ಬೆಳ್ತಂಗಡಿ : ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯ ಮೃತದೇಹ ಆಸ್ಪತ್ರೆಯ ಡಯಾಲಿಸಿಸ್ ಕೇಂದ್ರದ ಬಳಿ ಪತ್ತೆ
ಬೆಳ್ತಂಗಡಿ : ಇಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ ಅನಾರೋಗ್ಯವೆಂದು ದಾಖಲಾಗಿದ್ದ ರೋಗಿಯೊಬ್ಬರ ಮೃತದೇಹ ಆಸ್ಪತ್ರೆಯ ಹೊರ ವರಾಂಡದಲ್ಲಿ ಕಂಡು ಬಂದಿದ್ದು ಆಸ್ಪತ್ರೆಯಲ್ಲಿನ ನಿರ್ಲಕ್ಷ್ಯದಿಂದ ಈತ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ ಎಂಬ ಆರೋಪ ಕೇಳಿ ಬರುತ್ತಿದೆ. ಬೆಳ್ತಂಗಡಿ ತಾಲೂಕು ಸರ್ವಜನಿಕ ಸರಕಾರಿ ಆಸ್ಪತ್ರೆಗೆ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಪೆಲತ್ತಾಜೆ ನಿವಾಸಿ ಅಚ್ಚುತ್ತ (42) ಎಂಬವರು ಹೊಟ್ಟೆನೋವು ಎಂದು ಮೇ.10 ರಂದು ಮಧ್ಯಾಹ್ನ ದಾಖಲಾಗಿದ್ದರು. ಇವರು ಮೇ.11 ರಂದು ಬೆಳಗ್ಗೆ 5 ಗಂಟೆಗೆ ಸುಮಾರಿಗೆ ಆಸ್ಪತ್ರೆಯಿಂದ ಹೊರಗಡೆ ಹೋಗಿದ್ದು ಆಸ್ಪತ್ರೆಯ ಹಿಂಭಾಗದ ಡಯಾಲಿಸಿಸ್ ಕೇಂದ್ರದ ಬಳಿ ಕುಸಿದು...
ಧರ್ಮಸ್ಥಳ ಮುಳಿಕ್ಕಾರಿನಲ್ಲಿ ಚುನಾವಣಾ ಬಹಿಷ್ಕಾರಕ್ಕೆ ನಿರ್ಧಾರ ರಸ್ತೆಯ ಅವ್ಯವಸ್ಥೆ ಜನಪ್ರತಿನಿಧಿ , ಅಧಿಕಾರಿಗಳ ವಿರುದ್ದ ಆಕ್ರೋಶ
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ಮುಳಿಕಾರು ಮಲೆಕುಡಿಯ ಕಾಲನಿಯ ಜನರು ರಸ್ತೆ ಹಾಗೂ ಮೂಲಭೂತ ಸೌಲಭ್ಯಗಳ ಕೊರತೆಯಿಂದ ನಿರಂತರ ಸಮಸ್ಯೆ ಎದುರಿಸುತ್ತಿದ್ದು ಇದೀಗ ತಮ್ಮ ಬೇಡಿಕೆ ಈಡೇರಿಸದಿದ್ದರೆ ಚುನಾವಣಾ ಬಹಿಷ್ಕಾರದ ನಿರ್ಧಾರ ತೆಗೆದುಕೊಂಡಿದ್ದು ಚುನಾವಣೆ ಬಹಿಷ್ಕರಿಸುವುದಾಗಿ ಬ್ಯಾನರ್ ಅಳವಡಿಸಿದ್ದಾರೆ. ಇಲ್ಲಿ 80 ಕ್ಕೂ ಹೆಚ್ಚು ಮಲೆಕುಡಿಯ ಸಮುದಾಯದ ಕುಟುಂಬಗಳು ತಲೆತಲಾಂತರಗಳಿಂದಲೂ ವಾಸಿಸುತ್ತಿದೆ. ಇಲ್ಲಿ ಇತರ ಜಾತಿಯ ಕುಟುಂಬಗಳೂ ಇವೆ. ಇಲ್ಲಿಯ ರಸ್ತೆ ಇಂದಿಗೂ ಪಕ್ಕಾ ಮಣ್ಣಿನ ರಸ್ತೆ. ರಸ್ತೆಯಲ್ಲಿ ಬಾರಿ ಗಾತ್ರದ ಕಲ್ಲುಗಳು , ಮರದ ಬೇರುಗಳು ಜೊತೆಗೆ ರಸ್ತೆ ಮಧ್ಯೆದಲ್ಲೇ ಪ್ರಕೃತಿ ರೂಪಿಸಿದ ತಾತ್ಕಾಲಿಕ...
ಬೆಳ್ತಂಗಡಿ : ನಗರದಲ್ಲಿ ಅಕ್ರಮ ಕಟ್ಟಡದೊಳಗೆ ವೇಶ್ಯಾವಾಟಿಕೆ; ಪೊಲೀಸರಿಂದ ದಾಳಿ ಹಲವರು ವಶಕ್ಕೆ
ಬೆಳ್ತಂಗಡಿ : ಅಕ್ರಮವಾಗಿ ನಿರ್ಮಾಣ ಮಾಡಿದ ಕ್ಯಾಂಟಿನ್ ಒಳಗಡೆ ಅಕ್ರಮವಾಗಿ ವೇಶ್ಯಾವಟಿಕೆ ದಂಧೆ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿದ್ದು ಹಲವರನ್ನು ಬಂಧಿಸಿದ್ದಾರೆ. ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ ಕೆ.ಇ.ಬಿ ಕಚೇರಿ ಪಕ್ಕದಲ್ಲಿ ಸರಕಾರಿ ಜಾಗದಲ್ಲಿ ಅಕ್ರಮವಾಗಿ ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ನಿವಾಸಿ ಸುಂದರ್ ಶೆಟ್ಟಿ ಎಂಬವರು ಪವನ್ ಕ್ಯಾಂಟಿನ್ ಎಂಬ ಹೆಸರಿನಲ್ಲಿ ಕಳೆದ 20 ವರ್ಷಗಳಿಂದ ನಡೆಸುತ್ತಿದ್ದರು. ಈ ಕ್ಯಾಂಟಿನ್ ಭಾನುವಾರ ಮಾತ್ರ ರಜೆ ಇದ್ದು, ಈ ಸಮಯದಲ್ಲಿ ಕ್ಯಾಂಟಿನ್ ಮಾಲೀಕ ಸುಂದರ್ ಶೆಟ್ಟಿ ಕ್ಯಾಂಟಿನ್ ಒಳಗಡೆ ಬೆಡ್ ರೂಂ, ಶೌಚಾಲಯ ವ್ಯವಸ್ಥೆ...
ನೆಲ್ಯಾಡಿ ಭೀಕರ ಅಪಘಾತ ಪತಿ ಸ್ಥಳದಲ್ಲಿಯೇ ಸಾವು ಪತ್ನಿಗೆ ಗಂಭೀರ ಗಾಯ
ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತ್ತೊಟ್ಟು ಜಂಕ್ಷನ್ನಲ್ಲಿ ಬೈಕ್ ಹಾಗೂ ಸ್ವಿಫ್ಟ್ ಕಾರಿನ ನ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು ಸಹ ಸವಾರೆ ಗಂಭೀರವಾಗಿ ಗಾಯಗೊಂಡ ಘಟನೆ ಮೇ 10ರಂದು ಅಪರಾಹ್ನ ನಡೆದಿದೆ.ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಬೈಕ್ ಹಾಗೂ ಉಪ್ಪಿನಂಗಡಿಯಿಂದ ಶಿರಾಡಿ ಕಡೆಗೆ ಸಾಗುತ್ತಿದ್ದ ಸ್ವಿಫ್ಟ್ ಕಾರಿನ ಗೋಳಿತ್ತೊಟ್ಟು ಜಂಕ್ಷನ್ನಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಬೈಕ್ ಸವಾರ ಗಂಭೀರವಾಗಿ ಗಾಯ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತಪಟ್ಟವರನ್ನು ಅರಸಿನಮಕ್ಕಿ ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ...
ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿಗೆ ಒಲವು ಹೊಂದಿರುವ ಕುಟುಂಬಗಳು ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಅರಣ್ಯ ಸಚಿವರ ಬೇಟಿ
ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ವಾಸವಾಗಿರುವ 9 ಕುಟುಂಗಳು ಸ್ವಯಂ ಪ್ರೇರಿತ ಪುನರ್ವಸತಿಗೆ ಒಲವು ಹೊಂದಿದ್ದು. ಈಗಾಗಲೇ ಕಡತಗಳು ಸಿದ್ಧಪಡಿಸಿ ಅಂದಾಜು ಮೊತ್ತವನ್ನು ಸರ್ಕಾರಕ್ಕೆ ಸಲ್ಲಿಸಿರುತ್ತಾರೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರ ಸಮಕ್ಷಮದಲ್ಲಿ ಮುಕ್ತಾಯದ ಹಂತಕ್ಕೆ ಬಂದಿರುತ್ತದೆ. ಈ ಬಗ್ಗೆಸ್ವಯಂ ಪ್ರೇರಿತ ಪುನರ್ವಸತಿಗೆ ಒಲವು. ಹೊಂದಿರುವ ಕುಟುಂಬಗಳು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಅವರನ್ನು ಭೇಟಿ ಮಾಡಿ ಮಲವಂತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ವಾಸವಾಗಿರುವ...
ಕಡಬ; ಕುಟ್ರುಪ್ಪಾಡಿ ಇಬ್ಬರು ವಿದ್ಯಾರ್ಥಿ ನಿಯರು ನೀರಿನಲ್ಲಿ ಮುಳುಗಿ ಮೃತ್ಯು
ಕಡಬ: ತಾಲೂಕಿನ ಕುಟ್ರುಪ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹರಿಯುವ ಗುಂಡ್ಯ ಹೊಳೆಯ ಕೊಲ್ಯದಕಟ್ಟಿ ಡ್ಯಾಂ ಬಳಿ ಸ್ನಾನಕ್ಕಿಳಿದ ಇಬ್ಬರು ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ. ಮೃತ ವಿದ್ಯಾರ್ಥಿನಿಯರನ್ನು ಕುಟ್ರುಪ್ಪಾಡಿ ಗ್ರಾಮದ ವಿಮಲಗಿರಿ ನಿವಾಸಿಗಳಾದ ಅರ್ಪಿತಾ (15) ಹಾಗೂ ಸುನೀತ (21) ಎಂದು ಗುರುತಿಸಲಾಗಿದೆ. ರಜೆ ದಿನದ ಹಿನ್ನೆಲೆಯಲ್ಲಿ ಸ್ನೇಹಿತರ ತಂಡದೊಂದಿಗೆ ಐವರು ವಿದ್ಯಾರ್ಥಿನಿಯರು ಕೊಲ್ಯದಕಟ್ಟಿ ಡ್ಯಾಂ ಬಳಿಗೆ ಆಗಮಿಸಿ ನೀರಿನಲ್ಲಿ ಸ್ನಾನಕ್ಕೆ ಇಳಿದಿದ್ದರು ಎನ್ನಲಾಗಿದೆ. ಈ ವೇಳೆ ಅರ್ಪಿತಾ ಹಾಗೂ ಸುನೀತ ಅವರು ನೀರಿನ ಆಳದ ಅರಿವಿಲ್ಲದೆ ಮುಂದೆ...
ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಅವ್ಯವಸ್ಥೆ ವಿರುದ್ಧ ಎಸ್.ಡಿ.ಪಿ.ಐ ಮನವಿ
ಬೆಳ್ತಂಗಡಿ: ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ, ಔಷಧಿಗಳ ಅಭಾವ ಹಾಗೂ ರೋಗಿಗಳ ಬಗೆಗಿನ ನಿರ್ಲಕ್ಷ್ಯ ನಡೆಯುತ್ತಿರುವ ಕುರಿತು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯಿಂದ ತಾಲೂಕು ತಹಶೀಲ್ದಾರರು ಹಾಗೂ ಆರೋಗ್ಯ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು. ಪಕ್ಷದ ಬೆಳ್ತಂಗಡಿ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಅವರ ನೇತೃತ್ವದಲ್ಲಿ ಸಲ್ಲಿಸಲಾದ ಮನವಿಯಲ್ಲಿ, ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಆಗಮಿಸುವ ಬಡ ಹಾಗೂ ಸಾಮಾನ್ಯ ರೋಗಿಗಳಿಗೆ ಅಗತ್ಯ ವೈದ್ಯಕೀಯ ಸೌಲಭ್ಯಗಳು ಸಮರ್ಪಕವಾಗಿ ದೊರೆಯುತ್ತಿಲ್ಲ ಎಂದು ಆರೋಪಿಸಲಾಗಿದೆಆಸ್ಪತ್ರೆಯಲ್ಲಿ NS ಡ್ರಿಪ್ಸ್, ಕ್ಯಾನೂಲಾ,...
ಬೆಳ್ತಂಗಡಿ : ವಾರಂಟ್ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು
ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಕಳ್ಳತನ ಪ್ರಕರಣ ಕಲಂ, 454,380,511 ಜೊತೆಗೆ 34 ಐಪಿಸಿಯಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿದ ವಾರಂಟ್ ಆರೋಪಿ ನೆಲ್ಯಾಡಿಯ ಸತೀಶ್ @ ಸ್ಕೋರ್ಪಿಯಾ ಸತೀಶ್(35) ಎಂಬಾತನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಈತನ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ,ವೇಣೂರ್ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ,ಪೂತ್ತೂರು ನಗರ ಠಾಣೆಯಲ್ಲಿ ಒಂದು ಪ್ರಕರಣ,ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುತ್ತದೆ. ಬೆಳ್ತಂಗಡಿ ಪೊಲೀಸ್ ಉಪ ವಿಭಾಗದ ಡಿವೈಎಸ್ಪಿ ರೋಹಿಣಿ ಸಿ ಕೆ ಮಾರ್ಗದರ್ಶನದಲ್ಲಿ ಬೆಳ್ತಂಗಡಿ...
ಧರ್ಮಸ್ಥಳ; ಗಿರೀಶ್ ಮಟ್ಟಣ್ಣನವರ್ ವಿರುದ್ದ ಮತ್ತೊಂದು ಪ್ರಕರಣ ದಾಖಲು:ಪೊಲೀಸರಿಂದ ನೋಟೀಸ್ ಜಾರಿ
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಮಾನಿಹಾನಿಕರ ಪೋಸ್ಟ್ ಗಳನ್ನು ಹಾಕಿರುವ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಾಮಾಜಿಕ ಮಾಧ್ಯಮ ಇನ್ಟ್ರಾ ಗ್ರಾಂ ನಲ್ಲಿ ಸತ್ಯಕ್ಕೆ ದೂರವಾದ ಗಂಭೀರ ಆರೋಪಗಳನ್ನು ಮಾಡುವ ಮೂಲಕ ಡಾ.ಹೆಗ್ಗಡೆಯವರ ವ್ಯಕ್ತಿತ್ವಕ್ಕೆ ಕುಂದುತರುವ ಪ್ರಯತ್ನ ನಡೆಸಿ ಸಮಾಜದಲ್ಲಿ ಅವರ ಸ್ಥಾನಮಾನಕ್ಕೆ ಹಾನಿಯುಂಟು ಮಾಡುವ ಪ್ರಯತ್ನ ನಡೆಸಿದ್ದಲ್ಲದೆ ಸಮಾಜದಲ್ಲಿ ವೈರತ್ವ ದ್ವೇಷ ವೈಮನಸ್ಸು ಉಂಟುಮಾಡಲು ಪ್ರಯತ್ನಿಸಿದ ಬಗ್ಗೆ ಧರ್ಮಸ್ಥಳ ನಿವಾಸಿ ಸುಬ್ರಹ್ಮಣ್ಯ ಪ್ರಸಾದ್ ಅವರು ನೀಡಿದ ದೂರಿನಂತೆ...
ಬೆಳ್ತಂಗಡಿ; ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವು
ಬೆಳ್ತಂಗಡಿ: ಗುರುವಾಯನಕೆರೆ-ಶಕ್ತಿನಗರ ವೃತ್ತ ಬಳಿ ಬೈಕ್ ಮತ್ತು ಪಿಕಾಪ್ ವಾಹನ ಅಪಘಾತ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸವಾರ ನಾಗರಾಜ್ (21ವ) ರವರು ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ. ನಾಗರಾಜ್ (21 ವ) ಇವರು ಕಾರ್ಕಳದವರಾಗಿದ್ದು, ಮೇ 6 ರಂದು ಗುರುವಾಯಕೆರೆಯಲ್ಲಿ ಸಂಬಂಧಿಕರ ಮನೆಗೆ ಕಾರ್ಯಕ್ರಮಕ್ಕಾಗಿ ಬಂದಿದ್ದರು. ಇವರು ಚಲಾಯಿಸುತ್ತಿದ್ದ ಬೈಕ್ ಗೆ ಗುರುವಾಯನಕೆರೆ ಕಡೆಯಿಂದ ಬರುತ್ತಿದ್ದ ಪಿಕಪ್ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದು, ಸ್ಥಳೀಯರು ತಕ್ಷಣ ಹತ್ತಿರದ ಆಸ್ಪತ್ರೆಗೆ ರವಾನಿಸಲಾಗಿತ್ತು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಇಂದು(ಮೇ...















