ಬೆಳ್ತಂಗಡಿ; ಎಸ್.ಐ.ಟಿ ಕಾರ್ಯಾಚರಣೆ ಬಗ್ಗೆ ಸುಳ್ಳು ಮಾಹಿತಿ ಪ್ರಸಾರ ನ್ಯಾಯವಾದಿ ಮಂಜುನಾಥ್ ಎನ್ ವಿರುದ್ದ ಪ್ರಕರಣ ದಾಖಲು
ಬೆಳ್ತಂಗಡಿ; ಧರ್ಮಸ್ಥಳ ದಲ್ಲಿ ನಡೆಯುತ್ತಿರುವ ಎಸ್.ಐ.ಟಿ ಕಾರ್ಯಾಚರಣೆ ಬಗ್ಗೆ ಸಾರ್ವಜನಿಕರಲ್ಲಿ ಭಯವುಂಟು ಮಾಡುವಂತಹ ಅನಧಿಕೃತ ಮಾಹಿತಿಗಳನ್ನು ಒಳಗೊಂಡಿರುವ ಸುಳ್ಳು ಪತ್ರಿಕಾ ಪ್ರಕಟಣೆಯನ್ನು ಪ್ರಸಾರ ಮಾಡಿರುವ ಬಗ್ಗೆ ನ್ಯಾಯವಾದಿ ಮಂಜುನಾಥ್ ಎನ್, ಅವರ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಧರ್ಮಸ್ಥಳ ನಿವಾಸಿ ರಘುರಾಮ ಶೆಟ್ಟಿ ಎಂಬವರು ಈ ಬಗ್ಗೆ ದೂರು ನೀಡಿದ್ದು ಪ್ರಸ್ತುತ ಎಸ್.ಐಟಿ ತಂಡದಿಂದ ನಡೆಯುತ್ತಿರುವ ಕಾರ್ಯಾಚರಣೆ ಬಗ್ಗೆ ಸುಳ್ಳು ಪತ್ರಿಕಾ ಪ್ರಕಟಣೆಗಳನ್ನು ಬಿಡುಗಡೆ ಮಾಡಿ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಯಾಗುವಂತೆ ಮಾಡಿದ ಬಗ್ಗೆ ದೂರು ನೀಡಿದ್ದು ಅದರಂತೆ ಬೆಳ್ತಂಗಡಿ ಠಾಣೆಯಲ್ಲಿ 353(1)(b),...
ಸೌಜನ್ಯ ಪರ ಹೊರಾಟಗಾರ ಮಹೇಶ್ ಶೆಟ್ಟಿ ಬಂಧನ ಖಂಡಿಸಿ ಸರಕಾರಕ್ಕೆ ಮನವಿ
ಬೆಳ್ತಂಗಡಿ; ಉಜಿರೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರು ಆರ್.ಎಸ್.ಎಸ್ ಸಂಘಟನೆಯ ಮುಖಂಡನನ್ನು ಅವಹೇಳನಕಾರಿಯಾಗಿ ಟೀಕಿಸಿದ್ದಾರೆ ಎಂಬ ಕಾರಣಕ್ಕೆ ಬ್ರಹ್ಮಾವರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ದುರುದ್ದೇಶ ಪೂರ್ವಕವಾಗಿ ಕಾನೂನು ಬಾಹಿರವಾಗಿ ಬಂಧಿಸಿರುವುದು ಖಂಡನೀಯ ಎಂದು ಸಿಪಿಐಎಂ ಬೆಳ್ತಂಗಡಿ ತಾಲೂಕು ಕಾರ್ಯದರ್ಶಿ ನ್ಯಾಯವಾದಿ ಬಿ.ಎಂ.ಭಟ್ ಹೇಳಿದ್ದಾರೆ.ಮಹೇಶ್ ಶೆಟ್ಟಿ ಅವರನ್ನು ಕಾನೂನುಬಾಹಿರವಾಗಿ ಬಂದಿಸಿದ ಸರಕಾರದ ಕ್ರಮದ ವಿರುದ್ದ ಮದ್ಯ ಪ್ರವೇಶಿಸಿ ನ್ಯಾಯ ಒದಗಿಸಲು ಆಗ್ರಹಿಸಿ ಸಿಪಿಐಎಂ ಬೆಳ್ತಂಗಡಿ ತಾಲೂಕು ಸಮಿತಿ ಬೆಳ್ತಂಗಡಿ ತಹಶೀಲ್ದಾರ್ ಮೂಲಕ ಸರಕಾರಕ್ಕೆ ಮನವಿ ನೀಡಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಯಾರನ್ನೂ...
ಬೆಳ್ತಂಗಡಿ : ಯೂಟ್ಯೂಬರ್ ಸಮೀರ್.ಎಮ್.ಡಿ ವಿಚಾರಣೆಗೆ ಹಾಜರಾಗಲು ನೋಟಿಸ್ ಜಾರಿ
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣದ ಬಗ್ಗೆ ದೂರುದಾರನ ಮಾಹಿತಿ ರಿವಿಲ್ ಮಾಡಿದ್ದು, ಕಾಲ್ಪನಿಕ ಮಾಹಿತಿಗಳನ್ನು ಮಾಡಿಟ್ಟು ದೂತ ಎಂಬ ಯೂಟ್ಯೂಬ್ ನಲ್ಲಿ ಸಮೀರ್ ಎಮ್.ಡಿ ವಿಡಿಯೋ ಪ್ರಸಾರ ಮಾಡಿದ ಬಗ್ಗೆ ಜು.12 ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಈ ಬಗ್ಗೆ ಧರ್ಮಸ್ಥಳ ಪೊಲೀಸರು ಮೂರು ಭಾರಿ ನೋಟಿಸ್ ನೀಡಿದ್ರೂ ವಿಚಾರಣೆಗೆ ಹಾಜರಾಗದೆ ಇರುವ ಕಾರಣ ಆ.21 ರಂದು ಧರ್ಮಸ್ಥಳ ಪೊಲೀಸರು ಬೆಂಗಳೂರು ಬಾಡಿಗೆ ಮನೆಯಿಂದ ಬಂಧಿಸಲು ಹೋಗಿದ್ದು ಈ ವೇಳೆಗೆ ಸಂಜೆ ಮಂಗಳೂರು ಕೋರ್ಟ್ ನಿಂದ...
ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಕರ್ತವ್ಯಕ್ಕೆ ಅಡ್ಡಿ; ಮಹೇಶ್ ಶೆಟ್ಟಿ, ಮಟ್ಟಣ್ಣನವರ್, ಜಯಂತ್ ಸೇರಿ ಹಲವರ ವಿರುದ್ದ ಪ್ರಕರಣ ದಾಖಲು
ಬೆಳ್ತಂಗಡಿ : ಉಜಿರೆ ತಿಮರೋಡಿ ಮನೆಯಲ್ಲಿ ಮಹೇಶ್ ಶೆಟ್ಟಿ ಬಂಧನ ಮಾಡಲು ಬ್ರಹ್ಮವಾರ ಪೊಲೀಸರು ಹೋದಾಗ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ. ಯೂಟ್ಯೂಬ್ ಮೂಲಕ ಬಿ.ಎಲ್.ಸಂತೋಷ್ ವಿರುದ್ಧ ಮಹೇಶ್ ಶೆಟ್ಟಿ ತಿಮರೋಡಿ ಅವಹೇಳನಕಾರಿ ಹೇಳಿಕೆ ನೀಡಿದ ವಿರುದ್ಧ ಉಡುಪಿ ಜಿಲ್ಲೆಯ ಬ್ರಹ್ಮವಾರ ಪೊಲೀಸ್ ಠಾಣೆಯಲ್ಲಿ ಆ.18 ರಂದು ರಾಜೀವ್ ಕುಲಾಲ್ ದಾಖಲಾದ ಪ್ರಕರಣದಲ್ಲಿ ಆ.21 ರಂದು ಠಾಣೆಗೆ ಹಾಜರಾಗಲು ನೋಟಿಸ್ ನೀಡಿದ್ರೂ ಮಹೇಶ್ ಶೆಟ್ಟಿ ತಿಮರೋಡಿ ಹಾಜರಾಗದ ಹಿನ್ನಲೆಯಲ್ಲಿ ಆ.21 ರಂದು ಬೆಳಗ್ಗೆ ಉಜಿರೆ ತಿಮರೋಡಿ...
ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಸಿ.ಇ.ಟಿ, ನೀಟ್ ತರಬೇತಿ ಕಾರ್ಯಕ್ರಮ ಉದ್ಘಾಟನೆ
ಬೆಳ್ತಂಗಡಿ; ಕ್ರೈಸ್ಟ್ ಅಕಾಡೆಮಿ ಮುಂಡಾಜೆಯಲ್ಲಿ ಸಿಇಟಿ,ನೀಟ್, ಜೆಇ,ಹಾಗೂಅಬ್ಕಾಸ್ ತರಬೇತಿ ಕಾರ್ಯಕ್ರಮದ ಉದ್ಘಾಟನೆ ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ನೆರವೇರಿಸಿ ಮಾತನಾಡುತ್ತಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮಕ್ಕಳನ್ನು ಆರಂಭದಿಂದಲೇ ಸಿದ್ದಗೊಳಿಸುವ ಕಾರ್ಯವನ್ನು ಮಾಡಬೇಕಾಗಿದೆ ಈ ನಿಟ್ಟಿನಲ್ಲಿ ಈ ತರಬೇತಿ ಕಾರ್ಯಕ್ರಮಗಳಿಗೆ ಹೆಚ್ಚು ಮಹತ್ವವಿದೆ ಎಂದರು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ದೇಶೀಯ ಕೇಂದ್ರೀಯ ವಿದ್ಯಾಲಯದ ಪ್ರಾಂಶಯಪಾಲರಾದ ನವೀನ್ ಪ್ರಕಾಶ್ ಆಗಮಿಸಿ ಶುಭ ಹಾರೈಸಿದರು.ಕ್ರೈಸ್ಟ್ ಅಕಾಡೆಮಿ ಮುಂಡಾಜೆ ಇದರ ಪ್ರಾಂಶುಪಾಲರಾದ ಫಾ. ಜಾರ್ಜ್ ಸಿ.ಎಂ.ಐ ಫಾ. ಅಬ್ರಹಾಂ, ಶಿಕ್ಷಕ ರಕ್ಷಕ...
ಬೆಳ್ತಂಗಡಿ ಪೊಲೀಸರ ನೇತೃತ್ವದಲ್ಲಿ ಶಾಂತಿ ಸಭೆ
ಬೆಳ್ತಂಗಡಿ; ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಸರಣಿ ಹಬ್ಬಗಳ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಶಾಂತಿ ಸಭೆಯು ಬೆಳ್ತಂಗಡಿ ಶ್ರೀ ಮಂಜುನಾಥ ಕಲಾ ಭವನದಲ್ಲಿ ಗುರುವಾರ ನಡೆಯಿತು. ತಾಲೂಕಿನ ವಿವಿಧ ಗಣೇಶೋತ್ಸವ ಸಮಿತಿಗಳ ಪದಾಧಿಕಾರಿಗಳು , ವಿವಿಧ ಮಸೀದಿಗಳ ಪದಾಧಿಕಾರಿಗಳು ಭಾಗವಹಿಸಿದ್ದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ನಾಗೇಶ್ ಕದ್ರಿ ಗಣೇಶೋತ್ಸವವನ್ನು ಪ್ರತಿಯೊಬ್ಬರೂ ಕಾನೂನಿನ ಮಿತಿಯಲ್ಲಿ ಯಶಸ್ವಿಯಾಗಿ ನಡೆಸಲು ಇಲಾಖೆಯಿಂದ ಸಂಪೂರ್ಣ ಸಹಕಾರವಿದೆ. ಆದರೆ ಕಾನೂನಿನ ಮೀರಿದರೆ ಕಾನೂನಿನ್ವಯ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದರು. ಎಲ್ಲಾ ಹಬ್ಬಗಳನ್ನು ಸಂಭ್ರಮಿಸೋಣ , ಕಾನೂನು...
ಉಡುಪಿ : ಮಹೇಶ್ ಶೆಟ್ಟಿಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್
ಉಡುಪಿ : ಉಜಿರೆ ಮಹೇಶ್ ಶೆಟ್ಟಿ ತಿಮರೋಡಿಗೆ ಆ.21 ರಂದು ಉಡುಪಿ ಜಿಲ್ಲೆಯ ಬ್ರಹ್ಮಾವರ ಸಂಚಾರಿ ಪೀಠಕ್ಕೆ ಹಾಜರು ಪಡಿಸಿದ ಬಳಿಕ ನ್ಯಾಯಾಧೀಶರು ಆ.23 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಮಾಡಿದೆ. ಮಹೇಶ್ ಶೆಟ್ಟಿ ತಿಮರೋಡಿಯನ್ನು ಉಡುಪಿಯ ಹಿರಿಯಡ್ಕ ಜೈಲಿಗೆ ಕಳುಹಿಸಿದ್ದಾರೆ.
ಬೆಳ್ತಂಗಡಿ : ಯೂಟ್ಯೂಬರ್ ಸಮೀರ್.ಎಮ್.ಡಿ ಗೆ ನಿರೀಕ್ಷಣಾ ಜಾಮೀನು ಮಂಜೂರು
ಬೆಳ್ತಂಗಡಿ : ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಯುಟ್ಯೂಬರ್ ಸಮೀರ್ ಎಂ.ಡಿ ಅವರಿಗೆ ಮಂಗಳೂರಿನ ನ್ಯಾಯಾಲಯವು ನಿರೀಕ್ಷಣಾ ಜಾಮಿನು ಮಂಜೂರು ಮಾಡಿರುವುದಾಗಿ ತಿಳಿದು ಬಂದಿದೆ. ಸಮೀರ್ ನನ್ನು ಬಂಧಿಸಲು ಧರ್ಮಸ್ಥಳ ಪೊಲೀಸರು ಬೆಂಗಳೂರಿಗೆ ತೆರಳಿದ್ದರೂ ಈತ ಮನೆಯಲ್ಲಿ ಇರದ ಕಾರಣ ವಶಕ್ಕೆ ಪಡೆಯಲು ಸಾಧ್ಯವಾಗಿರಲಿಲ್ಲ ಇದೀಗ ಆತನಿಗೆ ಮಂಗಳೂರಿನ ಜಿಲ್ಲಾ ಸತ್ರ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಇದರದಾಗಿ ಸಮೀರ್ ಗೆ ಬಂಧನ ಭೀತಿಯಿಂದ ತಪ್ಪಿಸಿಕೊಂಡಂತಾಗಿದೆ.
ಬೆಳ್ತಂಗಡಿ : ಯೂಟ್ಯೂಬರ್ ಸಮೀರ್.ಎಮ್.ಡಿ ಬಂಧನ ಯತ್ನ ವಿಫಲ
ಬೆಳ್ತಂಗಡಿ : ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಯುಟ್ಯೂಬರ್ ಸಮೀರ್ ಎಂ.ಡಿ ಯನ್ನು ಬಂಧಿಸಲು ಧರ್ಮಸ್ಥಳ ಪೊಲೀಸರು ಬೆಂಗಳೂರಿಗೆ ತೆರಳಿದ್ದರೂ ಈತ ಮನೆಯಲ್ಲಿ ಇರದೆ ತಪ್ಪಿಸಿಕೊಂಡ ಕಾರಣ ವಶಕ್ಕೆ ಪಡೆಯಲು ಸಾಧ್ಯವಾಗಿಲ್ಲ ಎಂದು ತಿಳಿದು ಬಂದಿದೆ.ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದ ಸಂಬಂಧ ನೋಟಿಸ್ ನೀಡಿದ್ರೂ ಠಾಣೆಗೆ ವಿಚಾರಣೆಗೆ ಹಾಜರಾಗದ ಯೂಟ್ಯೂಬರ್ ಸಮೀರ್.ಎಮ್.ಡಿ ಬಂಧನ ಮಾಡಲು ವಾರೆಂಟ್ ಜೊತೆ ಧರ್ಮಸ್ಥಳ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಅನಂದ್.ಎಮ್ ನೇತೃತ್ವದ ತಂಡ ಬೆಂಗಳೂರಿನ ಬನ್ನೆರುಘಟ್ಟದಲ್ಲಿರುವ ಯೂಟ್ಯೂಬರ್ ಸಮೀರ್.ಎಮ್.ಡಿ ಬಾಡಿಗೆ ಮನೆಗೆ ತರಳಿ ಆತನನ್ನು ಬಂದಿಸುವ...
ಅನನ್ಯ ಭಟ್ ನಾಪತ್ತೆ ಪ್ರಕರಣ; ಎಸ್.ಐ.ಟಿಗೆ ಹಸ್ತಾಂರ
ಬೆಳ್ತಂಗಡಿ; ಧರ್ಮಸ್ಥಳದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವ ಪ್ರಕರಣದ ಬೆನ್ನಲ್ಲಿಯೇ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದ ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ತಾಯಿ ಸುಜಾತಾ ಭಟ್ ಧರ್ಮಸ್ಥಳ ಠಾಣೆಗೆ ನೀಡಿದ್ದ ದೂರನ್ನು ಇದೀಗ ಎಸ್.ಐ.ಟಿ ಠಾಣೆಗೆ ಹಸ್ತಾಂತರಿಸಿರು ವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಮಾಹಿತಿ ನೀಡಿದ್ದಾರೆ.ಈ ಬಗ್ಗೆ ಪತ್ರಿಕಾಹೇಳಿಕೆಯಲ್ಲಿ ಮಾಹಿತಿ ನೀಡಿದ ಧರ್ಮಸ್ಥಳಠಾಣೆಗೆ ಬಂದಿದ್ದ ಜುಲೈ 15ರಂದು ಅನನ್ಯ ಭಟ್ ನಾಪತ್ತೆಯಾಗಿರುವ ಬಗ್ಗೆ ಆಕೆಯ ತಾಯಿ ಸುಜಾತಾ ಭಟ್ ದೂರು ನೀಡಿದ್ದರು. ಧರ್ಮಸ್ಥಳ ಪೊಲೀಸರು ನಂ. 175/PTN/DPS/2025 ರಂತೆ ದೂರರ್ಜಿಯನ್ನು...














