ಬೆಳ್ತಂಗಡಿ; ವಿಚಾರಣೆ ಮುಗಿಸಿ ಹಿಂತಿರುಗಿದ ಸಮೀರ್ ಎಂ.ಡಿ; ತಡ ರಾತ್ರಿಯ ವರೆಗೂ ಮುಂದುವರಿದ ವಿಚಾರಣೆ

0

ಬೆಳ್ತಂಗಡಿ; ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೆ ಮಾಡಿರುವ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ದಿನವಿಡೀ ಸಮೀರ್ ಎಂ ಡಿ ಅವರನ್ನು ಬೆಳ್ತಂಗಡಿ ಠಾಣೆಯಲ್ಲಿ ವಿಚಾರಣೆಗೆ ಒಳಪಡಿಸಲಾಯಿತು. ಮಧ್ಯಾಹ್ನ12 ಗಂಟೆಯ ಸುಮಾರಿಗೆ ತನ್ನ ವಕೀಲರುಗಳೊಂದಿಗೆ ಬೆಳ್ತಂಗಡಿ ಠಾಣೆಗೆ ಆಗಮಿಸಿದ್ದರು. ರಾತ್ರಿ ಹತ್ತು ಗಂಟೆಯ ಸುಮಾರಿಗೆ ವಿಚಾರಣೆ ಪೂರ್ಣಗೊಳಿಸಿ ಹಿಂತಿರುಗಿದರು. ಆರಂಭದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕರಾದ ನಾಗೇಶ್ ಕದ್ರಿ ಅವರ ಮುಂದೆ ಹಾಜರಾಗಿ ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಬಗ್ಗೆ ವಿಚಾರಣೆ ಎದುರಿಸಿದರು. ಭಾನುವಾರವೂ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸಿದ್ದರು. ಇಂದು...

ಜನಪ್ರತಿನಿಧಿಗಳೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯ  ಸಾವಿರಾರು ಭಕ್ತರು ಧರ್ಮಸ್ಥಳ ಭೇಟಿ

0

ಬೆಳ್ತಂಗಡಿ: ದೇವರ ಅನುಗ್ರಹದಿಂದ ಸತ್ಯದ ಅನಾವರಣವಾಗುತ್ತಿರುವುದು ಸಂತಸವಾಗಿದೆ. ಧರ್ಮಸ್ಥಳಧ ಭಕ್ತರು ಹಾಗೂ ಅಪಾರ ಸಂಖ್ಯೆಯ ಅಭಿಮಾನಿಗಳ ಶ್ರದ್ಧಾ-ಭಕ್ತಿಯ ಪ್ರೋತ್ಸಾಹದಿಂದ ಎಲ್ಲಾ ಸೇವಾ ಕಾರ್ಯಗಳನ್ನು ಮುಂದುವರಿಸುವ ಉತ್ಸಾಹ ಮೂಡಿಬಂದಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಮಂಗಳೂರು, ಮೂಡಬಿದ್ರೆ, ಬಂಟ್ವಾಳ, ಸುರತ್ಕಲ್, ಉಳ್ಳಾಲ ಹಾಗೂ ಬೆಳ್ತಂಗಡಿ ತಾಲ್ಲೂಕುಗಳಿಂದ ಆಗಮಿಸಿದ ಸಾವಿರಾರು ಮಂದಿ ಭಕ್ತಾದಿಗಳು ಹಾಗೂ ಅಭಿಮಾನಿಗಳು ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಸೋಮವಾರ ಧರ್ಮಸ್ಥಳಕ್ಕೆ ಬಂದು ಡಾ.ಹೆಗ್ಗಡೆಯವರಿಗೆ ಗೌರವಾರ್ಪಣೆ ಮಾಡಿದರು.ಈ ಸಂದರ್ಭದಲ್ಲಿ ಅವರು ಮಾತನಾಡಿದರು.ಅಣ್ಣಪ್ಪ ಸ್ವಾಮಿ ಬೆಟ್ಟದ ಬಳಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಎಲ್ಲರೂ ದೇವಸ್ಥಾನದ...

ಬೆಳ್ತಂಗಡಿ : ವಿಚಾರಣೆಗೆ ಹಾಜರಾದ ಯೂಟ್ಯೂಬರ್ ಸಮೀರ್.ಎಮ್.ಡಿ

0

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಯೂಟ್ಯೂಬರ್ ಸಮೀರ್.ಎಮ್.ಡಿ ವಿರುದ್ಧ ದಾಖಲಾದ ಧರ್ಮಸ್ಥಳದಲ್ಲಿ ಪ್ರಕರಣ ಸಂಬಂಧ ಬೆಳ್ತಂಗಡಿ ಸರ್ಕಲ್‌ ಇನ್ಸ್ಪೆಕ್ಟರ್ ಕಚೇರಿಗೆ ಆ.25 ರಂದು ಮತ್ತೆ ಎರಡನೇ ದಿನ ವಿಚಾರಣೆಗೆ ತನ್ನ ವಕೀಲರ ಜೊತೆ ಕಾರಿನಲ್ಲಿ ಆಗಮಿಸಿದ್ದಾನೆ.

ಬೆಳ್ತಂಗಡಿ: ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾ ಸಭೆ ರೂ.72.70ಲಕ್ಷ ನಿವ್ವಳ ಲಾಭ, ಶೇ.16 ಡಿವಿಡೆಂಟ್ ಘೋಷಣೆ.

0

ಬೆಳ್ತಂಗಡಿ: ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ 2024-25 ನೇ ಸಾಲಿನ 16 ನೇ ವಾರ್ಷಿಕ ಮಹಾಸಭೆ ಆಗಸ್ಟ್ 23 ರಂದು ಲ್ಯಾಲ ಜ್ಯೋತಿ ಹಾಸ್ಪಿಟಲ್ ಬಳಿ ಇರುವ ಸಂಗಮ ಸಭಾಭವನದಲ್ಲಿ ಸಂಘದ ಅಧ್ಯಕ್ಷರಾದ ಶ್ರೀ.ಅನಿಲ್ ಎ.ಜೆ ರವರ ಅಧ್ಯಕ್ಷತೆಯಲ್ಲಿ ಜರುಗಿತು. 2024-25 ನೇ ಸಾಲಿನಲ್ಲಿ ರೂ 164 ಕೋಟಿ ವ್ಯವಹಾರ ನಡೆಸಿ ನಿವ್ವಳ ರೂ 72.70ಲಕ್ಷ ಲಾಭ ಗಳಿಸಿದೆ. ಸದಸ್ಯರಿಗೆ ಶೇ.16 ರಷ್ಟು ಡಿವಿಡೆಂಟ್ ನೀಡಲು ತೀರ್ಮಾನಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಅನಿಲ್ ಎ.ಜೆ ರವರು ತಿಳಿಸಿದರು.ಸಂಘದ ಉಪಾಧ್ಯಕ್ಷ ಶ್ರೀ. ಜಾರ್ಜ್...

ಗೇರುಕಟ್ಟೆ : ಪರಪ್ಪು ಈದ್ ಮಿಲಾದ್ ಸ್ವಾಗತ ಸಮಿತಿಯಿಂದ ಕಳಿಯ ಗ್ರಾಮ ಪಂಚಾಯತ್, ರಿಕ್ಷಾ ಚಾಲಕರ ಸಂಘ ಸಹಭಾಗಿತ್ವದಲ್ಲಿ ಸ್ವಚ್ಛತಾ ಅಭಿಯಾನ.

0

ಅ 24 ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯ ವತಿಯಿಂದ ಈದ್ ಮೀಲಾದ್ ಕಾರ್ಯಕ್ರಮದ 1500 ನೇ ವರ್ಷಾಚರಣೆಯ ಪ್ರಯುಕ್ತ ಕಳಿಯ ಗ್ರಾಮ ಪಂಚಾಯತ್, ಸ್ನೇಹ ಸಂಗಮ ಆಟೋರಿಕ್ಷಾ ಚಾಲಕರ ಸಂಘ, ಈದ್ ಮೀಲಾದ್ ಸ್ವಾಗತ ಸಮಿತಿಯ ಸಹಭಾಗಿತ್ವದಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿವಾಕರ ಎಮ್, ಖತೀಬರಾದ ಮಹಮ್ಮದ್ ವಿಸ್ಬಾಹಿ, ಅಧ್ಯಕ್ಷರಾದ ಅಬೂಬಕ್ಕರ್ ಹಾಜಿ, ಝಿಯಾದ್ ಮುಈನಿ,ಗ್ರಾಮ ಪಂಚಾಯತ್ ಸದಸ್ಯ ಅಬ್ದುಲ್ ಕರೀಮ್ ಲತೀಫ್ ಪರಿಮರ,ಈದ್ ಮಿಲಾದ್ ಸ್ವಾಗತ ಸಮಿತಿಯ ಅಶ್ರಫ್ ಜಿ.ಡಿ., ಪಂಚಾಯತ್ ಕಾರ್ಯದರ್ಶಿ ಕುಂಙ ಕೆ,...

ಬೆಳ್ತಂಗಡಿ : ಯೂಟ್ಯೂಬರ್ ಸಮೀರ್.ಎಮ್.ಡಿ ವಿಚಾರಣೆ ಅಂತ್ಯ; ನಾಳೆ ಮತ್ತೆ ವಿಚಾರಣೆಗೆ ಬರಲು ಸೂಚನೆ

0

ಬೆಳ್ತಂಗಡಿ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಯೂಟ್ಯೂಬರ್ ಸಮೀರ್.ಎಮ್.ಡಿ ಆ.24 ರಂದು ಭಾನುವಾರ ಬೆಳಗ್ಗೆ 1 ಗಂಟೆಗೆ ಬಂದು ಸಂಜೆ 6 ಗಂಟೆಗೆ ವಿಚಾರಣೆ ಮುಗಿಸಿ ವಾಪಸ್ ಕಾರಿನಲ್ಲಿ ವಕೀಲರ ಜೊತೆ ವಾಪಸ್ ತೆರಳಿದ್ದಾನೆ. ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ಇಂದು ದಾಖಲೆ ಮೂಲಕ ವಿಚಾರಣೆ ನಡೆಸಿದ್ದು. ಆ.25 ಸೋಮವಾರದಂದು ಮತ್ತೆ ವಿಚಾರಣೆಗೆ ಬರಲು ನೋಟಿಸ್ ನೀಡಿ ಸೂಚನೆ ಕೊಟ್ಟು ದಾಖಲೆಗಳಿಗೆ ಸಹಿ ಪಡೆದು ಕಳುಹಿಸಿದ್ದಾರೆ.ಎI ವಿಡಿಯೋ ಮಾಡಲು ಬಳಸಿದ ಕಂಪ್ಯೂಟರ್ ಮತ್ತು ಮೊಬೈಲ್ ವಶಕ್ಕೆ ಪಡೆಯಲು ಬಾಕಿ ಇರುವುದಾಗಿ ಪೊಲೀಸ್ ಮೂಲಗಳಿಂದ...

ಬೆಳ್ತಂಗಡಿ; ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಜಾಮೀನು ಮಂಜೂರು

0

ಬೆಳ್ತಂಗಡಿ; ಬಿಜೆಪಿ ರಾಷ್ಟ್ರೀಯ ಸಂಘಟನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿ ಹಿರಿಯಡ್ಕ ಜೈಲಿನಲ್ಲಿರುವ ಆರೋಪಿ ಮಹೇಶ್‌ ಶೆಟ್ಟಿ ತಿಮರೋಡಿಗೆ ನ್ಯಾಯಾಲಯ ಶನಿವಾರ (ಆ.23) ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ. ಅವಹೇಳನಕಾರಿ ಹೇಳಿಕೆ ನೀಡಿದ್ದ ಬಗ್ಗೆ ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಮಹೇಶ್‌ ತಿಮರೋಡಿ ವಿರುದ್ಧ ದೂರು ದಾಖಲಾಗಿತ್ತು. ಕಳೆದ ಗುರುವಾರ (ಆ.21) ಬ್ರಹ್ಮಾವರ ಪೊಲೀಸರು ಉಜಿರೆಯ ತಿಮರೋಡಿ ನಿವಾಸಕ್ಕೆ ತೆರಳಿ ಅವರನ್ನು ಬಂಧಿಸಿದ್ದರು. ಈ ವೇಳೆ ಹೈಡ್ರಾಮಾ ನಡೆದಿತ್ತು. ಅದೇ ದಿನ ಪೊಲೀಸರು...

ಸಾಕ್ಷಿ ದೂರು ದಾರ ಎಸ್.ಐ.ಟಿ  ಕಸ್ಟಡಿಗೆ

0

ಬೆಳ್ತಂಗಡಿ; ಧರ್ಮಸ್ಥಳದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿಕೆ ನೀಡಿದ್ದ ಸಾಕ್ಷಿ ದೂರುದಾರನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು ನ್ಯಾಯಾಲವು ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.ಕಳೆದ ಎರಡು ತಿಂಗಳಿನಿಂದ ನಡೆಯುತ್ತಿದ್ದ ಘಟನೆಗಳಿಗೆ ಇದೀಗ ಹೊಸ ತಿರುವು ಲಭಿಸಿದೆ. ಸಾಕ್ಷಿ ದೂರುದಾರ ನೀಡುತ್ತಿರುವ ಹೇಳಿಕೆಗಳಲ್ಲಿನ ಗೊಂದಲವೇ ಆತನನ್ನು ಇಕ್ಕಟ್ಟಿಗೆ ಸಿಲುಕಿಸಿದೆ ಎಂಬ ಮಾಹಿತಿಗಳು ಲಭ್ಯವಾಗುತ್ತಿದೆ. ಆತ ತಂದ ತಲೆಬುರುಡೆಯ ವಿಚಾರದಲ್ಲಿ ಈತ ಹೇಳುತ್ತಿರುವ ವಿಚಾರಗಳಬಗ್ಗೆ ಹೆಚ್ಚಿನ ಪರಿಶೀಲನೆ ನಡೆಸಿದ ವೇಳೆ ಈತ ನೀಡಿರುವ ಹೇಳಿಕೆಗಳು ತಾಳೆಯಾಗದ ಹಿನ್ನಲೆಯಲ್ಲಿ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವ...

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ; ಮಾಸ್ಕ್ ಮ್ಯಾನ್ ಬಂಧಿಸಿದ ಎಸ್.ಐ.ಟಿ

0

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣದ ದೂರುದಾರನನ್ನು ಎಸ್.ಐ.ಟಿ ಅಧಿಕಾರಿಗಳು ಬಂಧಿಸಿದ್ದಾರೆ. ಆ.22 ರಂದು ಮಂಗಳೂರು ಸಕ್ಷಮ ಪ್ರಾಧಿಕಾರದಿಂದ ಪ್ರೊಟೆಕ್ಷನ್ ಕಾಯ್ದೆಯನ್ನು ರದ್ದು ಮಾಡಿದ್ದು. ಆ.23 ರಂದು ಬೆಳಗ್ಗೆ ಬಂಧಿಸಿ 11 ಗಂಟೆಗೆ ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಿದ್ದಾರೆ ಎಂದು ಎಸ್.ಐ.ಟಿ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ; ಎಸ್.ಐ.ಟಿ ಯಿಂದ ದೂರುದಾರನನ್ನು ರಾತ್ರಿ ಪೂರ್ತಿ ವಿಚಾರಣೆ

0

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ದೂರುದಾರನನ್ನು ಆ.22 ರಂದು ಬೆಳಗ್ಗೆ 10 ಗಂಟೆಯಿಂದ ಆ.23 ರ ಬೆಳಗ್ಗಿನ ಜಾವ 5 ಗಂಟೆಯವರೆಗೆ ತೀವ್ರ ವಿಚಾರಣೆಯನ್ನು ಖದ್ದು ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಅವರ ನೇತೃತ್ವದ ತಂಡ ನಡೆಸಿರುವುದಾಗಿ ಮಾಹಿತಿಗಳು ಲಭ್ಯವಾಗುತ್ತಿದೆ. ಎಸ್.ಐ.ಟಿ ತಂಡ ಆರಂಭದಲ್ಲಿ ಧರ್ಮಸ್ಥಳ ಗ್ರಾಮದಲ್ಲಿ ಸಾಕ್ಷಿ ದೂರುದಾರ ತೋರಿಸಿದ ಸ್ಥಳಗಳಲ್ಲಿ ಅಗೆಯುವ ಕಾರ್ಯ ಮಾಡಿದ್ದರು. ಅಲ್ಲಿ ಸಿಕ್ಕಿರುವ ಮಾಹಿತಿಗಳ ಹಿನ್ನಲೆಯಲ್ಲಿ ತಂಡ ಇದೀಗ ತನಿಖೆ ನಡೆಯುತ್ತಿದೆ. ಆರಂಭದಲ್ಲಿ ದಾಖಲೆಗಳ ಸಂಗ್ರಹ ಹಾಗೂ ಪರಿಶೀಲನೆ ನಡೆಸುತ್ತಿದ್ದರು ಇದೀಗ...