ಬಳಂಜ ಪ್ರತ್ಯೇಕ ಕೃಷಿ ಪತ್ತಿನ ಸಹಕಾರ ಸಂಘ ಸ್ಥಾಪಿಸಲು ಮನವಿ

0

ಬೆಳ್ತಂಗಡಿ: ಬಳಂಜ ಪ್ರತ್ಯೇಕ ಕೃಷಿ ಪತ್ತಿನ ಸಹಕಾರ ಸಂಘದ ಹೋರಾಟ ಸಮಿತಿ ಬಳಂಜ ನಾಲ್ಕೂರು ತೆಂಕಕಾರಂದುರು ಗ್ರಾಮಗಳ ರೈತ ಸದಸ್ಯರುಗಳು ಬಳಂಜದಲ್ಲಿ ಪ್ರತ್ಯೇಕ ಕೃಷಿ ಪತ್ತಿನ ಸಹಕಾರ ಸಂಘವನ್ನು ರಚಿಸುವುದಾಗಿ ಕಳೆದ ಸಹಕಾರಿ ಚುನಾವಣೆಯಲ್ಲಿ ವಾಗ್ದಾನ ನೀಡಿ ಅಧಿಕಾರಕ್ಕೆ ಬಂದ ನಂತರ ಅಳದಂಗಡಿ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯು ಇದುವರೆಗೂ ಯಾವುದೇ ಪ್ರಕ್ರಿಯೆಯನ್ನು ಪ್ರಾರಂಭಿಸದೇ ಇರುವುದನ್ನು ವಿರೋಧಿಸಿ ಇಂದು ಬಳಂಜ ನಾಲ್ಕೂರು ತೆಂಕಕಾರಂದುರು ಗ್ರಾಮಗಳ ರೈತರು ಒಟ್ಟು ಸೇರಿ ಒಂದು ತಿಂಗಳ ಒಳಗೆ ನಮಗೆ ಉತ್ತರ ಕೊಡಬೇಕೆಂದು ಅಳದಂಗಡಿ ಕೃಷಿ...

ಹಟ್ಟಿಗೆ ನುಗ್ಗಿ ಕರುವನ್ನು ಕೊಂದ ಚಿರತೆ

0

ಬೆಳ್ತಂಗಡಿ:ಹಟ್ಟಿಗೆ ನುಗ್ಗಿದ ಚಿರತೆ ಕರುವನ್ನು ಕೊಂದು ಹಾಕಿದ ಘಟನೆಮರೋಡಿ ಗ್ರಾಪಂ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದಿದೆ. ಪೆರಾಡಿಯ ಬೈಲೋಡಿ ಆನಂದ ಶೆಟ್ಟಿಯವರ ಹಟ್ಟಿಯಲ್ಲಿದ್ದ ಕರುವಿನ ಮೇಲೆ ದಾಳಿ ಮಾಡಿದ ಚಿರತೆ ಕರುವನ್ನು ಎಳೆದೊಯ್ದು ಕೊಂದು ಹಾಕಿದೆ.ಘಟನೆಯ ವಿಚಾರ ತಿಳಿದ ವೇಣೂರು ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಕರುವಿನ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.

ಧರ್ಮಸ್ಥಳ ಪ್ರಕರಣ ವಿಚಾರಣೆ ಫೆ.5ಕ್ಕೆ ಮುಂದೂಡಿಕೆ

0

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ನ್ಯಾಯಾಲಯದಲ್ಲಿ ಜ.23 ರಂದು ವಿಚಾರಣೆ ನಡೆದಿದ್ದು ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರು ವಿಚಾರಣೆಯನ್ನು ಮತ್ತೆ ಫೆ.5 ಕ್ಕೆ ಮುಂದೂಡಿದ್ದಾರೆ.ಬಂಟ್ಬಾಳದ ಪ್ರಭಾರ ನ್ಯಾಯಾಧೀಶರಾದ ಬೆಳ್ತಂಗಡಿ ಪ್ರಧಾನ ವ್ಯವಹಾರಿಕ ನ್ಯಾಯಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಯಾಗಿರುವ ರಾಜೇಂದ್ರ ಪ್ರಸಾದ್ ಅವರು ಪ್ರಕರಣದ ವಿಚಾರಣೆ ನಡೆಸಿದರು.ಎಸ್.ಐ.ಟಿ ನೀಡಿರುವ ವರದಿಗೆ ಸಂಬಂಧಿಸಿದ ಪ್ರಕರಣದಲ್ಲಿ ತಾವು ಸಂತ್ರಸ್ತರಾಗಿದ್ದು ತಮ್ಮನ್ನೂ ಕಕ್ಷಿದಾರರಾಗಿಸಬೇಕು ಎಂದು ಶ್ರೀ ಕ್ಷೆತ್ರ ಧರ್ಮಸ್ಥಳ ಪರವಾಗಿ ಸಲ್ಲಿಕೆಯಾದ ಅರ್ಜಿಯ ವಿಚಾರಣೆ ನಡೆಯಿತು ಈಅರ್ಜಿಗೆ ಮಹೇಶ್ ಶೆಟ್ಟಿ ಪರ ವಕೀಲರು...

ಚಾರ್ಮಾಡಿ ಘಾಟಿಯಲ್ಲಿ ಗ್ಯಾಸ್ ಸಿಲಿಂಡರ್ ಲಾರಿ ಪಲ್ಟಿ

0

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇವಾಲಯದ ಸಮೀಪದ ತಿರುವಿನಲ್ಲಿ ಗ್ಯಾಸ್ ಸಿಲಿಂಡರ್‌ ಗಳಿಂದ ತುಂಬಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ಶುಕ್ರವಾರ ನಡೆದಿದೆ. ಕಡೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಲಾರಿ, ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ತಿರುವಿನಲ್ಲಿ ಉರುಳಿದೆ.ಅಪಘಾತದಲ್ಲಿ ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಕಾರಣ ಕೆಲಕಾಲ ಸಂಚಾರದಲ್ಲಿ ಅಡಚಣೆ ಉಂಟಾಯಿತು.

ಮರೋಡಿಯಲ್ಲಿ ಬೈಕ್ ಕಳ್ಳತನಕ್ಕೆ ಯತ್ನ ಆರೋಪ: ಇಬ್ಬರು ಆರೋಪಿಗಳಿಗೆ ಥಳಿಸಿ ಮರಕ್ಕೆ ಕಟ್ಟಿದ ಹಾಕಿದ ಸಾರ್ವಜನಿಕರು ಎರಡೂ ಕಡೆಯವರ ವಿರುದ್ದ ಪ್ರಕರಣ‌ದಾಖಲು

0

ಬೆಳ್ತಂಗಡಿ : ಬೈಕ್ ಕಳ್ಳತನ ಮಾಡಿ ಪರಾರಿಯಾಗುತ್ತಿರುವ ಆರೋಪದ ಮೇರೆಗೆ ಸಾರ್ವಜನಿಕರು ಸೇರಿ ಇಬ್ಬರು ಆರೋಪಿಗಳನ್ನು ಓಡಿ ಹಿಡಿದುಕೊಂಡು ಬಂದು ಹಿಗ್ಗಮುಗ್ಗ ಥಳಿಸಿ ಬಳಿಕ ಮರಕ್ಕೆ ಕಟ್ಟಿ ಹಾಕಿ ವೇಣೂರು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಈ ಬಗ್ಗೆ ಇಬ್ಬರು ಬೈಕ್ ಕಳ್ಳತನಕ್ಕೆ ಯತ್ನಿಸಿದ ಬಗ್ಗೆ ಪ್ರಕರಣ ದಾಖಲಿಸಲಾಗಿದೆ.ಇದೆ ಘಟನೆಗೆ ಸಂಬಂಧಿಸಿದಂತೆ ಹಲ್ಲೆಗೆ ಒಳಗಾದವರು ನೀಡಿದ ದೂರಿನಂತೆ ಸ್ಥಳೀಯರಾದ 8 ಮಂದಿ ಆರೋಪಿಗಳ ವಿರುದ್ದ ಪ್ರಕರಣ ದಾಖಲಿಸಲಾಗಿದೆ ಎರಡೂ ಪ್ರಕರಣಗಳಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆ ವರದಿ: ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಪಳಾರಗೋಳಿ...

ಬೆಳ್ತಂಗಡಿ :ಮನೆಯಿಂದ ಹೋದ ವೃದ್ಧ  ನಾಪತ್ತೆ

0

ಬೆಳ್ತಂಗಡಿ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವೃದ್ಧರೊಬ್ಬರು ಮನೆಯಿಂದ ಹೋದವರು ವಾಪಸ್ ಬಾರದೆ ನಾಪತ್ತೆಯಾದ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಕೊಕ್ರಾಡಿ ಗ್ರಾಮದ ಕೊಕ್ರಾಡಿ ಎಂಬಲ್ಲಿ ಒಬ್ಬರೇ ವಾಸವಾಗಿದ್ದ ರಾಘು ಶೆಟ್ಟಿ @ ಅನ್ನೋಜಿ(70) ಎಂಬವರು ಹಲವು ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಮಂಗಳೂರು ಆಸ್ಪತ್ರೆಯಿಂದ ಔಷದಿ ಇದ್ದು. ಕಳೆದ ಒಂದೂವರೆ ವರ್ಷಗಳಿಂದ ಕೊಕ್ರಾಡಿ ಚಿಕ್ಕಪ್ಪನೊಂದಿಗೆ ವಾಸವಾಗಿದ್ದರು. ಜ.18 ರಂದು ಸಂಜೆ 3 ಗಂಟೆಗೆ ಯಾರು ಇಲ್ಲದ ವೇಳೆಗೆ ಮನೆಯಿಂದ ಹೊರಹೋದವರು ವಾಪಸ್ ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. ಈ...

29 ವರ್ಷಗಳಿಂದ ತಲೆಮರೆಸಿಕೊಂಡಿದ್ದ  ದುಂಡುಪಾಳ್ಯ ಗ್ಯಾಂಗ್ ನ ಆರೋಪಿಯ ಬಂಧನ

0

ಮಂಗಳೂರು, ದಂಡುಪಾಳ್ಯ ಗ್ಯಾಂಗ್ ನ ಆರೋಪಿ 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಚಿಕ್ಕ ಹನುಮ @ ಚಿಕ್ಕ ಹನುಮಂತಪ್ಪ(55) ನನ್ನು ಮಂಗಳೂರಿನ ಉರ್ವ ಠಾಣೆಯ ಪೊಲೀಸರು ಆಂಧ್ರಪ್ರದೇಶದಲ್ಲಿ ಬಂಧಿಸಿದ್ದಾರೆ. ಆರೋಪಿ ಉರ್ವಾ ಪೊಲೀಸ್ ಠಾಣಾ ಅ.ಕ್ರ ನಂಬ್ರ 113/1997, ರ ಪ್ರಕರಣದಲ್ಲಿ 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ. "ದಂಡುಪಾಳ್ಯ ಗ್ಯಾಂಗ್‌" ಎಂದೇ ಕುಖ್ಯಾತಿ ಪಡೆದಿರುವ ಗ್ಯಾಂಗ್ ನ ಸಹಚರ (ಎ-6) ಚಿಕ್ಕ ಹನುಮ @ ಚಿಕ್ಕ ಹನುಮಂತಪ್ಪ @ ಕೆ. ಕೃಷ್ಣಪ್ಪ @ ಕೃಷ್ಣ ನನ್ನು ಆಂದ್ರಪ್ರದೇಶ ರಾಜ್ಯದ ಅನ್ನಮಯ್ಯ ಜಿಲ್ಲೆಯ, ಮದನಪಳ್ಳಿ ಎಂಬಲ್ಲಿ ಉರ್ವ ಠಾಣಾ...

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರು ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಗಾರ

0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್(ರಿ) ಕಣಿಯೂರು ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಗಾರವನ್ನು ಕೊರಿಂಜ ಸಮುದಾಯ ಭವನದಲ್ಲಿ ನಡೆಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಣಿಯೂರು ವಲಯದ ವಲಯಾಧ್ಯಕ್ಷರಾದ ರಮಾನಂದ ಪೂಜಾರಿ ರವರು ವಹಿಸಿದರು.ನಿಕಟ ಪೂರ್ವ ವಲಯಾಧ್ಯಕ್ಷರಾದ ಕೃಷ್ಣಯ್ಯ ಆಚಾರ್ಯ ರವರು ದೀಪ ಬೆಳಗಿಸು ದರೊಂದಿಗೆ ಉದ್ಘಾಟಿಸಿದರು.ತರಬೇತಿ ಕಾರ್ಯಗಾರದಲ್ಲಿ ಯೋಜನಾಧಿಕಾರಿಯವರಾದ ಅಶೋಕ್ ರವರು ಒಕ್ಕೂಟದ ಮಹತ್ವ,ಪದಾಧಿಕಾರಿಗಳ ಜವಾಬ್ದಾರಿ,ಒಕ್ಕೂಟದಲ್ಲಿ ಯೋಜನೆಯ ಕಾರ್ಯಕ್ರಮಗಳ ಅನುಷ್ಠಾನ,ಯೋಜನೆಯಿಂದ ಸಿಗುವ ಸೌಲಭ್ಯಗಳನ್ನು ಸದಸ್ಯರಿಗೆ ಒದಗಿಸಿಕೊಡುವ ಬಗ್ಗೆ ಮಾಹಿತಿ ಮಾರ್ಗದರ್ಶನ ನೀಡಿದರು.ರಿಕವರಿ ಯೋಜನಾಧಿಕಾರಿಯವರಾದ ಆನಂದ್ ರವರು ಬಡ್ಡಿದರದ ಲೆಕ್ಕಾಚಾರದ ಬಗ್ಗೆ...

ರಾಜ್ಯಪಾಲರು ಕೇಂದ್ರ ಸರ್ಕಾರದ ತಾಳಕ್ಕೆ ತಕ್ಕಂತೆ ಕುಣಿಯುವುದನ್ನು ನಿಲ್ಲಿಸಬೇಕು : ರಕ್ಷಿತ್ ಶಿವರಾಂ.

0

ಬೆಳ್ತಂಗಡಿ. ವಿಧಾನಮಂಡಲವನ್ನು ಉದ್ದೇಶಿಸಿ ರಾಜ್ಯಪಾಲರು ಮಾಡುವ ಭಾಷಣವನ್ನು 'ರಾಜ್ಯ ಸಚಿವ ಸಂಪುಟ' ಒದಗಿಸುತ್ತದೆ. ಆ ಭಾ಼ಷಣದಲ್ಲಿ ಕೇಂದ್ರ ಸರ್ಕಾರದ ವಿರುದ್ದದ ವಿಷಯಗಳಿವೆ ಎಂಬ ಕಾರಣಕ್ಕಾಗಿ ರಾಜ್ಯಪಾಲರು ಭಾಷಣವನ್ನು ನಿರಾಕರಿಸುವಂತಿಲ್ಲ. ರಾಜ್ಯಪಾಲರು ಯಾವುದೇ ಪಕ್ಷದ ಸದಸ್ಯರಲ್ಲಇಂದು ಕರೆದಿದ್ದ ವಿಶೇಷ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಬೇಕಿದ್ದ ರಾಜ್ಯಪಾಲರು ಸಂವಿಧಾನದ ಆಶಯಕ್ಕೆ ಧಕ್ಕೆ ತಂದಿದ್ದಾರೆ. ಕ್ಯಾಬಿನೆಟ್ ನಲ್ಲಿ ಅನುಮೋದನೆ ಪಡೆದು ಸರ್ಕಾರ ತಯಾರು ಮಾಡಿರುವಂತ ಭಾಷಣವನ್ನು ಗಾಳಿಗೆ ತೂರಿ ತಮ್ಮದೇ ಭಾಷಣವನ್ನ ಓದುವ ಮುಖಾಂತರ ಸಂವಿಧಾನದ ವಿಧಿ 176(1) & 163 ರಿಗೆ ದಕ್ಕೆ ತರುವಂತ ಕೆಲಸವನ್ನು...

ಅಲೆರಿ ಶ್ರೀ ಸತ್ಯ ಸಾರಮಾನಿ ಕಾನದ- ಕಟ್ಟದ ಮೂಲ ಕ್ಷೇತ್ರ ಶಿಲಾನ್ಯಾಸ ಕಾರ್ಯಕ್ರಮ; ಕುಕ್ಕೇಡಿಯಲ್ಲಿ ಪೂರ್ವ ಸಿದ್ದತಾ ಸಭೆ

0

ಬೆಳ್ತಂಗಡಿ;  ಅಲೆರಿ ಶ್ರೀ ಸತ್ಯ ಸಾರಾಮಾನಿ ಕಾನದ - ಕಟದ ಮೂಲ ಕ್ಷೇತ್ರ ಆಲೇರಿ,ಮಿಜಾರು ಮೂಡಬಿದ್ರೆ ತಾಲೂಕು , ದಿನಾಂಕ 8.2.2026 ನೆ ಆದಿತ್ಯವಾರ ನಡೆಯುವಂತಹ ಶಿಲಾನ್ಯಾಸ ಕಾರ್ಯಕ್ರಮದ ಪೂರ್ವ ಸಿದ್ಧತೆ ಸಭೆಯನ್ನು ಕುಕ್ಕೇಡಿ - ನಿಟ್ಟಡೆ, ಗ್ರಾಮದ ಡಾ . ಬಿ.ಆರ್. ಅಂಬೇಡ್ಕರ ಭವನದಲ್ಲಿ ಸಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ತಾಲೂಕು ಸಮಿತಿಯ ಅಧ್ಯಕ್ಷರಾದ ಚಂದ್ರಪ್ಪ ಮಾಸ್ಟರ್, ಮತ್ತು ತಾಲೂಕು ಸಮಿತಿ ಉಪಾಧ್ಯಕ್ಷರಾದ ಶೇಖರ್.ವಿ.ಧರ್ಮಸ್ಥಳ , ಮತ್ತು ಕೇಂದ್ರ ಸಮಿತಿಯ ಕೋಶಾಧಿಕಾರಿ ಯಾದ ಶೇಖರ್ ಕುಕ್ಕೇಡಿ ಭಾಗವಹಿಸಿದರು, ಕ.ದ.ಸಂ.ಸ ಹೋಬಳಿ ಸಂಚಾಲಕರಾದ ಚರಣ್...