ವಾಣಿಜ್ಯ ಗ್ಯಾಸ್ ಏಕಾಏಕಿ ₹993 ದುಬಾರಿ, ಇದು ಕೇಂದ್ರ ಸರ್ಕಾರದ ಅಚ್ಚೆ ದಿನವೇ ರಕ್ಷಿತ್ ಶಿವರಾಂ ಪ್ರಶ್ನೆ
ಬೆಳ್ತಂಗಡಿ. ಕೇಂದ್ರ ಸರ್ಕಾರವು ವಾಣಿಜ್ಯ ಬಳಕೆಗೆ ಬಳಸುವ ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು ₹993ರವರೆಗೆ ಹೆಚ್ಚಿಸಿರುವುದು ದೇಶದ ಸಣ್ಣ ವ್ಯಾಪಾರಿಗಳು, ಹೋಟೆಲ್ ಉದ್ಯಮಿಗಳು ಹಾಗೂ ಮಧ್ಯಮ ವರ್ಗದ ಜನರ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಈ ನಿರ್ಧಾರವು ಈಗಾಗಲೇ ದುಬಾರಿಯಾಗುತ್ತಿರುವ ಜೀವನ ವೆಚ್ಚದ ನಡುವೆ ಜನತೆಗೆ ಮತ್ತೊಂದು ಆರ್ಥಿಕ ಹೊರೆ ಸೇರಿಸಿದೆ. ಹೋಟೆಲ್ಗಳು, ಕ್ಯಾಟರಿಂಗ್, ಟೀ ಅಂಗಡಿಗಳು, ಬೇಕರಿಗಳು ಮತ್ತು ಸಣ್ಣ ಮಟ್ಟದ ಆಹಾರ ವ್ಯಾಪಾರಿಗಳು ತಮ್ಮ ದೈನಂದಿನ ಕಾರ್ಯಾಚರಣೆಗೆ ಎಲ್ಪಿಜಿ ಸಿಲಿಂಡರ್ಗಳ ಮೇಲೆ ಅವಲಂಬಿತರಾಗಿದ್ದಾರೆ. ಬೆಲೆ ಏರಿಕೆಯ ಪರಿಣಾಮವಾಗಿ ಅವರು ತಮ್ಮ ಉತ್ಪನ್ನಗಳ ಬೆಲೆಯನ್ನು...
ಮೇ.09: ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅಭಿಮಾನೋತ್ಸವ; ಶಾಸಕ ಹರೀಶ್ ಪೂಂಜಾರವರಿಂದ ಪೋಸ್ಟರ್ ಬಿಡುಗಡೆ
ಬೆಳ್ತಂಗಡಿ: ರೈತ ನಾಯಕ, ಜನಪರ ಹೋರಾಟಗಾರ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ 55 ವರ್ಷಗಳ ರಾಜಕೀಯ ಜೀವನದ ಸಾಧನೆಯನ್ನು ಸಂಭ್ರಮಿಸುವ ಉದ್ದೇಶದಿಂದ ಮೇ 9 ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಬೃಹತ್ ಅಭಿಮಾನೋತ್ಸವ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಸಮಾರಂಭವು ಮೇ 2ರಂದು ಗುರುವಾಯನಕೆರೆ ನಮ್ಮ ಮನೆ ಹವ್ಯಕ ಭವನದಲ್ಲಿ ನೆರವೇರಿತು.ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರು ಪೋಸ್ಟರ್ ಬಿಡುಗಡೆ ಮಾಡಿ ಕಾರ್ಯಕ್ರಮದ ಮಹತ್ವವನ್ನು ವಿವರಿಸಿದರು. ಕಾರ್ಯಕ್ರಮದಲ್ಲಿ ಮಂಗಳೂರು ವಿಭಾಗ ಸಹ ಪ್ರಭಾರಿ ಜಯಂತ್ ಕೋಟ್ಯಾನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್...
ಮರುಮೌಲ್ಯಮಾಪನ: ಎಸ್ಡಿಎಂ ಕಾಲೇಜಿನ ವಿದ್ಯಾರ್ಥಿನಿ ನಿಜ ಕುಲಾಲ್ ಗೆ ರಾಜ್ಯಕ್ಕೆ ದ್ವಿತೀಯ ಸ್ಥಾನ
ಉಜಿರೆ: ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿನಿ ನಿಜಾ ಕುಲಾಲ್ ಅವರು ಮರುಮೌಲ್ಯಮಾಪನ ಫಲಿತಾಂಶದಲ್ಲಿ 596 ಅಂಕಗಳನ್ನು ಪಡೆದು ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನ ಗಳಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಮೊದಲು ಅವರು 593 ಅಂಕಗಳನ್ನು ಪಡೆದಿದ್ದರು. ಇಂಗ್ಲಿಷ್ ವಿಷಯದಲ್ಲಿ 3 ಹೆಚ್ಚುವರಿ ಅಂಕಗಳಿಸಿದ್ದು ಅವರು 596ಅಂಕಗಳೊಂದಿಗೆ ರಾಜ್ಯದಲ್ಲಿ ದ್ವಿತೀಯ ಸ್ಥಾನಿಯಾಗಿದ್ದಾರೆ.ನಿಜ ಕುಲಾಲ್ ಮೇಲಂತಬೆಟ್ಟು ಗ್ರಾಮದ ನಿವಾಸಿ ನಿಲೇಶ್ ಹೆಚ್ ಪೆರಿಂಜೆ ಮತ್ತು ಸುಶ್ರೂಷಕಿ ಜಯಲಕ್ಷ್ಮಿ ದಂಪತಿಗಳ ಮಗಳು.
ಬೆಳ್ತಂಗಡಿಯಲ್ಲಿ ಕಾರ್ಮಿಕರ ದಿನಾಚರಣೆ; ಕಾರ್ಮಿಕರ ಹಕ್ಕುಗಳಿಗಾಗಿ ಸಂಘಟಿತ ಹೋರಾಡ ಅಗತ್ಯ ಬಿ.ಎಂ ಭಟ್
ಬೆಳ್ತಂಗಡಿ; ಜನ ನಂಬುವ ರೀತಿ ಕಾರಣ ನೀಡಿ ದುಡಿಯುವ ಜನರ ಐಕ್ಯತೆಯನ್ನು ಒಡೆಯುವುದು ದುಡಿಸುವ ವರ್ಗದ ರಾಜಕೀಯವಾಗಿದೆ ಮತ್ತು ಐಕ್ಯತೆ ಸಾಧಿಸಿ ನಮ್ಮ ಬದುಕನ್ನು ಉತ್ತಮ ಪಡಿಸಿಕೊಳ್ಳುವುದೇ ದುಡಿಯುವ ವರ್ಗದ ರಾಜಕೀಯ ಎಂದು ಸಿಐಟಿಯು ದ.ಕ. ಜಿಲ್ಲಾಧ್ಯಕ್ಷರಾದ ಬಿ.ಎಂ.ಬಟ್ ಹೇಳಿದರು.ಬೆಳ್ತಂಗಡಿ ತಾಲೂಕು ಕಚೇರಿ ಮೈದಾನದಲ್ಲಿ ಕಾರ್ಮಿಕ ದಿನಾಚರಣೆಯ ಬಹಿರಂಗ ಸಭೆಯನ್ನುದ್ದೇಶಿಸಿ ಅವರು ಮಾತಾಡುತ್ತಿದ್ದರು. ಅಮೇರಿಕಾದ ಚಿಕಾಗೋದಲ್ಲಿ 8 ಗಂಟೆಯ ಘೋಷಣೆಯ ಹೋರಾಟ ನಡೆಯುವುದನ್ನು ತಡೆಯಲು ಆಳುವ ವರ್ಗ ವಿದೇಶಿ, ಸ್ವದೇಶಿ ಕಾರ್ಮಿಕರು ಎಂದು ಕಾರ್ಮಿಕ ವರ್ಗವನ್ನು ಒಡೆದು ಆಳಲು ಪ್ರಯತ್ನಿಸಿತ್ತು. ಅದನ್ನು ಮೀರಿ...
ಬೆಳ್ತಂಗಡಿ : ವಿಶ್ವ ಕಾರ್ಮಿಕ ದಿನಾಚರಣೆ ಹಾಗೂ ಅಂಬೇಡ್ಕರ್ ಜಯಂತಿ; ಅಂಬೇಡ್ಕರ್ ಹೋರಾಟದ ಫಲವಾಗಿ ಕಾರ್ಮಿಕ ದಿನಾಚರಣೆ ಆಚರಿಸಲು ಸಾಧ್ಯ ಅನಿಲ್ ಕುಮಾರ್
ಬೆಳ್ತಂಗಡಿ; ಕಾರ್ಮಿಕರ ನ್ಯಾಯಕ್ಕಾಗಿ ಅಂಬೇಡ್ಕರ್ ನಿರಂತರ ಹೋರಾಟ ನಡೆಸಿ, ನ್ಯಾಯ ಒದಗಿಸಿ ಕೊಟ್ಟಿದ್ದಾರೆ. ಅವರ ಹೋರಾಟದ ಫಲವಾಗಿ ನಾವು ಇಂದು ಕಾರ್ಮಿಕರ ದಿನವನ್ನು ಆಚರಿಸಲು ಸಾಧ್ಯವಾಗಿದೆ. ಕಾರ್ಮಿಕರು ಅಂಬೇಡ್ಕರ್ ಅವರನ್ನು ಪ್ರತಿ ಸಂದರ್ಭದಲ್ಲೂ ನೆನೆಯಬೇಕು. ಅಂಬೇಡ್ಕರ್ ಒಂದು ಜಾತಿಗೆ ಸೀಮಿತವಾಗಬಾರದು. ಅಂಬೇಡ್ಕರ್ ಎಲ್ಲರಿಗೂ ನ್ಯಾಯ ಒದಗಿಸಿದ ಮಹಾನ್ ಜ್ಞಾನಿ, ಭಾರತದ ಅಮೂಲ್ಯ ರತ್ನ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೌರ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಕಂಕನಾಡಿ ಹೇಳಿದರು. ಅವರು ಪಟ್ಟಣ ಮತ್ತು ಗ್ರಾಮ ಪಂಚಾಯತ್ ಪೌರಕಾರ್ಮಿಕರ ಸಂಘ ದಕ್ಷಿಣ ಕನ್ನಡ ಜಿಲ್ಲೆ...
ಗುರುವಾಯನಕೆರೆ-ಉಪ್ಪಿನಂಗಡಿ ಹೆದ್ದಾರಿ ಅಭಿವೃದ್ಧಿಗೆ ಸಚಿವ ಸಂಪುಟ ಅನುಮೋದನೆಬಹುದಿನದ ಬೇಡಿಕೆ ಈಡೇರಿಸಿದ ಸರ್ಕಾರಕ್ಕೆ ಅಭಿನಂದನೆಗಳು ರಕ್ಷಿತ್ ಶಿವರಾಂ
ಬೆಳ್ತಂಗಡಿ. ಗುರುವಾಯನಕೆರೆಯಿಂದ ಉಪ್ಪಿನಂಗಡಿ ವರೆಗಿನ ರಾಜ್ಯ ಹೆದ್ದಾರಿ ಅಭಿವೃದ್ಧಿಪಡಿಸಲು 13 ಕೋಟಿ ರೂ. ಅಂದಾಜುಪಟ್ಟಿಗೆ ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆಗುರುವಾರ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಅನುಮೋದನೆ ನೀಡಲಾಗಿದೆ. ಗುರುವಾಯನಕೆರೆಯಿಂದ ಉಪ್ಪಿನಂಗಡಿ ವರೆಗಿನ ರಾಜ್ಯ ಹೆದ್ದಾರಿಯು ಗುಡ್ಡ, ಇಳಿಜಾರು ಮತ್ತು ತಿರುವ ಹೊಂದಿರುವ ರಸ್ತೆಯಾಗಿದೆ. ಬೆಂಗಳೂರು ಹಾಗೂ ಜಿಲ್ಲಾ ಕೇಂದ್ರಕ್ಕೆ ಹಾಗೂ ಧರ್ಮಸ್ಥಳ, ವೇಣೂರು, ಉಪ್ಪಿನಂಗಡಿ , ಪುತ್ತೂರು ಸಂಪರ್ಕ ಕಲ್ಪಿಸುವ ಪ್ರಮುಖ ಹೆದ್ದಾರಿಯಾಗಿದೆ.ಈಗಾಗಲೇ ರಸ್ತೆಯ 9.50 ಕಿ.ಮೀ. ಉದ್ದ ರಸ್ತೆ ನಿರ್ಮಾಣಗೊಂಡಿದ್ದು. ಉಳಿಕೆ ಭಾಗದಲ್ಲಿ ಲಭ್ಯವಿರುವ...
ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು
ಬೆಳ್ತಂಗಡಿ : ಪ್ರೇಮ ಪ್ರಕರಣದಲ್ಲಿ ಭಯಗೊಂಡು ಇಲಿಪಾಷಣ ತೆಗೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಮಾಯದ ಬಾಳೆಮಂಡಿಕಲ್ಲು ನಿವಾಸಿ ದಿನೇಶ್ ನಾಯ್ಕ್ ಮತ್ತು ರೇವತಿ ದಂಪತಿಗಳ ಎರಡನೇ ಪುತ್ರಿ ರಮ (19) ಎಂಬಾಕೆ ಕಳೆದ ಎ. 19 ರಂದು ರಾತ್ರಿ ಮನೆಯಲ್ಲಿ ಇಲಿಪಾಷಣ ತೆಗೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಳು. ಬಳಿಕ ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತಿತ್ತು, ಆದ್ರೆ ಚಿಕಿತ್ಸೆ ಫಲಿಸದೆ ರಮ ಎ.29 ರಂದು ಸಾವನ್ನಪ್ಪಿದ್ದಾಳೆ. ರಮ ವಾಮದಪದವು ಕಾಲೇಜ್ ನಲ್ಲಿ...
ಬೆಳ್ತಂಗಡಿ : ಗಡಿಪಾರು ಆದೇಶ ಪ್ರಶ್ನಿಸಿದ್ದ ಮಹೇಶ್ ಶೆಟ್ಟಿ ತಿಮರೋಡಿ ಅರ್ಜಿ ವಜಾ
ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಏ30 ರಂದು ಮಧ್ಯಾಹ್ನ ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಂ ಅವರಿದ್ದ ಏಕಸದಸ್ಯ ನ್ಯಾಯಪೀಠ ಗಡಿಪಾರು ಆದೇಶ ಪ್ರಶ್ನಿಸಿದ್ದ ಮಹೇಶ್ ಶೆಟ್ಟಿ ತಿಮರೋಡಿ ಅವರ ಅರ್ಜಿ ವಜಾಗೊಳಿಸಿ, ಗಡಿಪಾರು ಪ್ರಶ್ನಿಸಿ ಸರ್ಕಾರಕ್ಕೆ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ. ಸರ್ಕಾರದ ಗೃಹ ಕಾರ್ಯದರ್ಶಿಗೆ ಮೇಲ್ಮನವಿ ಸಲ್ಲಿಸಬಹುದು. ಹೀಗಾಗಿ ರಿಟ್ ಅರ್ಜಿ ಊರ್ಜಿತವಲ್ಲವೆಂದು ಅಭಿಪ್ರಾಯ ವ್ಯಕ್ತಪಡಿಸಿದೆ. ಇದೇ ವೇಳೆ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಅರ್ಜಿ ಸಲ್ಲಿಸಲು ಎರಡು ವಾರಗಳ ಕಾಲ ಸಮಯ ನೀಡಿದ...
ಬೆಳ್ತಂಗಡಿ : ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
ಬೆಳ್ತಂಗಡಿ : ಅಪರಿಚಿತ ಸುಮಾರು 40 ರಿಂದ 45 ವರ್ಷದ ಗಂಡಸಿನ ಮೃತದೇಹ ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ ಬಳಿ ಇರುವ ನೀರಿನ ಡ್ಯಾಂ ನ ನೀರಿನಲ್ಲಿ ಎ.27 ರಂದು ಬೆಳಗ್ಗೆ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನು ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ. ಮೃತವ್ಯಕ್ತಿಯ ಎತ್ತರ 5.7 ಅಡಿ, ದಪ್ಪ ಶರೀರ, ಎಣ್ಣೆ ಕಪ್ಪು ಮೈಬಣ್ಣ, ಅಗಲ ಮುಖ, ಮುಖದಲ್ಲಿ ಕಪ್ಪು ಮಿಶ್ರಿತ ಬಿಳಿ ಗಡ್ಡ-ಮೀಸೆ, ತಲೆಯಲ್ಲಿ ಬಿಳಿ ಮಿಶ್ರಿತ ಕಪ್ಪು ಕೂದಲು ಇರುವುದು ಕಂಡು ಬಂದಿದೆ....
ಬೆಳ್ತಂಗಡಿ : ನೇಣುಬಿಗಿದು ಯುವಕ ಆತ್ಮಹತ್ಯೆಗೆ ಶರಣು
ಬೆಳ್ತಂಗಡಿ : ಯುವಕನೊಬ್ಬ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯ ಲಾಯಿಲದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಪ್ರಗತಿನಗರ,ಕಾಶಿಬೆಟ್ಟು ನಿವಾಸಿ ಲಿಂಗಪ್ಪ ಎಂಬವರ ಪುತ್ರ ಎಲೆಕ್ಟ್ರಿಷಿಯನ್ ವೃತ್ತಿ ಮಾಡುತ್ತಿದ್ದಕೇಶವ(34) ಎಂಬಾತ ಎ.26 ರಂದು ರಾತ್ರಿ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.














