ಮಹೇಶ್ ಶೆಟ್ಟಿ ತಿಮರೋಡಿ ವಿರುದ್ದ ಅಕ್ರಮ ಶಸ್ತ್ರಾಸ್ತ್ರ ಪ್ರಕರಣಕ್ಕೆ ಮದ್ಯಂತರ ತಡೆ ನೀಡಿ ಹೈಕೋರ್ಟ್ ಆದೇಶ
ಬೆಂಗಳೂರು: ಮನೆಯಲ್ಲಿ ಅನಧಿಕೃತವಾಗಿ ಶಸ್ತ್ರಾಸ್ತ್ರ ಇರಿಸಿಕೊಂಡ ಆರೋಪದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಗೆ ತಡೆಯಾಜ್ಞೆ ನೀಡಿ ಹೈಕೋರ್ಟ್ ಮಧ್ಯಂತರ ಆದೇಶ ಮಾಡಿದೆ. ಶಸ್ತ್ರಾಸ್ತ್ರ ಕಾಯ್ದೆಯಡಿ ತಮ್ಮ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮೊಹಮ್ಮದ್ ನವಾಝ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಇತ್ತೀಚೆಗೆ ಈ ಮಧ್ಯಂತರ ಆದೇಶ ಮಾಡಿದೆ.ಜತೆಗೆ, ಅರ್ಜಿ ಸಂಬಂಧ ಬೆಳ್ತಂಗಡಿ ಠಾಣೆ ಪೊಲೀಸರು ಹಾಗೂ ಪ್ರಕರಣದ ದೂರುದಾರಾಗಿರುವ...
ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ತುಮಕೂರು ಸಿದ್ಧಗಂಗಾ ಮಠದ ಪೂಜ್ಯ ಸಿದ್ಧಲಿಂಗ ಸ್ವಾಮೀಜಿಯವರಿಂದ ಅಶೀರ್ವಚನ
ಧರ್ಮಸ್ಥಳ: ಸರ್ವಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳವು ನಾಡಿನ ಪವಿತ್ರ ಹಾಗೂ ಪುಣ್ಯಕ್ಷೇತ್ರವಾಗಿದ್ದು, ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತೃಹೃದಯದಿಂದ ಮಾಡುವ ಸಮಾಜ ಸೇವೆ ಅನನ್ಯ ಮತ್ತು ಅನುಪಮವಾಗಿದೆ ಎಂದು ತುಮಕೂರು ಸಿದ್ಧಗಂಗಾ ಮಠದ ಪೂಜ್ಯ ಸಿದ್ಧಲಿಂಗ ಸ್ವಾಮೀಜಿ ಹೇಳಿದರು.ಅವರು ಶುಕ್ರವಾರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ಸಂದರ್ಭದಲ್ಲಿ ಆಶೀರ್ವಚನ ನೀಡಿದರು.ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳದ ಸರ್ವತೋಮುಖ ಪ್ರಗತಿಯೊಂದಿಗೆ ಸಮಾಜಕ್ಕೂ ಅನುಪಮ ಸೇವೆ ನೀಡಿದ್ದಾರೆ.ಮಹಾತ್ಮ ಗಾಂಧೀಜಿಯವರ ಗ್ರಾಮರಾಜ್ಯದ ಮೂಲಕ ರಾಮರಾಜ್ಯದ ಕನಸನ್ನು ಹೆಗ್ಗಡೆಯವರು ಗ್ರಾಮಾಭಿವೃದ್ಧಿ ಯೋಜನೆ ಮತ್ತು ಮನಪರಿವರ್ತನೆ ಮೂಲಕ...
ಸುರತ್ಕಲ್ ಚೂರಿ ಇರಿತ ಪ್ರಕರಣ ನಾಲ್ವರು ಆರೋಪಿಗಳ ಬಂಧನ
ಮಂಗಳೂರ; ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಾನಾದ ಬಳಿಯಲ್ಲಿ ಯುವಕರಿಬ್ಬರಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಅಲೆಕ್ಸ್ ಸಂತೋಷ್, ನಿತಿನ್, ಸುಶಾಂತ್ ಮತ್ತು ಆರೋಪಿಗಳಿಗೆ ರಕ್ಷಣೆ ನೀಡಿದ ಅರುಣ್ ಶೆಟ್ಟಿ ಎಂಬವರನ್ನು ಬಂಧಿಸಿದ್ದು ಇನ್ನಿಬ್ಬರು ಆರೋಪಿಗಳುಬತಲೆಮರೆಸಿಕೊಂಡಿದ್ದಾರೆ.ದಿನಾಂಕ: 23-10-2025 ರಂದು ರಾತ್ರಿ ಸುಮಾರು 10-30 ಗಂಟೆಗೆ ಸುರತ್ಕಲ್ ಕಾನಾ ಬಳಿಯ ದೀಪಕ್ ಭಾರ್ ಬಳಿಯಲ್ಲಿ ಕ್ಷುಲಕ ಕಾರಣಕ್ಕಾಗಿ ಹಸನ್ ಮುಕ್ಷಿತ್ ಮತ್ತು ನಿಝಾಂ ಎಂಬ ಯುವಕರಿಬ್ಬರಿಗೆ ಈ ಹಿಂದೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಗುರುರಾಜ್ ಆಚಾರಿ, ಅಲೆಕ್ಸ್ ಸಂತೋಷ್,ನಿತಿನ್...
ಕಂಚಿ ಕಾಮಕೋಟಿ ಪೀಠದ ಹಿಂದಿನ ಸ್ವಾಮೀಜಿಯವರು ಉಪಯೋಗಿಸುತ್ತಿದ್ದ ರಿಕ್ಷಾ ಧರ್ಮಸ್ಥಳಕ್ಕೆ ಕೊಡುಗೆ
ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ೫೮ನೆ ವರ್ಧಂತ್ಯುತ್ಸವ ಆಚರಣೆಯ ಸಂದರ್ಭದಲ್ಲಿ ಶುಕ್ರವಾರ ಕಂಚಿಕಾಮಕೋಟಿ ಪೀಠದ ಹಿಂದಿನ ಸ್ವಾಮೀಜಿಯವರು ಬಳಸುತ್ತಿದ್ದ ಪವಿತ್ರ ರಿಕ್ಷಾವನ್ನು ಧರ್ಮಸ್ಥಳಕ್ಕೆ ಕೊಡುಗೆಯಾಗಿ ಅರ್ಪಿಸಲಾಯಿತು. ಭಕ್ತರು ತಂದ ರಿಕ್ಷಾವನ್ನು ಧರ್ಮಸ್ಥಳದಲ್ಲಿ ಮಾಹಿತಿ ಕಚೇರಿ ಬಳಿಯಿಂದ ಭವ್ಯ ಮೆರವಣಿಗೆಯಲ್ಲಿ ಹೆಗ್ಗಡೆಯವರ ನಿವಾಸ ಬೀಡಿಗೆ ತರಲಾಯಿತು. ಕಂಚಿ ಕಾಮಕೋಟಿ ಸ್ವಾಮೀಜಿಯವರು ತಮ್ಮ ಪಾದಯಾತ್ರೆಯ ಸಂದರ್ಭದಲ್ಲಿ ಅವಶ್ಯಕ ವಸ್ತುಗಳಾದ ಪಾದುಕೆಗಳನ್ನು, ಅನುಷ್ಠಾನ ಪಾತ್ರೆಗಳನ್ನು ಮತ್ತು ದರ್ಭಾಸನದ ಸಾಗಾಣಿಕೆಗೆ ಇದನ್ನು ಬಳಸುತ್ತಿದ್ದರು. ಪೂಜ್ಯ ಹೆಗ್ಗಡೆಯವರು ಈ ವಿಶಿಷ್ಟ ಕೊಡುಗೆಯನ್ನು ಸ್ವೀಕರಿಸಿ ಸಂತಸ ವ್ಯಕ್ತಪಡಿಸಿದರು. ಹೇಮಾವತಿ ವಿ. ಹೆಗ್ಗಡೆಯವರು, ಡಿ....
ಕೆ. ವಿನಾಯಕ ರಾವ್ ರವರಿಗೆ ಉಡುಪಿ ಜಿಲ್ಲೆಯ ಹೋಂ ಡಾಕ್ಟರ್ ಫೌಂಡೇಶನ್ (ರಿ.), ವತಿಯಿಂದ ಸನ್ಮಾನ
ಬೆಳ್ತಂಗಡಿ: ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಸೇವಾಧಾಮ ಪುನಶ್ಚೇತನ ಕೇಂದ್ರದ ಮೂಲಕ ಪುನಶ್ಚೇತನವನ್ನು ನೀಡುತ್ತಾ ಹಾಗೆ ಆರೋಗ್ಯ ತಪಾಸಣಾ, ರಕ್ತದಾನ ಶಿಬಿರ, ಮಹಿಳಾ ಸಬಲೀಕರಣ ಹೀಗೆ ಹಲವಾರು ಸೇವಾ ಚಟುವಟಿಕೆಗಳನ್ನು ನಡೆಸುತ್ತಿರುವ ಕನ್ಯಾಡಿ ಸೇವಾಭಾರತಿ ಖಜಾಂಚಿ ಮತ್ತು ಸೇವಾಧಾಮ ಸಂಸ್ಥಾಪಕರಾದ ಶ್ರೀ ಕೆ ವಿನಾಯಕ ರಾವ್ ರವರನ್ನು ಹೋಂ ಡಾಕ್ಟರ್ ಫೌಂಡೇಶನ್(ರಿ.), ವತಿಯಿಂದ ಉಡುಪಿ ಜಿಲ್ಲೆಯ ಕೊಳಗಿರಿ ಸ್ವರ್ಗ ಆಶ್ರಮದಲ್ಲಿ ನಡೆಸಿದಂತಹ ದೀಪಾವಳಿ ಆಚರಣೆ 2025 ಕಾರ್ಯಕ್ರಮದಲ್ಲಿ ಗುರುತಿಸಿ ಡಾ. ಶಶಿಕಿರಣ್ ಶೆಟ್ಟಿರವರ ನೇತೃತ್ವದಲ್ಲಿ ಸನ್ಮಾನಿಸಲಾಯಿತು.
ಹೈದರಾಬಾದ್ ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಹೊತ್ತಿ ಉರಿದು 20ಕ್ಕೂ ಹೆಚ್ಚು ಮಂದಿ ಸ್ಥಳದಲ್ಲಿಯೇ ಮೃತಪಟ್ಟ ಶಂಕೆ
ಬೆಂಗಳೂರು: ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಚಿನ್ನಾಟೇಕೂರ್ ಬಳಿ ಶುಕ್ರವಾರ ಬೆಳಗಿನ ಜಾವ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹೈದರಾಬಾದ್ ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಬೆಂಕಿಗಾಹುತಿಯಾಗಿ ಕನಿಷ್ಠ 20 ಜನರು ಸಜೀವ ದಹನವಾಗಿರುವ ಶಂಕೆ ವ್ಯಕ್ತವಾಗಿದೆ. 3 ಬೆಳಗಿನ ಜಾವ ಸುಮಾರು 3.30ರ ಸಮಯದಲ್ಲಿ ಖಾಸಗಿ ಬಸ್ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಭಾರೀ ಸ್ಪೋಟ ಸಂಭವಿಸಿ, ಕೆಲವೇ ಕ್ಷಣಗಳಲ್ಲಿ ಬಸ್‌ಗೆ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ತೀವ್ರವಾಗಿ ಹರಡಿದ ಪರಿಣಾಮ ಇಡೀ ಬಸ್ ಸಂಪೂರ್ಣವಾಗಿ ಸುಟ್ಟುಹೋಗಿದೆ.ಬಸ್‌ನಲ್ಲಿ ಸುಮಾರು 40 ಪ್ರಯಾಣಿಕರಿದ್ದರು ಎನ್ನಲಾಗಿದೆ....
ಬೆಳ್ತಂಗಡಿ : ಆಟೋದಲ್ಲಿ ಅಕ್ರಮ ಗೋ ಮಾಂಸ ಸಾಗಾಟ ಪತ್ತೆ ಹಚ್ಚಿದ ಬೆಳ್ತಂಗಡಿ ಪೊಲೀಸರು
ಬೆಳ್ತಂಗಡಿ : ಆಟೋ ರಿಕ್ಷಾದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿದ್ದಾಗ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಪತ್ತೆ ಹಚ್ಚಿದ್ದಾರೆ. ಬೆಳ್ತಂಗಡಿ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಅ.23 ರಂದು ಸುಮಾರು ಮಧ್ಯಾಹ್ನ 2:30 ಕ್ಕೆ ಕಿಲ್ಲೂರು ರಸ್ತೆಯಿಂದ ಬರುತ್ತಿದ್ದ KA-70-0694 ನಂಬರಿನ ಆಟೋ ರಿಕ್ಷಾವನ್ನು ಬೆಳ್ತಂಗಡಿ ತಾಲೂಕಿನ ಲಾಯಿಲ ಜಂಕ್ಷನ್ ನಲ್ಲಿ ತಡೆದು ನಿಲ್ಲಿಸಿ ಪರಿಶೀಲನೆಗೆ ಮುಂದಾದಾಗ ರಿಕ್ಷಾ ಚಾಲಕ ಲಾಯಿಲ ನಿವಾಸಿ ಹಕೀಂ(27) ಪೊಲೀಸರನ್ನು ನೋಡಿ ತಪ್ಪಿಸಿಕೊಂಡು ಓಡಿ ಪರಾರಿಯಾಗಿದ್ದಾನೆ. ಪರಿಶೀಲನೆ ವೇಳೆ ಆಟೋ ರಿಕ್ಷಾದೊಳಗೆ 85 ಕೆ.ಜಿ ಗೋಮಾಂಸ ಪತ್ತೆಯಾಗಿದ್ದು....
ಬೆಳ್ತಂಗಡಿ ವಕೀಲರ ಸಂಘ ಹಾಗೂ ಹೈಕೋರ್ಟ್ ಪೀಠ ಹೋರಾಟ ಸಮಿತಿ ಬೆಳ್ತಂಗಡಿ ವತಿಯಿಂದ ” ಹೈಕೋರ್ಟ್ ಪೀಠಕ್ಕಾಗಿ ಪೋಸ್ಟ್ ಕಾರ್ಡ್ ಅಭಿಯಾನ”
ಬೆಳ್ತಂಗಡಿ; ಬೆಳ್ತಂಗಡಿ ವಕೀಲರ ಸಂಘ ಹಾಗೂ ಹೈಕೋರ್ಟ್ ಪೀಠ ಹೋರಾಟ ಸಮಿತಿ ಬೆಳ್ತಂಗಡಿ ವತಿಯಿಂದ " ಹೈಕೋರ್ಟ್ ಪೀಠಕ್ಕಾಗಿ ಪೋಸ್ಟ್ ಕಾರ್ಡ್ ಅಭಿಯಾನ" ನಕ್ಕೆಹಿರಿಯ ವಕೀಲರು ವಿಧಾನ ಪರಿಷತ್ ಸದಸ್ಯರೂ ಆದ ಪ್ರತಾಪ ಸಿಂಹ ನಾಯಕ್ ನೆರವೇರಿಸಿದರು.ಬಳಿಕ ಮಾತನಾಡಿದ ಅವರು ನಮ್ಮ ರಾಜ್ಯ ದಲ್ಲಿ ಕರಾವಳಿ ಕರ್ನಾಟಕಕ್ಕೆ ಅಂದರೆ ಮಂಗಳೂರಿಗೆ ಅಗತ್ಯವಾಗಿ ಹೈಕೋರ್ಟ್ ಪೀಠ ಬೇಕಾಗಿದೆ. ಈ ನಿಟ್ಟಿನಲ್ಲಿ ಇವತ್ತು ಹಮ್ಮಿಕೊಂಡ ಈ ಅಭಿಯಾನ ನಿಜಕ್ಕೂ ಪ್ರೇರಣಾದಾಯಕವಾಗಿದೆ. ಈ ಕಾರ್ಯಕ್ಕೆ ವಕೀಲರು, ಸಾರ್ವಜನಿಕರು, ಉದ್ಯಮಿಗಳು ಹಿರಿಯರು ದನಿಗೂಡಿಸಬೇಕು ತಮ್ಮ ಸಂಪೂರ್ಣ ಸಹಕಾರ ಬೆಂಬಲವನ್ನು...
ಅರಸಿನಮಕ್ಕಿಯಲ್ಲಿ ಶಿಕ್ಷಕಿಯ ಮೃತದೇಹ ಬಾವಿಯಲ್ಲಿ ಪತ್ತೆ
ಬೆಳ್ತಂಗಡಿ; ಅರಸಿನಮಕ್ಕಿಯ ಬೂಡುಮುಗೇರು ನಿವಾಸಿ ಅರಸಿನಮಕ್ಕಿ ಗೋಪಾಲಕೃಷ್ಣ ಅನುದಾನಿತ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ನಿರ್ವಹಿಸುತ್ತಿದ್ದ ತೇಜಸ್ವಿನಿ (23ವ.) ಅವರ ಮೃತದೇಹ ಅ. 23 ಗುರುವಾರದಂದು ಮನೆ ಸಮೀಪದ ಬಾವಿಯಲ್ಲಿ ಪತ್ತೆಯಾಗಿದೆ. ಇವರು ಕಳೆದ ಎರಡು ವರ್ಷಗಳಿಂದ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು.ಇವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರೆನ್ನಲಾಗಿದ್ದು, ಕಾಲು ಜಾರಿ ಬಾವಿಗೆ ಬಿದ್ದರೇ, ಅಥವಾ ಆತ್ಮಹತ್ಯೆ ಮಾಡಿಕೊಂಡರೇ ಎಂಬುದು ಇನ್ನು ಖಚಿತವಾಗಿಲ್ಲ, ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತರು ತಂದೆ, ತಾಯಿ, ಸಹೋದರಿಯರು, ಬಂಧು ಬಳಗವನ್ನು ಅಗಲಿದ್ದಾರೆ.
ಧರ್ಮಸ್ಥಳ; ಅ24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ವರ್ಧಂತ್ಯುತ್ಸವ
ಧರ್ಮಸ್ಥಳ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58 ನೇ ವರ್ಧಂತ್ಯುತ್ಸವ ಅ. 24 ರಂದು ಶುಕ್ರವಾರ ಧರ್ಮಸ್ಥಳದಲ್ಲಿ ನೌಕರವೃಂದದವರು, ಊರಿನ ನಾಗರಿಕರು, ಭಕ್ತರು ಹಾಗೂ ಅಭಿಮಾನಿಗಳ ಉಪಸ್ಥಿತಿಯಲ್ಲಿ ನಡೆಯಲಿದೆ.ಭಗವಾನ್ ಚಂದ್ರನಾಥಸ್ವಾಮಿ ಬಸದಿ ಹಾಗೂ ಶ್ರೀ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆಗಳು ನಡೆಯಲಿವೆ.ಊರಿನ ನಾಗರಿಕರು, ಭಕ್ತರು ಹಾಗೂ ಅಭಿಮಾನಿಗಳು ಪೂಜ್ಯ ಹೆಗ್ಗಡೆಯವರಿಗೆ ಶ್ರದ್ಧಾ-ಭಕ್ತಿಯಿಂದ ಗೌರವಾರ್ಪಣೆ ಮಾಡುವರು. ಸಭಾಕಾರ್ಯಕ್ರಮ:ಅಪರಾಹ್ನ ನಾಲ್ಕು ಗಂಟೆಯಿಂದ ನಡೆಯುವ ಸಮಾರಂಭದಲ್ಲಿ ತುಮಕೂರಿನ ಸಿದ್ಧಗಂಗ ಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದಾರೆ.ಶಾಸಕರುಗಳಾದ ಹರೀಶ್ ಪೂಂಜ, ಕೆ. ಪ್ರತಾಪಸಿಂಹ ನಾಯಕ್ ಮತ್ತು...















