ಉಪ್ಪಿನಂಗಡಿ: ಹೆದ್ದಾರಿ ಬದಿಯ ಟ್ಯಾಂಕರ್ ನಿಂದ ಡೀಸೆಲ್ ಕಳವು ಆರೋಪ; ಇಬ್ಬರ ಬಂಧನ
ಉಪ್ಪಿನಂಗಡಿ: ಹೆದ್ದಾರಿ ಬದಿ ನಿಲ್ಲಿಸಿದ್ದ ವಾಹನಗಳ ಡೀಸೆಲ್ ಟ್ಯಾಂಕ್‌ನಿಂದ ಡೀಸೆಲ್ ಕಳವು ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.ಸೆ.3ರಂದು ರಾತ್ರಿ ಉಪ್ಪಿನಂಗಡಿ ಠಾಣೆಯ ಸಿಬ್ಬಂದಿ ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಕಡಬ ಕೌಕ್ರಾಡಿ ಗ್ರಾಮದ ಅಲಂಪಾಡಿ ಕ್ರಾಸ್ ಬಳಿ ಮಂಗಳೂರು–ಬೆಂಗಳೂರು ಹೆದ್ದಾರಿ ಬದಿಯಲ್ಲಿ ನಿಲ್ಲಿಸಿದ್ದ ಟ್ಯಾಂಕರ್ ಸಮೀಪ ಬೊಲೆರೋ ಪಿಕಪ್ ವಾಹನ ಹಾಗೂ ಮೂವರು ಅನುಮಾನಾಸ್ಪದವಾಗಿ ನಿಂತಿರುವುದು ಕಂಡುಬಂದಿದೆ. ಪೊಲೀಸರನ್ನು ಕಂಡು ಪರಾರಿಯಾಗಲು ಯತ್ನಿಸಿದವರ ಪೈಕಿ ಇಬ್ಬರನ್ನು ಪೊಲೀಸರು ಹಿಡಿದು ವಿಚಾರಣೆ ನಡೆಸಿದ್ದಾರೆ.ಬಂಧಿತರನ್ನು ಮಂಡ್ಯ ಜಿಲ್ಲೆಯ ಮದ್ದೂರು ನಿವಾಸಿಗಳಾದ ಜೈಮುತ್ತಾ (23)...
ಬೆಳ್ತಂಗಡಿ ಯೋಜನಾ ಪ್ರಾಧಿಕಾರ ರಚನೆಗೆನಗರಾಭಿವೃದ್ಧಿ ಪ್ರಾಧಿಕಾರಗಳ ಆಯುಕ್ತ ಶಿವಾನಂದ ಕಾಪಶಿ ಹಾಗೂ ನಗರ ಗ್ರಾಮಾಂತರ ಯೋಜನಾ ಆಯುಕ್ತರಿಗೆ ರಕ್ಷಿತ್ ಶಿವರಾಂ ಮನವಿ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಜನರಿಗೆ ಜಮೀನಿನ ತಾಂತ್ರಿಕ ಅನುಮೋದನೆ ಪಡೆಯಲು ಎದುರಾಗುತ್ತಿರುವ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಬೆಳ್ತಂಗಡಿ ಯೋಜನಾ ಪ್ರಾಧಿಕಾರವನ್ನು ರಚಿಸುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ನಗರಾಭಿವೃದ್ಧಿ ಪ್ರಾಧಿಕಾರಗಳ ಆಯುಕ್ತರಾದ ಶಿವಾನಂದ ಕಾಪಶಿಹಾಗೂ ನಗರ ಮತ್ತು ಗ್ರಾಮಾಂತರ ಯೋಜನಾ ಆಯುಕ್ತರಿಗೆ ಮನವಿ ಸಲ್ಲಿಸಿದರು. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒಂದು ಎಕರೆ ಒಳಗಿನ ಜಮೀನುಗಳಿಗೆ ಅನುಮೋದನೆ ನೀಡುವ ಪ್ರಕರಣಗಳಲ್ಲಿ ತಾಂತ್ರಿಕ ಅನುಮೋದನೆ ನೀಡಲು ಈ ಹಿಂದೆ ಗ್ರಾಮ ಪಂಚಾಯಿತಿಗಳಲ್ಲಿಯೇ ಅವಕಾಶವಿತ್ತು. ಆದರೆ 2024ರ ಏಪ್ರಿಲ್ 1ರಿಂದ ಈ ಅವಕಾಶವನ್ನು ನಗರ ಮತ್ತು...
ಬೆಳಾಲು ಮುಖ್ಯ ರಸ್ತೆಯಲ್ಲಿ ಕಾಡಾನೆ ಪ್ರತ್ಯಕ್ಷ; ಬೈಕ್ ಸವಾರ ಅಪಾಯದಿಂದ ಪಾರು, ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ
ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಬಳಿ ಗುರುವಾರ ರಾತ್ರಿ ಕಾಡಾನೆಯೊಂದು ರಸ್ತೆ ಮಧ್ಯೆ ಪ್ರತ್ಯಕ್ಷವಾಗಿ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ. ಸೆ. 3ರಂದು ರಾತ್ರಿ ಸುಮಾರು 10.30ರ ವೇಳೆಗೆ ಉಜಿರೆ-ಬೆಳಾಲು-ಬಂದಾರು ಮುಖ್ಯರಸ್ತೆಯಲ್ಲಿ ಬೈಕ್ ನಲ್ಲಿ ಸಂಚರಿಸುತ್ತಿದ್ದ ಸವಾರನಿಗೆ ಮಿನಂದೇಲು ಗ್ರಾಮದ ಡಿ.ಪಿ. ಸ್ಪೋರ್ಟ್ಸ್ ಕ್ಲಬ್ ಮೈದಾನದ ಪಕ್ಕದಲ್ಲಿರುವ ಬಸ್ ನಿಲ್ದಾಣದ ಸಮೀಪ ಏಕಾಏಕಿ ಕಾಡಾನೆ ಎದುರಾಗಿದೆ. ರಸ್ತೆ ಮಧ್ಯದಲ್ಲೇ ಆನೆ ಕಾಣಿಸಿಕೊಂಡಿದ್ದರಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಆದರೆ ಬೈಕ್ ಸವಾರ ಯಾವುದೇ ಅಪಾಯಕ್ಕೆ ಸಿಲುಕದೆ ಸುರಕ್ಷಿತವಾಗಿ ಪಾರಾಗಿದ್ದಾರೆ ಎಂದು...
ಚಾರ್ಮಾಡಿ ಲಾರಿ ಬೈಕ್ ನಡುವೆಅಪಘಾತ ಬೈಕ್ ಸವಾರ ಮೃತ್ಯು
ಬೆಳ್ತಂಗಡಿ; ಚಾರ್ಮಾಡಿ ಸಮೀಪ ಚಿಬಿದ್ರೆಯಲ್ಲಿ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಸಂಭವಿಸಿದೆ.ಮೃತ ವ್ಯಕ್ತಿ ಚಾರ್ಮಾಡಿ ಮುಗುಳಿದಡ್ಡ ನಿವಾಸಿ ದಯಾನಂದ ಗೌಡ (45) ಎಂಬವರಾಗಿದ್ದಾರೆ.ಸೆ 3 ರಂದು ರಾತ್ರಿಯ ವೇಳ ಅಪಘಾತ ಸಂಭವಿಸಿದೆ ತರಕಾರಿ ತುಂಬಿದ ಈಚರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದ್ದು ಗಂಭೀರವಾಗಿ ಗಾಯಗೊಂಡ ದಯಾನಂದ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿಗಳು ತಿಳಿದು ಬರಬೇಕಾಗಿದೆ.
ಇಸ್ರೋದಿಂದ ಭಾರತದ ಮೊದಲ ಭೂಸಮಕಾಲಿಕ ಇಮೇಜಿಂಗ್ ಉಪಗ್ರಹದ ಯಶಸ್ವಿ ಉಡಾವಣೆ
ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಶುಕ್ರವಾರ ಮುಂಜಾನೆ ಜಿಎಸ್‌ಎಲ್ವಿ-ಎಫ್17 ರಾಕೆಟ್ ಮೂಲಕ ಭೂಸಮಕಾಲಿಕ ಕಕ್ಷೆಯಲ್ಲಿ ಕಾರ್ಯನಿರ್ವಹಿಸುವ ಮೊದಲ ಇಮೇಜಿಂಗ್ ಉಪಗ್ರಹ EOS-05 ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. 51.7 ಮೀಟರ್ ಎತ್ತರ ಹಾಗೂ 420.5 ಟನ್ ತೂಕದ ಮೂರು ಹಂತಗಳ ಈ ರಾಕೆಟ್, ಶ್ರೀಹರಿಕೋಟಾದ ಎರಡನೇ ಉಡಾವಣಾ ಕೇಂದ್ರದಿಂದ ಮುಂಜಾನೆ 2.55ಕ್ಕೆ ಗಗನಕ್ಕೆ ಚಿಮ್ಮಿತು. ಸುಮಾರು 2,367 ಕೆಜಿ ತೂಕದ ಈ ಭೂ ವೀಕ್ಷಣಾ ಉಪಗ್ರಹವನ್ನು ನಿಗದಿತ ಜಿಯೋಸಿಂಕ್ರೋನಸ್ ಟ್ರಾನ್ಸರ್ ಕಕ್ಷೆಗೆ ಯಶಸ್ವಿಯಾಗಿ ಸೇರಿಸಿತುಇದು ಜಿಎಸ್ಎಲ್‌ವಿ ರಾಕೆಟ್ ಸರಣಿಯ 19ನೇ ಹಾರಾಟವಾಗಿದೆ. ಜಿಎಸ್‌ಎಲ್ವಿ-ಎಫ್17...
ಧರ್ಮಸ್ಥಳ; ಹೆದ್ದಾರಿ ಬದಿ ಕಾಡಾನೆ ಪ್ರತ್ಯಕ್ಷ
ಬೆಳ್ತಂಗಡಿ: ಧರ್ಮಸ್ಥಳ- ಕೊಕ್ಕಡ ರಸ್ತೆಯ ಧರ್ಮಸ್ಥಳ ಸಮೀಪದ ಕಲ್ಲೇರಿ ಪರಿಸರದ ಪುದುವೆಟ್ಟು ಕ್ರಾಸ್ ಬಳಿ ಗುರುವಾರ ರಾತ್ರಿ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ.ಗುರುವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಕಾಡಾನೆ ಹೆದ್ದಾರಿ ಬದಿಯಲ್ಲಿ ಕಾಣಿಸಿಕೊಂಡಿದೆ. ರಸ್ತೆಯ ಸಮೀಪವೇ ಕಾಡಾನೆ ಸಂಚರಿಸುತ್ತಿರುವುದನ್ನು ಗಮನಿಸಿದ ವಾಹನ ಸವಾರರು ಕೆಲಕಾಲ ಆತಂಕಗೊಂಡಿದ್ದಾರೆ. ಕಾಡಾನೆ ರಸ್ತೆಯ ಬದಿಯಲ್ಲಿ ಕಾಣಿಸಿಕೊಂಡಿರುವ ದೃಶ್ಯವನ್ನು ಕೆಲವರು ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.ಈ ಭಾಗದಲ್ಲಿ ಕಾಡಾನೆಗಳ ಸಂಚಾರ ಆಗಾಗ ಕಂಡುಬರುತ್ತಿದ್ದು, ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು...
ಬೆಳ್ತಂಗಡಿ – ಗುರುವಾಯನಕೆರೆ ಭಜನಾ ಪರಿಷತ್ತಿನ ಸಭೆ; ಭಜನೆಯಿಂದ ಸಂಸ್ಕಾರಯುತ ಬದುಕು ನಿರ್ಮಾಣ ಮಂಜುನಾಥ್ ಶೆಟ್ಟಿ
ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಬೆಳ್ತಂಗಡಿ–ಗುರುವಾಯನಕೆರೆ ಭಜನಾ ಪರಿಷತ್ತಿನ ಸಭೆಯು ಸೆ. 3ರಂದು ಬೆಳ್ತಂಗಡಿಯ ಶ್ರೀ ಮಂಜುನಾಥೇಶ್ವರ ಕಲಾಭವನದಲ್ಲಿ ನಡೆಯಿತು. ಬೆಳ್ತಂಗಡಿ ತಾಲೂಕು ಭಜನಾ ಪರಿಷತ್ತಿನ ಸ್ಥಾಪಕ ಅಧ್ಯಕ್ಷರಾದ ಮಂಜುನಾಥ್ ಶೆಟ್ಟಿ ಅವರು ಕಾರ್ಯಕ್ರಮದಲ್ಲಿ ಮಾತನಾಡಿ, “ಉತ್ತಮ ಸಂಸ್ಕಾರಕ್ಕೆ ಭಜನೆಯೇ ಮೂಲ” ಎಂದು ಹೇಳಿದರು.ಶ್ರೀ ಕ್ಷೇತ್ರ ಧರ್ಮಸ್ಥಳದ ಸಂಪೂರ್ಣ ಸಹಕಾರ ಮತ್ತು ಪೂಜ್ಯರ ಮಾರ್ಗದರ್ಶನದೊಂದಿಗೆ ಗ್ರಾಮ ಗ್ರಾಮಗಳಲ್ಲಿ,ಮನೆ ಮನೆಗಳಲ್ಲಿ ಭಜನೆಯ ಮೂಲಕ ಸಂಸ್ಕಾರವನ್ನು ಬೆಳೆಸಿ ಪ್ರತಿಯೊಬ್ಬರೂ ಸಂಸ್ಕಾರಯುತ ಬದುಕನ್ನು ಕಟ್ಟಿಕೊಳ್ಳಬೇಕು...
ನಾರಾವಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗೆ ರೂ.3ಕೋಟಿ25 ಲಕ್ಷ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜ
ಬೆಳ್ತಂಗಡಿ: ಸೆ.03. ತಾಲೂಕಿನ ನಾರಾವಿಯ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ಮೂಲಸೌಕರ್ಯ ಅಭಿವೃದ್ಧಿಗೆ DA-JGUA ಯೋಜನೆಯಡಿ ಒಟ್ಟು ರೂ.3 ಕೋಟಿ 25 ಲಕ್ಷ ಅನುದಾನ ಮಂಜೂರಾಗಿದೆ ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ. ಇದೇ ಶಾಲಾ ಆವರಣದಲ್ಲಿ ಈಗಾಗಲೇ ವಿದ್ಯಾರ್ಥಿಗಳ ವಸತಿ ಸೌಲಭ್ಯವನ್ನು ಹೆಚ್ಚಿಸುವ ಉದ್ದೇಶದಿಂದ ರೂ.2.00 ಕೋಟಿ ವೆಚ್ಚದಲ್ಲಿ ವಿದ್ಯಾರ್ಥಿ ವಸತಿ ನಿಲಯ ನಿರ್ಮಾಣಕ್ಕೆ ಅನುದಾನ ಮಂಜೂರಾಗಿದ್ದು, ನಿರ್ಮಿತಿ ಕೇಂದ್ರದ ಮೂಲಕ ಕಾಮಗಾರಿಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಪ್ರಸ್ತುತ ವಿದ್ಯಾರ್ಥಿಗಳ ಶೈಕ್ಷಣಿಕ ಸೌಲಭ್ಯವನ್ನು ಇನ್ನಷ್ಟು ಉತ್ತಮಗೊಳಿಸುವ ಉದ್ದೇಶದಿಂದ ಶಾಲೆಯಲ್ಲಿ 7 ನೂತನ ತರಗತಿ ಕೊಠಡಿಗಳ...
ಬೆಳ್ತಂಗಡಿ ನಗರ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ನವೀನ್ ಗೌಡ ನೇಮಕ
ಬೆಳ್ತಂಗಡಿ: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಹಾಗೂ ರಾಜ್ಯದಾದ್ಯಂತ ಯುವ ಕಾಂಗ್ರೆಸ್ ಸಂಘಟನೆಯನ್ನು ಸಕ್ರಿಯಗೊಳಿಸುವ ಉದ್ದೇಶದಿಂದ ಬೆಳ್ತಂಗಡಿ ನಗರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಸವಣಾಲಿನ ನವೀನ್ ಗೌಡ ಅವರನ್ನು ನೇಮಕ ಮಾಡಲಾಗಿದೆ. ಅಖಿಲ ಭಾರತ ಯುವ ಕಾಂಗ್ರೆಸ್ ಅಧ್ಯಕ್ಷರಾದ ಉದಯ್ ಭಾನು ಚಿಬ್ ಅವರ ನಿರ್ದೇಶನದ ಮೇರೆಗೆ ಹಾಗೂ ಅಖಿಲ ಭಾರತ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ನಿಗಮ್ ಭಂಡಾರಿ ಅವರ ಅನುಮೋದನೆಯೊಂದಿಗೆ ಈ ನೇಮಕಾತಿ ನಡೆದಿದೆ. ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್...
ಮಂಗಳೂರು: ಕೇರಳಂ ರಾಜ್ಯ ಲಾಟರಿಯಲ್ಲಿ ಬಹುಮಾನ ಬಂದಿದೆ ಎಂದು ನಂಬಿಸಿ 3 ಲಕ್ಷ ವಂಚನೆ
ಮಂಗಳೂರು: ಕೇರಳಂ ರಾಜ್ಯದ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನ ಬಂದಿದೆ. ಅದನ್ನು ಪಡೆದುಕೊಳ್ಳಲು ತೆರಿಗೆ ಹಣ ಕಟ್ಟಬೇಕು ಎಂದು ನಂಬಿಸಿ ಅಪರಿಚಿತ ವ್ಯಕ್ತಿಗಳಿಂದ ಬಂದ ಕರೆಯನ್ನು ನಂಬಿ 3 ಲಕ್ಷದ 81 ಸಾವಿರ ರೂ.ಹಣ ವರ್ಗಾಯಿಸಿ ವಂಚನೆಗೆ ಒಳಗಾದ ವ್ಯಕ್ತಿ ಈ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 42 ವರ್ಷದ ದೂರುದಾರ ವ್ಯಕ್ತಿಗೆ ಆ.14ರಂದು ಅಪರಿಚಿತ ಸಂಖ್ಯೆಯಿಂದ ಕರೆ ಬಂದಿದೆ. ಕರೆ ಮಾಡಿದ ವ್ಯಕ್ತಿ ಕೇರಳಂ ರಾಜ್ಯದ ಲಾಟರಿಯಲ್ಲಿ 8 ಲಕ್ಷ ರೂ.ಬಹುಮಾನ ಬಂದಿದೆ ಎಂದು ಹೇಳಿದ್ದಾರೆ. ಹಣವನ್ನು ಪಡೆಯಲು...















