ಉಜಿರೆಯ ಬ್ರಹ್ಮ ಕಲಶೋತ್ಸವಕ್ಕೆ ಹೋದ ಅಪ್ರಾಪ್ತ ಬಾಲಕನ ಮೇಲೆ ನೈತಿಕ ಪೊಲೀಸ್ ಗಿರಿ ಪ್ರಕರಣ ದಾಖಲು

0

ಬೆಳ್ತಂಗಡಿ : ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಗೆಳೆಯರೊಂದಿಗೆ ಬಂದಿದ್ದ ಅಪ್ರಾಪ್ತ 17 ವಯಸ್ಸಿನ ಮುಸ್ಲಿಂ ಧರ್ಮದ ಬಾಲಕನ ಮೇಲೆ ಬಜರಂಗದಳದ ಕಾರ್ಯಕರ್ತರ ತಂಡವೊಂದು ಅಮಾನುಷವಾಗಿ ಹಲ್ಲೆ ನಡೆಸಿ ಅಪಹರಿಸಿ ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಬಗ್ಗೆ ಬಾಲಕನ ತಂದೆ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬೆಳ್ತಂಗಡಿ ತಾಲೂಕಿನ ಉಜಿರೆಯ ಖಾಸಗಿ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿರುವ ಬಾಲಕ ಮಾ.11 ರಂದು ತನ್ನ ಸ್ನೇಹಿತರೊಂದಿಗೆ ಉಜಿರೆ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಹೋಗಿದ್ದಾನೆ ರಾತ್ರಿ 8.30 ರ ಸುಮಾರಿಗೆ...

ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ವರದಿ ಸಲ್ಲಿಸುವಂತೆ ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ

0

ಬೆಂಗಳೂರು : ಧರ್ಮಸ್ಥಳದಲ್ಲಿ ಮೂರು ದಶಕಗಳ ಅವಧಿಯಲ್ಲಿ ಸಂಭವಿಸಿವೆ ಎನ್ನಲಾದ 74 ಅಸಹಜ ಸಾವು ಪ್ರಕರಣಗಳಿಗೆ ಸಂಬಂಧಿಸಿದಂತೆ ಏನು ಕ್ರಮ ಕೈಗೊಳ್ಳಲಾಗಿದೆ ಎಂಬ ಕುರಿತು ವರದಿ ಸಲ್ಲಿಸುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.ಅಸಹಜ ಸಾವುಗಳ ಸಂಬಂಧ ಪ್ರತ್ಯೇಕ ಎಫ್‌ಐಆ‌ರ್ ದಾಖಲಿಸಿ ತನಿಖೆ ನಡೆಸಲು ಎಸ್‌ಐಟಿಗೆ ನಿರ್ದೇಶಿಸುವಂತೆ ಕೋರಿ ಸೌಜನ್ಯಾ ತಾಯಿ ಕುಸುಮವತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಬ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.ಅರ್ಜಿ ವಿಚಾರಣೆ ಆರಂಭವಾಗುತ್ತಿದ್ದಂತೆ ಅಡ್ವಕೇಟ್ ಜನರಲ್...

ಚಿತ್ಪಾವನ ಬ್ರಾಹ್ಮಣರ ಸಂಘದ ಮಹಿಳಾ ಘಟಕದ ಉದ್ಘಾಟನೆ

0

ಬೆಳ್ತಂಗಡಿ: ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘದ ಮಹಿಳಾ ಘಟಕದ ಉದ್ಘಾಟನಾ ಸಮಾರಂಭ ಮಂಗಳವಾರ ಮುಂಡಾಜೆಯ ಶ್ರೀ ಪರಶುರಾಮ ದೇವಸ್ಥಾನದ ಸಭಾ ಭವನದಲ್ಲಿ ಜರಗಿತು.ನಿಡ್ಲೆಯ ಉದ್ಯಮಿ ಲಲಿತಾ ಲಕ್ಷ್ಮೀಶ ರಾವ್ ಕಾರ್ಯಕ್ರಮ ಉದ್ಘಾಟಿಸಿ ಸಾಧನೆಗೆ ಪ್ರಯತ್ನದ ಜತೆ ಛಲವು ಇರಬೇಕು. ಹಿರಿಯರನ್ನು ಗೌರವಯುತವಾಗಿ ಕಾಣುವುದರೊಂದಿಗೆ ಅವರ ಸಲಹೆ ಸೂಚನೆಗಳೊಂದಿಗೆ ಮುಂದುವರಿದರೆ ಉನ್ನತಿ ಗಳಿಸಲು ಸಾಧ್ಯ ಎಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಚಿತ್ಪಾವನ ಬ್ರಾಹ್ಮಣ ಸಂಘದ ಅಧ್ಯಕ್ಷ ತ್ರಿವಿಕ್ರಮ ಹೆಬ್ಬಾರ್ ಮಾತನ್ನಡಿ ಮಹಿಳಾ ವಿಭಾಗ ಸ್ಥಾಪನೆಯಿಂದ ಸಂಘದ ಬಲ ಹೆಚ್ಚಿದೆ. ಮಹಿಳೆಯರ ಸಾಧನೆಗಳಿಗೆ ಉತ್ತಮ ವೇದಿಕೆ ನಿರ್ಮಾಣವಾಗಿದೆ...

ಬೆಳ್ತಂಗಡಿ; ನೇತ್ರಾವತಿ ನದಿಯ ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಸಾವು

0

ಬೆಳ್ತಂಗಡಿ: ಮುಂಡಾಜೆ ಗ್ರಾಮದ ಸಮೀಪದ ಅರಸಮಜಲು ಎಂಬಲ್ಲಿ ನೇತ್ರಾವಾತಿ ನದಿಯಲ್ಲಿ ಈಜಲು ಹೋಗಿದ್ದ ಪಿಯುಸಿ ವಿದ್ಯಾರ್ಥಿ ಮುಳುಗಿ ಸಾವನ್ನಪ್ಪಿದ ಘಟನೆ ಮಾ.18ರಂದು ನಡೆದಿದೆ. ಮೃತಪಟ್ಟ ಬಾಲಕ ನಿಶಾಂತ್ (18 ) ಎಂದು ಗುರುತಿಸಲಾಗಿ, ಈತ ದ್ವಿತೀಯ ಪಿಯುಸಿ ಪರೀಕ್ಷೆ ಮುಗಿಸಿದ್ದು ಬುಧವಾರ ಸ್ನೇಹಿತರೊಂದಿಗೆ ನೀರಿನಲ್ಲಿ ಈಜಲು ತೆರಳಿದ್ದ ಸ್ಥಳಕ್ಕೆ ಧರ್ಮಸ್ಥಳ ಠಾಣೆಯ ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

ಮಾ21 ವೇಣೂರು ಸೂರ್ಯ- ಚಂದ್ರ ಜೋಡುಕರೆ ಕಂಬಳ; ರಕ್ಷಿತ್ ಶಿವರಾಂ

0

ಬೆಳ್ತಂಗಡಿ: ಮಾರ್ಚ್ 21ರ ಶನಿವಾರ ನಡೆಯಲಿರುವ 33ನೇ ವರ್ಷದ ಐತಿಹಾಸಿಕ ವೇಣೂರು ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳದಲ್ಲಿ 130 ಜೊತೆ ಕೋಣಗಳು ನೋಂದಾವಣೆಯಾಗಿದ್ದು ಇನ್ನೂ ಹೆಚ್ಚು ಕೋಣಗಳು ಭಾಗವಹಿಸುವ ನಿರೀಕ್ಷೆಯಿದೆ. ಎಂದು ಕಂಬಳ ಸಮಿತಿಯ ಗೌರವಾಧ್ಯಕ್ಷರು ಹಾಗೂ ಬೆಳ್ತಂಗಡಿಯ ಬೆಸ್ಟ್ ಫೌಂಡೇಶನ್ ಅಧ್ಯಕ್ಷರಾದ ರಕ್ಷಿತ್ ಶಿವರಾಂ ಹೇಳಿದರು. ಅವರು ಮಾರ್ಚ್ 18ರಂದು ಬೆಳ್ತಂಗಡಿಯ ಬ್ಲಾಕ್ ಕಾಂಗ್ರೆಸ್ ಸಮಿತಿ ಕಛೇರಿಯ ಸಭಾಂಗಣದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ವೇಣೂರು ಪೆರ್ಮುಡ ಕಂಬಳದ ಬಗ್ಗೆ ವಿವರಣೆ ನೀಡುತ್ತಿದ್ದರು.ದಕ್ಷಿಣ ಕನ್ನಡ ಜಿಲ್ಲೆಯ ಐತಿಹಾಸಿಕ‌ ಕಂಬಳಗಳಲ್ಲಿ ಒಂದಾದ ವೇಣೂರು ಪೆರ್ಮುಡ ಸೂರ್ಯ-ಚಂದ್ರ...

ಗಡಿಪಾರು ವಿವಾದ ಮಹೇಶ್ ಶೆಟ್ಟಿ ತಿಮರೋಡಿ ಮೇಲ್ಮನವಿ ವಜಾ ಗೊಳಿಸಿದ ಹೈಕೋರ್ಟ್

0

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿದ್ದ ಕ್ರಮ ಮರುಪರಿಶೀಲಿಸಿ ಹೊಸದಾಗಿ ಆದೇಶ ನೀಡಲು ಪುತ್ತೂರು ಉಪ ವಿಭಾಗಾಧಿಕಾರಿಯವರಿಗೆ ನಿರ್ದೆಶಿಸಿದ್ದ ಹೈಕೋರ್ಟ್ ಏಕ ಸದಸ್ಯ ನ್ಯಾಯಪೀಠದ ಕ್ರಮವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದೆ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ 2026ರ ಜನವರಿ 31ರಂದು ಹೊರಡಿಸಿದ್ದ ಆದೇಶ ರದ್ದು ಕೋರಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಮೇಲ್ಮನವಿಯನ್ನು ಮಂಗಳವಾರ ಮಾ17 ರಂದು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ, ಏಕಸದಸ್ಯ...

ಬೆಳ್ತಂಗಡಿ: ಗುರುವಾಯನ ‘ಕೆರೆ’ಯಲ್ಲಿ ಮೀನುಗಳ ಅಸಹಜ ಸಾವು ಅಧಿಕಾರಿಗಳಿಂದ ಪರಿಶೀಲನೆ

0

ಬೆಳ್ತಂಗಡಿ : ಕುವೆಟ್ಟು ಗ್ರಾಮದ ಗುರುವಾಯನ ಕೆರೆಯಲ್ಲಿರುವ 14.72 ಎಕ್ರೆ ವ್ಯಾಪ್ತಿಯಲ್ಲಿ ವ್ಯಾಪಿಸಿರುವ ವಿಶಾಲವಾದ ಕೆರೆಯಲ್ಲಿ ಎರಡು ದಿನಗಳಿಂದ ಮೀನುಗಳು ಸತ್ತು ತೇಲುತ್ತಿದ್ದು ಸ್ಥಳಕ್ಕೆ ವಿವಿಧ ಇಲಾಖಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ನೀರಿನ ಮಾದರಿಗಳನ್ನು ಸಂಗ್ರಹಿಸಿದ್ದಾರೆ.ಕೆರೆಯ ಎರಡೂ ಬದಿಗಳಲ್ಲಿ ಮೀನುಗಳು ಸತ್ತು ತೇಲುತ್ತಿರುವುದನ್ನು ಗಮನಿಸಿದ ಸ್ಥಳೀಯರು ಈ ಬಗ್ಗೆ ಗ್ರಾಮ ಪಂಚಾಯತಿಗೆ ಮಾಹಿತಿ ನೀಡಿದ್ದಾರೆ. ವಿಶಾಲವಾದ ಕೆರೆಗೆ ತ್ಯಜ್ಯಗಳು ಸೇರುತ್ತಿರುವ ಬಗ್ಗೆ ಸ್ಥಳೀಯರು ಆರೋಪ ಮಾಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಸ್ಥಳಕ್ಕೆ ಮಾಲಿನ್ಯ ನಿಯಂತ್ರಣ ಮಂಡಳಿಯಬಾಧಿಕಾರಿಗಳು ಭೇಟಿ ನೀಡಿ ನೀರಿನ ಮಾದರಿಗಳನ್ನು...

ಬೆಳ್ತಂಗಡಿ; ವಿದ್ಯುತ್ ಕಂಬ ಮೇಲೆತ್ತುವ ವೇಳೆ ತಲೆಗೆ ಕಂಬ ಬಿದ್ದು ವ್ಯಕ್ತಿ ಸಾವು

0

ಬೆಳ್ತಂಗಡಿ: ವಿದ್ಯುತ್ ಕಂಬವನ್ನು ಮೇಲಕ್ಕೆ ಎತ್ತುವ ವೇಳೆ ಕಂಬವು ತಲೆಗೆ ಬಡಿದು ಕಾರ್ಮಿಕನೊಬ್ಬ ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ಸೋಮವಾರ ಸಂಜೆ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಕೊಕ್ಕಡ ಗ್ರಾಮದ ಮಹಾವೀರ ಕಾಲೋನಿ ನಿವಾಸಿ ಶಿವಪ್ಪ(40) ಎಂದು ಗುರುತಿಸಲಾಗಿದೆ.ಇವರು ಪುರುಷೋತ್ತಮ ಎಂಬ ಗುತ್ತಿಗೆದಾರರ ಕೆಳಗೆ ಕಳೆದ ಕೆಲವು ವರ್ಷಗಳಿಂದ ಕೂಲಿ ಕಲಸ ಮಾಡುತ್ತಿದ್ದರು. ಸೋಮವಾರ ಇವರು ಕೊಕ್ಕಡ ಶ್ರೀರಾಮ ಭಜನಾಮಂದಿರದ ಬಳಿ ವಿದ್ಯುತ್ ಕಂಬವನ್ನು ಎತ್ತುವ ವೇಳೆ ಯಾವುದೇ ಸುರಕ್ಷತಾ ಪರಿಕರಗಳನ್ನು ಧರಿಸದೆ ಕೆಲಸ ಮಾಡುತ್ತಿದ್ದರು.ಈ ವೇಳೆ ಕಂಬವು ಅವರ ಮೇಲೆ ಬಿದ್ದು...

ಬೆಳ್ತಂಗಡಿ : ಶ್ರೀರಾಮ ಕ್ರೆಡಿಟ್ ಕೋ ಆಪರೇಟ್ ಸೊಸೈಟಿಯಲ್ಲಿ ವಂಚನೆ ಪ್ರಕರಣ ತನಿಖೆ ಆರಂಭಿಸಿದ ಸಿಐಡಿ ತಂಡ

0

ಬೆಳ್ತಂಗಡಿ : ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ(ರಿ) ಯಲ್ಲಿ ಗ್ರಾಹಕರು ಠೇವಣಿ ಇಟ್ಟಿದ್ದ ಸುಮಾರು 40 ಕೋಟಿ ರೂಪಾಯಿ ಹಣವನ್ನು ವಾಪಾಸ್ ನೀಡದೆ (ವಂಚನೆ) ಹಗರಣ ಮಾಡಿರುವ ಪ್ರಕರಣ ಸಂಬಂಧ ಮಾ.17 ರಂದು ಬೆಳಗ್ಗೆ ಸೊಸೈಟಿಗೆ ಬೆಂಗಳೂರಿನಿಂದ ಸಿಐಡಿ ತನಿಖಾ ತಂಡ ಆಗಮಿಸಿ ತನಿಖೆ ಆರಂಭಿಸಿದೆ. ಪ್ರಕರಣದ ವಿವರ: ಬೆಳ್ತಂಗಡಿ ನಗರದ ಜ್ಯೂನಿಯರ್ ಕಾಲೇಜ್ ರಸ್ತೆಯಲ್ಲಿರುವ ರಾಮನಗರದ ವಿ.ಆರ್.ನಾಯಕ್ ಕಾಂಪೌಂಡ್ ನಲ್ಲಿ ಸುಮಾರು 25 ವರ್ಷಗಳಿಂದ ಏಕೈಕ ಬ್ರಾಂಚ್ ಆಗಿ ಕಾರ್ಯಾಚರಿಸುತ್ತಿರುವ ಶ್ರೀ ರಾಮ ಕ್ರೆಡಿಟ್‌ ಕೋ ಆಪರೇಟಿವ್ ಸೊಸೈಟಿ(ರಿ) ನಲ್ಲಿ...

ಗುರುವಾಯನ’ಕೆರೆ’ಯಲ್ಲಿ ಸತ್ತು ತೇಲುತ್ತಿರುವ ಮೀನುಗಳು: ತನಿಖೆ ನಡೆಸುವಂತೆ ವ್ಯಾಪಾರಿಯಿಂದ ದೂರು

0

ಬೆಳ್ತಂಗಡಿ : ಪ್ರಕೃತಿ ರಮಣೀಯ ಗುರುವಾಯನ'ಕೆರೆ'ಯಲ್ಲಿ ಎರಡು ದುನಗಳಿಂದ ಮತ್ತೆ ಮೀನುಗಳು ಸತ್ತು ತೇಲುತ್ತಿದ್ದು ಮೂರು ವರ್ಷಗಳಲ್ಲಿ ಮೀನು ಹಿಡಿಯಲು ಏಲಂನಲ್ಲಿ ಪಡೆದುಕೊಂಡ ವ್ಯಾಪಾರಿ ಇದೀಗ ಮೀನುಗಳ ಸಾವಿಗೆ ಕಾರಣವೇನೆಂಬುದನ್ನು ತನಿಖೆ ಮಾಡಿಸುವಂತೆ ಸ್ಥಳೀಯ ಗ್ರಾಮಪಂಚಾಯತ್ ಆಡಳಿತಕ್ಕೆ ದೂರು ನೀಡಿದ್ದಾರೆ.ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾ.ಪಂ. ಆಡಳಿತಕ್ಕೊಳಪಟ್ಟಿರುವ ಗುರುವಾಯನಕೆರೆಯ ವಿಶಾಲ ಕೆರೆಯಲ್ಲಿ ಗ್ರಾ.ಪಂ. ಆಡಳಿತದ ವತಿಯಿಂದ ಮೀನು ಕೃಷಿ ಮಾಡುತ್ತಿದ್ದು ಇದನ್ನು ಇದೇ ಗ್ರಾಮದ ಮೀನು ವ್ಯಾಪಾರಿ ರಿಯಾದ್ ಎಂಬವರು ಗ್ರಾ.ಪಂ. ಏಲಂನಲ್ಲಿ ಭಾಗವಹಿಸಿ ಮೂರುವರ್ಷಗಳ ಖಾಯಂ ಅವಧಿಗೆ6 ಲಕ್ಷ ರೂಪಾಯಿಗೆ ಪಡೆದುಕೊಂಡಿದ್ದಾರೆ.ಆದರೆ ಮಂಗಳವಾರ...