ಬೆಳ್ತಂಗಡಿ ಯುವತಿ ನಾಪತ್ತೆ ಪ್ರಕರಣ ದಾಖಲು
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಉರುವಾಲು ಗ್ರಾಮದ ಮಜಿಕುಡೇಲು ಎಂಬಲ್ಲಿನ ನಿವಾಸಿ ಸುಪ್ರೀತಾ(20) ಎಂಬವರು ಮಂಗಳವಾರ ನಸುಕಿನಿಂದ ನಾಪತ್ತೆಯಾಗಿರುವ ಬಗ್ಗೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಲಾಗಿದೆ. ದಿವಂಗತ ಶೀನಪ್ಪ ಎಂಬವರ ಮಗಳಾಗಿರುವ ಈಕೆ ಸೋಮವಾರ ರಾತ್ರಿ ಎಂದಿನಂತೆ ಮನೆಯ ತಮ್ಮ ಕೋಣೆಯಲ್ಲಿ ಮಲಗಿದ್ದವರು ಮಂಗಳವಾರ ನಸುಕಿನ ವೇಳೆ ಕಾಣಿಸದೇ ಇದ್ದು, ಮೊಬೈಲ್ ಪೋನ್ ಕರೆಯೂ ಸ್ವೀಕರಿಸಿರಲಿಲ್ಲ. ಬಳಿಕ ಆಕೆಯ ಮೊಬೈಲ್ ಸ್ವಿಚ್ ಆಫ್ ಆಗಿದೆ ಎಂದು ಆಕೆಯ ತಾಯಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಅದರಂತೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣದಾಖಲಿಸಲಾಗಿದೆ.ಈಕೆಯ ಬಗ್ಗೆ ತಿಳಿದವರು ಉಪ್ಪಿನಂಗಡಿ ಪೊಲೀಸ್...
ಬೆಳ್ತಂಗಡಿ : ಅಪ್ರಾಪ್ತ ಬಾಲಕಿಮೇಲೆ ಲೈಂಗಿಕ ದೌರ್ಜನ್ಯ ಆರೋಪಿಗೆ ಶಿಕ್ಷೆ ಪ್ರಕಟ
ಬೆಳ್ತಂಗಡಿ : ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ಬೆಳ್ತಂಗಡಿಯ ಶಂಕರ ಗೌಡ (60) ಎಂಬಾತನಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್ ಟಿಎಸ್‌ಸಿ- 1(ಪೊಕ್ಸೊ) ನ್ಯಾಯಾಲಯವು ಫೆ.3 ರಂದು ವಿವಿಧ ಸೆಕ್ಷನ್ ಅಡಿಯಲ್ಲಿ 8 ವರ್ಷಗಳ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. 2025ರ ಮಾರ್ಚ್ 25 ರಂದು ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ನಿವಾಸಿ ಶಂಕರಗೌಡ(60) ತನಗೆ ಪರಿಚಯವಿದ್ದ ಬಾಲಕಿಯ ಮನೆಗೆ ತೆರಳಿ ಅಲ್ಲಿ ಯಾರೂ ಇಲ್ಲದಿರುವುದನ್ನು ಗಮನಿಸಿ ಲೈಂಗಿಕ ಕಿರುಕುಳ ನೀಡಿದ್ದ. ಈ ಬಗ್ಗೆ ಧರ್ಮಸ್ಥಳ...
ಕಳಿಯ ಸುಮಂತ್ ಕೊಲೆ ಪ್ರಕರಣ ವದಂತಿಗಳಿಗೆ ಕಿವಿಕೊಡಬೇಡಿ, ವದಂತಿ ಹರಡುವವರ ವಿರುದ್ದ ಕ್ರಮ ಎಸ್.ಪಿ ಹೇಳಿಕೆ
ಬೆಳ್ತಂಗಡಿ; ಕಳಿಯದಲ್ಲಿ ನಡೆದ ಸುಮಂತ್ ಕೊಲೆ ಪ್ರಕರಣದ ಬಗ್ಗೆ ನಡೆದ ತನಿಖೆಯಲ್ಲಿ ಈ ವರೆಗೆ ವಿಧಿವಿಜ್ಞಾನ ಪ್ರಯೋಗಾಲಯಗಳ ವರದಿಗಳು ಬಂದಿಲ್ಲ ಈ ಬಗ್ಗೆ ತನಿಖೆ ನಡೆಯುತ್ತಿದೆ ಆದರೆ ಕೆಲವರು ಆರೋಪಿಗಳ ಬಗ್ಗೆ ಊಹಾಪೋಹಗಳನ್ನು ಹರಡುವ ಕಾರ್ಯವನ್ನು ಮಾಡುತ್ತಿದ್ದಾರೆ ಇಂತಹ ವದಂತಿಗಳಿಗೆ ಸಾರ್ವಜನಿಕರು ಕಿವಿಕೊಡಬಾರದು ಹಾಗೂ ವದಂತಿಗಳನ್ನು ಹರಡುವವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಈ ಬಗ್ಗೆ ಫೆ.3 ರಂದು ಪತ್ರಿಕಾ ಪ್ರಕಟಣೆ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರುದಿನಾಂಕ 14-01-2026 ರಂದು ಬೆಳ್ತಂಗಡಿ...
ಬೆಳ್ತಂಗಡಿ; ಬೋರ್ ವೆಲ್ ಲಾರಿಯ ಡ್ರಿಲ್ ಯಂತ್ರ ವಿದ್ಯುತ್ ಲೈನಿಗೆ ತಾಗಿ ಕಾರ್ಮಕ ಮೃತ್ಯು
ಬೆಳ್ತಂಗಡಿ: ಪುತ್ತಿಲ ಗ್ರಾಮದ ಕೊಪ್ಪರಿಗೆ ಮಜಲು ಎಂಬಲ್ಲಿ ಅಡಿಕೆ ತೋಟದಲ್ಲಿ ಹಾಳಾಗಿದ್ದ ಬೋರ್ ವೆಲ್ ಅನ್ನು ಸ್ವಚ್ಚಗೊಳಿಸುವ ವೇಳೆ ಬೋರ್ ವೆಲ್ ರಿಂಗ ವಾಹನದ ಲಾರಿಯ ಡ್ರಿಲ್ ಮಾಡುವ ಯಂತ್ರ ವಿದ್ಯುತ್ ಲೈನಿಗೆ ತಾಗಿ ಲಾರಿಯ ಬದಿಯಲ್ಲಿ ನೀರಿನಲ್ಲಿ ನಿಂತಿದ್ದ ಕಾರ್ಮಿಕ ವಿದ್ಯುತ್ ಆಘಾತಕ್ಕೆ ಈಡಾಗಿ ಮೃತಪಟ್ಟ ಘಟನೆ ಸಂಭವಿಸಿದೆ.ಮೃತ ಕಾರ್ಮಿಕ ಚತ್ತೀಸ್ ಗಡ್ ಮೂಲದ ಕಾರ್ಮಿಕ ಶಿವ ಎಕ್ಕ (33) ಎಂಬಾತನಾಗುದ್ದಾನೆ. ಈ ಬಗ್ಗೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣದಾಖಲಿಸಲಾಗಿದೆ.ಪುತ್ತಿಲ ನಿವಾಸಿಯಾಗಿರುವ ರಫೀಕ್ ಎಂಬವರು ತಮ್ಮ ತಂದೆಗೆ ಸೇರಿದ ಜಾಗದಲ್ಲಿ ಹಾಳಾದ...
ಶಾಸಕರು ದಲಿತರ ಮನೆಗೆ ಹೋಗಿ ಊಟ ಮಾಡಿದ್ರೆ ಸಂವಿಧಾನ ವಿರೋಧಿನಾ? ರಕ್ಷಿತ್ ಶಿವರಾಂ ವಿರುದ್ಧ ಬಿಜೆಪಿ ಎಸ್.ಸಿ ಮೋರ್ಚಾ ಮುಖಂಡರ ಆಕ್ರೋಶ
ಬೆಳ್ತಂಗಡಿ: ಶಾಸಕ ಹರೀಶ್ ಪೂಂಜಾ ಅವರ 'ಸಾಮರಸ್ಯ ಸಂಕ್ರಾಂತಿ' ಅಭಿಯಾನದ ಬಗ್ಗೆ ಕಾಂಗ್ರೆಸ್ ಮುಖಂಡ ರಕ್ಷಿತ್ ಶಿವರಾಮ್ ಹೇಳಿರುವ ಮಾತುಗಳು ಸರಿಯಾಗಿಲ್ಲ ಶಾಸಕರು ನಮ್ಮ ಮನೆಗೆ ಬಂದು ಊಟ ಮಾಡಿದರೆ ಅದು ಹೇಗೆ ಸಂವಿಧಾನ ವಿರೋಧಿಯಾಗುತ್ತೆ ಇದು ಸಮಾಜವನ್ನು ಕುಗ್ಗಿಸುವ ಕೆಲಸವಾಗಿದೆ ಎಂದು ಬಿಜೆಪಿ ಎಸ್.ಸಿ ಮೋರ್ಚಾ ಮುಖಂಡ ಲಕ್ಷ್ಮಣ್ ಆಕ್ರೋಶ ವ್ಯಕ್ತಪಡಿದ್ದಾರೆ.ಬೆಳ್ತಂಗಡಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರುರಾಷ್ಟ್ರೀಯ ಸ್ವಯಂ ಸೇವಕ ಸಂಘದ (RSS) ನೂರನೇ ವರ್ಷಾಚರಣೆಯ ಹಿನ್ನೆಲೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ತಾಲೂಕಿನಾದ್ಯಂತ 'ಸಾಮರಸ್ಯ ಸಂಕ್ರಾಂತಿ' ಹಮ್ಮಿಕೊಂಡಿದ್ದರು. ತಾಲೂಕಿನ 129...
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರಿಗೆ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ
ಬೆಳ್ತಂಗಡಿ. ತಾಲೂಕಿನ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವವು ಮಾರ್ಚ್ 1ರಿಂದ 9ರವರೆಗೆ ಅದ್ದೂರಿಯಾಗಿ ನಡೆಯಲಿದ್ದು. ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಬ್ರಹ್ಮಕಲಶೋತ್ಸವ ಗೌರವ ಅಧ್ಯಕ್ಷರು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರಿಗೆ ಕಾರ್ಯಕ್ರಮಕ್ಕೆ ಭಕ್ತಿಯಿಂದ ಆಹ್ವಾನಿಸಲಾಯಿತು.ಈ ಸಂದರ್ಭದಲ್ಲಿ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ರಕ್ಷಿತ್ ಶಿವರಾಂ,ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ರವೀಂದ್ರ ಪೂಜಾರಿ ಬಾಂದೊಟ್ಟು ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿನಯ್ ಹೆಗ್ಡೆ, ಕಾರ್ಯಾಧ್ಯಕ್ಷರಾದ ಮಹಾವೀರ ಜೈನ್, ವ್ಯವಸ್ಥಾಪನಾ ಸಮಿತಿಯ , ಎನ್ ದಿವಾಕರ ಭಂಡಾರಿ, ಲಕ್ಷ್ಮಣ್ ಬಂಗೇರ,...
ಕಳಿಯ ಸುಮಂತ್ ಹಾಗೂ ಶ್ರೀಧರ ಕೊಲೆ ಪ್ರಕರಣ ಸಮಗ್ರ ತನಿಖೆಗೆ ಒತ್ತಾಯಿಸಿ ಸಿಪಿಐಎಂ ನೇತೃತ್ವದಲ್ಲಿ ಪ್ರತಿಭಟನೆ
ಬೆಳ್ತಂಗಡಿ: ಕಳಿಯ ಪರಿಸರದಲ್ಲಿ ನಡೆದ ಶ್ರೀಧರ ಮುಗೇರ ಹಾಗೂ ಸುಮಂತ್ ಕೊಲೆ ಪ್ರಕರಣದ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಸಿಪಿಐಎಂ ಪಕ್ಷ ಹಾಗು ದಲಿತ ಹಕ್ಕುಗಳ ಸಮಿತಿ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.ಪ್ರತಿಭಟನೆಯನ್ನು ಊದ್ದೇಶಿಸಿ ಮಾತನಾಡಿದ ಸಿಪಿಐಎಂ ಪಕ್ಷದ ತಾಲೂಕು ಕಾರ್ಯದರ್ಶಿ ಬಿ. ಎಂ ಭಟ್ ಬೆಳ್ತಂಗಡಿ ತಾಲೂಕಿನಲ್ಲಿ ಜನರ ಜೀವಕ್ಕೆ ರಕ್ಷಣೆಯಿಲ್ಲವಾಗಿದೆ. ಕೊಲೆಗಾರರಿಗೆ ಭಯವಿಲ್ಲದಾಗಿದೆ. ಯಾವುದೇ ಕೊಲೆ ಪ್ರಕರಣಗಳು ನಡೆದರೂ ಆರೋಪಿಗಳು ಪತ್ತೆಯಾಗುತ್ತಿಲ್ಲ ಬೆಳ್ತಂಗಡಿ ತಾಲೂಕು ಕರ್ನಾಟಕ ಪೊಲೀಸ್ ಇಲಾಖೆಗೆ ಕಪ್ಪುಚುಕ್ಕೆಯಾಗಿ ಮಾರ್ಪಡುತ್ತಿದೆ. ಕಳಿಯ...
ಸೌಜನ್ಯ ತಾಯಿ ಕುಸುಮಾವತಿ ಅರ್ಜಿ ವಿಚಾರಣೆ ಫೆ. 19 ಕ್ಕೆ ಮುಂದೂಡಿದ ಹೈ ಕೋರ್ಟ್
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದಲ್ಲಿ ನಡೆದ 74 ಅಸಹಜ ಸಾವುಗಳ ಬಗ್ಗೆ ಪ್ರತ್ಯೇಕ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಸೌಜನ್ಯ ತಾಯಿ ಕುಸುಮಾವತಿ ರಾಜ್ಯ ಉಚ್ಚ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಫೆ.3 ರಂದು ನಡೆದು ನ್ಯಾಯಾಲಯ ವಿಚಾರಣೆಯನ್ನು ಫೆ 19 ಕ್ಕೆ ಮುಂದೂಡಿದೆ.ಪ್ರಕರಣದ ವಿಚಾರಣೆ ವೇಳೆ ಸರಕಾರದ ಪರವಾಗಿ ಹಾಜರಾದ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ನಾಪತ್ತೆ ಪ್ರಕರಣಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತುದ್ದು ಈ ಪ್ರಕರಣಗಳ ಬಗ್ಗೆ ತನಿಖೆ ನಡೆಸುವುದಕ್ಕೆ ಆಕ್ಷೇಪವಿಲ್ಲ ಈ ಬಗ್ಗೆ ಒಂದುವಾರದಲ್ಲಿ ನ್ಯಾಯಾಲಯಕ್ಕೆ ಮಾಹಿತಿ ಸಲ್ಲಿಸುವುದಾಗಿ ತಿಳಿಸಿದ್ದು ನ್ಯಾಯಾಲಯ...
ಧರ್ಮಸ್ಥಳ ಭಗವಾನ್ ಬಾಹುಬಲಿ ಸ್ವಾಮಿಯ ಪಾದಾಭಿಷೇಕ
ಉಜಿರೆ: ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿ ವಿರಾಜಮಾನರಾಗಿರುವ ಭಗವಾನ್ ಬಾಹುಬಲಿಸ್ವಾಮಿ ಮೂರ್ತಿಗೆ ಮಂಗಳವಾರ ಬೀಡಿನಿಂದ ರತ್ನಗಿರಿಗೆ ಭವ್ಯ ಅಗ್ರೋದಕ ಮೆರವಣಿಗೆ ಬಳಿಕ ಪಾದಾಭಿಷೇಕ ನಡೆಸಲಾಯಿತು.ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಮತ್ತು ಕ್ಷುಲ್ಲಕ ನಿರ್ವಾಣ ಸಾಗರ ಮಹಾರಾಜರು ಪಾದಾಭಿಷೇಕ ಮಾಡಿದರು.ಮೂರ್ತಿಯ ಪ್ರತಿಷ್ಠಾಪಕರಾದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಸೋನಿಯಾವರ್ಮ, ಪೂರನ್‌ವರ್ಮ ಪಾದಾಭಿಷೇಕ ನೆರವೇರಿಸಿದರು.ಪೂಜಾಮಂತ್ರ ಪಠಣ, ಬಾಹುಬಲಿ ಸೇವಾ ಸಮಿತಿಯ ಸದಸ್ಯರಿಂದ ಸುಶ್ರಾವ್ಯ ಜಿನಭಕ್ತಿ ಗೀತೆಗಳ ಗಾಯನ ಸಮಾರಂಭಕ್ಕೆ ವಿಶೇಷ ಮೆರುಗನ್ನು ನೀಡಿತು. ೨೧೬...
ಬೆಳ್ತಂಗಡಿ : ಕೃಷಿಕರ ವಿರೋಧಿ, ಪರಿಶಿಷ್ಟ ವರ್ಗ ಕಡೆಗಣಿಸಿದ ಬಜೆಟ್ ಜಿಲ್ಲಾ ಕೆ ಡಿ ಪಿ ಸದಸ್ಯ ನ್ಯಾಯವಾದಿ ಸಂತೋಷ್ ಕುಮಾರ್
ಬೆಳ್ತಂಗಡಿ : ಯುವಕರಿಗೆ ಉದ್ಯೋಗ, ಕೃಷಿಕರಿಗೆ ಅನುಕೂಲ, ಗ್ರಾಮೀಣ ಪ್ರದೇಶಕ್ಕೆ ಸೌಲಭ್ಯ ನೀಡುವ ರೀತಿ ಬಜೆಟ್ ಇರಬಹುದು ಎಂದು ನಿರೀಕ್ಷಿಸಲಾಗಿತ್ತು, ಆದರೆ ಯಾರೂ ಊಹಿಸದ ರೀತಿಯಲ್ಲಿ ಕಳಪೆ ಮಟ್ಟದಲ್ಲಿ ಬಜೆಟ್ ಮಂಡಿಸಲಾಗಿದೆ. ಎಂದು ಜಿಲ್ಲಾ ಕೆ ಡಿ ಪಿ ಸದಸ್ಯ ನ್ಯಾಯವಾದಿ ಸಂತೋಷ್ ಕುಮಾರ್ ಪತ್ರಿಕಾಹೇಳಿಕೆಯಲ್ಲಿ ತಿಳಿಸಿದ್ದಾರೆ. ಕೇಂದ್ರದ ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ದಕ್ಷಿಣ ಭಾರತವನ್ನು ಅದರಲ್ಲೂ ಕರ್ನಾಟಕವನ್ನು ಸಂಪೂರ್ಣ ಕಡೆಗಣಿಸಲಾಗಿದೆ. ಮುಖ್ಯವಾಗಿ ಕೃಷಿಗೆ ಕಳೆದ ಬಾರಿಗಿಂತಲೂ ಕಡಿಮೆ ಬಜೆಟ್ ನಿಗದಿಮಾಡಿ ಅನ್ಯಾಯ ಮಾಡಿದೆ. ಯೂರಿಯಾ ಸಬ್ಸಿಡಿ ಕಡಿತ ಮಾಡಿ ರೈತರಿಗೆ ಅನ್ಯಾಯ ಮಾಡಲಾಗಿದೆ....














