ಬೆಳ್ತಂಗಡಿ ಇಂದಿರಾ ಕ್ಯಾಂಟೀನ್ ಅಕ್ಟೋಬರ್ ನಲ್ಲಿ ಉದ್ಘಾಟನೆ; ಇಂದಿರಾ ಕ್ಯಾಂಟೀನ್ ಗೆ ರಕ್ಷಿತ್ ಶಿವರಾಂ ಭೇಟಿ
ಬೆಳ್ತಂಗಡಿ. ಕರ್ನಾಟಕ ಸರ್ಕಾರವು ಬಡವರಿಗೆ ಮತ್ತು ಮಧ್ಯಮ ವರ್ಗದವರಿಗೆ ಅಗ್ಗದ ದರದಲ್ಲಿ ಪೌಷ್ಟಿಕಾಂಶಯುಕ್ತ ಆಹಾರವನ್ನು ಒದಗಿಸುವ ಯೋಜನೆ ಇಂದಿರಾ ಕ್ಯಾಂಟೀನ್ ಬೆಳ್ತಂಗಡಿಯಲ್ಲಿ ಅಕ್ಟೋಬರ್ ನಲ್ಲಿ ಪ್ರಾರಂಭವಾಗಲಿದೆ. ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಉದ್ಘಾಟನೆ ಮಾಡಲಿದ್ದಾರೆ.ಇಂದಿರಾ ಕ್ಯಾಂಟೀನ್ ಗೆ ಇಂದು ಕೆಪಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿ ಅಲ್ಲಿನ ಸಿದ್ದತೆಗಳ ಬಗ್ಗೆ ಮಾಹಿತಿ ಪಡೆದರು ಈ ಸಂದರ್ಭದಲ್ಲಿ ಜಿಲ್ಲಾ ಕೆಡಿಪಿ ಸದಸ್ಯರಾದ ಸಂತೋಷ್ ಕುಮಾರ್, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷರಾದ ಸತೀಶ್ ಕೆ ಕಾಶಿಪಟ್ಟಣ, ಜಿಲ್ಲಾ ಗ್ಯಾರಂಟಿ ಯೋಜನೆಗಳ...
ಧರ್ಮಸ್ಥಳ ಪ್ರಕರಣ ನ್ಯಾಯಾಲಯದಲ್ಲಿ ಚಿನ್ನಯ್ಯನ ಹೇಳಿಕೆ ದಾಖಲು
ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಆರೋಪಿ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯದಲ್ಲಿ BNSS 183 ಹೇಳಿಕೆ ನೀಡಲು ಸೆ.23 ರಂದು ಶಿವಮೊಗ್ಗ ಜೈಲಿನಿಂದ ಪೊಲೀಸರು ಬೆಳ್ತಂಗಡಿ ಕೋರ್ಟ್ ಗೆ ಕರೆದುಕೊಂಡು ಬಂದು ಹಾಜರುಪಡಿಸಿದ್ದಾರೆ. ಕೋರ್ಟ್ ನಲ್ಲಿ ಚಿನ್ನಯ್ಯ ಪ್ರಕರಣದ ಬಗ್ಗೆ ವಿವರವಾಗಿ ನ್ಯಾಯಾಲಧೀಶರ ಮುಂದೆ ಹೇಳಿಕೆ ನೀಡಿದ್ದಾನೆ ಎನ್ನಲಾಗಿದೆ. ಆರೋಪಿ ಚಿನ್ನಯ್ಯ 3 ಗಂಟೆಗೆ ಬೆಳ್ತಂಗಡಿ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶರಾ ವಿಜಯೇಂದ್ರ ಹೆಚ್.ಟಿ ಮುಂದೆ ಹಜರು ಪಟಿಸಿ ಹೇಳಿಕೆ ದಾಖಲಿಸುವ ಕಾರ್ಯ ಆರಂಭಿಸಲಾಗಿತ್ತು ಸಂಜೆ 6:30 ಗಂಟೆಗೆ ನ್ಯಾಯಾಲಯದ ಪ್ರಕ್ರಿಯೆಗಳನ್ನು ಮುಗಿಸಿ ಆತನನ್ನುವಾಪಸ್ ಶಿವಮೊಗ್ಗ...
ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿಯನ್ನು ಜಿಲ್ಲೆಯಿಂದ ಒಂದು ವರ್ಷ ಗಡಿಪಾರು ಮಾಡಿ ಆದೇಶ
ಬೆಳ್ತಂಗಡಿ : ಸೌಜನ್ಯ ಪರ ಹೋರಾಟಗಾರಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಸುಮಾರು 32 ಪ್ರಕರಣಗಳು ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದು. ಈ ಹಿನ್ನಲೆಯಲ್ಲಿ ಬೆಳ್ತಂಗಡಿ ಪೊಲೀಸರು ಸಲ್ಲಿಸಿದ ಕೋರಿಕೆಯನ್ನು ಮನ್ನಿಸಿ ಪುತ್ತೂರು ಎಸಿ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಿ ಆದೇಶ ಮಾಡಿರುವುದಾಗಿ ತಿಳಿದು ಬಂದಿದೆ. ಪುತ್ತೂರು ಸಹಾಯಕ ಆಯುಕ್ತರಾದ(ಎಸಿ) ಸ್ಟೆಲ್ಲಾ ವರ್ಗಿಸ್ ಗೆ ಬೆಳ್ತಂಗಡಿ ಪೊಲೀಸರು ಪ್ರಕರಣದ ಬಗ್ಗೆ ವರದಿ ನೀಡಿದ್ದನ್ನು ಪರಿಶೀಲನೆ ನಡೆಸಿ ವರದಿಯ ಆಧಾರದಲ್ಲಿ ಸೆ.18 ರಂದು ಮಹೇಶ್ ಶೆಟ್ಟಿ ತಿಮರೋಡಿಯನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು...
ಬೆಳ್ತಂಗಡಿ : ಬುರುಡೆ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮನ
ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಆರೋಪಿ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯದಲ್ಲಿ BNSS 183 ಹೇಳಿಕೆ ನೀಡಲು ಸೆ.23 ರಂದು 2 ಗಂಟೆಗೆ ಶಿವಮೊಗ್ಗ ಜಿಲ್ಲಾ ಪೊಲೀಸರು ಭದ್ರತೆಯಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಕರೆದುಕೊಂಡು ಬಂದಿದ್ದಾರೆ. ಆರೋಪಿ ಚಿನ್ನಯ್ಯ 3 ಗಂಟೆಗೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದು ಮುಚ್ಚಿದ ಕೋಣೆಯಲ್ಲಿ ಆತ ಬುರುಡೆ ಪ್ರಕರಣದ ಬಗ್ಗೆ ಹೇಳಿಕೆ ನೀಡಲಿದ್ದಾನೆ.
ಸತ್ಯ ಶೋಧಕ ವೇದಿಕೆ ಬೆಳ್ತಂಗಡಿ ಇದರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುಗಳ ಹಾಗೂ ಪೆರಿಯಾರ್ ರಾಮಸ್ವಾಮಿಯವರ ಹುಟ್ಟು ಹಬ್ಬದ ಪ್ರಯುಕ್ತ ಕ್ರಕೆಟ್ ಪಂದ್ಯಾಟ
ಬೆಳ್ತಂಗಡಿ; ಸತ್ಯ ಶೋಧಕ ವೇದಿಕೆ ಬೆಳ್ತಂಗಡಿ ಇದರ ಆಶ್ರಯದಲ್ಲಿ ಸಮಾಜ ಪರಿವರ್ತನಾ ಚಿಂತಕರುಗಳಾದ ಬ್ರಹ್ಮ ಶ್ರೀ ನಾರಾಯಣ ಗುರುಗಳ ಹಾಗೂ ಪೆರಿಯಾರ್ ರಾಮಸ್ವಾಮಿಯವರ ಹುಟ್ಟು ಹಬ್ಬದ ಪ್ರಯುಕ್ತ ಸಾರ್ವಜನಿಕರಿಗಾಗಿ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟವು ಸೆ 21 ರಂದು ಮಾಲಾಡಿಯ ಶ್ರೀ ರಾಮಾಂಜನೆಯ ಭಜನಾ ಮಂದಿರದ ವಠಾರದಲ್ಲಿ ನಡೆಯಿತು. ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿಯ ತಾಲೂಕು ಅಧ್ಯಕ್ಷರಾದ ಪದ್ಮನಾಭ ಸಾಲ್ಯಾನ್ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ ಒಂದೇ ಜಾತಿ ಒಂದೇ ಕುಲ ಎಂದು ಸಾರಿದ ನಾರಾಯಣ ಗುರುಗಳ ಜನ್ಮ ಜಯಂತಿಯನ್ನು ಎಲ್ಲಾ ಜಾತಿಯವರನ್ನು...
ಬೆಳ್ತಂಗಡಿ ವಲಯ ಕಥೋಲಿಕ್ ಸಭಾದಿಂದ ಭಾಷಣ ಕೌಶಲ್ಯದ ಬಗ್ಗೆ ತರಬೇತಿ
ಬೆಳ್ತಂಗಡಿ; ಕಥೊಲಿಕ್ ಸಭಾ ಮಂಗಳೂರು ಪ್ರದೇಶ್ (ರಿ) ಬೆಳ್ತಂಗಡಿ ವಲಯದ ಮೇಲ್ ಉಸ್ತುವಾರಿಯಲ್ಲಿ ಮಕ್ಕಳಿಗೆ ಭಾಷಣ ಸ್ಪರ್ಧೆಯ ತರಬೇತಿ ಕಾರ್ಯ ಕ್ರಮ ಬೆಳ್ತಂಗಡಿ ಚರ್ಚಿನ ಹೋಲಿ ರಿಡೀಮರ್ ಆಡಿಟೋರಿಯಂ ಸಭಾಂಗಣದಲ್ಲಿ ನಡೆಯಿತು. ಬೆಳ್ತಂಗಡಿ ಚರ್ಚಿನ ಧರ್ಮ ಗುರುಗಳಾದ ಫಾದರ್ ವಾಲ್ಡರ್ ಡಿ ಮಿಲ್ಲೋ ಅವರು ಈ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಕಥೊಲಿಕ್ ಸಭಾ ಬೆಳ್ತಂಗಡಿ ವಲಯದ ಅಧ್ಯಕ್ಷರಾದ ಅಲ್ಬರ್ಟ್ ಸುನಿಲ್ ಮೋನಿಸ್ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು. ಈ ಭಾಷಣ ತರಬೇತಿಯ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರಿನ ಯೆನೆಪೋಯ ವಿಶ್ವವಿದ್ಯಾನಿಲಯದ ಮ್ಯುರಲ್...
ಧರ್ಮಸ್ಥಳ; ಹದಗೆಟ್ಟ ನೇರ್ತನೆ ರಸ್ತೆ ಶ್ರಮದಾನದ ಮೂಲಕ ದುರಸ್ತಿ
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ನೇರ್ತನೆ ರಸ್ತೆ ಸಂಪೂರ್ಣವಾಗಿ ಹದಗೆಟ್ಟು ಹೋಗಿದ್ದು ಸೆ 21ಭಾನುವಾರ ದಂದು ಸ್ಥಳೀಯರು ಒಟ್ಟು ಸೇರಿ ಶ್ರಮದಾನದ ಮೂಲಕ ರಸ್ತೆಯ ದುರಸ್ತಿ ಕಾರ್ಯ ನಡೆಸಿದ್ದಾರೆ.ಕಳೆದ ಮಳೆಗಾಲದಲ್ಲಿ ದೊಡ್ಡ ಗಾತ್ರಗಳ ಹೊಂಡಗಳು ಬಿದ್ದಿದ್ದು ವಾಹನಗಳ ಸಂಚಾರ ಅಸಾಧ್ಯವಾದ ಹಿನ್ನಲೆಯಲ್ಲಿ ಸ್ಥಳೀಯರು ಈ ಬಗ್ಗೆ ವಾರ್ಡ್ ಸಭೆಯಲ್ಲಿ ಗಮನಸೆಳೆದಿದ್ದರು . ಒಂದೇ ವಾರದಲ್ಲಿ ದುರಸ್ತಿ ಮಾಡಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದರು ಆದರೆ ಈ ವೆರಗೂ ಯಾವುದೇ ಸ್ಪಂದನೆ ಸಿಗದ ಹಿನ್ನಲೆಯಲ್ಲಿ ಮಾಜಿ ಗ್ರಾಮಪಂಚಾಯತು ಸದಸ್ಯ ಟಿ.ವಿ ದೇವಸ್ಯ ಅವರ ನೇತೃತ್ವದಲ್ಲಿ ಸ್ಥಳೀಯರು ಶ್ರಮದಾನ...
ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಚಿನ್ನಯ್ಯನಿಗೆ ಹಣ ವರ್ಗಾವಣೆ ಪ್ರಕರಣ; ತಿಮರೋಡಿಯ 11 ಮಂದಿ ಆಪ್ತರಿಗೆ ಎಸ್.ಐ.ಟಿ ನೊಟೀಸ್
ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಆರೋಪಿ ಚಿನ್ನಯ್ಯನಿಗೆ ಮತ್ತು ಪತ್ನಿಯ ಖಾತೆಗೆ ಹಣ ವರ್ಗಾವಣೆ(ಫಂಡಿಂಗ್) ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ಅಧಿಕಾರಿಗಳು ಮಹೇಶ್ ಶೆಟ್ಟಿ ತಿಮರೋಡಿಯ 11 ಮಂದಿ ಆಪ್ತರಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದೆ. ತಿಮರೋಡಿ 11 ಮಂದಿ ಆಪ್ತರಲ್ಲಿ ಈಗಾಗಲೇ 6 ಮಂದಿಯನ್ನು ಎಸ್.ಐ.ಟಿ ಅಧಿಕಾರಿಗಳು ಕಚೇರಿಗೆ ಕರೆಸಿ ವಿಚಾರಣೆ ಮಾಡಿರುವುದಾಗಿ ತಿಳಿದು ಬಂದಿದೆ. ಉಳಿದ ಐದು ಮಂದಿಯನ್ನು ವಿಚಾರಣೆ ಮಾಡಲು ಬಾಕಿ ಇದ್ದು ಅವರು ಇಂದು ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ. ಬ್ಯಾಂಕ್ ಖಾತೆಗಳ ಮೂಲಕವಾಗಿಯೇ ಹಣ ವರ್ಗಾವಣೆ ಮಾಡಲಾಗಿರುವುದಾಗಿ ತಿಳಿದು...
ಚಾರ್ಮಾಡಿ ಘಾಟಿಯಲ್ಲಿ ಕಾರುಗಳ ನಡುವೆ ಅಪಘಾತ
ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಎರಡನೆಯ ತಿರುವಿನಲ್ಲಿ ಎರಡು ಕಾರುಗಳ ನಡುವೆ ಮಂಗಳವಾರ ಅಪಘಾತ ಸಂಭವಿಸಿದೆ. ಕಾರುಗಳೆರಡು ಎದುರು ಬದುರಾಗಿ ಡಿಕ್ಕಿ ಹೊಡೆದಿದ್ದು ಕಾರುಗಳ ಮಂಭಾಗ ನುಜ್ಜುಗುಜ್ಜಾಗಿದೆ ಎರಡೂ ಕಾರುಗಳಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
ಜಾಗಮಾರಾಟದ ಅಗ್ರಿಮೆಂಟ್ ಮಾಡಿ 45ಲಕ್ಷ ರೂ ವಂಚನೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣದಾಖಲು
ಬೆಳ್ತಂಗಡಿ; ನಿವೇಶನ ಮಾರಾಟದ ಬಗ್ಗೆ ಅಗ್ರಿಮೆಂಟ್ ಮಾಡಿ ರೂ 45ಲಕ್ಷ ಹಣ ಪಡೆದುಕೊಂಡು ವಂಚಿಸಿರುವ ಬಗ್ಗೆ ಬೆಳ್ತಂಗಡಿ ನಿವಾಸಿ ಪ್ರವೀಣ್ ಭಂಡಾರಿ ಅವರ ವಿರುದ್ದ ಬೆಳ್ತಂಗಡಿ ನಿವಾಸಿ ವಿಶ್ವನಾಥ ರೈ ಎಂಬವರು ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ವಿಶ್ವನಾಥ್ ರೈ ಅವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದು ಅದರಲ್ಲಿ ಆರೋಪಿ ಪ್ರವೀಣ್ ಭಂಡಾರಿ ಎಂಬಾತನು ಮಹಿಳೆಯಿಬ್ಬರಿಂದ ಒಟ್ಟು 40 ಸೆನ್ಸ್ ಜಾಗವನ್ನು ಖರೀದಿ ಮಾಡಿ ಬಳಿಕ ಅದನ್ನು ವಿಶ್ವನಾಥ ರೈ ಅವರಿಗೆ ಮಾರಾಟ ಮಾಡುವುದಾಗಿ ಹೇಳಿ ರೂ 45 ಲಕ್ಷ ಹಣವನ್ನು...















