ದ್ವೇಷ ಭಾಷಣ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ಸಂಪ್ಯ ಠಾಣೆಗೆ ದೂರು
ಪುತ್ತೂರು; ಪುತ್ತೂರು ತಾಲೂಕಿನ ಉಪ್ಪಳಿಗೆಯಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಅವರು ಪ್ರಚೋದನಕಾರಿ, ಅವಮಾನಕಾರಿಯಾಗಿ ಭಾಷಣದ ಮೂಲಕ ಸಮಾಜದಲ್ಲಿ ಸಾಮರಸ್ಯ ಕೆಡುವಂತೆ ಮಾತಾಡಿದ್ದಾರೆ ಎಂದು ಆರೋಪಿಸಿ ವಿರುದ್ದ ಹಾಗೂ ಮಹಿಳೆಯರನ್ನ ಕೀಳಾಗಿ ಕಂಡು ಅವಮಾನಿಸಿದ ಭಾಷಣ ಮಾಡಿದ್ದರ ವಿರುದ್ದ ದಲಿತ ಹಕ್ಕು ಸಮಿತಿಯ ರಾಜ್ಯ ಸಮಿತಿ ಸದಸ್ಯೆ ಈಶ್ವರಿಅವರು ಸಂಪ್ಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.ಈ ಸಂದರ್ಭದಲ್ಲಿ ಅವರೊಂದಿಗೆ ಜೆ.ಎಂ.ಎಸ್. ಜಿಲ್ಲಾಧ್ಯಕ್ಷೆ ಕಿರಣಪ್ರಭಾ, ಜಿಲ್ಲಾ ಕಾರ್ಯದರ್ಶಿ ಪ್ರಮೀಳಾ, ಜಿಲ್ಲಾ ಮುಖಂಡರುಗಳಾದ ಯೋಗಿತ ಅಸುಂತರ ಅವರು ಇದ್ದರು. ಸಂಪ್ಯ ಪೋಲೀಸರು ದೂರನ್ನು ಸ್ವೀಕರಿಸಿದ್ದು ಪರಿಶೀಲನೆ ನಡೆಸಿ...
ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಜೆಸ್ವಿನ್ ಪಾಲಾಟಿಗೆ ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ವತಿಯಿಂದ ಗೌರವ
ಬೆಳ್ತಂಗಡಿ:ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ವಿಜೇತರಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಸೈಂಟ್ ಸಾವಿಯೋ ಶಾಲೆಯ ವಿದ್ಯಾರ್ಥಿ ಜೆಸ್ವಿನ್ ಪಾಲಾಟಿ ಅವರನ್ನು ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ (CBK) ತಂಡದ ವತಿಯಿಂದ ಇಂದು ಅವರ ಮನೆಗೆ ಭೇಟಿ ನೀಡಿ ಗೌರವಿಸಲಾಯಿತು. ಕುಟುಂಬಸ್ಥರ ಸಮ್ಮುಖದಲ್ಲಿ ನಡೆದ ಈ ಸನ್ಮಾನ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಅಗಸ್ಟೀನ್ ಅವರು ಸಂಘಟನೆಯ ಪರವಾಗಿ ಜೆಸ್ವಿನ್ ಅವರಿಗೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಗೌರವಾಧ್ಯಕ್ಷ ಸೆಬಾಸ್ಟಿಯನ್ ಪಿ.ಟಿ., ಕಾರ್ಯದರ್ಶಿ ಶಿಜೋ ಜೋಸೆಫ್, ಉಪಾಧ್ಯಕ್ಷ ಮ್ಯಾಥ್ಯೂ ವಿ.ಟಿ., ಕೋಶಾಧಿಕಾರಿ ರಂಜಿತ್ ಪಿ.ಎಸ್., ಗೌರವ ಸಲಹೆಗಾರ ಜೋಸೆಫ್ ಕೆ.ಡಿ., ಕಾರ್ಯಕಾರಿಣಿ ಸದಸ್ಯರು...
ಬೆಳ್ತಂಗಡಿ: ಹೃದಯಾಘಾತದಿಂದ ಯುವಕ ನಿಧನ
ಬೆಳ್ತಂಗಡಿ; ಬಳೆಂಜ ಗ್ರಾಮಪಂಚಾಯತು ವ್ಯಾಪ್ತಿಯ ನಾಲ್ಕೂರು ಗ್ರಾಮದ ಕುಡುಂಬಾಜೆ ನಿವಾಸಿ ಮೆಲ್ವಿನ್(55) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿದ್ದ ಇವರು ಎಲ್ಲರೊಂದಿಗೂ ಆತ್ಮೀಯತೆಯಿಂದ ಇರುವ ವ್ಯಕ್ತಿತ್ವದವರಾಗಿದ್ದರು.ಮೃತರು ತಾಯಿ ಸಹೋದರಿಯರು ಹಾಗೂ ಅಪಾರ ಕುಟುಂಬ ವರ್ಗವನ್ನು ಅಗಲಿದ್ದಾರೆ.
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣ ತನಿಖೆ ಮಹತ್ವದ ಘಟ್ಟಕ್ಕೆ ಎಸ್.ಐ.ಟಿ ಕಚೇರಿಗೆ ಆಗಮಿಸಿದ ಪ್ರಣವ್ ಮೊಹಂತಿ
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದ ಸಂಬಂಧ ತನಿಖೆ ಮಹತ್ವದ ಹಂತ ತಲುಪಿದ್ದು ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಬೆಳ್ತಂಗಡಿ ಕಚೇರಿಗೆ ಶನಿವಾರ ಮಧ್ಯಾಹ್ನದ ವೇಳೆ ಆಗಮಿಸಿದ್ದಾರೆ.ಕಳೆದ ನಾಲ್ಕು ತಿಂಗಳಿನಿಂದ ನಡೆಯುತ್ತಿರುವ ಎಸ್.ಐ.ಟಿತನಿಖೆ ಇದೀಗ ಮಹತ್ವದ ಘಟ್ಟ ತಲುಪಿದೆ. ಚಿನ್ನಯ್ಯ ತಂದಿದ್ದ ತಲೆಬುರುಡೆಗೆ ಸಂಬಂಧಿಸಿದಂತೆ ತನಿಖೆ ಪೂರ್ಣಗೊಂಡಿದ್ದು ಇದರಲ್ಲಿ ಯಾವರೋತಿಯಾಗಿಬಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಅಂತಿಮ ನಿರ್ಧಾರಕ್ಕೆ ಎಸ್.ಐ.ಟಿ ತಂಡ ಬಂದಿದ್ದು ಈ ಬಗ್ಗೆ ಮಹತ್ವದ ಸಭೆಗಳು ಎಸ್.ಐ.ಟಿ ಕಚೇರಿಯಲ್ಲಿ ಶನಿವಾರ ಭಾನುವಾರ ನಡೆಯಲಿದೆ. ಸೋಮವಾರ ವಿಚಾರಣೆಗಾಗಿ ಹಾಜರಾಗಲು ಇದೀಗ ಮಹೇಶ್ ಶೆಟ್ಟಿ ತಿಮರೋಡಿ...
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣ ಮಹೇಶ್ ಶೆಟ್ಟಿ ಸೇರಿ ನಾಲ್ಕು ಜನರಿಗೆ ಎಸ್.ಐ.ಟಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು ಪ್ರಕರಣ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ನಾಲ್ಕು ಜನರಿಗೆ ಎಸ್.ಐ.ಟಿ ತನಿಖೆಗೆ ಸೋಮವಾರ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ.ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಅ.27 ರಂದು ಸೋಮವಾರ 10 :30 ಕ್ಕೆ ವಿಚಾರಣೆಗೆ ಹಾಜರಾಗಲು ಸೌಜನ್ಯ ಪರ ಹೋರಾಟದ ನೇತೃತ್ವ ವಹಿಸಿರುವ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ, ವಿಠಲ್ ಗೌಡನಿಗೆ ಅ.24 ರಂದು ನೋಟಿಸ್ ಜಾರಿ ಮಾಡಿದ್ದಾರೆ. ಸೋಮವಾರ ವಿಚಾರಣೆಗೆ ಹಾಜರಾಗದಿದ್ದಲ್ಲಿ BNS 35(3) ಅಡಿಯಲ್ಲಿ...
ಮಹೇಶ್ ಶೆಟ್ಟಿ ತಿಮರೋಡಿ ವಿರುದ್ದ ಅಕ್ರಮ ಶಸ್ತ್ರಾಸ್ತ್ರ ಪ್ರಕರಣಕ್ಕೆ ಮದ್ಯಂತರ ತಡೆ ನೀಡಿ ಹೈಕೋರ್ಟ್ ಆದೇಶ
ಬೆಂಗಳೂರು: ಮನೆಯಲ್ಲಿ ಅನಧಿಕೃತವಾಗಿ ಶಸ್ತ್ರಾಸ್ತ್ರ ಇರಿಸಿಕೊಂಡ ಆರೋಪದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಗೆ ತಡೆಯಾಜ್ಞೆ ನೀಡಿ ಹೈಕೋರ್ಟ್ ಮಧ್ಯಂತರ ಆದೇಶ ಮಾಡಿದೆ. ಶಸ್ತ್ರಾಸ್ತ್ರ ಕಾಯ್ದೆಯಡಿ ತಮ್ಮ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮೊಹಮ್ಮದ್ ನವಾಝ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಇತ್ತೀಚೆಗೆ ಈ ಮಧ್ಯಂತರ ಆದೇಶ ಮಾಡಿದೆ.ಜತೆಗೆ, ಅರ್ಜಿ ಸಂಬಂಧ ಬೆಳ್ತಂಗಡಿ ಠಾಣೆ ಪೊಲೀಸರು ಹಾಗೂ ಪ್ರಕರಣದ ದೂರುದಾರಾಗಿರುವ...
ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ತುಮಕೂರು ಸಿದ್ಧಗಂಗಾ ಮಠದ ಪೂಜ್ಯ ಸಿದ್ಧಲಿಂಗ ಸ್ವಾಮೀಜಿಯವರಿಂದ ಅಶೀರ್ವಚನ
ಧರ್ಮಸ್ಥಳ: ಸರ್ವಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳವು ನಾಡಿನ ಪವಿತ್ರ ಹಾಗೂ ಪುಣ್ಯಕ್ಷೇತ್ರವಾಗಿದ್ದು, ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತೃಹೃದಯದಿಂದ ಮಾಡುವ ಸಮಾಜ ಸೇವೆ ಅನನ್ಯ ಮತ್ತು ಅನುಪಮವಾಗಿದೆ ಎಂದು ತುಮಕೂರು ಸಿದ್ಧಗಂಗಾ ಮಠದ ಪೂಜ್ಯ ಸಿದ್ಧಲಿಂಗ ಸ್ವಾಮೀಜಿ ಹೇಳಿದರು.ಅವರು ಶುಕ್ರವಾರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ಸಂದರ್ಭದಲ್ಲಿ ಆಶೀರ್ವಚನ ನೀಡಿದರು.ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳದ ಸರ್ವತೋಮುಖ ಪ್ರಗತಿಯೊಂದಿಗೆ ಸಮಾಜಕ್ಕೂ ಅನುಪಮ ಸೇವೆ ನೀಡಿದ್ದಾರೆ.ಮಹಾತ್ಮ ಗಾಂಧೀಜಿಯವರ ಗ್ರಾಮರಾಜ್ಯದ ಮೂಲಕ ರಾಮರಾಜ್ಯದ ಕನಸನ್ನು ಹೆಗ್ಗಡೆಯವರು ಗ್ರಾಮಾಭಿವೃದ್ಧಿ ಯೋಜನೆ ಮತ್ತು ಮನಪರಿವರ್ತನೆ ಮೂಲಕ...
ಸುರತ್ಕಲ್ ಚೂರಿ ಇರಿತ ಪ್ರಕರಣ ನಾಲ್ವರು ಆರೋಪಿಗಳ ಬಂಧನ
ಮಂಗಳೂರ; ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಾನಾದ ಬಳಿಯಲ್ಲಿ ಯುವಕರಿಬ್ಬರಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಅಲೆಕ್ಸ್ ಸಂತೋಷ್, ನಿತಿನ್, ಸುಶಾಂತ್ ಮತ್ತು ಆರೋಪಿಗಳಿಗೆ ರಕ್ಷಣೆ ನೀಡಿದ ಅರುಣ್ ಶೆಟ್ಟಿ ಎಂಬವರನ್ನು ಬಂಧಿಸಿದ್ದು ಇನ್ನಿಬ್ಬರು ಆರೋಪಿಗಳುಬತಲೆಮರೆಸಿಕೊಂಡಿದ್ದಾರೆ.ದಿನಾಂಕ: 23-10-2025 ರಂದು ರಾತ್ರಿ ಸುಮಾರು 10-30 ಗಂಟೆಗೆ ಸುರತ್ಕಲ್ ಕಾನಾ ಬಳಿಯ ದೀಪಕ್ ಭಾರ್ ಬಳಿಯಲ್ಲಿ ಕ್ಷುಲಕ ಕಾರಣಕ್ಕಾಗಿ ಹಸನ್ ಮುಕ್ಷಿತ್ ಮತ್ತು ನಿಝಾಂ ಎಂಬ ಯುವಕರಿಬ್ಬರಿಗೆ ಈ ಹಿಂದೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಗುರುರಾಜ್ ಆಚಾರಿ, ಅಲೆಕ್ಸ್ ಸಂತೋಷ್,ನಿತಿನ್...
ಕಂಚಿ ಕಾಮಕೋಟಿ ಪೀಠದ ಹಿಂದಿನ ಸ್ವಾಮೀಜಿಯವರು ಉಪಯೋಗಿಸುತ್ತಿದ್ದ ರಿಕ್ಷಾ ಧರ್ಮಸ್ಥಳಕ್ಕೆ ಕೊಡುಗೆ
ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ೫೮ನೆ ವರ್ಧಂತ್ಯುತ್ಸವ ಆಚರಣೆಯ ಸಂದರ್ಭದಲ್ಲಿ ಶುಕ್ರವಾರ ಕಂಚಿಕಾಮಕೋಟಿ ಪೀಠದ ಹಿಂದಿನ ಸ್ವಾಮೀಜಿಯವರು ಬಳಸುತ್ತಿದ್ದ ಪವಿತ್ರ ರಿಕ್ಷಾವನ್ನು ಧರ್ಮಸ್ಥಳಕ್ಕೆ ಕೊಡುಗೆಯಾಗಿ ಅರ್ಪಿಸಲಾಯಿತು. ಭಕ್ತರು ತಂದ ರಿಕ್ಷಾವನ್ನು ಧರ್ಮಸ್ಥಳದಲ್ಲಿ ಮಾಹಿತಿ ಕಚೇರಿ ಬಳಿಯಿಂದ ಭವ್ಯ ಮೆರವಣಿಗೆಯಲ್ಲಿ ಹೆಗ್ಗಡೆಯವರ ನಿವಾಸ ಬೀಡಿಗೆ ತರಲಾಯಿತು. ಕಂಚಿ ಕಾಮಕೋಟಿ ಸ್ವಾಮೀಜಿಯವರು ತಮ್ಮ ಪಾದಯಾತ್ರೆಯ ಸಂದರ್ಭದಲ್ಲಿ ಅವಶ್ಯಕ ವಸ್ತುಗಳಾದ ಪಾದುಕೆಗಳನ್ನು, ಅನುಷ್ಠಾನ ಪಾತ್ರೆಗಳನ್ನು ಮತ್ತು ದರ್ಭಾಸನದ ಸಾಗಾಣಿಕೆಗೆ ಇದನ್ನು ಬಳಸುತ್ತಿದ್ದರು. ಪೂಜ್ಯ ಹೆಗ್ಗಡೆಯವರು ಈ ವಿಶಿಷ್ಟ ಕೊಡುಗೆಯನ್ನು ಸ್ವೀಕರಿಸಿ ಸಂತಸ ವ್ಯಕ್ತಪಡಿಸಿದರು. ಹೇಮಾವತಿ ವಿ. ಹೆಗ್ಗಡೆಯವರು, ಡಿ....
ಕೆ. ವಿನಾಯಕ ರಾವ್ ರವರಿಗೆ ಉಡುಪಿ ಜಿಲ್ಲೆಯ ಹೋಂ ಡಾಕ್ಟರ್ ಫೌಂಡೇಶನ್ (ರಿ.), ವತಿಯಿಂದ ಸನ್ಮಾನ
ಬೆಳ್ತಂಗಡಿ: ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಸೇವಾಧಾಮ ಪುನಶ್ಚೇತನ ಕೇಂದ್ರದ ಮೂಲಕ ಪುನಶ್ಚೇತನವನ್ನು ನೀಡುತ್ತಾ ಹಾಗೆ ಆರೋಗ್ಯ ತಪಾಸಣಾ, ರಕ್ತದಾನ ಶಿಬಿರ, ಮಹಿಳಾ ಸಬಲೀಕರಣ ಹೀಗೆ ಹಲವಾರು ಸೇವಾ ಚಟುವಟಿಕೆಗಳನ್ನು ನಡೆಸುತ್ತಿರುವ ಕನ್ಯಾಡಿ ಸೇವಾಭಾರತಿ ಖಜಾಂಚಿ ಮತ್ತು ಸೇವಾಧಾಮ ಸಂಸ್ಥಾಪಕರಾದ ಶ್ರೀ ಕೆ ವಿನಾಯಕ ರಾವ್ ರವರನ್ನು ಹೋಂ ಡಾಕ್ಟರ್ ಫೌಂಡೇಶನ್(ರಿ.), ವತಿಯಿಂದ ಉಡುಪಿ ಜಿಲ್ಲೆಯ ಕೊಳಗಿರಿ ಸ್ವರ್ಗ ಆಶ್ರಮದಲ್ಲಿ ನಡೆಸಿದಂತಹ ದೀಪಾವಳಿ ಆಚರಣೆ 2025 ಕಾರ್ಯಕ್ರಮದಲ್ಲಿ ಗುರುತಿಸಿ ಡಾ. ಶಶಿಕಿರಣ್ ಶೆಟ್ಟಿರವರ ನೇತೃತ್ವದಲ್ಲಿ ಸನ್ಮಾನಿಸಲಾಯಿತು.















