ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೋಣಂದೂರು ಗ್ರಾಮ ದ ಮೊದಲೆ ಸಬರಬೈಲು ಪಡಂಗಡಿ ಸಂಪರ್ಕ ಸೇತುವೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ
ಬೆಳ್ತಂಗಡಿ. ತಾಲೂಕಿನಲ್ಲಿ ಕಳೆದ ಮಳೆಗಾಲದಲ್ಲಿ ಸುರಿದ ಭಾರಿ ಮಳೆಗೆ ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೋಣಂದೂರು ಗ್ರಾಮ ದ ಮೊದಲೆ ಸಬರಬೈಲು ಪಡಂಗಡಿ ಸಂಪರ್ಕ ಸೇತುವೆ ಮುರಿದು ಬಿದ್ದು ಸಂಪರ್ಕ ಕಡಿತಗೊಂಡಿದ್ದು. ಈ ಸೇತುವೆಯು ಇಂದಿನವರೆಗೂ ದುರಸ್ತಿ ಆಗಿರುವುದಿಲ್ಲ. ಇದೀಗ 2024 25 ನೇ ಸಾಲಿನಲ್ಲಿ ಲೆ.ಶೀ. 5054 ರಡಿ ರಾಜ್ಯದಲ್ಲಿ ಸುರಿದ ಮಳೆ ಮತ್ತು ಪ್ರವಾಹದಿಂದ ಹಾನಿಗಳಾದ ಗ್ರಾಮೀಣ ರಸ್ತೆ ಸೇತುವೆ ಹಾಗೂ ಚರಂಡಿ ಕಾಮಗಾರಿಯನ್ನು ಕೈಗೊಳ್ಳಲು ವಿಧಾನಸಭಾ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡಿದ್ದು ಸರ್ಕಾರ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ಈಗಾಗಲೇ 10...
ನಾರ್ಯ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ತು ಕಂಬಕ್ಕೆ ಕಾರುಡಿಕ್ಕಿ.
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ನಾರ್ಯ ಸಮೀಪದ ದೆಲಂಪಾಡಿ ಎಂಬಲ್ಲಿ ವಿದ್ಯುತ್ ಕಂಬಕ್ಕೆ ಇನೋವಾ ಕಾರೊಂದು ಡಿಕ್ಕಿ ಹೊಡೆದ ಘಟನೆ ಜು.24 ರಂದು ಬೆಳಗ್ಗೆ ನಡೆದಿದೆ. ಅಪಘಾತಕ್ಕೆ ವಿದ್ಯುತ್ವಕಂಬ ಮುರಿದು ರಸ್ತೆಗೆ ಬಿದ್ದಿದೆ.ನೇತ್ರಾವತಿಯಿಂದ ನಾರ್ಯ ಕಡೆಗೆ ಬರುತ್ತಿದ್ದ ಕಾರಿನ ಚಾಲಕ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬೈಕಿನ ಅಪಘಾತವನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ತು ಕಂಬಕ್ಕೆ ಡಿಕ್ಕಿ ಹೊಡೆದು ಕಂಬವು ರಸ್ತೆಗೆ ಅಡ್ಡಲಾಗಿ ಬಿದ್ದು ವಿದ್ಯುತ್ ಕಂಬ ಸಂಪೂರ್ಣ ಹಾನಿಯಾಗಿದೆ, ಕಾರಿನ ಮುಂಭಾಗಕ್ಕೆ ಹಾನಿಯಾಗಿದ್ದು ಚಾಲಕ ಅಪಾಯದಿಂದ ಪಾರಾಗಿದ್ದಾರೆ ಘಟನಾ ಸ್ಥಳಕ್ಕೆ ಮೆಸ್ಕಾಂ...
ಧರ್ಮಸ್ಥಳ; ಬೊಳಿಯಾರು ಪರಿಸರದಲ್ಲಿ ಕಾಡಾನೆ ದಾಳಿ ಕೃಷಿ ಹಾನಿ
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ಬೊಳಿಯಾರು ಸಮೀಪ ಕಾಡಾನೆಹಾವಳಿ ಮುಂದುವರಿದಿದ್ದು ಕೃಷಿಕರು ತೀವ್ರ ಆತಂಕದಲ್ಲಿದ್ದಾರೆ.ಇಲ್ಲಿ ಕಳೆದ ಮೂರು ದಿನಗಳಿಂದ ಕಾಡಾನೆಗಳು ಓಡಾಟ ನಡೆಸುತ್ತಿದೆ. ಇಲ್ಲಿ ಹಲವರ ತೋಟಗಳಿಗೆ ಆನೆ ನುಗ್ಗಿದೆ. ಬಾಳೆ ಹಾಗೂ ಅಡಿಕೆ ಗಿಡಗಳನ್ನು ನಾಶಗೊಳಿಸಿದೆ. ಕೊಕ್ಕಡದಲ್ಲಿ ಆನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನೆಯ ಬಳಿಕ ಆನೆಯನ್ನು ಓಡಿಸಲೂ ಜನರು ಭಯಪಡುವಂತಹ ವಾತಾವರಣ ನಿರ್ಮಾಣವಾಗಿದೆ. ರಾಷ್ಟ್ರೀಯ ಹೆದ್ದಾರಿ ಬದಿಯಲ್ಲೆ ಓಡಾಟ;ಧರ್ಮಸ್ಥಳ ಪೆರಿಯಶಾಂತಿ ರಸ್ತೆಯ ಬದಿಯಲ್ಲಿಯೇ ಈ ಆನೆಗಳು ಓಡಾಟ ನಡೆಸುತ್ತಿದೆ. ಬುಧವಾರ ಬೆಳಗ್ಗೆ 9 ಗಂಟೆಯ ಸುಮಾರಿಗೆ ಒಂಟಿ ಸಲಗವೊಂದು ಬೊಳಿಯಾರಿನಲ್ಲಿ ರಾಷ್ಟ್ರೀಯ ಹೆದ್ದಾರಿಯನ್ನು...
ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ಶೋಭ ನಾರಾಯಣ ಗೌಡ ನೇಮಕ.
ಬೆಳ್ತಂಗಡಿ. ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ಶೋಭಾ ನಾರಾಯಣಗೌಡ ಇವರನ್ನು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಶಾಲೆಟ್ ಟೀಂಟೋ ನೇಮಕ ಮಾಡಿ ಆದೇಶಿಸಿದ್ದಾರೆ. ಇಂದು ಬ್ಲಾಕ್ ಕಾಂಗ್ರೆಸ್ ನಲ್ಲಿ ಆದೇಶ ಪತ್ರವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಹತ್ತಾಂತರಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ನಾಗೇಶ್ ಕುಮಾರ್ ಗೌಡ, ನಗರ ಸಮಿತಿಯ ಅಧ್ಯಕ್ಷರಾದ ಸತೀಶ್ ಕೆಕಾಶಿಪಟ್ನ, ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೀನತ್ ಉಜಿರೆ, ಸದಸ್ಯರಾದ ಶ್ರೀಮತಿ ಸುಚಿತ್ರ ಕೊಲ್ಲಾಜೆ ವಿಜಯಲಕ್ಷ್ಮಿ...
ಧರ್ಮಸ್ಥಳ ಪ್ರಕರಣ ಎಸ್.ಐ.ಟಿ ತಂಡಕ್ಕೆ 20ಅಧಿಕಾರಿಗಳ ಸೇರ್ಪಡೆ; ಇಂದಿನದಲೇ ತನಿಖಾ ಪ್ರಕ್ರಿಯೆಗೆ ಚಾಲನೆ
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದಲ್ಲಿ ರಾಜ್ಯ ಸರಕಾರ ರಚಿಸಿರುವ ವಿಶೇಷ ತನಿಖಾ ತಂಡದಲ್ಲಿ ಹೊಸದಾಗಿ 20ಸದಸ್ಯರುಗಳನ್ನು ಸೇರಿಸಿ ತನಿಖಾ ತಂಡವನ್ನು ವಿಸ್ತರಣೆ ಮಾಡಲಾಗಿದ್ದು ಇಂದಿನಿಂದಲೇ ತನಿಖಾ ಪ್ರಕ್ರಿಯೆ ಆರಂಭವಾಗಲಿದ್ದು ಒಂದೆರಡು ದಿನಗಳಲ್ಲಿ ತಂಡ ಧರ್ಮಸ್ಥಳ ಕ್ಕೆ ಆಗಮಿಸಿ ತನಿಖಾ ಕಾರ್ಯ ಆರಂಭಿಸಲಿರುವುದಾಗಿ ತಿಳಿದು ಬಂದಿದೆ ಧರ್ಮಸ್ಥಳದಲ್ಲಿ ಹಲವಾರು ಹೆಣಗಳನ್ನು ಹೂತಿರುವುದಾಗಿ ಸ್ವಚ್ಚತಾ ಕಾರ್ಮಿಕನೊಬ್ಬ ಹೇಳಿಕೆ ನೀಡಿದ್ದಲ್ಲದೆ ಈ ಬಗ್ಗೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿ ನ್ಯಾಯಾಧೀಶರ ಮುಂದೆ ಹೇಳಿಕೆಯನ್ನು ನೀಡಿದ್ದ. ಇದರ ಬೆನ್ನಲ್ಲಿಯೇ ವಿಶೇಷ ತನಿಖಾ ತಂಡ ರಚಿಸುವಂತೆ ರಾಜ್ಯದಾದ್ಯಂತ ಒತ್ತಾಯಗಳು ಕೇಳಿ ಬಂದಿತ್ತು ಈ ಹಿನ್ನಲೆಯಲ್ಲಿ...
ಸೌತಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಬೆಳ್ತಂಗಡಿ .ಬೆಸ್ಟ್ ಫೌಂಡೇಶನ್ ಮತ್ತು ಸೌತಡ್ಕ ಸೇವಾ ಸಮಿತಿಯ ವತಿಯಿಂದ ಪುಸ್ತಕ ವಿತರಣೆ.
ಬೆಳ್ತಂಗಡಿ.ಸೌತಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಬೆಸ್ಟ್ ಫೌಂಡೇಶನ್ ಮತ್ತು ಸೌತಡ್ಕ ಸೇವಾ ಸಮಿತಿಯ ವತಿಯಿಂದ ಶಾಲಾ ಮಕ್ಕಳಿಗೆ ಬರೆಯುವ ಪುಸ್ತಕವನ್ನು ಬೆಸ್ಟ್ ಫೌಂಡೇಶನ್ ನ ಅಧ್ಯಕ್ಷರಾದ ರಕ್ಷಿತ್ ಶಿವರಾಂ ವಿತರಣೆ ಮಾಡಿದರು.ಈ ಸಂದರ್ಭದಲ್ಲಿ ಸೌತಡ್ಕ ಮಹಾಗಣಪತಿ ಕ್ಷೇತ್ರದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಸುಬ್ರಹ್ಮಣ್ಯ ಶಬರಾಯ, ಸದಸ್ಯರಾದ ಪ್ರಶಾಂತ್ ಮಚ್ಚಿನ ಗಣೇಶ್ ಕಾಶಿ, ಹರಿಶ್ಚಂದ್ರ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ನಾಗೇಶ್ ಕುಮಾರ್ ಗೌಡ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾದ ಹಕಿಮ್ ಕೊಕ್ಕಡ, ಹಾಗೂ ಪ್ರಮುಖರಾದ ಅರುಣ್ ಲೋಬೊ, ನವೀನ...
ಕಳೆಂಜದಲ್ಲಿ ಜನಸ್ಪಂದನ ಸಭೆ ಕಾಡುಪ್ರಾಣಿಗಳಿದ ಕೃಷಿ ನಾಶ; ಕೃಷಿಕರ ಪರವಾಗಿ ಸದಾ ಇದ್ದೇನೆ ಶಾಸಕ ಹರೀಶ್ ಪೂಂಜ
ಬೆಳ್ತಂಗಡಿ : ಕಾಡು ಪ್ರಾಣಿಗಳಿಂದಗಿ ಕೃಷಿಕರು ನೆಮ್ಮದಿಯ ಬದುಕನ್ನುನಡೆಸಲು ಸಾಧ್ಯವಾಗದಂತಹ ಸ್ಥಿತಿ ನಿರ್ಮಾಣವಾಗಿದೆ.ಈ ನಿಟ್ಟಿನಲ್ಲಿ ಸರಕಾರದ ಮೇಲೆ ಒತ್ತಡ ಹೇರಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಬೆಳ್ತಂಗಡಿ, ಕಡಬ ಹಾಗೂ ಸುಳ್ಯತಾಲೂಕಿನ ಮುಖಂಡರ ಹಾಗೂ ಜಪ್ರತಿನಿಧಿಗಳ ಸಭೆಯನ್ನು ಕರೆದು ಚರ್ಚಿಸಲಾಗುವುದು. ಕೇರಳ ಮಾದರಿಯಲ್ಲಿ ಕೃಷಿ ಹಾನಿಮಾಡುವ ಕಾಡು ಹಂದಿಗಳನ್ನು ಹೊಡೆಯಲು ಅನುಮತಿ ನೀಡುವಂತೆ ಈಗಾಗಲೇ ಅರಣ್ಯ ಸಚಿವರಿಗೆ ಮಮವಿ ಮಾಡಲಾಗಿದೆ ಇದಕ್ಕೆ ಸರಕಾರ ಕೃಷಿಕರಿಗೆ ಅನುಮತಿ ನೀಡಬೇಕು ಕಾಡುಪ್ರಾಣಿಗಳಿಂದ ಸಮಸ್ಯೆ ಎದುರಿಸುತ್ತಿರುವ ಕೃಷಿಕರ ಪರವಾಗಿ ನಿರಂತರ ಧ್ವನಿಯೆತ್ತಲಾಗುವುದು ಎಂದು ಶಾಸಕ ಹರೀಶ್ ಪೂಂಜ ತಿಳಿಸಿದರು.ಬೆಳ್ತಂಗಡಿ...
ಧರ್ಮಸ್ಥಳ; ನೇತ್ರಾವತಿ ಸ್ನಾನಘಟ್ಟದ ಬಳಿ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ
ಬೆಳ್ತಂಗಡಿ; ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಸಮೀಪ ಕೊಳೆತ ಸ್ಥಿತಿಯಲ್ಲಿ ಮೃತದೇಹವೊಂದು ಭಾನುವಾರ ಪತ್ತೆಯಾಗಿದೆ.ಮೃತ ವ್ಯಕ್ತಿಯ ಗುರುತನ್ನು ಪೊಲೀಸರು ಪತ್ತೆಹಚ್ಚಿದ್ದು ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ನಿವಾಸಿ ಎಂದು ಗುರುತಿಲಾಗಿರುವುದಾಗಿ ತಿಳಿದು ಬಂದಿದೆಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ ಸಮೀಪನೇತ್ರಾವತಿ ನದಿಯ ನೀರಿನಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಇರುವುದಾಗಿ ಸ್ಥಳೀಯ ವ್ಯಕ್ತಿ ಬಿ ಪ್ರಮೋದ್ ಎಂಬವರು ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿದ್ದು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದಾಗ ಸುಮಾರು ೩೦ರಿಂದ ೩೫ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹ ಕಂಡು ಬಂದಿದ್ದು ಪೊಲೀಸರು ಮೃತದೇಹವನ್ನು ಪರಿಶೀಲಿಸಿ...
ಬೆಳ್ತಂಗಡಿ : ನಕ್ಸಲ್ ನಾಯಕ ರೂಪೇಶ್ 3 ದಿನ ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ
ಬೆಳ್ತಂಗಡಿ : ನಕ್ಸಲ್ ನಾಯಕ ಕೇರಳ ಜೈಲಿನಲ್ಲಿದ್ದ ರೂಪೇಶ್.ಪಿ.ಆರ್ ನನ್ನು ಕೇರಳ ಜೈಲಿನಿಂದ ಬಾಡಿ ವಾರೆಂಟ್ ಮೂಲಕ ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದು ಬೆಳ್ತಂಗಡಿ ನ್ಯಾಯಾಲಯಕ್ಕೆ ಜುಲೈ 22 ರಂದು ಹಾಜರುಪಡಿಸಿದ್ದು.ನ್ಯಾಯಲಯ ಮೂರು ದಿನ ಜುಲೈ 24 ವರೆಗೆ ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ ನೀಡಿದ್ದಾರೆ. ತನಿಖಾಧಿಕಾರಿಯಾಗಿರುವ ಬಂಟ್ವಾಳ ಡಿವೈಎಸ್ಪಿ ವಿಜಯ ಪ್ರಸಾದ್ ನೇತೃತ್ವದಲ್ಲಿ ಬೆಳ್ತಂಗಡಿ ಪೊಲೀಸರು ಬಿಗಿ ಭದ್ರತೆಯಲ್ಲಿ ಮಿತ್ತಬಾಗಿಲು ಗ್ರಾಮದ ಬೊಳ್ಳೆ ಪ್ರದೇಶದಲ್ಲಿ ಮಹಜರು ಪಕ್ರಿಯೆ ನಡೆಸಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ತನಿಖೆ ನಡೆಸಿ ಬಳಿಕ ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಿ ವಾಪಸ್...
ಬೆಳ್ತಂಗಡಿ: ಪೆರಿಯಶಾಂತಿಯಿಂದ ಧರ್ಮಸ್ಥಳ ವರೆಗಿನ ರಾಷ್ಟ್ರೀಯ ಹೆದ್ದಾರಿಯಲ್ಲಿದ್ದ 60ಕ್ಕೂ ಹೆಚ್ಚು ಅನಧಿಕೃತ ಅಂಗಡಿಗಳ ತೆರವು
ಬೆಳ್ತಂಗಡಿ: ಪೆರಿಯಶಾಂತಿಯಿಂದ ಧರ್ಮಸ್ಥಳ ವರೆಗಿನ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿದ್ದ ಸುಮಾರು 60ಕ್ಕೂ ಹೆಚ್ಚು ಅನಧಿಕೃತ ಅಂಗಡಿಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳ ನೇತೃತ್ವದಲ್ಲಿ ಸೋಮವಾರ ತೆರವುಗೊಳಿಸಲಾಯಿತು.ಕೊಕ್ಕಡ ಮತ್ತು ಪೆರಿಯಶಾಂತಿ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಹೆಚ್ಚುತ್ತಿರುವ ಕಾಡಾನೆಗಳ ಆಕ್ರಮಣದ ಹಿನ್ನಲೆಯಲ್ಲಿ, ಪ್ರಧಾನಮಂತ್ರಿ ಕಾರ್ಯಾಲಯದಿಂದ ಬಂದಿರುವ ಸೂಕ್ತ ಸೂಚನೆ ಮತ್ತು ಸಾರ್ವಜನಿಕರಿಂದ ದಾಖಲಾದ ದೂರುಗಳ ಬೆನ್ನಲ್ಲೇ ಅರಣ್ಯ ಇಲಾಖೆ ತುರ್ತು ಕ್ರಮಕ್ಕೆ ಮುಂದಾಗಿದೆ. ಪೆರಿಯಶಾಂತಿಯ ರಸ್ತೆಬದಿಯಲ್ಲಿ ವ್ಯಾಪಾರಿಗಳು ಬಿಸಾಕಿರುವ ಜೋಳ, ಹಲಸಿನಹಣ್ಣು ಮುಂತಾದ ಆಹಾರತ್ಯಾಜ್ಯಗಳನ್ನು ತಿನ್ನಲು ಆನೆಗಳು ಬರತೊಡಗಿದ್ದು ಈ ಪ್ರದೇಶದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಲು...















