ಗಡಿಪಾರು ವಿವಾದ ಮಹೇಶ್ ಶೆಟ್ಟಿ ತಿಮರೋಡಿ ಮೇಲ್ಮನವಿ ವಜಾ ಗೊಳಿಸಿದ ಹೈಕೋರ್ಟ್

0

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿದ್ದ ಕ್ರಮ ಮರುಪರಿಶೀಲಿಸಿ ಹೊಸದಾಗಿ ಆದೇಶ ನೀಡಲು ಪುತ್ತೂರು ಉಪ ವಿಭಾಗಾಧಿಕಾರಿಯವರಿಗೆ ನಿರ್ದೆಶಿಸಿದ್ದ ಹೈಕೋರ್ಟ್ ಏಕ ಸದಸ್ಯ ನ್ಯಾಯಪೀಠದ ಕ್ರಮವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದೆ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ 2026ರ ಜನವರಿ 31ರಂದು ಹೊರಡಿಸಿದ್ದ ಆದೇಶ ರದ್ದು ಕೋರಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಮೇಲ್ಮನವಿಯನ್ನು ಮಂಗಳವಾರ ಮಾ17 ರಂದು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ, ಏಕಸದಸ್ಯ...

ಬೆಳ್ತಂಗಡಿ: ಗುರುವಾಯನ ‘ಕೆರೆ’ಯಲ್ಲಿ ಮೀನುಗಳ ಅಸಹಜ ಸಾವು ಅಧಿಕಾರಿಗಳಿಂದ ಪರಿಶೀಲನೆ

0

ಬೆಳ್ತಂಗಡಿ : ಕುವೆಟ್ಟು ಗ್ರಾಮದ ಗುರುವಾಯನ ಕೆರೆಯಲ್ಲಿರುವ 14.72 ಎಕ್ರೆ ವ್ಯಾಪ್ತಿಯಲ್ಲಿ ವ್ಯಾಪಿಸಿರುವ ವಿಶಾಲವಾದ ಕೆರೆಯಲ್ಲಿ ಎರಡು ದಿನಗಳಿಂದ ಮೀನುಗಳು ಸತ್ತು ತೇಲುತ್ತಿದ್ದು ಸ್ಥಳಕ್ಕೆ ವಿವಿಧ ಇಲಾಖಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ನೀರಿನ ಮಾದರಿಗಳನ್ನು ಸಂಗ್ರಹಿಸಿದ್ದಾರೆ.ಕೆರೆಯ ಎರಡೂ ಬದಿಗಳಲ್ಲಿ ಮೀನುಗಳು ಸತ್ತು ತೇಲುತ್ತಿರುವುದನ್ನು ಗಮನಿಸಿದ ಸ್ಥಳೀಯರು ಈ ಬಗ್ಗೆ ಗ್ರಾಮ ಪಂಚಾಯತಿಗೆ ಮಾಹಿತಿ ನೀಡಿದ್ದಾರೆ. ವಿಶಾಲವಾದ ಕೆರೆಗೆ ತ್ಯಜ್ಯಗಳು ಸೇರುತ್ತಿರುವ ಬಗ್ಗೆ ಸ್ಥಳೀಯರು ಆರೋಪ ಮಾಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಸ್ಥಳಕ್ಕೆ ಮಾಲಿನ್ಯ ನಿಯಂತ್ರಣ ಮಂಡಳಿಯಬಾಧಿಕಾರಿಗಳು ಭೇಟಿ ನೀಡಿ ನೀರಿನ ಮಾದರಿಗಳನ್ನು...

ಬೆಳ್ತಂಗಡಿ; ವಿದ್ಯುತ್ ಕಂಬ ಮೇಲೆತ್ತುವ ವೇಳೆ ತಲೆಗೆ ಕಂಬ ಬಿದ್ದು ವ್ಯಕ್ತಿ ಸಾವು

0

ಬೆಳ್ತಂಗಡಿ: ವಿದ್ಯುತ್ ಕಂಬವನ್ನು ಮೇಲಕ್ಕೆ ಎತ್ತುವ ವೇಳೆ ಕಂಬವು ತಲೆಗೆ ಬಡಿದು ಕಾರ್ಮಿಕನೊಬ್ಬ ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ಸೋಮವಾರ ಸಂಜೆ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಕೊಕ್ಕಡ ಗ್ರಾಮದ ಮಹಾವೀರ ಕಾಲೋನಿ ನಿವಾಸಿ ಶಿವಪ್ಪ(40) ಎಂದು ಗುರುತಿಸಲಾಗಿದೆ.ಇವರು ಪುರುಷೋತ್ತಮ ಎಂಬ ಗುತ್ತಿಗೆದಾರರ ಕೆಳಗೆ ಕಳೆದ ಕೆಲವು ವರ್ಷಗಳಿಂದ ಕೂಲಿ ಕಲಸ ಮಾಡುತ್ತಿದ್ದರು. ಸೋಮವಾರ ಇವರು ಕೊಕ್ಕಡ ಶ್ರೀರಾಮ ಭಜನಾಮಂದಿರದ ಬಳಿ ವಿದ್ಯುತ್ ಕಂಬವನ್ನು ಎತ್ತುವ ವೇಳೆ ಯಾವುದೇ ಸುರಕ್ಷತಾ ಪರಿಕರಗಳನ್ನು ಧರಿಸದೆ ಕೆಲಸ ಮಾಡುತ್ತಿದ್ದರು.ಈ ವೇಳೆ ಕಂಬವು ಅವರ ಮೇಲೆ ಬಿದ್ದು...

ಬೆಳ್ತಂಗಡಿ : ಶ್ರೀರಾಮ ಕ್ರೆಡಿಟ್ ಕೋ ಆಪರೇಟ್ ಸೊಸೈಟಿಯಲ್ಲಿ ವಂಚನೆ ಪ್ರಕರಣ ತನಿಖೆ ಆರಂಭಿಸಿದ ಸಿಐಡಿ ತಂಡ

0

ಬೆಳ್ತಂಗಡಿ : ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ(ರಿ) ಯಲ್ಲಿ ಗ್ರಾಹಕರು ಠೇವಣಿ ಇಟ್ಟಿದ್ದ ಸುಮಾರು 40 ಕೋಟಿ ರೂಪಾಯಿ ಹಣವನ್ನು ವಾಪಾಸ್ ನೀಡದೆ (ವಂಚನೆ) ಹಗರಣ ಮಾಡಿರುವ ಪ್ರಕರಣ ಸಂಬಂಧ ಮಾ.17 ರಂದು ಬೆಳಗ್ಗೆ ಸೊಸೈಟಿಗೆ ಬೆಂಗಳೂರಿನಿಂದ ಸಿಐಡಿ ತನಿಖಾ ತಂಡ ಆಗಮಿಸಿ ತನಿಖೆ ಆರಂಭಿಸಿದೆ. ಪ್ರಕರಣದ ವಿವರ: ಬೆಳ್ತಂಗಡಿ ನಗರದ ಜ್ಯೂನಿಯರ್ ಕಾಲೇಜ್ ರಸ್ತೆಯಲ್ಲಿರುವ ರಾಮನಗರದ ವಿ.ಆರ್.ನಾಯಕ್ ಕಾಂಪೌಂಡ್ ನಲ್ಲಿ ಸುಮಾರು 25 ವರ್ಷಗಳಿಂದ ಏಕೈಕ ಬ್ರಾಂಚ್ ಆಗಿ ಕಾರ್ಯಾಚರಿಸುತ್ತಿರುವ ಶ್ರೀ ರಾಮ ಕ್ರೆಡಿಟ್‌ ಕೋ ಆಪರೇಟಿವ್ ಸೊಸೈಟಿ(ರಿ) ನಲ್ಲಿ...

ಗುರುವಾಯನ’ಕೆರೆ’ಯಲ್ಲಿ ಸತ್ತು ತೇಲುತ್ತಿರುವ ಮೀನುಗಳು: ತನಿಖೆ ನಡೆಸುವಂತೆ ವ್ಯಾಪಾರಿಯಿಂದ ದೂರು

0

ಬೆಳ್ತಂಗಡಿ : ಪ್ರಕೃತಿ ರಮಣೀಯ ಗುರುವಾಯನ'ಕೆರೆ'ಯಲ್ಲಿ ಎರಡು ದುನಗಳಿಂದ ಮತ್ತೆ ಮೀನುಗಳು ಸತ್ತು ತೇಲುತ್ತಿದ್ದು ಮೂರು ವರ್ಷಗಳಲ್ಲಿ ಮೀನು ಹಿಡಿಯಲು ಏಲಂನಲ್ಲಿ ಪಡೆದುಕೊಂಡ ವ್ಯಾಪಾರಿ ಇದೀಗ ಮೀನುಗಳ ಸಾವಿಗೆ ಕಾರಣವೇನೆಂಬುದನ್ನು ತನಿಖೆ ಮಾಡಿಸುವಂತೆ ಸ್ಥಳೀಯ ಗ್ರಾಮಪಂಚಾಯತ್ ಆಡಳಿತಕ್ಕೆ ದೂರು ನೀಡಿದ್ದಾರೆ.ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾ.ಪಂ. ಆಡಳಿತಕ್ಕೊಳಪಟ್ಟಿರುವ ಗುರುವಾಯನಕೆರೆಯ ವಿಶಾಲ ಕೆರೆಯಲ್ಲಿ ಗ್ರಾ.ಪಂ. ಆಡಳಿತದ ವತಿಯಿಂದ ಮೀನು ಕೃಷಿ ಮಾಡುತ್ತಿದ್ದು ಇದನ್ನು ಇದೇ ಗ್ರಾಮದ ಮೀನು ವ್ಯಾಪಾರಿ ರಿಯಾದ್ ಎಂಬವರು ಗ್ರಾ.ಪಂ. ಏಲಂನಲ್ಲಿ ಭಾಗವಹಿಸಿ ಮೂರುವರ್ಷಗಳ ಖಾಯಂ ಅವಧಿಗೆ6 ಲಕ್ಷ ರೂಪಾಯಿಗೆ ಪಡೆದುಕೊಂಡಿದ್ದಾರೆ.ಆದರೆ ಮಂಗಳವಾರ...

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಯವರನ್ನು ಗಡಿಪಾರು ಮಾಡಿ ಮೂರನೇ ಬಾರಿ  ಆದೇಶ ಹೊರಡಿಸಿದ ಪುತ್ತೂರು ಎ.ಸಿ

0

ಬೆಳ್ತಂಗಡಿ : ಉಜಿರೆಯ ಸೌಜನ್ಯ ಪರ ಹೋರಾಟಗಾರ  ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಮೂರನೇ ಬಾರಿಗೆ ಗಡಿಪಾರು ಆದೇಶ ಹೊರಡಿಸಲಾಗಿದೆ. ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಹೈಕೋರ್ಟ್ ಆದೇಶದಂತೆ ಮಾ.16 ರಂದು (16-03-2026 ರಿಂದ 16-09-2026 ರವರೆಗೆ) ಪುತ್ತೂರು ಎಸಿ ಸ್ಟೆಲ್ಲಾ ವರ್ಗಿಸ್ ಅವರು ಆರು ತಿಂಗಳು ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ. ಪುತ್ತೂರು ಎ.ಸಿ ಗಡಿಪಾರು ಆದೇಶದಂತೆ ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿನಿ.ಸಿ.ಕೆ ಅವರು ನೇತೃತ್ವದಲ್ಲಿ ಪೊಲೀಸರು ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ...

ದಕ್ಷಿಣಕನ್ನಡ ಜಿಲ್ಲಾ ೨೮ನೇ ಕನ್ನಡ ಸಾಹಿತ್ಯ ಸಮ್ಮೇಳನ: ಆಮಂತ್ರಣಪತ್ರ ಬಿಡುಗಡೆ

0

ಬೆಳ್ತಂಗಡಿ: ಬಿ.ಸಿ. ರೋಡ್‌ನಲ್ಲಿ ಸ್ಪರ್ಶ ಕಲಾಮಂದಿರದಲ್ಲಿ ಮಾ. 26,27,28 ರಂದು ನಡೆಯಲಿರುವ ದಕ್ಷಿಣಕನ್ನಡ ಜಿಲ್ಲಾ28 ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣಪತ್ರವನ್ನು ಸೋಮವಾರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್, ವಿಶ್ವನಾಥ, ಬಂಟ್ವಾಳ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ, ಅಶೋಕ ಶೆಟ್ಟಿ ಸರಪಾಡಿ, ಅಬೂಬಕ್ಕರ್ ಅಮ್ಮುಂಜೆ, ದೇವಪ್ಪ ಕುಲಾಲ್, ರಜನಿ ಚಿಕ್ಕಯ್ಯಮಠ, ವಿ. ಸು. ಭಟ್, ಬಂಟ್ವಾಳ, ಸುಭಾಶ್ಚಂದ್ರ ಜೈನ್ ಮತ್ತು ಹರ್ಷೇಂದ್ರ ಜೈನ್ ಮಾಳ...

ಎಸ್‌ಎಂವೈಎಂ ಸೆಂಟ್ ಅಲ್ಫೋನ್ಸ ಚರ್ಚ್ ವತಿಯಿಂದ ಸ್ವಚ್ಛತಾ ಅಭಿಯಾನ.

0

ನೆಲ್ಯಾಡಿ: ಗ್ರೀನ್ ಸಿಟಿ – ಕ್ಲೀನ್ ಸಿಟಿ ಅಭಿಯಾನದ ಅಂಗವಾಗಿ ನೆಲ್ಯಾಡಿಯ ಸಂತ ಅಲ್ಫೋನ್ಸ ಪುಣ್ಯಕ್ಷೇತ್ರದ ಸೀರೋಮಲಬಾರ್ ಯೂತ್ ಮೂವ್ಮೆಂಟ್ (SMYM) ನೇತೃತ್ವದಲ್ಲಿ ಸ್ವಚ್ಛತಾ ಅಭಿಯಾನವನ್ನು ಯಶಸ್ವಿಯಾಗಿ ನಡೆಸಲಾಯಿತು.ಹೈವೇ ನಿರ್ಮಾಣ, ಕಿರಿದಾದ ರಸ್ತೆಗಳು ಮತ್ತು ಬೀದಿಗಳಲ್ಲಿ ತುಂಬಿಕೊಂಡಿದ್ದ ಕಸದ ರಾಶಿಗಳಿಂದ ನೆಲ್ಯಾಡಿ ಪೇಟೆ ಅಸ್ವಚ್ಛತೆಯ ಸಮಸ್ಯೆಯನ್ನು ಎದುರಿಸುತ್ತಿರುವ ಹಿನ್ನೆಲೆಯಲ್ಲಿ, ಸಮಾಜಕ್ಕೆ ಮಾದರಿಯಾಗುವ ಉದ್ದೇಶದಿಂದ ಪೇಟೆಯ ಇಕ್ಕೆಲಗಳಲ್ಲಿ ಸಂಗ್ರಹವಾಗಿದ್ದ ಕಸವನ್ನು ಶ್ರಮದಾನದ ಮೂಲಕ ಸ್ವಚ್ಛಗೊಳಿಸುವ ಕಾರ್ಯವನ್ನು ಯುವಕರು ಕೈಗೊಂಡರು.ಈ ಕಾರ್ಯಕ್ರಮವನ್ನು ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್‌ನ ಧರ್ಮಗುರು ವಂದನೀಯ ಫಾ. ಶಾಜಿ ಮಾತ್ಯು ಅವರ...

ಸೌತಡ್ಕ ಸೇವಾಧಾಮದಲ್ಲಿ ಗಾಲಿಕುರ್ಚಿ ವಿತರಣಾ ಕಾರ್ಯಕ್ರಮ ಉದ್ಘಾಟನೆ

0

ಬೆಳ್ತಂಗಡಿ: ಬೆಂಗಳೂರು APD ಸಂಸ್ಥೆಯ ಸಹಕಾರದೊಂದಿಗೆ ಪ್ರಸ್ತುತ ವರ್ಷದಲ್ಲಿ 100 ಗಾಲಿಕುರ್ಚಿಯನ್ನು ನೀಡುವ ಯೋಜನೆಯನ್ನು ಹೊಂದಿದ್ದು. ಅದರಂತೆ, ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಸೇವಾಧಾಮವು 8ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಸಂದರ್ಭದಲ್ಲಿ 30 ಗಾಲಿಕುರ್ಚಿಗಳನ್ನು ವಿತರಿಸಲಾಗಿತ್ತು. ಈ ತಿಂಗಳಲ್ಲಿ 32 ಗಾಲಿಕುರ್ಚಿಗಳನ್ನು ವಿತರಿಸುವುದಾಗಿ ನಿರ್ಧರಿಸಿದ್ದು ಉಡುಪಿಯ ಶ್ರೀ ನಿಹಾಲ್ ವಿಲ್ಸನ್, ಕಾರ್ಕಳದ ಶ್ರೀ ಸಂದೀಶ್, ಆತ್ರಾಡಿಯ ಶ್ರೀ ರಮೇಶ್ ನಾಯ್ಕ್ ರವರಿಗೆ ಗಾಲಿಕುರ್ಚಿ ವಿತರಣಾ ಕಾರ್ಯಕ್ರಮವನ್ನು ಮಾರ್ಚ್ 15 ರಂದು ಸೌತಡ್ಕ ಸೇವಾಧಾಮ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರ ಪುನಶ್ಚೇತನ ಕೇಂದ್ರದಲ್ಲಿ ನಡೆಸಲಾಯಿತು. ನಿವೃತ್ತ ಮಹಿಳಾ ಆರೋಗ್ಯ...

ಬೆಳ್ತಂಗಡಿ ಅರಣ್ಯದೊಳಗಿನ ಆದಿವಾಸಿ ಕುಟುಂಬಗಳಿಗೆ ಬೆಳಕು ನೀಡುವ ಪ್ರಕ್ರಿಯೆ ಆರಂಭಿಸಿದ ರಾಜ್ಯ ಸರಕಾರ

0

ಬೆಳ್ತಂಗಡಿ;  ಶತಮಾನಗಳಿಂದ ಕತ್ತಲೆಯಲ್ಲಿ ಬದುಕನ್ನು ನಡೆಸುತ್ತಿದ್ದ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಆದಿವಾಸಿ ಕುಟುಂಬಗಳು ಸೇರಿದಂತೆ ಅರಣ್ಯವಾಸಿಗಳಿಗೆ ಕೊನೆಗೂ ಬೆಳಕು ನೀಡುವ ಪ್ರಕ್ರಿಯೆ ರಾಜ್ಯ ಸರಕಾರದಿಂದ ನಡೆಯುತ್ತಿದೆ. ಇದೀಗ ಮೊದಲ ಬಾರಿಗೆ ಮೆಸ್ಕಾ ಮೂಲಕ ವಿದ್ಯುತ್ ಸಂಪರ್ಕ ಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಲಾಗಿದ್ದು ಇದು ಸಧ್ಯದಲ್ಲಿಯೇ ಅನುಮೋದನೆಗೊಳ್ಳುವ ನಿರೀಕ್ಷೆಯಿದೆ. ಕತ್ತಲಲ್ಲಿರುವ ಆದಿವಾಸಿ ಕುಟುಂಬಗಳು ಬೆಳಕನ್ನು ಕಾಣುವ ದಿನ ದೂರವಿಲ್ಲ. ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳು ಕಳೆದರೂ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವಾಸಿಗಳು ವಿದ್ಯುತ್ ಬೆಳಕು ಕಾಣದೆ ಕತ್ತಲೆಯಲ್ಲಿರುವ ಬಗ್ಗೆ ಅವರ...