ಲಿದೆ. ಈಗಾಗಲೆ ಕಳೆದ ಎರಡು ವಾರಗಳಿಂದ ಈ ಬಗ್ಗೆಯೇ ತನಿಖೆ ನಡೆಯುತ್ತಿತ್ತು. ತನಿಖೆ ಬಳಿಕವಿಠಲ ಗೌಡ ಅವರೊಂದಿಗೆ ಸ್ಥಳತನಿಖೆಯನ್ನು ನಡೆಸಲಾಗಿದ್ದು ಪ್ರದೀಪ್ ನ...















