ಧರ್ಮಸ್ಥಳ, ಉಜಿರೆ ಹಲ್ಲೆ ಪ್ರಕರಣ ಒಟ್ಟು ಏಳು ಪ್ರಕರಣಗಳು ದಾಖಲು; ಎಸ್.ಪಿ ಮಾಹಿತಿ

0

ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿ ಯ ಪಾಂಗಲ ಕ್ರಾಸ್ ಎಮಬಲ್ಲಿ ದಿನಾಂಕ 06.08.2025 ರಂದು ನಡೆದ ಅಹಿತಕರ ಘಟಣೆಗೆ ಸಂಬಂಧಿಸಿದಂತೆ ಧರ್ಮಸ್ಥಳ ಠಾಣೆಯಲ್ಲಿ ನಾಲ್ಕು ಪ್ರಕರಣಗಳು ಹಾಗೂ ಬೆಳ್ತಂಗಡಿ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿರುತ್ತದೆ. ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಮಾಹಿತಿ ನೀಡಿದ್ದಾರೆ. ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಗಳ ವಿವರ ಒಂದನೆಯ ಪ್ರಕರಣದಲ್ಲಿ ಪ್ರಕರಣದ ಪಿರ್ಯಾದಿದಾರರಾದ ಬಂಟ್ವಾಳ ನಿವಾಸಿ ಅಜಯ್ ಎಂಬವರ ದೂರಿನಂತೆ, ಸದ್ರಿಯವರು ಕುಡ್ಲ ರಾಂಪೇಜ್ ಎಂಬ ಯುಟ್ಯೂಬ್ ಚಾನೆಲ್ ನ ಮಾಲಕರಾಗಿದ್ದು, ದಿನಾಂಕ 06.08.2025 ರಂದು ಸಂಜೆ, ಧರ್ಮಸ್ಥಳ ಪಾಂಗಳ ಕ್ರಾಸ್ ಎಂಬಲ್ಲಿ,...

ಧರ್ಮಸ್ಥಳ, ಉಜಿರೆ ಹಲ್ಲೆ ಹಾಗೂ ಘರ್ಷಣೆ; ಹಲವು ಪ್ರಕರಣಗಳು ದಾಖಲು; ವಿಡಿಯೋಗಳನ್ನು ಪರಿಶೀಲಿಸುತ್ತಿರುವ ಪೊಲೀಸರು

0

ಬೆಳ್ತಂಗಡಿ: ಧರ್ಮಸ್ಥಳ ಹಾಗೂ ಉಜಿರೆಯಲ್ಲಿ ನಡೆದ ಘಟನೆಗಳಿಗರ ಸಂಭಧಿಸಿದಂತೆ ಬೆಳ್ತಂಗಡಿ ಹಾಗೂ ಧರ್ಮಸ್ಥಳ ಠಾಣೆಯಲ್ಲಿ ಹಲವು ಪ್ರಕರಣಗಳು ದಾಖಲಾಗಿದೆ. ಧರ್ಮಸ್ಥಳ ಪಾಂಗಳ ರಸ್ತೆಯಲ್ಲಿ ಯುಟ್ಯೂಬರ್ ಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಠಾಣೆಯಲ್ಲಿ ಮೊದಲ ಪ್ರಕರಣ ದಾಖಲಿಸಲಾಗಿದೆಅದೇರೀತಿ ಪಾಂಗಳ ರಸ್ತೆಯ ರಸ್ತೆಯ ಬಳಿ ಅಕ್ರಮ ಗುಂಪು ಸೇರಿ ಎರಡು ವಾಹನಗಳನ್ನು ಜಖಂಗೊಳಿಸಿದ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಎರಡನೆಯ ಪ್ರಕರಣವನ್ನು ದಾಖಲಿಸಲಾಗಿದೆ. ಈ ಎರಡೂ ಪ್ರಕರಣಗಳಲ್ಲಿ ಪೊಲೀಸರು ವೀಡಿಯೋ ದಾಖಲೆಗಳನ್ನು ಮುಂದಿಟ್ಟುಕೊಂಡು ಆರೋಪಿಗಳನ್ನು ಗುರುತಿಸುವ ಕಾರ್ಯ ಮಾಡುತ್ತಿರುವುದಾಗಿ ತಿಳಿದು ಬಂದಿದೆ. ಹಲ್ಲೆ ಘಟನೆಯ...

ಮೃತದೇಹ ಹೂತು ಹಾಕಿದ ಪ್ರಕರಣ; ಧರ್ಮಸ್ಥಳ ಗ್ರಾ.ಪಂ ನಿಂದ ದಾಖಲೆಗಳನ್ನು ಪಡೆದುಕೊಂಡ ಎಸ್.ಐ.ಟಿ ತಂಡ

0

ಬೆಳ್ತಂಗಡಿ; ಹಲವಾರು ಮೃತದೇಹಗಳನ್ನು ಹೂತು ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಗ್ರಾಮ ಪಂಚಾಯತ್ ಗೆ ಬಂದ SIT ಯ ಒಂದು ತಂಡ ಹಲವಾರು ದಾಖಲೆಗಳನ್ನು ಪಡೆದುಕೊಂಡಿರುವುದಾಗಿ ತಿಳಿದು 1995 ರಿಂದ 2014 ರವರೆಗೆ ಕರ್ತವ್ಯ ಮಾಡಿದ ಪಿಡಿಒ ಗಳು, ಇತರ ಅಧಿಕಾರಿಗಳ ವಿ.ಎ ಗಳ ಬಗೆಗಿನ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆಎಸ್.ಐ.ಟಿ ಇನ್ಸ್ಪೆಕ್ಟರ್ ಸಂಪತ್ ಆಗಸ್ಟ್ 6 ರಂದು ಬೆಳಗ್ಗೆ ಗ್ರಾಮ ಪಂಚಾಯತಿಗೆ ಆಗಮಿಸಿ ದಾಖಲೆ ವಶಕ್ಕೆ ಪಡೆದುಕೊಂಡಿದ್ದಾರೆ.

ಕಕ್ಕಿಂಜೆ ಮೌಲಾನಾ ಆಜಾದ್ ಮಾದರಿ ಆಂಗ್ಲ ಮಾದ್ಯಮ ಶಾಲೆ ಪ್ರಾರಂಭ

0

ಬೆಳ್ತಂಗಡಿ. ರಾಜ್ಯ ಸರ್ಕಾರದ ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೌಲಾನಾ ಆಜಾದ್ ಮಾದರಿ ಶಾಲೆಯನ್ನು ರಾಜ್ಯ ಸರ್ಕಾರ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಕ್ಕಿಂಜೆಗೆ ಮಂಜೂರು ಗೊಳಿಸಿದ್ದು. 2025-26ನೇ ಶೈಕ್ಷಣಿಕ ಸಾಲಿನಪ್ರವೇಶೋತ್ಸವ ಕಾರ್ಯಕ್ರಮ ನಡೆಯಿತು.ನೂತನವಾಗಿ ಪ್ರಾರಂಭವಾದ ಶಾಲೆಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ವತಿಯಿಂದ ಟೇಬಲ್, ಮತ್ತು ಪೀಠೋಪಕರಣಗಳನ್ನು, ಅಧ್ಯಕ್ಷರಾದ ರಕ್ಷಿತ್ ಶಿವರಾಂ ಹಸ್ತಾಂತರಿಸಿ, ಚಾರ್ಮಾಡಿ ಗ್ರಾಮದ ಸುತ್ತಮುತ್ತಲಿನ ಗ್ರಾಮಗಳ ಬಡವರ ಮಕ್ಕಳು ಈ ಶಾಲೆಯಲ್ಲಿ ಉತ್ತಮ ರೀತಿಯ ಆಂಗ್ಲ ಮಾದ್ಯಮ ಶಿಕ್ಷಣ ಪಡೆಯಲಿ ಎಂದು ಶುಭ ಹಾರೈಸಿದರು. ಶಾಲೆಯಲ್ಲಿ ಇರುವ ಮೀಸಲಾತಿ ವಿವರಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಂ,...

ಸಿಯೋನ್ ಆಶ್ರಮ ಟ್ರಸ್ಟ್ (ರಿ.), ಗಂಡಿಬಾಗಿಲು – “ಆಟಿಡೊಂಜಿ ದಿನ” ಸ್ನೇಹಭೋಜನ ಕೂಟ

0

ಬೆಳ್ತಂಗಡಿ; ಸಿಯೋನ್ ಆಶ್ರಮ ಟ್ರಸ್ಟ್ (ರಿ.) ಗಂಡಿಬಾಗಿಲು ಇಲ್ಲಿ ಆ 5 ರಂದು ಆಟಿಡೊಂಜಿ ದಿನ ಸ್ನೇಹಭೋಜನ ಕೂಟವನ್ನು ಸಂಭ್ರಮದಿಂದ ಆಚರಿಸಲಾಯಿತು. ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿಯವರಾದ ಡಾ. ಯು.ಸಿ ಪೌಲೋಸ್ ರವರು ಮತ್ತು ಟ್ರಸ್ಟಿ ಸದಸ್ಯರಾದ ಶ್ರೀ ಮತಿ ಮೇರಿ ಯು ಪಿ ಯವರ ನೇತೃತ್ವದಲ್ಲಿ ಆಶ್ರಮ ನಿವಾಸಿಗಳಿಗಾಗಿ ಆಟಿ ತಿಂಗಳಿನಲ್ಲಿ ಸೇವಿಸುವ ವಿವಿಧ ಆಹಾರ ಪದಾರ್ಥಗಳನ್ನು ತಯಾರಿಸಲಾಯಿತು. ಸ್ನೇಹಭೋಜನ ಕೂಟವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಸಂಸ್ಥೆಯ ವೈದ್ಯಾಧಿಕಾರಿಯವರಾದ  ಡಾ. ಶಿವಾನಂದ ಸ್ವಾಮಿ ಯವರು ಆಟಿ ತಿಂಗಳ ಆಚರಣೆ ಮತ್ತು ಆಟಿ ತಿಂಗಳಿನಲ್ಲಿ...

ನೇತ್ರಾವತಿ ಸ್ನಾನಘಟ್ಟದ ಅರಣ್ಯದಲ್ಲಿ  ಅಸ್ಥಿಪಂಜರ ಪತ್ತೆಯಾದ ಪ್ರಕರಣ; ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

0

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಆಗಸ್ಟ್ 4 ರಂದು ದೂರುದಾರ ಗುರುತು ಮಾಡದ ಜಾಗದಲ್ಲಿ  ಅಸ್ಥಿಪಂಜರ ಪತ್ತೆಯಾದ ಪ್ರಕರಣ ಸಂಬಂಧ ಎಸ್.ಐ.ಟಿ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಅವರು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಆಗಸ್ಟ್ 5 ರಂದು ನೀಡಿದ ದೂರಿನ ಮೇರೆಗೆ ಯುಡಿಆರ್ ಪ್ರಕರಣ ದಾಖಲಿಸಿಕೊಂಡಿದ್ದಾರೆ. SIT ಗೆ ಹಸ್ತಾಂತರ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಗುರುತು ಮಾಡದ ಜಾಗದಲ್ಲಿ ಅಸ್ಥಿಪಂಜರ ಪತ್ತೆಯಾದ ಪ್ರಕರಣವನ್ನು ಧರ್ಮಸ್ಥಳ ಪೊಲೀಸರು ಹೆಚ್ಚಿನ ತನಿಖೆಗಾಗಿ ಎಸ್.ಐ.ಟಿ ಸಂಸ್ಥೆಗೆ ಹಸ್ತಾಂತರ ಮಾಡಲಿದ್ದಾರೆ.

ಧರ್ಮಸ್ಥಳ ಪುದುವೆಟ್ಟು ಕ್ರಾಸ್ ಬಳಿ ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ಕಲ್ಲೆಸೆದ ದುಷ್ಕರ್ಮಿಗಳು

0

ಬೆಳ್ತಂಗಡಿ; ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ದುಷ್ಕರ್ಮಿಗಳು ಧರ್ಮಸ್ಥಳ ಗ್ರಾಮದ ಪುದುವೆಟ್ಟು ಕ್ರಾಸ್ ಬಳಿ ಕಲ್ಲು ಹೊಡೆದು ಬಸ್ಸಿಗೆ ಹಾನಿಯುಂಟುಮಾಡಿದ ಘಟನೆ ಮಂಗಳವಾರ ಸಂಭವಿಸಿದ್ದು ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಈ ಬಗ್ಗೆ ಧರ್ಮಸ್ಥಳ ಡಿಪ್ಪೋದ ಸಂಚಾರ ನಿಯಂತ್ರಕ ಪಿ ದಾವೂದ್ ಎಂಬವರು ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದಾರೆ.ಮಂಗಳವಾರ ಮಧ್ಯಾಹ್ನದ ವೇಳೆ ಕೆ.ಎ 21 ಎಫ್ 0103 ನಂಬರ್ ನ ಬಸ್ಸನ್ನು ಚಾಲಕ ಧರ್ಮಸ್ಥಳ ದಿಂದ ಸುಬ್ರಹ್ಮಣ್ಯದ ಕಡೆಗೆ ಚಲಾಯಿಸುತ್ತಿದ್ದ ವೇಳೆ ಧರ್ಮಸ್ಥಳ ಗ್ರಾಮದ ಪುದುವೆಟ್ಟು ಕ್ರಾಸ್ ಸಮೀಪ ಎದುರಿನಿಂದ...

ಜಯಂತ್ ಟಿ.ದೂರು ಎಸ್.ಐ.ಟಿ ಗೆ ಹಸ್ತಾಂತರ

0

ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದಲ್ಲಿ ಪೊಲೀಸರು ಪ್ರಕರಣ ದಾಖಲಿಸದೆ ಮೃತದೇಹವೊಂದನ್ನು ಹೂತು ಹಾಕಿರುವುದಾಗಿ ಧರ್ಮಸ್ಥಳ ಠಾಣೆಗೆ ನೀಡಿದ್ದ ದೂರರ್ಜಿಯನ್ನು ಇದೀಗ ಕರ್ನಾಟಕ ರಾಜ್ಯ ಡಿಜಿಪಿ&ಐಜಿಪಿ ಅವರ ಆದೇಶದಂತೆ ಮುಂದಿನ ವಿಚಾರಣೆಗಾಗಿ ಎಸ್.ಐ.ಟಿ ತಂಡಕ್ಕೆ ಹಸ್ತಾಂತರಿಸಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಮಾಹಿತಿ ನೀಡಿದ್ದಾರೆ.ಈ ಪ್ರಕರಣದ ಮುಂದಿನ ತನಿಖೆಯನ್ನು ಎಸ್.ಐ.ಟಿ ತಂಡ ನಡೆಸಲಿದೆ.

12ನೆಯ ಸ್ಥಳದಲ್ಲಿಯೂ ಪತ್ತೆಯಾಗದ ಕಳೆಬರ ಕಾರ್ಯಾಚರಣೆ ಅಂತ್ಯ

0

ಬೆಳ್ತಂಗಡಿ; ನೇತ್ರಾವತಿ ಸ್ನಾನಘಟ್ಟದಲ್ಲಿ ನಡೆಯಯತ್ತಿರುವ ಕಳೆಬರಗಳಿಗಾಗಿನ ಹುಡುಕಾಟದಲ್ಲಿ 12ನೆಯ ಸ್ಥಳದಲ್ಲಿಯೂ ಯಾವುದೆ ಕಳೆಬರಗಳು ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆಇಂದು ಮಧ್ಯಾಹ್ನದ ಬಳಿಕ ಇಲ್ಲಿ ಅಗೆಯುವ ಕಾರ್ಯ ನಡೆಸಲಾಗಿತ್ತು ಸುಮಾರು ಒಂದುವರೆ ಗಂಟೆ ನಡೆದ ಕಾರ್ಯಾಚರಣೆಯಲ್ಲಿ ಯಾವಯದೆ ಕುರುಹುಗಳು ಪತ್ತೆಯಾಗಿಲ್ಲ

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ; 11ರಲ್ಲಿಯೂ ಸಿಗದ ಅವಶೇಷಗಳು

0

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಆಗಸ್ಟ್ 5 ರಂದು 11 ನೇ ಗುರುತು ಮಾಡಿದ ಸ್ಥಳದಲ್ಲಿ 11:30 ರಿಂದ 1:55 ರವರೆಗೆ ದೂರುದಾರನ ಜೊತೆ ಎಸ್.ಐ.ಟಿ ಅಧಿಕಾರಿಗಳು ಹಾಗೂ ಇತರ ಇಲಾಖೆಯ ಅಧಿಕಾರಿಗಳ ಜೊತೆ ಅಸ್ಥಿಪಂಜರಕ್ಕಾಗಿ ಕಾರ್ಯಾಚರಣೆ ನಡೆಸಿದರೂ ಯಾವುದೇ ಅಸ್ಥಿಪಂಜರ ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ. ಇನ್ನೂ 12 ನೇ ಗುರುತು ಮಾಡಿದ ಜಾಗದಲ್ಲಿ ಊಟ ಮಾಡಿದ ಬಳಿಕ ಕಾರ್ಯಾಚರಣೆಗೆ ಮಾಡಲಿದ್ದಾರೆ.